Luke · chapter 18 · verse 2
Luke 18:2 in Kannada
ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
Ondaanondu pattanadalli obba nyaayaadhipati iddanu. Avanu devarige bhayapadadavanoo manushyarannu lakshya maadadavanoo aagiddanu.
Luke 18:2 in English
- King James Version (KJV)
- Saying, There was in a city a judge, which feared not God, neither regarded man:
- World English Bible (WEB)
- saying, “There was a judge in a certain city who didn’t fear God and didn’t respect man.
- American Standard Version (ASV)
- saying, There was in a city a judge, who feared not God, and regarded not man:
- Bible in Basic English (BBE)
- Saying, There was a judge in a certain town, who had no fear of God or respect for man:
- Darby Translation (DBY)
- saying, There was a judge in a city, not fearing God and not respecting man:
- Webster's Bible (WBS)
- Saying, There was in a city a judge, who feared not God, neither regarded man.
- Young's Literal Translation (YLT)
- saying, 'A certain judge was in a certain city — God he is not fearing, and man he is not regarding —
Read in context
- 1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- 2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- 3ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
- 4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
Cross references
- Luke 18:4 ಲೂಕನು 18:4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- Psalm 8:1–4 ಕೀರ್ತನೆಗಳು 8:1–4ನಮ್ಮ ದೇವರಾದ ಓ ಕರ್ತನೇ, ನಿನ್ನ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಶ್ರೇಷ್ಠವಾಗಿದೆ. ನಿನ್ನ ಮಹಿಮೆಯನ್ನು ಆಕಾಶಗಳ ಮೇಲೆ ಇರಿಸಿದ್ದೀ. ಶತ್ರುವನ್ನೂ ಮುಯ್ಯಿಗೆ ಮುಯ್ಯಿ ಕೊಡುವವನನ್ನೂ ನಿಲ್ಲಿಸಿಬಿಡುವದಕ್ಕೆ ನಿನ್ನ ವೈರಿಗಳ ನಿಮಿತ್ತ ಶಿಶುಗಳ ಮತ್ತು ಮೊಲೆ ಕೂಸುಗಳ ಬಾಯಿಂದ ನೀನು ನಿನ್ನ ಬಲವನ್ನು ಸ್ಥಾಪಿಸಿದ್ದೀ. ನಿನ್ನ ಕೈಕೆಲಸವಾದ ಆಕಾಶಗಳನ್ನೂ ನೀನು ಸಿದ್ಧ ಮಾಡಿದ ಚಂದ್ರ ನಕ್ಷತ್ರಗಳನ್ನೂ ನಾನು ಆಲೋ ಚಿಸುವಾಗ ಮನುಷ್ಯನನ್ನು ನೆನಸುವ ಹಾಗೆ ಅವನು ಎಷ್ಟರವನು? ಅವನನ್ನು ದರ್ಶಿಸುವ ಹಾಗೆ ಮನುಷ್ಯನ ಮಗನು ಎಷ್ಟರವನು?
- Proverbs 29:7 ಜ್ಞಾನೋಕ್ತಿಗಳು 29:7ಬಡವರ ನಿಮಿತ್ತ ನೀತಿವಂತನು ಯೋಚಿಸುತ್ತಾನೆ; ದುಷ್ಟನು ಅದನ್ನು ತಿಳುಕೊಳ್ಳುವಂತೆ ಲಕ್ಷ್ಯಕ್ಕೆ ತರುವ ದಿಲ್ಲ.
- Jeremiah 22:16–17 ಯೆರೆಮೀಯ 22:16–17ಬಡವನ ಮತ್ತು ದರಿದ್ರನ ನ್ಯಾಯ ವನ್ನು ತೀರಿಸಿದನು. ಆಗ ಒಳ್ಳೇದಾಯಿತು; ನನ್ನನ್ನು ತಿಳುಕೊಳ್ಳುವದು ಇದೇ ಅಲ್ಲವೋ ಎಂದು ಕರ್ತನು ಅನ್ನುತ್ತಾನೆ. ಆದರೆ ನಿನ್ನ ಕಣ್ಣುಗಳು ನಿನ್ನ ಹೃದಯವು ನಿನ್ನ ದುರ್ಲಾಭದ ಮೇಲೆ, ಅಪರಾಧವಿಲ್ಲದವನ ರಕ್ತ ಚೆಲ್ಲುವದರ ಮೇಲೆ ಮತ್ತು ಪೀಡೆಯನ್ನೂ ಬಲಾತ್ಕಾರವನ್ನೂ ಮಾಡುವದರ ಮೇಲೆಯೇ ಹೊರತು ಮತ್ತಾವದರ ಮೇಲೆಯೂ ಇರುವದಿಲ್ಲ.
