Luke · chapter 17 · verse 32
Luke 17:32 in Kannada
ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
Lotana hendatiyannu jnyaapaka maadikolliri.
Luke 17:32 in English
- King James Version (KJV)
- Remember Lot’s wife.
- World English Bible (WEB)
- Remember Lot’s wife!
- American Standard Version (ASV)
- Remember Lot’s wife.
- Bible in Basic English (BBE)
- Keep in mind Lot's wife.
- Darby Translation (DBY)
- Remember the wife of Lot.
- Webster's Bible (WBS)
- Remember Lot's wife.
- Young's Literal Translation (YLT)
- remember the wife of Lot.
Read in context
- 30ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- 31ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
- 32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- 33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
Cross references
- Genesis 19:26 ಆದಿಕಾಂಡ 19:26ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
- Hebrews 10:38–39 ಇಬ್ರಿಯರಿಗೆ 10:38–39ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ. ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
- 2 Peter 2:18–22 2 ಪೇತ್ರನು 2:18–22ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ. ಇಂಥವರು ಸ್ವಾತಂತ್ರ್ಯ ಕೊಡುತ್ತೇವೆಂದು ಅವರಿಗೆ ವಾಗ್ದಾನ ಮಾಡುತ್ತಾರೆ, ಆದರೆ ತಾವೇ ಕೆಟ್ಟತನದ ದಾಸತ್ವ ದೊಳಗಿದ್ದಾರೆ. ಯಾಕಂದರೆ ಒಬ್ಬನು ಯಾವದಕ್ಕೆ ಸೋತು ಹೋಗಿರುವನೊ? ಅವನು ಅದರ ದಾಸತ್ವ ದೊಳಗಿರುವನಷ್ಟೆ. ರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವ ಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿ ಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ. ಅವರು ನೀತಿ ಮಾರ್ಗ ವನ್ನು ತಿಳಿದು ತಮಗೆ ಕೊಡಲ್ಪಟ್ಟ ಪರಿಶುದ್ಧ ಆಜ್ಞೆಯಿಂದ ತೊಲಗಿ ಹೋಗುವದಕ್ಕಿಂತ ಆ ಮಾರ್ಗವನ್ನು ತಿಳಿಯದೆ ಇದ್ದಿದ್ದರೆ ಮೇಲಾಗಿತ್ತು.ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು. ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
- 1 Corinthians 10:6–12 1 ಕೊರಿಂಥದವರಿಗೆ 10:6–12ಅವರು ಕೆಟ್ಟವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿ ಗಳು ನಮಗೆ ನಿದರ್ಶನಗಳಾಗಿವೆ. ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ. ಅವರಲ್ಲಿ ಕೆಲವರು ಜಾರತ್ವಮಾಡಿ ಒಂದೇ ದಿನದಲ್ಲಿ ಇಪ್ಪತ್ತುಮೂರು ಸಾವಿರ ಮಂದಿ ಸತ್ತರು; ನಾವು ಜಾರತ್ವ ಮಾಡದೆ ಇರೋಣ. ಇದಲ್ಲದೆ ನಾವು ಕ್ರಿಸ್ತನನ್ನು ಪರಿಶೋಧಿಸದೆ ಇರೋಣ; ಯಾಕಂದರೆ ಅವರಲ್ಲಿಯೂ ಕೆಲವರು ಪರಿಶೋಧಿಸಿ ಸರ್ಪಗಳಿಂದ ಸಂಹಾರವಾದರು. ಇದಲ್ಲದೆ ಅವರಲ್ಲಿ ಕೆಲವರು ಗುಣುಗುಟ್ಟಿ ಸಂಹಾರಕನ ಕೈಯಿಂದ ನಾಶ ವಾದರು; ಆದದರಿಂದ ನೀವು ಗುಣುಗುಟ್ಟಬೇಡಿರಿ. ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ. ಆದಕಾರಣ ನಿಂತಿದ್ದೇನೆಂದು ನೆನಸುವವನು ಬೀಳ ದಂತೆ ಎಚ್ಚರಿಕೆಯಾಗಿರಲಿ.
- Genesis 19:17 ಆದಿಕಾಂಡ 19:17ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.