Luke · chapter 15 · verse 23
Luke 15:23 in Kannada
ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
Idallade kobbida aa karuvannu illi tandu vadhisiri; naavu undu santoshapadona;
Luke 15:23 in English
- King James Version (KJV)
- And bring hither the fatted calf, and kill [it]; and let us eat, and be merry:
- World English Bible (WEB)
- Bring the fattened calf, kill it, and let’s eat and celebrate;
- American Standard Version (ASV)
- and bring the fatted calf, [and] kill it, and let us eat, and make merry:
- Bible in Basic English (BBE)
- And get the fat young ox and put it to death, and let us have a feast, and be glad.
- Darby Translation (DBY)
- and bring the fatted calf and kill it, and let us eat and make merry:
- Webster's Bible (WBS)
- And bring hither the fatted calf, and kill [it] ; and let us eat, and be merry:
- Young's Literal Translation (YLT)
- and having brought the fatted calf, kill [it], and having eaten, we may be merry,
Read in context
- 21ಮಗನು ಅವನಿಗೆ--ಅಪ್ಪಾ, ನಾನು ಪರಲೋಕಕ್ಕೆ ವಿರೋಧ ವಾಗಿಯೂ ನಿನ್ನ ದೃಷ್ಟಿಯಲ್ಲಿಯೂ ಪಾಪ ಮಾಡಿದ್ದೇನೆ; ನಿನ್ನ ಮಗನೆನಿಸಿಕೊಳ್ಳುವದಕ್ಕೆ ಇನ್ನೆಂದಿಗೂ ನಾನು ಯೋಗ್ಯನಲ್ಲ ಅಂದನು.
- 22ಆದರೆ ತಂದೆಯು ತನ್ನ ಸೇವಕರಿಗೆ--ಶ್ರೇಷ್ಠವಾದ ನಿಲುವಂಗಿಯನ್ನು ತಂದು ಇವನಿಗೆ ತೊಡಿಸಿರಿ; ಇವನ ಕೈಗೆ ಉಂಗುರವನ್ನೂ ಪಾದಗಳಿಗೆ ಕೆರಗಳನ್ನೂ ಹಾಕಿರಿ;
- 23ಇದಲ್ಲದೆ ಕೊಬ್ಬಿದ ಆ ಕರುವನ್ನು ಇಲ್ಲಿ ತಂದು ವಧಿಸಿರಿ; ನಾವು ಉಂಡು ಸಂತೋಷಪಡೋಣ;
- 24ಯಾಕಂದರೆ ಈ ನನ್ನ ಮಗನು ಸತ್ತವನಾಗಿದ್ದನು, ತಿರಿಗಿ ಬದುಕಿದ್ದಾನೆ; ಕಳೆದು ಹೋಗಿದ್ದನು, ಈಗ ಸಿಕ್ಕಿದ್ದಾನೆ ಎಂದು ಹೇಳಿದನು; ಹೀಗೆ ಅವರು ಸಂತೋಷ ಪಡಲಾರಂಭಿಸಿದರು.
- 25ಆಗ ಹಿರೀಮಗನು ಹೊಲದಲ್ಲಿದ್ದನು; ಅವನು ಮನೆಯ ಸವಿಾಪಕ್ಕೆ ಬರುತ್ತಿದ್ದಾಗ ವಾದ್ಯವನ್ನೂ ನಾಟ್ಯವನ್ನೂ ಕೇಳಿಸಿಕೊಂಡನು.
