Luke · chapter 17 · verse 34
Luke 17:34 in Kannada
ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
Aa raatriyalli ibbaru onde haasige yalli iruvaru; obbanu tegeyalpaduvanu; mattobbanu bidalpaduvanu.
Luke 17:34 in English
- King James Version (KJV)
- I tell you, in that night there shall be two [men] in one bed; the one shall be taken, and the other shall be left.
- World English Bible (WEB)
- I tell you, in that night there will be two people in one bed. One will be taken and the other will be left.
- American Standard Version (ASV)
- I say unto you, In that night there shall be two men on one bed; the one shall be taken, and the other shall be left.
- Bible in Basic English (BBE)
- I say to you, In that night there will be two men sleeping in one bed, and one will be taken away and the other let go.
- Darby Translation (DBY)
- I say to you, In that night there shall be two [men] upon one bed; one shall be seized and the other shall be let go.
- Webster's Bible (WBS)
- I tell you, in that night there will be two [men] in one bed; the one will be taken, and the other will be left.
- Young's Literal Translation (YLT)
- 'I say to you, In that night, there shall be two men on one couch, the one shall be taken, and the other shall be left;
Read in context
- 32ಲೋಟನ ಹೆಂಡತಿಯನ್ನು ಜ್ಞಾಪಕ ಮಾಡಿಕೊಳ್ಳಿರಿ.
- 33ಯಾವನು ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ಪ್ರಯತ್ನಿಸುವನೋ ಅವನು ಅದನ್ನು ಕಳಕೊಳ್ಳುವನು; ಯಾವನು ತನ್ನ ಪ್ರಾಣವನ್ನು ಕಳಕೊಳ್ಳುವನೋ ಅವನು ಅದನ್ನು ಕಾಪಾಡಿಕೊಳ್ಳು ವನು.
- 34ಆ ರಾತ್ರಿಯಲ್ಲಿ ಇಬ್ಬರು ಒಂದೇ ಹಾಸಿಗೆ ಯಲ್ಲಿ ಇರುವರು; ಒಬ್ಬನು ತೆಗೆಯಲ್ಪಡುವನು; ಮತ್ತೊಬ್ಬನು ಬಿಡಲ್ಪಡುವನು.
- 35ಇಬ್ಬರು ಹೆಂಗಸರು ಜೊತೆಯಾಗಿ ಬೀಸುತ್ತಿರುವರು; ಒಬ್ಬಳು ತೆಗೆಯ ಲ್ಪಡುವಳು, ಮತ್ತೊಬ್ಬಳು ಬಿಡಲ್ಪಡುವಳು.
- 36ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡುವನು, ಮತ್ತೊಬ್ಬನು ಬಿಡಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.ಆಗ ಅವರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಎಲ್ಲಿ ಎಂದು ಕೇಳಲು ಆತನು ಅವರಿಗೆ--ಹೆಣ ಎಲ್ಲಿದೆಯೋ ಅಲ್ಲಿ ಹದ್ದುಗಳು ಕೂಡಿಕೊಳ್ಳುವವು ಅಂದನು.
Cross references
- Matthew 24:40–41 ಮತ್ತಾಯನು 24:40–41ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು.
- 2 Peter 2:9 2 ಪೇತ್ರನು 2:9ಕರ್ತನು ನೀತಿವಂತರನ್ನು ಸಂಕಟದೊಳಗಿಂದ ತಪ್ಪಿಸುವ ದಕ್ಕೂ ಅನೀತಿವಂತರನ್ನು ಶಿಕ್ಷಿಸುವದಕ್ಕಾಗಿ ನ್ಯಾಯ ತೀರ್ಪಿನ ದಿನದ ತನಕ ಇಡುವದಕ್ಕೂ ಬಲ್ಲವನಾಗಿ ದ್ದಾನೆ.
