Luke · chapter 18 · verse 24
Luke 18:24 in Kannada
ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
Avanu bahala vyathegondaddannu yesu nodi--aishvarya vantaru devara raajyadalli seruvadu eshto kashta.
Luke 18:24 in English
- King James Version (KJV)
- And when Jesus saw that he was very sorrowful, he said, How hardly shall they that have riches enter into the kingdom of God!
- World English Bible (WEB)
- Jesus, seeing that he became very sad, said, “How hard it is for those who have riches to enter into God’s Kingdom!
- American Standard Version (ASV)
- And Jesus seeing him said, How hardly shall they that have riches enter into the kingdom of God!
- Bible in Basic English (BBE)
- And Jesus, looking at him, said, How hard it is for those who have wealth to get into the kingdom of God!
- Darby Translation (DBY)
- But when Jesus saw that he became very sorrowful, he said, How difficultly shall those who have riches enter into the kingdom of God;
- Webster's Bible (WBS)
- And when Jesus saw that he was very sorrowful, he said, How hardly will they that have riches enter into the kingdom of God!
- Young's Literal Translation (YLT)
- And Jesus having seen him become very sorrowful, said, 'How hardly shall those having riches enter into the reign of God!
Read in context
- 22ಆಗ ಯೇಸು ಇವುಗಳನ್ನು ಕೇಳಿ ಅವನಿಗೆ--ಆದಾಗ್ಯೂ ನಿನಗೆ ಒಂದು ಕೊರತೆ ಇದೆ; ನಿನಗೆ ಇರುವದೆಲ್ಲವನ್ನು ಮಾರಿ ಬಡವರಿಗೆ ಹಂಚಿಕೊಡು; ಪರಲೋಕದಲ್ಲಿ ನಿನಗೆ ಸಂಪತ್ತು ಇರುವದು; ಬಂದು ನನ್ನನ್ನು ಹಿಂಬಾ ಲಿಸು ಅಂದನು.
- 23ಅವನು ಇದನ್ನು ಕೇಳಿ ಬಹಳ ದುಃಖವುಳ್ಳವನಾದನು; ಯಾಕಂದರೆ ಅವನು ಬಹಳ ಐಶ್ವರ್ಯವಂತನಾಗಿದ್ದನು.
- 24ಅವನು ಬಹಳ ವ್ಯಥೆಗೊಂಡದ್ದನ್ನು ಯೇಸು ನೋಡಿ--ಐಶ್ವರ್ಯ ವಂತರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ.
- 25ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ತೂರುವದು ಸುಲಭ ಎಂದು ಹೇಳಿದನು.
- 26ಇದನ್ನು ಕೇಳಿದವರು--ಹಾಗಾದರೆ ರಕ್ಷಣೆ ಹೊಂದುವವರು ಯಾರು? ಅಂದರು.
Cross references
- Proverbs 11:28 ಜ್ಞಾನೋಕ್ತಿಗಳು 11:28ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
- Mark 10:23–27 ಮಾರ್ಕನು 10:23–27ಆಗ ಯೇಸು ಸುತ್ತಲೂ ನೋಡಿ ತನ್ನ ಶಿಷರಿಗೆ --ಐಶ್ವರ್ಯವುಳ್ಳವರು ದೇವರ ರಾಜ್ಯದಲ್ಲಿ ಸೇರುವದು ಎಷ್ಟೋ ಕಷ್ಟ ಅಂದನು. ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ. ಒಬ್ಬ ಐಶ್ವರ್ಯವಂತನು ದೇವರ ರಾಜ್ಯದೊಳಗೆ ಸೇರುವದಕ್ಕಿಂತ ಒಂಟೆಯು ಸೂಜಿಯ ಕಣ್ಣಿನಲ್ಲಿ ನುಗ್ಗುವದು ಸುಲಭ ಅಂದನು. ಅದಕ್ಕೆ ಅವರು ಮಿತಿವಿಾರಿ ಆಶ್ಚರ್ಯಪಟ್ಟು ತಮ್ಮೊಳಗೆ--ಹಾಗಾದರೆ ರಕ್ಷಿಸಲ್ಪಡುವದು ಯಾರಿಗೆ ಸಾಧ್ಯ ಎಂದು ಅಂದು ಕೊಂಡರು. ಆಗ ಯೇಸು ಅವರನ್ನು ದೃಷ್ಟಿಸುತ್ತಾ--ಮನುಷ್ಯರಿಗೆ ಇದು ಅಸಾಧ್ಯವಾಗಿದೆ; ಆದರೆ ದೇವರಿಗೆ ಅಲ್ಲ; ಯಾಕಂದರೆ ದೇವರಿಗೆ ಎಲ್ಲವೂ ಸಾಧ್ಯವಾಗಿವೆ ಅಂದನು.
