Luke · chapter 16 · verse 17
Luke 16:17 in Kannada
ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
Nyaayapramaanada ondu gudusaadaroo biddu hoguvadakkinta aakaashavoo bhoomiyoo alidu hoguvadu sulabha.
Luke 16:17 in English
- King James Version (KJV)
- And it is easier for heaven and earth to pass, than one tittle of the law to fail.
- World English Bible (WEB)
- But it is easier for heaven and earth to pass away than for one tiny stroke of a pen in the law to fall.
- American Standard Version (ASV)
- But it is easier for heaven and earth to pass away, than for one tittle of the law to fall.
- Bible in Basic English (BBE)
- But heaven and earth will come to an end before the smallest letter of the law may be dropped out.
- Darby Translation (DBY)
- But it is easier that the heaven and the earth should pass away than that one tittle of the law should fail.
- Webster's Bible (WBS)
- And it is easier for heaven and earth to pass away, than one tittle of the law to fail.
- Young's Literal Translation (YLT)
- and it is easier to the heaven and the earth to pass away, than of the law one tittle to fall.
Read in context
- 15ಆಗ ಆತನು ಅವರಿಗೆ--ಮನುಷ್ಯರ ಮುಂದೆ ನೀತಿವಂತರಾಗಿ ಮಾಡಿ ಕೊಳ್ಳುವವರು ನೀವೇ; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾನೆ; ಯಾಕಂದರೆ ಮನುಷ್ಯರಲ್ಲಿ ಯಾವದು ಶ್ರೇಷ್ಠವೆಂದು ಎಣಿಸಲ್ಪ ಡುತ್ತದೋ ಅದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.
- 16ನ್ಯಾಯ ಪ್ರಮಾಣವೂ ಪ್ರವಾದನೆಗಳೂ ಯೋಹಾ ನನವರೆಗೆ ಇದ್ದವು; ದೇವರ ರಾಜ್ಯವು ಅಂದಿನಿಂದ ಸಾರಲ್ಪಡುತ್ತಾ ಇದೆ, ಪ್ರತಿಯೊಬ್ಬನು ಬಲವಂತದಿಂದ ಅದರೊಳಗೆ ನುಗ್ಗುತ್ತಾನೆ.
- 17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
- 18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
- 19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
Cross references
- Matthew 5:18 ಮತ್ತಾಯನು 5:18ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Luke 21:33 ಲೂಕನು 21:33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
- 1 Peter 1:25 1 ಪೇತ್ರನು 1:25ಕರ್ತನ ಮಾತೋ ಸದಾಕಾಲವೂ ಇರು ವದು. ಅದು ಯಾವದಂದರೆ ನಿಮಗೆ ಸಾರಲ್ಪಟ್ಟ ಸುವಾರ್ತಾವಾಕ್ಯವೇ.
- Isaiah 40:8 ಯೆಶಾಯ 40:8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.
- Romans 3:31 ರೋಮಾಪುರದವರಿಗೆ 3:31ಹಾಗಾದರೆ ನಂಬಿಕೆಯಿಂದ ನ್ಯಾಯಪ್ರಮಾಣವನ್ನು ನಿರರ್ಥಕ ಮಾಡುತ್ತೇವೋ? ಹಾಗೆ ಎಂದಿಗೂ ಅಲ್ಲ; ಹೌದು, ನಾವು ನ್ಯಾಯಪ್ರಮಾಣವನ್ನು ಸ್ಥಿರಪಡಿಸುತ್ತೇವೆ.
- Isaiah 51:6 ಯೆಶಾಯ 51:6ಆಕಾಶಗಳ ಕಡೆಗೆ ನಿಮ್ಮ ಕಣ್ಣುಗಳನ್ನು ಎತ್ತಿರಿ ಮತ್ತು ಕೆಳಗಿರುವ ಭೂಮಿಯನ್ನು ನೋಡಿರಿ. ಯಾಕಂದರೆ ಆಕಾಶಗಳು ಹೊಗೆಯಂತೆ ಅಗೋಚರವಾಗುವವು, ಭೂಮಿಯು ಹಳೆಯ ಬಟ್ಟೆಯಂತಾಗುವದು. ಅದರಲ್ಲಿ ವಾಸಿಸುವ ವರು ಅದೇ ರೀತಿಯಲ್ಲಿ ಸಾಯುವರು. ಆದರೆ ನನ್ನ ರಕ್ಷಣೆಯು ಶಾಶ್ವತವಾಗಿರುವದು ಮತ್ತು ನನ್ನ ನೀತಿಯು ಎಂದಿಗೂ ರದ್ದಾಗದು.
- Psalm 102:25–27 ಕೀರ್ತನೆಗಳು 102:25–27ನೀನು ಪೂರ್ವಕಾಲದಲ್ಲಿ ಭೂಮಿ ಯನ್ನು ಸ್ಥಾಪಿಸಿದಿ; ಆಕಾಶಗಳು ನಿನ್ನ ಕೈ ಕೆಲಸಗಳಾ ಗಿವೆ. ಅವು ನಾಶವಾಗುವವು; ಆದರೆ ನೀನು ಸ್ಥಿರ ವಾಗಿರುತ್ತೀ; ಹೌದು, ಅವುಗಳೆಲ್ಲಾ ವಸ್ತ್ರದ ಹಾಗೆ ಜೀರ್ಣವಾಗುವವು; ಉಡುಪಿನ ಹಾಗೆ ಅವುಗ ಳನ್ನು ಬದಲಾಯಿಸುವಿ; ಆಗ ಅವು ಬದಲಾಗುವವು. ಆದರೆ ನೀನು ಏಕ ರೀತಿಯಾಗಿರುತ್ತೀ; ನಿನ್ನ ವರುಷಗಳು ಮುಗಿಯವು.ನಿನ್ನ ಸೇವಕರ ಮಕ್ಕಳು ನೆಲೆಯಾಗಿದ್ದು ಅವರ ಸಂತತಿಯು ನಿನ್ನ ಮುಂದೆ ಸ್ಥಾಪಿಸಲ್ಪಡುವದು.
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Revelation 21:4 ಪ್ರಕಟನೆ 21:4ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.