Luke · chapter 17 · verse 27
Luke 17:27 in Kannada
ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
Nohanu naaveyalli serida dinada varegoo avaru tinnuttaa kudiyuttaa maduvemaadikolluttaa mattu maduvemaadi koduttaa iddaru. Aaga jalapralayavu bandu avarellarannu naashamaadittu.
Luke 17:27 in English
- King James Version (KJV)
- They did eat, they drank, they married wives, they were given in marriage, until the day that Noe entered into the ark, and the flood came, and destroyed them all.
- World English Bible (WEB)
- They ate, they drank, they married, and they were given in marriage until the day that Noah entered into the ship, and the flood came and destroyed them all.
- American Standard Version (ASV)
- They ate, they drank, they married, they were given in marriage, until the day that Noah entered into the ark, and the flood came, and destroyed them all.
- Bible in Basic English (BBE)
- They were feasting and taking wives and getting married, till the day of the overflowing of the waters, when Noah went into the ark, and they all came to destruction.
- Darby Translation (DBY)
- they ate, they drank, they married, they were given in marriage, until the day that Noe entered into the ark, and the flood came and destroyed all [of them];
- Webster's Bible (WBS)
- They ate, they drank, they married wives, they were given in marriage, until the day that Noah entered into the ark; and the flood came, and destroyed them all.
- Young's Literal Translation (YLT)
- they were eating, they were drinking, they were marrying, they were given in marriage, till the day that Noah entered into the ark, and the deluge came, and destroyed all;
Read in context
- 25ಆದರೆ ಆತನು ಮೊದಲು ಅನೇಕ ಶ್ರಮೆಗಳನ್ನು ಅನುಭವಿಸಿ ಈ ಸಂತತಿಯವರಿಂದ ತಿರಸ್ಕರಿಸಲ್ಪಡುವದು ಅಗತ್ಯವಾ ಗಿದೆ.
- 26ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು.
- 27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- 28ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
- 29ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
Cross references
- Luke 12:19–20 ಲೂಕನು 12:19–20ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- 1 Thessalonians 5:1–3 1 ಥೆಸಲೊನೀಕದವರಿಗೆ 5:1–3ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ. ರಾತ್ರಿ ಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವ ದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ. ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.
- Isaiah 22:12–14 ಯೆಶಾಯ 22:12–14ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು. ಆದರೆ ಇಗೋ, ಉತ್ಸಾ ಹವು ಸಂತೋಷವು, ದನಕೊಯ್ಯುವದು ಕುರಿಕಡಿಯು ವದು ಮಾಂಸವನ್ನು ತಿನ್ನುವದು, ದ್ರಾಕ್ಷಾರಸ ಕುಡಿ ಯುವದು, ನಾಳೆ ಸಾಯುತ್ತೇವೆಂದು ತಿಂದು ಕುಡಿಯು ವದೇ (ಇವೆ, ನಿಮ್ಮ ಕಾರ್ಯ). ಆದದರಿಂದ ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಪ್ರಕಟ ಮಾಡಿದ್ದೇನಂದರೆ ನಿಶ್ಚಯವಾಗಿ ಈ ದುಷ್ಕೃತ್ಯಗಳು ನೀವು ಸಾಯುವ ತನಕ ಮನ್ನಿಸಲ್ಪಡುವದೇ ಇಲ್ಲ.
- Luke 16:19–23 ಲೂಕನು 16:19–23ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು. ಅವನ ಬಾಗಲಿನಲ್ಲಿ ಲಾಜರನೆಂಬ ಒಬ್ಬ ಭಿಕ್ಷುಕನು ಬಿದ್ದುಕೊಂಡಿದ್ದನು; ಅವನು ಮೈ ತುಂಬಾ ಹುಣ್ಣೆದ್ದವನು. ಐಶ್ವರ್ಯವಂತನ ಮೇಜಿ ನಿಂದ ಬೀಳುವ (ರೊಟ್ಟಿ) ತುಂಡುಗಳನ್ನು ತಿನ್ನುವದಕ್ಕೆ ಅವನು ಆಶೆಪಡುತ್ತಿದ್ದನು; ಇದಲ್ಲದೆ ನಾಯಿಗಳು ಬಂದು ಅವನ ಹುಣ್ಣುಗಳನ್ನು ನೆಕ್ಕುತ್ತಿದ್ದವು. ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು.
