Luke · chapter 18 · verse 20
Luke 18:20 in Kannada
ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
Vyabhichaara maadabeda, narahatya maada beda, kadiyabeda, sullusaakshi helabeda, ninna tandeyannu mattu ninna taayiyannu sanmaanisabeku emba aajnyegalannu neenu ballavanaagiddee andanu.
Luke 18:20 in English
- King James Version (KJV)
- Thou knowest the commandments, Do not commit adultery, Do not kill, Do not steal, Do not bear false witness, Honour thy father and thy mother.
- World English Bible (WEB)
- You know the commandments: ‘Don’t commit adultery,’ ‘Don’t murder,’ ‘Don’t steal,’ ‘Don’t give false testimony,’ ‘Honor your father and your mother.’”
- American Standard Version (ASV)
- Thou knowest the commandments, Do not commit adultery, Do not kill, Do not steal, Do not bear false witness, Honor thy father and mother.
- Bible in Basic English (BBE)
- You have knowledge of what the law says: Do not be untrue to your wife, Do not put anyone to death, Do not take what is not yours, Do not give false witness, Give honour to your father and mother.
- Darby Translation (DBY)
- Thou knowest the commandments: Do not commit adultery, Do not kill, Do not steal, Do not bear false witness, Honour thy father and thy mother.
- Webster's Bible (WBS)
- Thou knowest the commandments, Do not commit adultery, Do not kill, Do not steal, Do not bear false witness, Honor thy father and thy mother.
- Young's Literal Translation (YLT)
- the commands thou hast known: Thou mayest not commit adultery, Thou mayest do no murder, Thou mayest not steal, Thou mayest not bear false witness, Honour thy father and thy mother.'
Read in context
- 18ಆಗ ಒಬ್ಬಾನೊಬ್ಬ ಅಧಿಕಾರಿಯು ಆತನಿಗೆ--ಒಳ್ಳೇ ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯ ವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
- 19ಅದಕ್ಕೆ ಯೇಸು ಅವನಿಗೆ--ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಒಳ್ಳೆಯವನು ಯಾವನೂ ಇಲ್ಲ.
- 20ವ್ಯಭಿಚಾರ ಮಾಡಬೇಡ, ನರಹತ್ಯ ಮಾಡ ಬೇಡ, ಕದಿಯಬೇಡ, ಸುಳ್ಳುಸಾಕ್ಷಿ ಹೇಳಬೇಡ, ನಿನ್ನ ತಂದೆಯನ್ನು ಮತ್ತು ನಿನ್ನ ತಾಯಿಯನ್ನು ಸನ್ಮಾನಿಸಬೇಕು ಎಂಬ ಆಜ್ಞೆಗಳನ್ನು ನೀನು ಬಲ್ಲವನಾಗಿದ್ದೀ ಅಂದನು.
- 21ಅದಕ್ಕವನು--ನನ್ನ ಬಾಲ್ಯದಿಂದ ನಾನು ಇವೆಲ್ಲವು ಗಳನ್ನು ಕೈಕೊಂಡಿದ್ದೇನೆ ಎಂದು ಹೇಳಿದನು.
- 22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
Cross references
- Exodus 20:12–17 ವಿಮೋಚನಕಾಂಡ 20:12–17ನಿನ್ನ ಕರ್ತನಾದ ದೇವರು ನಿನಗೆ ಕೊಡುವ ದೇಶದಲ್ಲಿ ನಿನ್ನ ದಿವಸಗಳು ಹೆಚ್ಚಾಗುವಂತೆ ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸು. ಕೊಲೆ ಮಾಡಬಾರದು. ವ್ಯಭಿಚಾರ ಮಾಡಬಾರದು. ಕದಿಯಬಾರದು. ನಿನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳು ಸಾಕ್ಷಿ ಹೇಳಬಾರದು. ನೀನು ನಿನ್ನ ನೆರೆಯವನ ಮನೆಯನ್ನು ಆಶಿಸ ಬಾರದು, ನಿನ್ನ ನೆರೆಯವನ ಹೆಂಡತಿಯನ್ನೂ ಆಶಿಸ ಬಾರದು; ಅವನ ದಾಸನನ್ನಾಗಲಿ ದಾಸಿಯನ್ನಾಗಲಿ ಎತ್ತನ್ನಾಗಲಿ ಕತ್ತೆಯನ್ನಾಗಲಿ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬಾರದು ಎಂದು ಹೇಳಿದನು.