- James 2:5–7 ಯಾಕೋಬನು 2:5–7ನನ್ನ ಪ್ರಿಯ ಸಹೋದರರೇ, ಕೇಳಿರಿ; ದೇವರು ಈ ಲೋಕದ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರಾಗಿಯೂ ತನ್ನನ್ನು ಪ್ರೀತಿಸುವವ ರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯ ರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ? ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನಗಳ ಮುಂದೆ ಎಳೆದು ಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ? ನೀವು ಕರೆಯಲ್ಪಟ್ಟ ಆ ಯೋಗ್ಯವಾದ ನಾಮವನ್ನು ದೂಷಿಸುವವರು ಅವರಲ್ಲವೋ?
- Proverbs 30:9 ಜ್ಞಾನೋಕ್ತಿಗಳು 30:9ಇಲ್ಲವಾದರೆ ನಾನು ಸಂತೃಪ್ತನಾಗಿ ನಿನ್ನನ್ನು ನಿರಾಕರಿಸಿ--ಕರ್ತನು ಯಾರು ಎಂದು ಹೇಳಿಯೇನು? ಇಲ್ಲವೆ ನಾನು ಬಡವನಾಗಿ ಕದ್ದುಕೊಂಡು ದೇವರ ನಾಮವನ್ನು ಅಯೋಗ್ಯವಾಗಿ ಎತ್ತೇನು.
- 1 Timothy 6:9–10 1 ತಿಮೊಥೆಯನಿಗೆ 6:9–10ಆದರೆ ಐಶ್ವರ್ಯವಂತರಾಗ ಬೇಕೆಂದು ಮನಸ್ಸು ಮಾಡುವವರು ಶೋಧನೆಯಲ್ಲಿಯೂ ಉರ್ಲಿನಲ್ಲಿಯೂ ಸಿಕ್ಕಿಕೊಂಡು ಅನೇಕ ಬುದ್ಧಿಹೀನತೆಯ ಮತ್ತು ಹಾನಿಕರವಾದ ದುರಾಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ನಾಶನಗಳಲ್ಲಿ ಮುಳುಗಿಸುತ್ತವೆ. ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಮೂಲವಾಗಿದೆ. ಕೆಲವರು ಅದಕ್ಕಾಗಿ ಆತುರಪಟ್ಟು ನಂಬಿಕೆಯಿಂದ ತಪ್ಪಿಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಾವೇ ತಿವಿಸಿ ಕೊಳ್ಳುತ್ತಾರೆ.
- 2 Corinthians 7:9–10 2 ಕೊರಿಂಥದವರಿಗೆ 7:9–10ಆದರೂ ನಿಮಗೆ ದುಃಖವಾಯಿತೆಂದು ನಾನು ಸಂತೋಷಪಡದೆ ನೀವು ದುಃಖಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಈಗ ಸಂತೋಷ ಪಡುತ್ತೇನೆ; ಯಾಕಂದರೆ ನೀವು ದೇವರ ಚಿತ್ತಾನುಸಾರ ವಾಗಿ ದುಃಖಿಸಿದ್ದರಿಂದ ನಮ್ಮಿಂದ ಯಾವದರಲ್ಲಿಯೂ ನೀವು ನಷ್ಟಪಡಲಿಲ್ಲವಲ್ಲಾ. ದೇವರ ಚಿತ್ತಾನುಸಾರ ವಾಗಿರುವ ದುಃಖವು ರಕ್ಷಣೆಗಾಗಿ ಮಾನಸಾಂತರ ವನ್ನುಂಟು ಮಾಡುತ್ತದೆ. ಮಾನಸಾಂತರದಲ್ಲಿ ಪಶ್ಚಾತ್ತಾಪಕ್ಕೆ ಅಸ್ಪದವಿಲ್ಲ; ಆದರೆ ಲೋಕಸಂಬಂಧ ವಾದ ದುಃಖವು ಮರಣವನ್ನುಂಟುಮಾಡುತ್ತದೆ.
