Luke · chapter 16 · verse 19
Luke 16:19 in Kannada
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
Oodaabannada vastragalannoo nayavaada naaru madiyannoo dharisikondu pratidinavoo samruddhi yaagi bhojanamaaduttidda obbaanobba aishvarya vantaniddanu.
Luke 16:19 in English
- King James Version (KJV)
- There was a certain rich man, which was clothed in purple and fine linen, and fared sumptuously every day:
- World English Bible (WEB)
- “Now there was a certain rich man, and he was clothed in purple and fine linen, living in luxury every day.
- American Standard Version (ASV)
- Now there was a certain rich man, and he was clothed in purple and fine linen, faring sumptuously every day:
- Bible in Basic English (BBE)
- Now there was a certain man of great wealth, who was dressed in fair clothing of purple and delicate linen, and was shining and glad every day.
- Darby Translation (DBY)
- Now there was a rich man and he was clothed in purple and fine linen, making good cheer in splendour every day.
- Webster's Bible (WBS)
- There was a certain rich man, who was clothed in purple and fine linen, and fared sumptuously every day:
- Young's Literal Translation (YLT)
- 'And — a certain man was rich, and was clothed in purple and fine linen, making merry sumptuously every day,
Read in context
- 17ನ್ಯಾಯಪ್ರಮಾಣದ ಒಂದು ಗುಡುಸಾದರೂ ಬಿದ್ದು ಹೋಗುವದಕ್ಕಿಂತ ಆಕಾಶವೂ ಭೂಮಿಯೂ ಅಳಿದು ಹೋಗುವದು ಸುಲಭ.
- 18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
- 19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- 20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- 21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
Cross references
- Ezekiel 16:49 ಯೆಹೆಜ್ಕೇಲನು 16:49ಇಗೋ, ಸೊದೋಮ್ ಎಂಬ ನಿನ್ನ ತಂಗಿಯ ಅಕ್ರಮವನ್ನೂ ಗರ್ವವನ್ನೂ ನೋಡು; ರೊಟ್ಟಿಯ ತೃಪ್ತಿಯು ಅವಳಿಗೂ ಅವಳ ಕುಮಾರ್ತೆ ಯರಿಗೂ ನಿರ್ಭಯವಾದ ಸೌಖ್ಯವಾಗಿದೆ; ಆಕೆಯು ದೀನದರಿದ್ರರಿಗೆ ಬೆಂಬಲವಾಗಿರಲಿಲ್ಲ.
- Luke 18:24–25 ಲೂಕನು 18:24–25ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ. ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- Amos 6:4–6 ಆಮೋಸ 6:4–6ದಂತದ ಮಂಚಗಳ ಮೇಲೆ ಮಲಗಿಕೊಳ್ಳು ತ್ತಾರೆ; ತಮ್ಮ ಹಾಸಿಗೆಗಳ ಮೇಲೆ ಹಾಯಾಗಿ ಒರಗಿ ಕೊಳ್ಳುತ್ತಾರೆ; ಮಂದೆಯೊಳಗಿಂದ ಕುರಿಮರಿಗಳನ್ನು, ಹಟ್ಟಿಯ ಮಂದೆಯೊಳಗಿಂದ ಕರುಗಳನ್ನು ತಿನ್ನುತ್ತಾರೆ. ವೀಣೆಯ ಸ್ವರಕ್ಕೆ ಹಾಡುತ್ತಾರೆ; ದಾವೀದನ ಹಾಗೆ ತಮಗೆ ತಾವೇ ಗಾನ ವಾದ್ಯಗಳನ್ನು ಕಲ್ಪಿಸಿಕೊಳ್ಳು ತ್ತಾರೆ. ದ್ರಾಕ್ಷಾರಸದ ಪಾತ್ರೆಗಳಲ್ಲಿ ಕುಡಿಯುತ್ತಾರೆ. ಶ್ರೇಷ್ಠವಾದ ಎಣ್ಣೆಗಳಿಂದ ತಮ್ಮನ್ನು ಅಭಿಷೇಕಿಸಿ ಕೊಳ್ಳುತ್ತಾರೆ. ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡು ವದಿಲ್ಲ.
- James 5:1–5 ಯಾಕೋಬನು 5:1–5ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.
- Ezekiel 27:7 ಯೆಹೆಜ್ಕೇಲನು 27:7ನಿನ್ನ ಹಾಯಿಯು ನಿನಗೆ ಧ್ವಜವು ಆಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರುಬಟ್ಟೆಯಿಂದ ಮಾಡಿ ದ್ದಾರೆ. ಎಲೀಷದ ದ್ವೀಪಗಳಿಂದ ತಂದ ನೀಲಿಯೂ ನೇರಳೆ ಬಣ್ಣವೂ ನಿನಗೆ ಮುಚ್ಚಳವಾಯಿತು.
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Revelation 18:7 ಪ್ರಕಟನೆ 18:7ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು
- Ezekiel 16:13 ಯೆಹೆಜ್ಕೇಲನು 16:13ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- Luke 16:1 ಲೂಕನು 16:1ತರುವಾಯ ಆತನು ತನ್ನ ಶಿಷ್ಯರಿಗೂ
- Luke 12:16–21 ಲೂಕನು 12:16–21ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು. ಆಗ ಅವನು ತನ್ನೊಳಗೆ--ನಾನೇನು ಮಾಡಲಿ? ನನಗಿರುವ ಬೆಳೆಯನ್ನು ತುಂಬಿಡುವದಕ್ಕೆ ನನಗೆ ಸ್ಥಳವಿಲ್ಲ ಎಂದು ಆಲೋಚಿಸಿ ಅವನು-- ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು. ತನಗೋಸ್ಕರ ಸಂಪತ್ತನ್ನು ಕೂಡಿಸಿಟ್ಟು ಕೊಂಡು ದೇವರ ಕಡೆಗೆ ಐಶ್ವರ್ಯವಂತನಾಗ ದಿರುವವನು ಇವನಂತೆಯೇ ಇರುವನು ಅಂದನು.
- Mark 15:17 ಮಾರ್ಕನು 15:17ಅವರು ಆತನಿಗೆ ಊದಾ ಬಣ್ಣದ ವಸ್ತ್ರವನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟು
- Job 21:11–15 ಯೋಬನು 21:11–15ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ. ಅವರು ದೇವರಿಗೆ--ನಮ್ಮನ್ನು ಬಿಟ್ಟು ಹೋಗು; ನಿನ್ನ ಮಾರ್ಗಗಳ ತಿಳುವಳಿಕೆಯನ್ನು ನಾವು ಮೆಚ್ಚುವದಿಲ್ಲ. ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.