- Deuteronomy 5:16–21 ಧರ್ಮೋಪದೇಶಕಾಂಡ 5:16–21ನಿನ್ನ ದಿವಸಗಳು ಹೆಚ್ಚಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ನಿನಗೆ ಕೊಡುವ ಭೂಮಿಯಲ್ಲಿ ನಿನಗೆ ಒಳ್ಳೇದಾಗುವ ಹಾಗೆಯೂ ನಿನ್ನ ದೇವರಾದ ಕರ್ತನು ಆಜ್ಞಾಪಿಸಿದಂತೆ ನಿನ್ನ ತಂದೆಯನ್ನೂ ನಿನ್ನ ತಾಯಿಯನ್ನೂ ಸನ್ಮಾನಿಸು. ಕೊಲ್ಲಬೇಡ ವ್ಯಭಿಚಾರ ಮಾಡಬೇಡ. ಕದಿಯಬೇಡ. ನಿನ್ನ ನೆರೆಯವನ ಮೇಲೆ ಸುಳ್ಳುಸಾಕ್ಷಿ ಹೇಳಬೇಡ. ನಿನ್ನ ನೆರೆಯವನ ಹೆಂಡತಿಯನ್ನು ಆಶಿಸಬೇಡ; ನೆರೆಯವನ ಮನೆಯನ್ನೂ ಅವನ ಹೊಲವನ್ನೂ ದಾಸ ದಾಸಿಯರನ್ನೂ ಪಶು ಕತ್ತೆಗಳನ್ನೂ ನಿನ್ನ ನೆರೆಯವನಿಗೆ ಇರುವ ಯಾವದನ್ನೂ ಆಶಿಸಬೇಡ ಎಂದು ಹೇಳಿದನು.
- Matthew 19:17–19 ಮತ್ತಾಯನು 19:17–19ಆಗ ಆತನು ಅವನಿಗೆ--ನನ್ನನ್ನು ಒಳ್ಳೆಯವನೆಂದು ನೀನು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ; ಆದರೆ ನೀನು ಜೀವದಲ್ಲಿ ಸೇರಬೇಕೆಂದು ಅಪೇ ಕ್ಷಿಸಿದರೆ(ದೇವರ)ಆಜ್ಞೆಗಳನ್ನು ಕೈಕೊಂಡು ನಡೆದುಕೋ ಅಂದನು. ಅವನು ಆತನಿಗೆ--ಅವು ಯಾವವು ಎಂದು ಕೇಳಿದನು. ಅದಕ್ಕೆ ಯೇಸು--ನೀನು ನರಹತ್ಯ ಮಾಡಬಾರದು, ನೀನು ವ್ಯಭಿಚಾರ ಮಾಡಬಾರದು, ನೀನು ಕದಿಯ ಬಾರದು, ನೀನು ಸುಳ್ಳುಸಾಕ್ಷಿ ಹೇಳ ಬಾರದು. ನಿನ್ನ ತಂದೆ ತಾಯಿಗಳನ್ನು ಸನ್ಮಾನಿಸಬೇಕು; ಮತ್ತು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಮಾಡ ಬೇಕು ಎಂದು ಹೇಳಿದನು.
- Romans 13:9 ರೋಮಾಪುರದವರಿಗೆ 13:9ಹೇಗಂದರೆ ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳ ಬಾರದು, ಆಶಿಸಬಾರದು ಈ ಮೊದಲಾದ ಎಲ್ಲಾ ಕಟ್ಟಳೆಗಳು--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬ ಒಂದೇ ಮಾತಿನಲ್ಲಿ ಅಡಕವಾಗಿವೆ.
- Galatians 3:10–13 ಗಲಾತ್ಯದವರಿಗೆ 3:10–13ನ್ಯಾಯ ಪ್ರಮಾಣದ ಕ್ರಿಯೆಗಳನ್ನು ಆಧಾರ ಮಾಡಿಕೊಳ್ಳುವವ ರೆಲ್ಲರೂ ಶಾಪಾಧೀನರಾಗಿದ್ದಾರೆ. ಹೇಗಂದರೆ, ನ್ಯಾಯ ಪ್ರಮಾಣದ ಗ್ರಂಥದೊಳಗೆ ಬರೆದಿರುವವುಗಳನ್ನೆಲ್ಲಾ ನಿತ್ಯವೂ ಕೈಕೊಳ್ಳದಿರುವ ಪ್ರತಿಯೊಬ್ಬನು ಶಾಪಗ್ರಸ್ತ ನೆಂದು ಬರೆದದೆ. ಇದಲ್ಲದೆ ನ್ಯಾಯಪ್ರಮಾಣದಿಂದ ಯಾವನೂ ದೇವರ ಸನ್ನಿಧಿಯಲ್ಲಿ ನೀತಿವಂತ ನಾಗುವದಿಲ್ಲವೆಂಬದು ಸ್ಪಷ್ಟವಾಗಿದೆ. ಯಾಕಂದರೆ-- ನೀತಿವಂತನು ನಂಬಿಕೆಯಿಂದಲೇ ಬದುಕುವನು ಎಂಬದು. ನ್ಯಾಯಪ್ರಮಾಣಕ್ಕೆ ನಂಬಿಕೆಯು ಆಧಾರ ವಲ್ಲ. ಆದರೆ--ಅದರ ಕ್ರಿಯೆಗಳನ್ನು ಮಾಡುವವನೇ ಅವುಗಳ ಮೂಲಕ ಬದುಕುವನು ಎಂಬದೇ. ಕ್ರಿಸ್ತನು ನಮ್ಮ ನಿಮಿತ್ತ ಶಾಪವಾಗಿ ಮಾಡಲ್ಪಟ್ಟು ನ್ಯಾಯಪ್ರಮಾಣದ ಶಾಪದೊಳಗಿಂದ ನಮ್ಮನ್ನು ಬಿಡಿಸಿದನು. ಯಾಕಂದರೆ--ಮರಕ್ಕೆ ತೂಗಹಾಕಲ್ಪಟ್ಟ ಪ್ರತಿಯೊಬ್ಬನು ಶಾಪಗ್ರಸ್ತನು ಎಂದು ಬರೆದದೆಯಲ್ಲಾ.