- Job 21:9–13 ಯೋಬನು 21:9–13ಅವರ ಮನೆಗಳು ಅಂಜಿಕೆ ಇಲ್ಲದೆ ಸಮಾಧಾನವಾಗಿವೆ; ದೇವರ ಕೋಲು ಅವರ ಮೇಲೆ ಇಲ್ಲ. ಅವನ ಗೂಳಿ ಹೇಸದೆ ಬಸುರು ಮಾಡುತ್ತದೆ; ಅವನ ಆಕಳು ತಪ್ಪದೆ ಈಯುತ್ತದೆ; ತಮ್ಮ ಚಿಕ್ಕವರನ್ನು ಮಂದೆಯ ಹಾಗೆ ಕಳುಹಿಸು ತ್ತಾರೆ; ಅವರ ಮಕ್ಕಳು ಕುಣಿದಾಡುತ್ತಾರೆ. ದಮ್ಮಡಿ ಯಿಂದಲೂ ಕಿನ್ನರಿಯಿಂದಲೂ ಹಾಡುತ್ತಾರೆ; ಕೊಳಲಿನ ಶಬ್ದಕ್ಕೆ ಸಂತೋಷಿಸುತ್ತಾರೆ. ಸಂಪತ್ತಿನಲ್ಲಿ ತಮ್ಮ ದಿವಸ ಗಳನ್ನು ಕಳೆಯುತ್ತಾರೆ; ಕ್ಷಣದಲ್ಲಿ ಪಾತಾಳಕ್ಕೆ ಇಳಿ ಯುತ್ತಾರೆ.
- 1 Samuel 25:36–38 1 ಸಮುವೇಲನು 25:36–38ತರುವಾಯ ಅಬೀಗೈಲಳು ನಾಬಾಲನ ಬಳಿಗೆ ಬಂದಾಗ ಇಗೋ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸ ಗೊಂಡಿತ್ತು. ಆದಕಾರಣ ಅವಳು ಉದಯವಾಗುವ ವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ ಹೆಚ್ಚಾದದ್ದ ನ್ನಾಗಲಿ ತಿಳಿಸಲಿಲ್ಲ. ಉದಯದಲ್ಲಿ ನಾಬಾಲನಿಗೆ ದ್ರಾಕ್ಷಾರಸದ ಅಮಲು ಇಳಿದಾಗ ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು ಏನಾಯಿತಂದರೆ, ಅವನ ಹೃದಯವು ಅವನಲ್ಲಿ ಸತ್ತು ಅವನು ಕಲ್ಲಿನ ಹಾಗಾದನು. ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ ಏನಾಯಿತಂದರೆ, ಕರ್ತನು ನಾಬಾಲನನ್ನು ಹೊಡೆದದ್ದರಿಂದ ಅವನು ಸತ್ತನು.
- Deuteronomy 6:10–12 ಧರ್ಮೋಪದೇಶಕಾಂಡ 6:10–12ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Isaiah 21:4 ಯೆಶಾಯ 21:4ನನ್ನ ಹೃದಯವು (ಎದುರಿಸುತ್ತದೆ) ಗಾಬರಿಗೊಂಡಿದೆ, ನಡು ಗುವಿಕೆಯು ನನ್ನನ್ನು ಕಳವಳಗೊಳಿಸಿದೆ, ನನ್ನ ಆನಂ ದದ ರಾತ್ರಿಯನ್ನು ನನಗೆ ಭಯಭ್ರಾಂತಿಯಾಗಿ ಮಾಡಿದ್ದಾನೆ.
- Deuteronomy 8:12–14 ಧರ್ಮೋಪದೇಶಕಾಂಡ 8:12–14ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ ನಿನ್ನ ಪಶು ಕುರಿಗಳು ಹೆಚ್ಚಿದಾಗಲೂ ಬೆಳ್ಳಿ ಬಂಗಾರ ನಿನಗೆ ಹೆಚ್ಚಿದಾಗಲೂ ನಿನಗಿರುವಂಥದ್ದೆಲ್ಲಾ ಹೆಚ್ಚಿದಾ ಗಲೂ ನಿನ್ನ ಹೃದಯವು ಉಬ್ಬಿಕೊಳ್ಳದ ಹಾಗೆಯೂ ನಿನ್ನನ್ನು ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ಹೊರಗೆ ಬರಮಾಡಿದಂಥ,