- Ezekiel 22:6–8 ಯೆಹೆಜ್ಕೇಲನು 22:6–8ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ.
- 2 Chronicles 19:3–9 2 ಪೂರ್ವಕಾಲವೃತ್ತಾಂತ 19:3–9ಆದಾಗ್ಯೂ ನೀನು ದೇಶದಿಂದ ತೋಪು ಗಳನ್ನು ತೆಗೆದುಹಾಕಿ ದೇವರನ್ನು ಹುಡುಕಲು ನಿನ್ನ ಹೃದಯವನ್ನು ಸಿದ್ಧಪಡಿಸಿದ್ದರಿಂದ ನಿನ್ನಲ್ಲಿ ಉತ್ತಮವಾದ ಕಾರ್ಯಗಳು ಕಾಣಲ್ಪಟ್ಟಿವೆ ಅಂದನು. ಯೆಹೋಷಾಫಾಟನು ಯೆರೂಸಲೇಮಿನಲ್ಲಿ ವಾಸ ವಾಗಿದ್ದನು. ಅವನು ತಿರಿಗಿ ಹೊರಟು ಬೇರ್ಷೆಬ ಮೊದಲುಗೊಂಡು ಎಫ್ರಾಯಾಮಿನ ಬೆಟ್ಟದ ಮಟ್ಟಿಗೂ ಜನರಲ್ಲಿ ಸಂಚರಿಸಿ ತಮ್ಮ ಪಿತೃಗಳ ದೇವ ರಾದ ಕರ್ತನ ಕಡೆಗೆ ಅವರನ್ನು ತಿರುಗಿಸಿ ಪಟ್ಟಣ ದಿಂದ ಪಟ್ಟಣಕ್ಕೆ ದೇಶದ ಕೋಟೆಯ ಪಟ್ಟಣಗಳ ಲ್ಲೆಲ್ಲಾ ಅವನು ನ್ಯಾಯಾಧಿಪತಿಗಳನ್ನು ನೇಮಿಸಿದನು. ನ್ಯಾಯಾಧಿಪತಿಗಳಿಗೆ -- ನೀವು ಮಾಡುವದನ್ನು ನೋಡಿಕೊಳ್ಳಿರಿ; ನೀವು ಮನುಷ್ಯರಿಗೋಸ್ಕರವಲ್ಲ, ನ್ಯಾಯತೀರಿಸುವ ಕಾರ್ಯದಲ್ಲಿ ನಿಮ್ಮ ಸಂಗಡ ಇರುವ ಕರ್ತನಿಗೋಸ್ಕರ ನ್ಯಾಯತೀರಿಸುತ್ತೀರಿ. ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು. ಇದಲ್ಲದೆ ಅವರು ಯೆರೂಸಲೇಮಿಗೆ ತಿರಿಗಿ ಬಂದ ತರುವಾಯ ಯೆಹೋಷಾಫಾಟನು ಕರ್ತನ ನ್ಯಾಯತೀರ್ವಿಕೆಗೋಸ್ಕರವೂ ವ್ಯಾಜ್ಯಗಳಿಗೋ ಸ್ಕರವೂ ಯೆರೂಸಲೇಮಿನೊಳಗೆ ಲೇವಿಯರಲ್ಲಿಯೂ ಯಾಜಕರಲ್ಲಿಯೂ ಪಿತೃಗಳ ಮುಖ್ಯಸ್ಥರಲ್ಲಿಯೂ ಕೆಲ ವರನ್ನು ನೇಮಿಸಿ ಅವರಿಗೆ-- ನೀವು ಈ ಕಾರ್ಯವನ್ನು ಕರ್ತನ ಭಯದಿಂದಲೂ ನಂಬಿಕೆಯಿಂದಲೂ ಪೂರ್ಣ ಹೃದಯದಿಂದಲೂ ಮಾಡಬೇಕು.
