Luke · chapter 16 · verse 20
Luke 16:20 in Kannada
ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
Avana baagalinalli laajaranemba obba bhikshukanu biddukondiddanu; avanu mai tumbaa hunneddavanu.
Luke 16:20 in English
- King James Version (KJV)
- And there was a certain beggar named Lazarus, which was laid at his gate, full of sores,
- World English Bible (WEB)
- A certain beggar, named Lazarus, was taken to his gate, full of sores,
- American Standard Version (ASV)
- and a certain beggar named Lazarus was laid at his gate, full of sores,
- Bible in Basic English (BBE)
- And a certain poor man, named Lazarus, was stretched out at his door, full of wounds,
- Darby Translation (DBY)
- And [there was] a poor man, by name Lazarus, [who] was laid at his gateway full of sores,
- Webster's Bible (WBS)
- And there was a certain beggar named Lazarus, who was laid at his gate, full of sores,
- Young's Literal Translation (YLT)
- and there was a certain poor man, by name Lazarus, who was laid at his porch, full of sores,
Read in context
- 18ಯಾವನು ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರ ಮಾಡುತ್ತಾನೆ; ಯಾವನು ಗಂಡ ಬಿಟ್ಟವಳನ್ನು ಮದುವೆ ಮಾಡಿಕೊಳ್ಳುತ್ತಾನೋ ಅವನು ವ್ಯಭಿಚಾರಮಾಡುತ್ತಾನೆ.
- 19ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
- 20ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು.
- 21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
- 22ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು.
Cross references
- Acts 3:2 ಅಪೊಸ್ತಲರ ಕೃತ್ಯಗಳು 3:2ಹುಟ್ಟು ಕುಂಟನಾಗಿದ್ದ ಒಬ್ಬಾನೊಬ್ಬ ಮನುಷ್ಯನು ದೇವಾಲಯಕ್ಕೆ ಹೋಗುತ್ತಿದ್ದವರಿಂದ ಭಿಕ್ಷೆ ಬೇಡುವದಕ್ಕಾಗಿ ಅವನನ್ನು ಕೆಲವರು ಹೊತ್ತು ಕೊಂಡು ಹೋಗಿ ದೇವಾಲಯದ ಸುಂದರವೆಂಬ ಬಾಗಲಿನಲ್ಲಿ ಪ್ರತಿ ದಿನ ಕೂಡ್ರಿಸುತ್ತಿದ್ದರು.
- James 2:5 ಯಾಕೋಬನು 2:5ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
- Job 2:7 ಯೋಬನು 2:7ಆಗ ಸೈತಾನನು ಕರ್ತನ ಸಮ್ಮುಖ ದಿಂದ ಹೊರಟು ಯೋಬನಿಗೆ ಅಂಗಾಲಿನಿಂದ ನೆತ್ತಿಯ ವರೆಗೆ ಕೆಟ್ಟ ಹುಣ್ಣುಗಳು ಬರುವ ಹಾಗೆ ಅವನನ್ನು ಹೊಡೆದನು.
- 1 Samuel 2:8 1 ಸಮುವೇಲನು 2:8ದರಿದ್ರನನ್ನು ಭೂಮಿಯ ಧೂಳಿನಿಂದ ಎತ್ತುವಾ ತನೂ ಭಿಕ್ಷುಕನನ್ನು ತಿಪ್ಪೆಗುಂಡಿಯಿಂದ ತೆಗೆದು ಉನ್ನತ ಮಾಡುವಾತನೂ ಆಗಿದ್ದಾನೆ. ಅವರನ್ನು ಪ್ರಧಾ ನರ ಮಧ್ಯದಲ್ಲಿ ಕೂಡ್ರಿಸುತ್ತಾನೆ; ಘನತೆಯ ಸಿಂಹಾ ಸನವನ್ನು ಬಾಧ್ಯವಾಗಿ ಕೊಡುತ್ತಾನೆ. ಯಾಕಂದರೆ ಭೂಮಿಯ ಆಧಾರಸ್ತಂಭಗಳು ಕರ್ತನದಾಗಿವೆ, ಭೂಲೋಕವನ್ನು ಅವುಗಳ ಮೇಲೆ ಇಟ್ಟಿದ್ದಾನೆ.