- Colossians 3:20 ಕೊಲೊಸ್ಸೆಯವರಿಗೆ 3:20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯ ರಾಗಿರ್ರಿ; ಯಾಕಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
- Romans 7:7–11 ರೋಮಾಪುರದವರಿಗೆ 7:7–11ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Ephesians 6:2 ಎಫೆಸದವರಿಗೆ 6:2ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು, ಇದು ವಾಗ್ದಾನಸಹಿತವಾದ ಮೊದಲನೇ ಆಜ್ಞೆಯಾಗಿದೆ.
- Mark 10:18–19 ಮಾರ್ಕನು 10:18–19ಯೇಸು ಅವನಿಗೆ --ನೀನು ನನ್ನನ್ನು ಒಳ್ಳೆಯವನೆಂದು ಯಾಕೆ ಕರೆಯುತ್ತೀ? ದೇವರೊಬ್ಬನೇ ಹೊರತು ಮತ್ತಾವನೂ ಒಳ್ಳೆಯವ ನಲ್ಲ. ವ್ಯಭಿಚಾರ ಮಾಡಬಾರದು, ಕೊಲ್ಲಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ಮೋಸ ಮಾಡಬಾರದು, ನಿನ್ನ ತಂದೆಯನ್ನೂ ತಾಯಿಯನ್ನೂ ಸನ್ಮಾನಿಸಬೇಕು ಎಂಬ ಈ ಆಜ್ಞೆಗಳು ನಿನಗೆ ಗೊತ್ತಿವೆ ಯಲ್ಲಾ ಅಂದನು.
- James 2:8–11 ಯಾಕೋಬನು 2:8–11ಆದರೂ ಬರಹದ ಪ್ರಕಾರ--ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸ ಬೇಕೆಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ ನೀವು ಒಳ್ಳೇದನ್ನು ಮಾಡುವವರಾಗಿರುವಿರಿ. ನೀವು ಪಕ್ಷಪಾತಿಗಳಾಗಿದ್ದರೆ ಪಾಪ ಮಾಡುವವರಾಗಿದ್ದು ಅಪ ರಾಧಿಗಳೆಂದು ನ್ಯಾಯಪ್ರಮಾಣದಿಂದ ಮನದಟ್ಟು ಮಾಡಲ್ಪಡುತ್ತೀರಿ. ಯಾಕಂದರೆ ಯಾವನಾದರೂ ನ್ಯಾಯಪ್ರಮಾಣವನ್ನೆಲ್ಲಾ ಕೈಕೊಂಡು ನಡೆದು ಒಂದೇ ಒಂದರಲ್ಲಿ ತಪ್ಪಿದರೆ ಅವನು ಎಲ್ಲಾ ವಿಷಯದಲ್ಲಿಯೂ ಅಪರಾಧಿಯಾಗುತ್ತಾನೆ. ವ್ಯಭಿಚಾರ ಮಾಡಬಾರ ದೆಂದು ಹೇಳಿದಾತನೇ--ನರಹತ್ಯ ಮಾಡಬಾರ ದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯ ಮಾಡಿದರೆ ನ್ಯಾಯ ಪ್ರಮಾಣವನ್ನು ವಿಾರಿದವನಾದಿ.
- Isaiah 8:20 ಯೆಶಾಯ 8:20ನ್ಯಾಯಪ್ರಮಾಣ ಮತ್ತು ಸಾಕ್ಷಿಯ ವಿಷಯದಲ್ಲಿ ಈ ವಾಕ್ಯದ ಪ್ರಕಾರ ಹೇಳದಿರು ವದು ಅವರಲ್ಲಿ ಬೆಳಕಿಲ್ಲದ್ದರಿಂದಲೇ.
- Romans 3:20 ರೋಮಾಪುರದವರಿಗೆ 3:20ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.