Luke · chapter 17 · verse 6
Luke 17:6 in Kannada
ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
Kartanu avarige-- nimage saasive kaalinashtu nambike iruvadaadare neevu ee aalada marakke--neenu beru sahita kittukondu hogi samudradalli naatiko endu heluvadaadare adu nimage vidheya vaaguvadu.
Luke 17:6 in English
- King James Version (KJV)
- And the Lord said, If ye had faith as a grain of mustard seed, ye might say unto this sycamine tree, Be thou plucked up by the root, and be thou planted in the sea; and it should obey you.
- World English Bible (WEB)
- The Lord said, “If you had faith like a grain of mustard seed, you would tell this sycamore tree, ‘Be uprooted and be planted in the sea,’ and it would obey you.
- American Standard Version (ASV)
- And the Lord said, If ye had faith as a grain of mustard seed, ye would say unto this sycamine tree, Be thou rooted up, and be thou planted in the sea; and it would obey you.
- Bible in Basic English (BBE)
- And the Lord said, If your faith was only as great as a grain of mustard seed, you might say to this tree, Be rooted up and planted in the sea; and it would be done.
- Darby Translation (DBY)
- But the Lord said, If ye have faith as a grain of mustard [seed], ye had said to this sycamine tree, Be thou rooted up, and be thou planted in the sea, and it would have obeyed you.
- Webster's Bible (WBS)
- And the Lord said, If ye had faith as a grain of mustard-seed, ye might say to this sycamine-tree, Be thou plucked up by the root, and be thou planted in the sea; and it would obey you.
- Young's Literal Translation (YLT)
- and the Lord said, 'If ye had faith as a grain of mustard, ye would have said to this sycamine, Be uprooted, and be planted in the sea, and it would have obeyed you.
Read in context
- 4ಅವನು ಒಂದು ದಿನದಲ್ಲಿ ಏಳು ಸಾರಿ ನಿನಗೆ ವಿರೋಧವಾಗಿ ತಪ್ಪು ಮಾಡಿ ಅದೇ ದಿನದಲ್ಲಿ ಏಳು ಸಾರಿ ನಿನ್ನ ಕಡೆಗೆ ತಿರುಗಿಕೊಂಡು-- ನಾನು ಮಾನಸಾಂತರಪಡುತ್ತೇನೆ ಎಂದು ಹೇಳಿದರೆ ನೀನು ಅವನನ್ನು ಕ್ಷಮಿಸಬೇಕು ಅಂದನು.
- 5ಆಗ ಅಪೋಸ್ತಲರು ಕರ್ತನಿಗೆ--ನಮ್ಮ ನಂಬಿಕೆ ಯನ್ನು ಹೆಚ್ಚಿಸು ಅಂದರು.
- 6ಕರ್ತನು ಅವರಿಗೆ-- ನಿಮಗೆ ಸಾಸಿವೆ ಕಾಳಿನಷ್ಟು ನಂಬಿಕೆ ಇರುವದಾದರೆ ನೀವು ಈ ಆಲದ ಮರಕ್ಕೆ--ನೀನು ಬೇರು ಸಹಿತ ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳುವದಾದರೆ ಅದು ನಿಮಗೆ ವಿಧೇಯ ವಾಗುವದು.
- 7ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ?
- 8ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ?
Cross references
- Matthew 17:20 ಮತ್ತಾಯನು 17:20ಯೇಸು ಅವರಿಗೆ--ನಿಮ್ಮ ಅಪನಂಬಿಕೆಯ ದೆಸೆಯಿಂದಲೇ; ನಾನು ನಿಮಗೆ ನಿಜವಾಗಿ ಹೇಳುವದೇನಂದರೆ--ಸಾಸಿವೆ ಕಾಳಷ್ಟು ನಂಬಿಕೆ ನಿಮಗಿರುವದಾದರೆ ನೀವು ಈ ಬೆಟ್ಟಕ್ಕೆ--ಇಲ್ಲಿಂದ ಆ ಸ್ಥಳಕ್ಕೆ ಹೋಗು ಎಂದು ಹೇಳಿದರೆ ಅದು ಹೋಗುವದು; ಮತ್ತು ಯಾವದೂ ನಿಮಗೆ ಅಸಾಧ್ಯವಾಗಿರುವದಿಲ್ಲ.