Cross references
- Matthew 22:2–14 ಮತ್ತಾಯನು 22:2–14ಪರಲೋಕ ರಾಜ್ಯವು ತನ್ನ ಮಗನ ಮದುವೆ ಮಾಡಿದ ಒಬ್ಬಾನೊಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಮದುವೆಗೆ ಬರ ಹೇಳಿದವರನ್ನು ಕರೆಯು ವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು; ಆದರೆ ಅವರು ಬರಲೊಲ್ಲದೆ ಇದ್ದರು. ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು. ಕರೆಯಲ್ಪಟ್ಟವರು ಅದನ್ನು ಅಲಕ್ಷ್ಯಮಾಡಿ ಒಬ್ಬನು ತನ್ನ ಹೊಲಕ್ಕೂ ಇನ್ನೊಬ್ಬನು ತನ್ನ ವ್ಯಾಪಾರಕ್ಕೂ ಹೊರಟುಹೋದರು. ಉಳಿದವರು ಅವನ ಸೇವಕರನ್ನು ಹಿಡಿದು ಅವಮಾನ ಪಡಿಸಿ ಅವರನ್ನು ಕೊಂದುಹಾಕಿದರು. ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು. ತರುವಾಯ ಅವನು ತನ್ನ ಸೇವಕರಿಗೆ--ಮದುವೆಯು ಸಿದ್ಧವಾಗಿದೆ ಸರಿ, ಆದರೆ ಕರೆಯಲ್ಪಟ್ಟವರು ಯೋಗ್ಯರಾಗಿರಲಿಲ್ಲ. ಆದದರಿಂದ ನೀವು ಹೆದ್ದಾರಿಗಳಿಗೆ ಹೊರಟುಹೋಗಿ ಕಂಡವರನ್ನೆಲ್ಲಾ ಮದುವೆಗೆ ಕರೆಯಿರಿ ಅಂದನು. ಆಗ ಆ ಸೇವಕರು ಹೆದ್ದಾರಿಗಳಿಗೆ ಹೋಗಿ ತಾವು ಕಂಡವರ ನ್ನೆಲ್ಲಾ ಅಂದರೆ ಕೆಟ್ಟವರನ್ನೂ ಒಳ್ಳೆಯವರನ್ನೂ ಒಟ್ಟು ಗೂಡಿಸಿದರು; ಹೀಗೆ ಮದುವೆಗೆ ಅತಿಥಿಗಳು ತುಂಬಿ ಕೊಂಡರು. ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು. ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು. ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು. ಯಾಕಂದರೆ ಕರೆಯಲ್ಪಟ್ಟವರು ಅನೇಕರು; ಆದರೆ ಆಯಲ್ಪಟ್ಟವರು ಸ್ವಲ್ಪ ಜನ ಅಂದನು.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Isaiah 25:6 ಯೆಶಾಯ 25:6ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
- Genesis 18:7 ಆದಿಕಾಂಡ 18:7ಅಬ್ರಹಾ ಮನು ದನದ ಮಂದೆಯ ಬಳಿಗೆ ಓಡಿಹೋಗಿ ಎಳೇದಾದ ಒಳ್ಳೇ ಕರುವನ್ನು ತೆಗೆದುಕೊಂಡು ಒಬ್ಬ ಯೌವನಸ್ಥನಿಗೆ ಕೊಟ್ಟಾಗ ಅವನು ಅದನ್ನು ಸಿದ್ಧಮಾಡುವದಕ್ಕೆ ತ್ವರೆಪಟ್ಟನು.
- Isaiah 65:13–14 ಯೆಶಾಯ 65:13–14ಹೀಗಿರುವದರಿಂದ ದೇವರಾದ ಕರ್ತನು ಹೇಳು ವದೇನಂದರೆ--ಇಗೋ, ನನ್ನ ಸೇವಕರು ತಿನ್ನುವರು ಆದರೆ ನೀವು ಹಸಿದಿರುವಿರಿ; ಇಗೋ, ನನ್ನ ಸೇವಕರು ಕುಡಿಯುವರು, ಆದರೆ ನೀವು ಬಾಯಾರಿರುವಿರಿ; ಇಗೋ, ನನ್ನ ಸೇವಕರು ಸಂತೋಷಪಡುವರು; ಆದರೆ ನೀವು ನಾಚಿಕೆಪಡುವಿರಿ; ಇಗೋ, ನನ್ನ ಸೇವಕರು ಹೃದಯದ ಆನಂದದಿಂದ ಹಾಡುವರು, ಆದರೆ ನೀವು ಹೃದಯದ ವ್ಯಸನದಿಂದ ಅಳುವಿರಿ ಮತ್ತು ಮುರಿದ ಆತ್ಮದಿಂದ ಗೋಳಾಡುವಿರಿ.
- Proverbs 9:2 ಜ್ಞಾನೋಕ್ತಿಗಳು 9:2ಆಕೆಯು ತನ್ನ ಪಶುಗಳನ್ನು ವಧಿಸಿ, ತನ್ನ ದ್ರಾಕ್ಷಾರಸವನ್ನು ಬೆರಸಿ, ತನ್ನ ಮೇಜನ್ನು ಸಹ ಸಿದ್ಧಪಡಿಸಿದಳು.