- Romans 3:14–18 ರೋಮಾಪುರದವರಿಗೆ 3:14–18ಅವರ ಬಾಯಿ ಶಾಪದಿಂದಲೂ ವಿಷದಿಂದಲೂ ತುಂಬಿ ಅದೆ. ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರ ಪಡುತ್ತವೆ. ಅವರ ದಾರಿಗಳಲ್ಲಿ ನಾಶ ಸಂಕಟಗಳು ಉಂಟಾಗುತ್ತವೆ. ಅವರು ಸಮಾಧಾನದ ಮಾರ್ಗ ವನ್ನೇ ಅರಿತವರಲ್ಲ; ಅವರ ಕಣ್ಣೆದುರಿಗೆ ದೇವರ ಭಯವೇ ಇಲ್ಲ ಎಂಬವುಗಳೇ.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
- Job 29:7–17 ಯೋಬನು 29:7–17ಪಟ್ಟಣವನ್ನು ಹಾದು ಬಾಗಲಿಗೆ ಹೊರಟುಹೋಗಿ ನನ್ನ ಪೀಠವನ್ನು ಬೀದಿಯಲ್ಲಿ ಸಿದ್ಧಪಡಿಸುತ್ತಾ ಇದ್ದೆನು. ಯುವಕರು ನನ್ನನ್ನು ನೋಡಿ ಅಡಗಿಕೊಳ್ಳುತ್ತಿದ್ದರು; ವೃದ್ಧರು ಎದ್ದು ನಿಲ್ಲುತ್ತಿದ್ದರು. ಪ್ರಧಾನರು ನುಡಿಗಳನ್ನು ಬಿಗಿಹಿಡಿದು ತಮ್ಮ ಬಾಯಿಯ ಮೇಲೆ ಕೈ ಇಟ್ಟು ಕೊಂಡರು. ಘನವುಳ್ಳವರು ಮೌನವಾದರು; ಅವರ ನಾಲಿಗೆ ಅವರ ಅಂಗಳಕ್ಕೆ ಅಂಟಿತು. ಕೇಳುವ ಕಿವಿ ನನ್ನನ್ನು ಧನ್ಯನೆಂದು ಹರಸಿತು; ನೋಡುವ ಕಣ್ಣು ನನಗೆ ಸಾಕ್ಷಿ ಕೊಡುತ್ತಿತ್ತು. ಮೊರೆ ಯಿಡುವ ದೀನನನ್ನೂ ಸಹಾಯವಿಲ್ಲದ ದಿಕ್ಕಿಲ್ಲದ ವರನ್ನೂ ನಾನು ತಪ್ಪಿಸಿದೆನು. ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು. ನೀತಿಯನ್ನು ಧರಿಸಿಕೊಂಡೆನು; ಅದೇ ನನಗೆ ವಸ್ತ್ರದಹಾಗಿತ್ತು; ನಿಲು ವಂಗಿಯ ಹಾಗೆಯೂ ಕಿರೀಟದ ಹಾಗೆಯೂ ನನ್ನ ನ್ಯಾಯವು ನನಗೆ ಇತ್ತು. ನಾನು ಕುರುಡನಿಗೆ ಕಣ್ಣೂ ಕುಂಟನಿಗೆ ಕಾಲೂ ಆಗಿದ್ದೆನು. ದರಿದ್ರರಿಗೆ ನಾನು ತಂದೆಯಾಗಿದ್ದೆನು; ನಾನರಿಯದವನ ವ್ಯಾಜ್ಯವನ್ನು ಪರಿಶೋಧಿಸಿದೆನು. ದುಷ್ಟರ ದವಡೆಗಳನ್ನು ಮುರಿ ದೆನು; ಅವನ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ತೆಗೆದೆನು.
- Exodus 18:21–22 ವಿಮೋಚನಕಾಂಡ 18:21–22ಇದಲ್ಲದೆ ನೀನು ಸಮಸ್ತ ಜನರೊಳಗೆ ಸಮರ್ಥರು ಅಂದರೆ ದೇವರಿಗೆ ಭಯ ಪಡುವವರೂ ಸತ್ಯವಂತರೂ ದುರಾಶೆಯನ್ನು ಹಗೆ ಮಾಡುವವರೂ ಆಗಿರುವ ಇಂಥವರನ್ನು ಸಾವಿರ ಜನರ ಮೇಲೆಯೂ ನೂರು ಜನರ ಮೇಲೆಯೂ ಐವತ್ತು ಜನರ ಮೇಲೆಯೂ ಹತ್ತು ಜನರ ಮೇಲೆಯೂ ಅಧಿಕಾರಿಗಳನ್ನಾಗಿ ನೇಮಿಸಬೇಕು. ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ದೊಡ್ಡ ವ್ಯಾಜ್ಯ ಗಳನ್ನೆಲ್ಲಾ ನಿನ್ನ ಮುಂದೆ ತಂದು ಸಣ್ಣಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಬೇಕು. ಹೀಗೆ ನಿನಗೆ ಸುಲಭವಾಗು ವದು. ಅವರು ನಿನ್ನ ಸಂಗಡ ಭಾರವನ್ನು ಹೊರುವರು.
- Isaiah 33:8 ಯೆಶಾಯ 33:8ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ನಿಂತುಹೋದರು. ಅವನು ಒಪ್ಪಂದವನ್ನು ವಿಾರಿದ್ದಾನೆ. ಪಟ್ಟಣಗಳನ್ನು ತಿರಸ್ಕಾರಮಾಡಿ ಯಾವ ಮನುಷ್ಯನನ್ನು ಗಣನೆಗೆತಾ ರನು.