Luke · chapter 15 · verse 10
Luke 15:10 in Kannada
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
Ade prakaara maanasaantarapaduva obba paapiya vishayavaagi devadootara munde santoshavaaguvadendu naanu nimage heluttene andanu.
Luke 15:10 in English
- King James Version (KJV)
- Likewise, I say unto you, there is joy in the presence of the angels of God over one sinner that repenteth.
- World English Bible (WEB)
- Even so, I tell you, there is joy in the presence of the angels of God over one sinner repenting.”
- American Standard Version (ASV)
- Even so, I say unto you, there is joy in the presence of the angels of God over one sinner that repenteth.
- Bible in Basic English (BBE)
- Even so, I say to you, There is joy among the angels of God, when one sinner is turned away from his wrongdoing.
- Darby Translation (DBY)
- Thus, I say unto you, there is joy before the angels of God for one repenting sinner.
- Webster's Bible (WBS)
- Likewise, I say to you, There is joy in the presence of the angels of God over one sinner that repenteth.
- Young's Literal Translation (YLT)
- 'So I say to you, joy doth come before the messengers of God over one sinner reforming.'
Read in context
- 8ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ?
- 9ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು.
- 10ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 11ಆತನು--ಒಬ್ಬಾನೊಬ್ಬ ಮನುಷ್ಯನಿಗೆ ಇಬ್ಬರು ಕುಮಾರರಿದ್ದರು.
- 12ಅವರಲ್ಲಿ ಕಿರಿಯವನು ತನ್ನ ತಂದೆಗೆ--ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಅಂದನು; ಆಗ ಅವನು ತನ್ನ ಬದುಕನ್ನು ಅವರಿಗೆ ವಿಭಾಗಿಸಿದನು.
Cross references
- Luke 15:7 ಲೂಕನು 15:7ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Ezekiel 33:11 ಯೆಹೆಜ್ಕೇಲನು 33:11ಅವರಿಗೆ ಹೀಗೆ ಹೇಳು ಎಂದು ದೇವರಾದ ಕರ್ತನು ಹೇಳುತ್ತಾನೆ --ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷ ಸಿಗುವದಿಲ್ಲ; ಆದರೆ ಆ ದುಷ್ಟನು ದುರ್ಮಾ ರ್ಗದಿಂದ ತಿರುಗಿಕೊಂಡು ಜೀವಿಸುವದಾದರೆ ಅದರಲ್ಲಿಯೇ ನನಗೆ ಸಂತೋಷಸಿಗುವದು; ಇಸ್ರಾ ಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿರಿ, ನೀವು ತಿರುಗಿ ಕೊಳ್ಳಿರಿ. ನೀವು ಸಾಯುವದು ಯಾಕೆ?
- 2 Corinthians 7:10 2 ಕೊರಿಂಥದವರಿಗೆ 7:10ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Ezekiel 18:23 ಯೆಹೆಜ್ಕೇಲನು 18:23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- Luke 13:5 ಲೂಕನು 13:5ಆದರೆ--ಹಾಗಲ್ಲ ವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನ ಸಾಂತರಪಡದೆ ಹೋದರೆ ನೀವೆಲ್ಲರೂ ಅವರಂತೆಯೇ ನಾಶವಾಗುವಿರಿ ಅಂದನು.
- Ezekiel 18:32 ಯೆಹೆಜ್ಕೇಲನು 18:32ಸಾಯುವವನ ಸಾವಿನಲ್ಲಿ ನನಗೆ ಸಂತೋಷವಿಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ; ಆದಕಾರಣ ತಿರುಗಿಕೊಂಡು ಬಾಳಿರಿ.
- Matthew 18:14 ಮತ್ತಾಯನು 18:14ಅದರಂತೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗುವದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
- Acts 11:18 ಅಪೊಸ್ತಲರ ಕೃತ್ಯಗಳು 11:18ಅವರು ಇವುಗಳನ್ನು ಕೇಳಿ ಮೌನವಾಗಿದ್ದು ದೇವ ರನ್ನು ಕೊಂಡಾಡಿ--ಹಾಗಾದರೆ ಅನ್ಯ ಜನಾಂಗದವ ರಿಗೂ ಜೀವಕ್ಕಾಗಿ ಮಾನಸಾಂತರವನ್ನು ದೇವರು ದಯಪಾಲಿಸಿದ್ದಾನೆ ಎಂದು ಹೇಳಿದರು.