- Matthew 21:21 ಮತ್ತಾಯನು 21:21ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನಿಮ್ಮಲ್ಲಿ ನಂಬಿಕೆಯಿದ್ದು ಮತ್ತು ಸಂದೇಹ ಪಡದೆಹೋದರೆ ಈ ಅಂಜೂರದ ಮರಕ್ಕೆ ಮಾಡಿದಂತೆ ಮಾಡುವದಲ್ಲದೆ ನೀವು ಈ ಗುಡ್ಡಕ್ಕೆ --ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು ಎಂದು ಹೇಳಿದರೂ ಅದು ಆಗುವ
- Mark 9:23 ಮಾರ್ಕನು 9:23ಆಗ ಯೇಸು ಅವನಿಗೆ--ನೀನು ನಂಬುವದಾದರೆ ಆಗುವದು; ನಂಬುವವನಿಗೆ ಎಲ್ಲವು ಸಾಧ್ಯವೇ ಎಂದು ಹೇಳಿದನು.
- Matthew 13:31–32 ಮತ್ತಾಯನು 13:31–32ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ.
- Luke 13:19 ಲೂಕನು 13:19ಅದು ಒಬ್ಬ ಮನುಷ್ಯನು ಸಾಸಿವೆಕಾಳನ್ನು ತೆಗೆದುಕೊಂಡು ಹೋಗಿ ತನ್ನ ತೋಟ ದಲ್ಲಿ ಹಾಕಿದ್ದಕ್ಕೆ ಹೋಲಿಕೆಯಾಗಿದೆ; ಅದು ಬೆಳೆದು ಒಂದು ದೊಡ್ಡ ಮರವಾಯಿತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಮಾಡಿದವು ಅಂದನು.
- Mark 11:22–23 ಮಾರ್ಕನು 11:22–23ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಿದ್ದೇನಂದರೆ --ದೇವರಲ್ಲಿ ನಂಬಿಕೆ ಇಡಿರಿ. ಯಾಕಂದರೆ ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಯಾವನಾದರೂ ಈ ಬೆಟ್ಟಕ್ಕೆ--ನೀನು ಕಿತ್ತುಕೊಂಡು ಹೋಗಿ ಸಮುದ್ರ ದಲ್ಲಿ ಬೀಳು ಎಂದು ಹೇಳಿ ತನ್ನ ಹೃದಯದಲ್ಲಿ ಸಂಶಯ ಪಡದೆ ತಾನು ಹೇಳಿದವುಗಳು ಆಗುವವೆಂದು ನಂಬಿ ದರೆ ಅವನು ಹೇಳಿದಂತೆಯೇ ಆಗುವದು.
- 1 Corinthians 13:2 1 ಕೊರಿಂಥದವರಿಗೆ 13:2ನನಗೆ ಪ್ರವಾದನ ವರವಿದ್ದರೂ ಎಲ್ಲಾ ರಹಸ್ಯಗಳನ್ನು ಮತ್ತು ಸಕಲ ಜ್ಞಾನವನ್ನು ತಿಳಿದುಕೊಂಡವನಾಗಿದ್ದರೂ ಬೆಟ್ಟಗಳನ್ನು ತೆಗೆದಿಡುವದಕ್ಕೆ ಬೇಕಾದಷ್ಟು ನಂಬಿಕೆಯಿದ್ದರೂ ನಾನು ಪ್ರೀತಿಯಿಲ್ಲದವನಾಗಿದ್ದರೆ ಏನೂ ಅಲ್ಲದವನಾಗಿ ದ್ದೇನೆ.
- Luke 19:4 ಲೂಕನು 19:4ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.