Luke · chapter 14 · verse 30
Luke 14:30 in Kannada
ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
Ee manushyanu kattuvadakke aarambhisi poortimaada laarade hodanu endu annuvaru.
Luke 14:30 in English
- King James Version (KJV)
- Saying, This man began to build, and was not able to finish.
- World English Bible (WEB)
- saying, ‘This man began to build and wasn’t able to finish.’
- American Standard Version (ASV)
- saying, This man began to build, and was not able to finish.
- Bible in Basic English (BBE)
- And saying, This man made a start at building and is not able to make it complete.
- Darby Translation (DBY)
- saying, This man began to build and was not able to finish?
- Webster's Bible (WBS)
- Saying, This man began to build, and was not able to finish.
- Young's Literal Translation (YLT)
- saying — This man began to build, and was not able to finish.
Read in context
- 28ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ?
- 29ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ--
- 30ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು.
- 31ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ?
- 32ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
Cross references
- Hebrews 6:11 ಇಬ್ರಿಯರಿಗೆ 6:11ಅಂತ್ಯದವರೆಗೆ ನಿರೀಕ್ಷೆಯ ಸಂಪೂರ್ಣ ನಿಶ್ಚಯ ತ್ವಕ್ಕಾಗಿ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ನಾವು ಅಪೇಕ್ಷಿಸುತ್ತೇವೆ.
- 2 John 1:8 2 ಯೋಹಾನನು 1:8ನಾವು ಪ್ರಯಾಸಪಟ್ಟು ಮಾಡಿದವು ಗಳನ್ನು ಕಳಕೊಳ್ಳದೆ ಪ್ರತಿಫಲವನ್ನು ಹೊಂದುವಂತೆ ನಿಮ್ಮನ್ನು ನೀವೇ ನೋಡಿಕೊಳ್ಳಿರಿ.
- Hebrews 6:4–8 ಇಬ್ರಿಯರಿಗೆ 6:4–8ಒಂದು ಸಾರಿ ಬೆಳಕನ್ನು ಹೊಂದಿ ಪರಲೋಕ ದಿಂದಾದ ದಾನದ ರುಚಿಯನ್ನು ನೋಡಿ ಪವಿತ್ರಾತ್ಮನಲ್ಲಿ ಪಾಲುಗಾರರಾಗಿ ಶ್ರೇಷ್ಠವಾದ ದೇವರ ವಾಕ್ಯವನ್ನೂ ಬರುವ ಲೋಕದ ಮಹತ್ವವನ್ನೂ ರುಚಿನೋಡಿ ದವರು ಬಿದ್ದು ಹೋಗುವದಾದರೆ ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ. ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ ಅವರಿಗೆ ಅನುಕೂಲ ವಾದ ಬೆಳೆಯನ್ನು ಕೊಟ್ಟರೆ ದೇವರ ಆಶೀರ್ವಾದವನ್ನು ಹೊಂದುತ್ತದೆ; ಆದರೆ ಅದು ಮುಳ್ಳುಗಿಡಗಳನ್ನೂ ಕಳೆಗಳನ್ನೂ ಬೆಳೆಸಿದರೆ ತಿರಸ್ಕರಿಸಲ್ಪಟ್ಟು ಶಾಪಕ್ಕೆ ಗುರಿಯಾಗುತ್ತದೆ. ಅದರ ಅಂತ್ಯವು ಸುಡಲ್ಪಡುವದೇ.