- Luke 16:21 ಲೂಕನು 16:21ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು.
- Isaiah 1:6 ಯೆಶಾಯ 1:6ಅಂಗಾ ಲಿನಿಂದ ನಡುನೆತ್ತಿಯ ವರೆಗೂ ಬಾಸುಂಡೆ ಪೆಟ್ಟು, ಮಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ; ಅವುಗಳನ್ನು ಮುಚ್ಚಿಲ್ಲ, ಕಟ್ಟಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದುಮಾಡಿಲ್ಲ.
- James 1:9 ಯಾಕೋಬನು 1:9ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
- Psalm 34:19 ಕೀರ್ತನೆಗಳು 34:19ನೀತಿವಂತನಿಗೆ ಬರುವ ಕೇಡುಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಕರ್ತನು ಅವನನ್ನು ಬಿಡಿಸುತ್ತಾನೆ.
- Luke 18:35–43 ಲೂಕನು 18:35–43ಇದಾದ ಮೇಲೆ ಆತನು ಯೆರಿಕೋವಿನ ಸವಿಾಪಕ್ಕೆ ಬಂದಾಗ ಒಬ್ಬಾನೊಬ್ಬ ಕುರುಡನು ದಾರಿಯ ಬದಿಯಲ್ಲಿ ಕೂತುಕೊಂಡು ಭಿಕ್ಷೆ ಬೇಡು ತ್ತಿದ್ದನು; ಜನಸಮೂಹವು ಹಾದುಹೋಗುವದನ್ನು ಇವನು ಕೇಳಿಸಿಕೊಂಡು ಅದೇನೆಂದು ವಿಚಾರಿಸಿದನು. ನಜರೇತಿನವನಾದ ಯೇಸು ಹಾದು ಹೋಗುತ್ತಿದ್ದಾ ನೆಂದು ಅವರು ಅವನಿಗೆ ಹೇಳಿದರು. ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು. ಆಗ ಯೇಸು ನಿಂತುಕೊಂಡು ಅವನನ್ನು ತನ್ನ ಬಳಿಗೆ ಕರತರುವಂತೆ ಅಪ್ಪಣೆಕೊಟ್ಟನು; ಅವನು ಆತನ ಬಳಿಗೆ ಬಂದಾಗ ಆತನು ಅವನಿಗೆ-- ನಾನು ನಿನಗೆ ಏನು ಮಾಡಬೇಕೆಂದು ಕೋರುತ್ತೀ ಎಂದು ಕೇಳಿದನು. ಅದಕ್ಕವನು--ಕರ್ತನೇ, ನಾನು ದೃಷ್ಟಿಹೊಂದುವಂತೆ ಮಾಡು ಅಂದನು. ಆಗ ಯೇಸು ಅವನಿಗೆ-- ನೀನು ದೃಷ್ಟಿ ಹೊಂದಿದವನಾಗು; ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿಯದೆ ಅಂದನು.ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು. ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- John 11:1 ಯೋಹಾನನು 11:1ಮರಿಯಳ ಮತ್ತು ಆಕೆಯ ಸಹೋದರಿ ಯಾದ ಮಾರ್ಥಳ ಊರಾದ ಬೇಥಾನ್ಯ ದಲ್ಲಿ ಲಾಜರನೆಂಬವನೊಬ್ಬನು ಅಸ್ವಸ್ಥನಾಗಿದ್ದನು.
- Psalm 73:14 ಕೀರ್ತನೆಗಳು 73:14ನಾನು ದಿನವೆಲ್ಲಾ ವ್ಯಾಧಿ ಪೀಡಿತನಾಗಿದ್ದೇನೆ; ಪ್ರತಿ ಉದಯದಲ್ಲಿ ನನಗೆ ಶಿಕ್ಷೆ ಯಾಯಿತು.