- Luke 7:47 ಲೂಕನು 7:47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- 2 Chronicles 33:13–19 2 ಪೂರ್ವಕಾಲವೃತ್ತಾಂತ 33:13–19ಆಗ ಆತನು ಕನಿಕರಪಟ್ಟು ಅವನ ಬಿನ್ನಹವನ್ನು ಕೇಳಿ ಯೆರೂಸ ಲೇಮಿಗೆ ತನ್ನ ರಾಜ್ಯಕ್ಕೆ ಅವನನ್ನು ತಿರಿಗಿ ಬರಮಾಡಿ ದನು. ಆಗ ಕರ್ತನೇ ದೇವರೆಂದು ಮನಸ್ಸೆಯು ತಿಳಿದುಕೊಂಡನು. ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು. ಇದಲ್ಲದೆ ಅವನು ಅನ್ಯ ದೇವರುಗಳನ್ನೂ ಕರ್ತನ ಆಲಯದಲ್ಲಿರುವ ವಿಗ್ರಹವನ್ನೂ ಕರ್ತನ ಆಲಯದ ಪರ್ವತದಲ್ಲಿಯೂ ಯೆರೂಸಲೇಮಿನ ಲ್ಲಿಯೂ ತಾನು ಕಟ್ಟಿಸಿದ ಸಮಸ್ತ ಬಲಿಪೀಠಗಳನ್ನೂ ತೆಗೆದುಹಾಕಿ ಅವುಗಳನ್ನು ಪಟ್ಟಣದ ಹೊರಗೆ ಬಿಸಾಡಿ ಬಿಟ್ಟನು. ಅವನು ಕರ್ತನ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ಸಮಾಧಾನದ ಬಲಿಗಳನ್ನೂ ಸ್ತೋತ್ರದ ಬಲಿಗಳನ್ನೂ ಅರ್ಪಿಸಿ ಇಸ್ರಾಯೇಲಿನ ದೇವರಾದ ಕರ್ತನನ್ನು ಸೇವಿಸಲು ಯೆಹೂದದವರಿಗೆ ಆಜ್ಞಾಪಿಸಿ ದನು. ಆದಾಗ್ಯೂ ಜನರು ಇನ್ನೂ ಉನ್ನತ ಸ್ಥಳ ಗಳಲ್ಲಿಯೇ ತಮ್ಮ ದೇವರಾದ ಕರ್ತನಿಗೆ ಮಾತ್ರ ಬಲಿಯನ್ನರ್ಪಿಸುತ್ತಾ ಇದ್ದರು. ಮನಸ್ಸೆಯ ಇತರ ಕ್ರಿಯೆಗಳೂ ಅವನು ತನ್ನ ದೇವರಿಗೆ ಮಾಡಿದ ಪ್ರಾರ್ಥನೆಯೂ ಇಸ್ರಾಯೇಲಿನ ದೇವರಾದ ಕರ್ತನ ನಾಮದಲ್ಲಿ ಅವನ ಸಂಗಡ ಮಾತನಾಡಿದ ಪ್ರವಾದಿಗಳ ಮಾತುಗಳೂ ಇಗೋ, ಇಸ್ರಾಯೇಲಿನ ಅರಸುಗಳ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ. ಇದಲ್ಲದೆ ಅವನ ಪ್ರಾರ್ಥನೆಯೂ ಅವನು ದೇವ ರಿಗೆ ಭಿನ್ನವಿಸಿದ್ದೂ ಅವನ ಸಮಸ್ತ ಪಾಪವೂ ಅವನ ಅಪರಾಧವೂ ಅವನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಉನ್ನತ ಸ್ಥಳಗಳಲ್ಲಿ ಕಟ್ಟಿಸಿದ ತೋಪುಗಳೂ ಕೆತ್ತಿಸಿದ ವಿಗ್ರಹಗಳೂ ಸ್ಥಾಪಿಸಿದ ಸ್ಥಳಗಳೂ ಇಗೋ, ಪ್ರವಾದಿ ಗಳ ಚರಿತ್ರೆಯಲ್ಲಿ ಬರೆಯಲ್ಪಟ್ಟಿವೆ.
- Revelation 5:11–14 ಪ್ರಕಟನೆ 5:11–14ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.