- 2 Peter 2:19–22 2 ಪೇತ್ರನು 2:19–22ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- Hebrews 10:38 ಇಬ್ರಿಯರಿಗೆ 10:38ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- Acts 1:18–19 ಅಪೊಸ್ತಲರ ಕೃತ್ಯಗಳು 1:18–19ಈ ಮನುಷ್ಯನು ತನ್ನ ದ್ರೋಹದ ಫಲದಿಂದ ಹೊಲವನ್ನು ಕೊಂಡುಕೊಂಡನು; ತಲೆ ಕೆಳಗಾಗಿ ಬಿದ್ದು ಅವನ ಹೊಟ್ಟೆ ಒಡೆದು ಕರುಳು ಗಳೆಲ್ಲಾ ಹೊರಬಿದ್ದವು. ಇದು ಯೆರೂಸಲೇಮ್ ನಿವಾಸಿಗಳೆಲ್ಲರಿಗೆ ತಿಳಿದು ಬಂದದ್ದರಿಂದ ಅವರ ಭಾಷೆಯಲ್ಲಿ ಆ ಹೊಲವು--ಅಕೆಲ್ದಮಾ ಎಂದು ಕರೆಯಲ್ಪ ಟ್ಟಿದೆ, ಅಂದರೆ ರಕ್ತದ ಹೊಲ ಎಂಬದು.
- 1 Corinthians 3:11–14 1 ಕೊರಿಂಥದವರಿಗೆ 3:11–14ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ. ಈ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ಅಮೂಲ್ಯವಾದ ಕಲ್ಲುಗಳು ಕಟ್ಟಿಗೆ ಹುಲ್ಲು ಆಪು ಇವುಗಳಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು; ಯಾಕಂದರೆ ಆ ದಿನವು ಬೆಂಕಿ ಯೊಡನೆ ಪ್ರತ್ಯಕ್ಷವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು. ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಪ್ರತಿಫಲ ದೊರೆಯುವದು;
- Matthew 7:27 ಮತ್ತಾಯನು 7:27ಹೇಗಂದರೆ ಮಳೆಯು ಸುರಿದು ಪ್ರವಾಹಗಳು ಬಂದು ಗಾಳಿಯು ಬೀಸಿ ಆ ಮನೆಗೆ ಬಡಿದವು; ಆಗ ಅದು ಬಿತ್ತು; ಮತ್ತು ಅದರ ಬೀಳುವಿಕೆಯು ದೊಡ್ಡದಾಗಿತ್ತು.
- Matthew 27:3–8 ಮತ್ತಾಯನು 27:3–8ಆಗ ಆತನನ್ನು ಹಿಡುಕೊಟ್ಟ ಯೂದನು ಆತನಿಗೆ ಮರಣದಂಡನೆಯ ತೀರ್ಪಾದದ್ದನ್ನು ನೋಡಿ ಪಶ್ಚಾ ತ್ತಾಪಪಟ್ಟು ಆ ಮೂವತ್ತು ಬೆಳ್ಳಿಯ ನಾಣ್ಯಗಳನು ತಿರಿಗಿ ಪ್ರಧಾನ ಯಾಜಕರ ಮತ್ತು ಹಿರಿಯರ ಬಳಿಗೆ ತಂದು ಅವನು--ನಾನು ನಿರಪರಾಧದ ರಕ್ತವನ್ನು ಹಿಡುಕೊಟ್ಟು ಪಾಪಮಾಡಿದ್ದೇನೆ ಅಂದನು. ಅದಕ್ಕೆ ಅವರು--ಅದು ನಮಗೇನು? ನೀನೇ ಅದನ್ನು ನೋಡಿಕೋ ಅಂದರು. ಮತ್ತು ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ಉರ್ಲು ಹಾಕಿಕೊಂಡನು. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು. ಅವರು ಆಲೋಚನೆ ಮಾಡಿ ಪರದೇಶಿಗಳನ್ನು ಹೂಣಿಡುವದಕ್ಕೆ ಆ ಹಣದಿಂದ ಕುಂಬಾರನ ಹೊಲವನ್ನು ಕೊಂಡುಕೊಂಡರು. ಈ ಕಾರಣದಿಂದ ಆ ಹೊಲವು ರಕ್ತದ ಹೊಲವೆಂದು ಈ ದಿನದ ವರೆಗೆ ಕರೆಯಲ್ಪಟ್ಟಿದೆ.