- Malachi 3:16–18 ಮಲಾಕಿಯ 3:16–18ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು. ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ. ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 1 Thessalonians 4:16–17 1 ಥೆಸಲೊನೀಕದವರಿಗೆ 4:16–17ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
- Psalm 28:3 ಕೀರ್ತನೆಗಳು 28:3ದುಷ್ಟರ ಸಂಗಡಲೂ ಅಪರಾಧಮಾಡುವವರ ಸಂಗಡಲೂ ನನ್ನನ್ನು ಎಳೆಯಬೇಡ; ತಮ್ಮ ನೆರೆಯವರಿಗೆ ಅವರು ಸಮಾಧಾನವಾಗಿ ಮಾತನಾಡುತ್ತಾರೆ; ಕೇಡು ಅವರ ಹೃದಯದಲ್ಲಿ ಅದೆ.
- Mark 13:23 ಮಾರ್ಕನು 13:23ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ.
- Luke 13:24 ಲೂಕನು 13:24ಇಕ್ಕಟ್ಟಾದ ಬಾಗಲಿನಿಂದ ಒಳಗೆ ಪ್ರವೇಶಿಸುವದಕ್ಕೆ ಪ್ರಯಾಸಪಡಿರಿ; ಯಾಕಂ ದರೆ ಅನೇಕರು ಒಳಗೆ ಪ್ರವೇಶಿಸುವದಕ್ಕೆ ಪ್ರಯತ್ನಿಸಿ ದರೂ ಆಗುವದಿಲ್ಲ ಎಂದು ನಾನು ನಿಮಗೆ ಹೇಳು ತ್ತೇನೆ.
- Psalm 26:9 ಕೀರ್ತನೆಗಳು 26:9ಪಾಪಾತ್ಮರ ಸಂಗಡ ನನ್ನ ಪ್ರಾಣವನ್ನೂ ರಕ್ತ ಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡ.
- Romans 11:4–7 ರೋಮಾಪುರದವರಿಗೆ 11:4–7ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು. ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ. ಕೃಪೆಯಿಂದಾಗಿದ್ದರೆ ಇನ್ನೆಂದಿಗೂ ಕ್ರಿಯೆಗಳಿಂದಲ್ಲ; ಇಲ್ಲವಾದರೆ ಕೃಪೆಯು ಇನ್ನೆಂದಿಗೂ ಕೃಪೆಯೇ ಅಲ್ಲ. ಕ್ರಿಯೆಗಳಿಂದಾಗಿದ್ದರೆ ಇನ್ನೆಂದಿಗೂ ಕೃಪೆಯಲ್ಲ; ಇಲ್ಲವಾದರೆ ಕ್ರಿಯೆಯು ಇನ್ನೆಂದಿಗೂ ಕ್ರಿಯೆಯಲ್ಲ. ಹಾಗಾದರೇನು? ಇಸ್ರಾ ಯೇಲ್ಯರು ತಾವು ಹುಡುಕಿದ್ದನ್ನು ಹೊಂದಿಕೊಳ್ಳಲಿಲ್ಲ; ಆದರೆ ಆಯ್ಕೆಯಾದವರು ಅದನ್ನು ಹೊಂದಿಕೊಂಡರು.
- Luke 13:3 ಲೂಕನು 13:3ಆದರೆ--ಹಾಗಲ್ಲವೆಂದು ನಾನು ನಿಮಗೆ ಹೇಳುತ್ತೇನೆ; ನೀವು ಮಾನಸಾಂತರ ಪಡದೆಹೋದರೆ ನೀವೆಲ್ಲರೂ ಅವರಂತೆಯೇ ನಾಶವಾ ಗುವಿರಿ.
- Jeremiah 45:5 ಯೆರೆಮೀಯ 45:5ಹಾಗಾದರೆ ನೀನು ನಿನಗೋಸ್ಕರ ಮಹತ್ತಾದವು ಗಳನ್ನು ಹುಡುಕುತ್ತೀಯೋ? ಹುಡುಕಬೇಡ; ಇಗೋ, ನಾನು ಎಲ್ಲಾ ಶರೀರದ ಮೇಲೆ ಕೇಡನ್ನು ತರುತ್ತೇನೆಂದು ಕರ್ತನು ಅನ್ನುತ್ತಾನೆ; ಆದರೂ ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನ ಪ್ರಾಣವನ್ನು ನಿನಗೆ ಕೊಳ್ಳೆಯಾಗಿ ಕೊಡುತ್ತೇನೆ.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.