Luke · chapter 17 · verse 29
Luke 17:29 in Kannada
ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
Aadare lotanu sodomininda horage hoda dinave aakaashadinda benkiyoo gandhakavoo suridu ellarannu naashapadisidavu.
Luke 17:29 in English
- King James Version (KJV)
- But the same day that Lot went out of Sodom it rained fire and brimstone from heaven, and destroyed [them] all.
- World English Bible (WEB)
- but in the day that Lot went out from Sodom, it rained fire and sulfur from the sky and destroyed them all.
- American Standard Version (ASV)
- but in the day that Lot went out from Sodom it rained fire and brimstone from heaven, and destroyed them all:
- Bible in Basic English (BBE)
- But on the day when Lot went out of Sodom, fire came down from heaven and destruction came on them all.
- Darby Translation (DBY)
- but on the day that Lot went out from Sodom, it rained fire and sulphur from heaven, and destroyed all [of them]:
- Webster's Bible (WBS)
- But the same day that Lot went out of Sodom, it rained fire and brimstone from heaven, and destroyed [them] all:
- Young's Literal Translation (YLT)
- and on the day Lot went forth from Sodom, He rained fire and brimstone from heaven, and destroyed all.
Read in context
- 27ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು.
- 28ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು.
- 29ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು.
- 30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- 31ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
Cross references
- Revelation 11:8 ಪ್ರಕಟನೆ 11:8ಇವರ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಆತ್ಮಿಕವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಕರೆಯುವರು; ನಮ್ಮ ಕರ್ತನು ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.
- 2 Peter 2:6 2 ಪೇತ್ರನು 2:6ಆತನು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿ ಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.
- Zephaniah 2:9 ಚೆಫನ್ಯ 2:9ಆದದರಿಂದ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೇಳು ವದೇನಂದರೆ--ನನ್ನ ಜೀವದಾಣೆ, ನಿಶ್ಚಯವಾಗಿ ಮೋವಾಬು ಸೊದೋಮಿನ ಹಾಗಾಗುವದು; ಅಮ್ಮೋ ನನ ಮಕ್ಕಳು ಗೊಮೋರದ ಹಾಗಾಗುವರು; ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಣಿಗಳುಳ್ಳಂಥ ನಿತ್ಯವಾಗಿ ಹಾಳಾಗುವಂಥ ಸ್ಥಳವಾಗುವರು; ನನ್ನ ಜನರಲ್ಲಿ ಉಳಿದವರು ಅವರನ್ನು ಸುಲುಕೊಳ್ಳುವರು; ನನ್ನ ಜನರಲ್ಲಿ ಮಿಕ್ಕಾದವರು ಅವರನ್ನು ಸ್ವಾಧೀನ ಮಾಡಿಕೊಳ್ಳುವರು.
- Jude 1:7 ಯೂದನು 1:7ಸೊದೋಮ ಗೊಮೋರ ದವರೂ ಹಾಗೆಯೇ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಅನ್ಯ ಶರೀರವನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ಪ್ರತಿದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲ್ಪಟ್ಟಿದ್ದಾರೆ.
- Jeremiah 50:40 ಯೆರೆಮೀಯ 50:40ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Matthew 11:23–24 ಮತ್ತಾಯನು 11:23–24ಆಕಾಶದವರೆಗೂ ಹೆಚ್ಚಿಸಲ್ಪಟ್ಟ ಕಪೆರ್ನೌಮೇ, ನೀನು ಕೆಳಗೆ ಪಾತಾಳಕ್ಕೆ ದೊಬ್ಬಲ್ಪಡುವಿ; ಯಾಕಂದರೆ ನಿನ್ನೊಳಗೆ ನಡೆದಿರುವ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಈ ದಿನದವರೆಗೂ ಇರುತ್ತಿತ್ತು. ಆದರೆ ನಾನು ನಿನಗೆ ಹೇಳುವದೇನಂದರೆ --ನ್ಯಾಯತೀರ್ಪಿನ ದಿನದಲ್ಲಿ ನಿನಗಿಂತಲೂ ಸೊದೋಮಿನ ಗತಿಯು ಹೆಚ್ಚು ತಾಳಬಹುದಾಗಿರುವದು.
- Deuteronomy 29:23–25 ಧರ್ಮೋಪದೇಶಕಾಂಡ 29:23–25ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು,
- Isaiah 13:19 ಯೆಶಾಯ 13:19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- Hosea 11:8 ಹೋಶೇಯ 11:8ಎಫ್ರಾಯಾಮೇ, ನಾನು ನಿನ್ನನ್ನು ಬಿಟ್ಟು ಬಿಡುವದು ಹೇಗೆ? ಇಸ್ರಾಯೇಲೇ, ನಿನ್ನನ್ನು ನಾನು ಬಿಡಿಸುವದು ಹೇಗೆ? ನಾನು ನಿನ್ನನ್ನು ಅದ್ಮದ ಹಾಗೆ ಮಾಡುವದು ಹೇಗೆ? ನಾನು ನಿನ್ನನ್ನು ಜೆಬೋಯಾಮಿನ ಹಾಗೆ ಸ್ಥಾಪಿಸುವದು ಹೇಗೆ? ನನ್ನ ಹೃದಯವು ನನ್ನಲ್ಲಿ ತಿರುಗಿಕೊಂಡಿದೆ. ನನ್ನ ಪಶ್ಚಾತ್ತಾಪಗಳು ಒಟ್ಟಿಗೆ ಹತ್ತಿ ಕೊಂಡಿವೆ.
- Amos 4:11 ಆಮೋಸ 4:11ದೇವರು ಸೊದೋಮನ್ನೂ ಗೊಮೋರವನ್ನೂ ಕೆಡವಿದ ಹಾಗೆ ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ; ಹೌದು, ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂತಿರುಗಿ ಕೊಳ್ಳಲಿಲ್ಲವೆಂದು ಕರ್ತನು ಹೇಳುತ್ತಾನೆ.
- Isaiah 1:9 ಯೆಶಾಯ 1:9ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.