Luke · chapter 18 · verse 13
Luke 18:13 in Kannada
ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
Aadare sunkadavanu dooradalli nintukondu aakaashada kadege kannetti noduvadakkoo manassillade tanna edeyannu badukolluttaa--devaru paapi yaada nannannu karunisali andanu.
Luke 18:13 in English
- King James Version (KJV)
- And the publican, standing afar off, would not lift up so much as [his] eyes unto heaven, but smote upon his breast, saying, God be merciful to me a sinner.
- World English Bible (WEB)
- But the tax collector, standing far away, wouldn’t even lift up his eyes to heaven, but beat his chest, saying, ‘God, be merciful to me, a sinner!’
- American Standard Version (ASV)
- But the publican, standing afar off, would not lift up so much as his eyes unto heaven, but smote his breast, saying, God, be thou merciful to me a sinner.
- Bible in Basic English (BBE)
- The tax-farmer, on the other hand, keeping far away, and not lifting up even his eyes to heaven, made signs of grief and said, God, have mercy on me, a sinner.
- Darby Translation (DBY)
- And the tax-gatherer, standing afar off, would not lift up even his eyes to heaven, but smote upon his breast, saying, O God, have compassion on me, the sinner.
- Webster's Bible (WBS)
- And the publican, standing afar off, would not lift up so much as [his] eyes to heaven, but smote upon his breast, saying, God be merciful to me a sinner.
- Young's Literal Translation (YLT)
- 'And the tax-gatherer, having stood afar off, would not even the eyes lift up to the heaven, but was smiting on his breast, saying, God be propitious to me — the sinner!
Read in context
- 11ಫರಿಸಾಯನು ನಿಂತುಕೊಂಡು ತನ್ನೊಳಗೆ ಹೀಗೆ ಪ್ರಾರ್ಥಿಸುತ್ತಾ--ದೇವರೇ, ಸುಲು ಕೊಳ್ಳುವವರೂ ಅನೀತಿವಂತರೂ ವ್ಯಭಿಚಾರಿಗಳೂ ಆಗಿರುವ ಮಿಕ್ಕಾದವರಂತೆ ಇಲ್ಲವೆ ಈ ಸುಂಕದವನ ಹಾಗೆ ನಾನು ಅಲ್ಲ, ಆದದರಿಂದ ನಾನು ನಿನಗೆ ಸ್ತೋತ್ರ ಸಲ್ಲಿಸುತ್ತೇನೆ.
- 12ನಾನು ವಾರದಲ್ಲಿ ಎರಡು ಸಾರಿ ಉಪವಾಸ ಮಾಡುತ್ತೇನೆ; ನನಗಿರುವದೆ ಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ ಎಂದು ಹೇಳಿದನು.
- 13ಆದರೆ ಸುಂಕದವನು ದೂರದಲ್ಲಿ ನಿಂತುಕೊಂಡು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ತನ್ನ ಎದೆಯನ್ನು ಬಡುಕೊಳ್ಳುತ್ತಾ--ದೇವರು ಪಾಪಿ ಯಾದ ನನ್ನನ್ನು ಕರುಣಿಸಲಿ ಅಂದನು.
- 14ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 15ತರುವಾಯ ಚಿಕ್ಕಮಕ್ಕಳನ್ನು ಸಹ ಯೇಸು ಮುಟ್ಟುವಂತೆ ಜನರು ಅವುಗಳನ್ನು ಆತನ ಬಳಿಗೆ ತಂದಾಗ ಆತನ ಶಿಷ್ಯರು ಇದನ್ನು ನೋಡಿ ಅವರನು ಗದರಿಸಿದರು.
Cross references
- Ezra 9:6 ಎಜ್ರನು 9:6ನನ್ನ ದೇವರೇ, ನಾನು ನನ್ನ ಮುಖವನ್ನು ನಿನ್ನ ಮುಂದೆ ಎತ್ತುವಹಾಗೆ ಲಜ್ಜೆಯಿಂದ ನಾಚಿಕೆಪಡು ತ್ತೇನೆ. ನನ್ನ ದೇವರೇ, ನಮ್ಮ ಅಕ್ರಮಗಳು ನಮ್ಮ ತಲೆಯ ಮೇಲೆ ಹೆಚ್ಚಿದವು; ನಮ್ಮ ಅಪರಾಧವು ಆಕಾಶದ ಪರ್ಯಂತರ ಬೆಳೆಯಿತು.
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Psalm 41:4 ಕೀರ್ತನೆಗಳು 41:4ಕರ್ತನೇ, ನನಗೆ ಕರುಣೆ ತೋರಿಸಿ ನನ್ನ ಪ್ರಾಣವನ್ನು ಸ್ವಸ್ಥಮಾಡು; ನಿನಗೆ ವಿರೋಧವಾಗಿ ಪಾಪಮಾಡಿದೆ ನೆಂದು ನಾನು ಹೇಳಿದೆನು.
- 1 Timothy 1:15 1 ತಿಮೊಥೆಯನಿಗೆ 1:15ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂದು ಹೇಳುವದು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.
- Hebrews 8:12 ಇಬ್ರಿಯರಿಗೆ 8:12ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Luke 7:6–7 ಲೂಕನು 7:6–7ಆಗ ಯೇಸು ಅವರೊಂದಿಗೆ ಹೋದನು. ಆತನು ಮನೆಗೆ ಇನ್ನೂ ಸ್ವಲ್ಪ ದೂರ ಇರುವಾಗ ಶತಾಧಿಪತಿಯು ಸ್ನೇಹಿತರನ್ನು ಆತನ ಬಳಿಗೆ ಕಳುಹಿಸಿ ಆತನಿಗೆ--ಕರ್ತನೇ, ನಿನ್ನನ್ನು ತೊಂದರೆಪಡಿಸಿ ಕೊಳ್ಳಬೇಡ; ಯಾಕಂದರೆ ನೀನು ನನ್ನ ಮನೆಯಲ್ಲಿ ಪ್ರವೇಶಿಸುವದಕ್ಕೆ ನಾನು ಯೋಗ್ಯನಲ್ಲ. ಇಲ್ಲವೆ ನಾನೂ ನಿನ್ನ ಬಳಿಗೆ ಬರುವದಕ್ಕೆ ಯೋಗ್ಯನಲ್ಲವೆಂದು ಎಣಿಸಿಕೊಂಡಿದ್ದೇನೆ; ಆದರೆ ನೀನು ಒಂದು ಮಾತು ಹೇಳು, ಆಗ ನನ್ನ ಆಳು ಗುಣಹೊಂದುವನು;
- Luke 23:48 ಲೂಕನು 23:48ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
- Hebrews 4:16 ಇಬ್ರಿಯರಿಗೆ 4:16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾ ಸಿಂಹಾಸನದ ಬಳಿಗೆ ಬರೋಣ.
- Acts 2:37 ಅಪೊಸ್ತಲರ ಕೃತ್ಯಗಳು 2:37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- Luke 5:8 ಲೂಕನು 5:8ಸೀಮೋನ್ ಪೇತ್ರನು ಅದನ್ನು ಕಂಡಾಗ ಯೇಸುವಿನ ಮೊಣಕಾಲಿಗೆ ಬಿದ್ದು--ನನ್ನನ್ನು ಬಿಟ್ಟು ಹೋಗು; ಓ ಕರ್ತನೇ, ನಾನು ಪಾಪಾತ್ಮನು ಅಂದನು.