- Matthew 19:23–25 ಮತ್ತಾಯನು 19:23–25ತರುವಾಯ ಯೇಸು ತನ್ನ ಶಿಷ್ಯರಿಗೆ-- ಐಶ್ವರ್ಯ ವಂತನು ಪರಲೋಕ ರಾಜ್ಯದಲ್ಲಿ ಸೇರುವದು ಕಷ್ಟ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ತಿರಿಗಿ ನಾನು ನಿಮಗೆ ಹೇಳುವದೇನಂದರೆ-- ಐಶ್ವರ್ಯವಂತನು ದೇವರ ರಾಜ್ಯದಲ್ಲಿ ಸೇರುವದಕ್ಕಿಂತ ಸೂಜಿಯ ಕಣ್ಣಿನೊಳಗೆ ಒಂಟೆಯು ನುಗ್ಗುವದು ಸುಲಭ ಅಂದನು. ಇದನ್ನು ಕೇಳಿದಾಗ ಆತನ ಶಿಷ್ಯರು ಅತ್ಯಂತ ವಿಸ್ಮಯಗೊಂಡು-- ಹಾಗಾದರೆ ರಕ್ಷಿಸಲ್ಪಡುವವರು ಯಾರು ಎಂದು ಕೇಳಿದರು.
- Psalm 10:3 ಕೀರ್ತನೆಗಳು 10:3ದುಷ್ಟನು ತನ್ನ ಹೃದಯದ ಆಶೆಗೋಸ್ಕರ ಹೊಗಳಿಕೊಳ್ಳುತ್ತಾನೆ; ಕರ್ತನು ಅಸಹ್ಯಪಡುವ ಲೋಭಿಯನ್ನು ಅವನು ಆಶೀರ್ವದಿಸುತ್ತಾನೆ.
- Mark 6:26 ಮಾರ್ಕನು 6:26ಆಗ ಅರಸನು ಬಹಳವಾಗಿ ದುಃಖಪಟ್ಟನು; ಆದಾಗ್ಯೂ ತನ್ನ ಆಣೆಯ ನಿಮಿತ್ತವಾಗಿಯೂ ತನ್ನೊಂದಿಗೆ ಕೂತಿದ್ದವರ ನಿಮಿತ್ತವಾಗಿಯೂ ಅವಳನ್ನು ತಿರಸ್ಕರಿಸುವದಕ್ಕೆ ಮನಸ್ಸಿಲ್ಲದವನಾದನು.
- Psalm 73:5–12 ಕೀರ್ತನೆಗಳು 73:5–12ಬೇರೆ ಮನುಷ್ಯರಂತೆ ಅವರು ಕಷ್ಟದಲ್ಲಿಲ್ಲ. ಇಲ್ಲವೆ ಬೇರೆ ಮನುಷ್ಯರ ಹಾಗೆ ಅವರಿಗೆ ವ್ಯಾಧಿಯೂ ಇಲ್ಲ; ಆದದರಿಂದ ಗರ್ವವು ಅವರಿಗೆ ಕಂಠಮಾಲೆಯಂತೆ ಅವರನ್ನು ಸುತ್ತಿದೆ, ಬಲಾತ್ಕಾರವು ಅವರನ್ನು ಬಟ್ಟೆಯ ಹಾಗೆ ಮುಚ್ಚುತ್ತದೆ. ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ. ಅವರು ಕೆಟ್ಟುಹೋದವರು. ಸಂಕಟ ಪಡುವವರ ವಿಷಯ ಕೆಟ್ಟದ್ದಾಗಿಯೂ ಗರ್ವದಿಂದಲೂ ಮಾತನಾಡುತ್ತಾರೆ. ಪರಲೋಕಕ್ಕೆ ವಿರೋಧವಾಗಿ ತಮ್ಮ ಬಾಯನ್ನು ತೆರೆದಿದ್ದಾರೆ; ಭೂಲೋಕದಲ್ಲೆಲ್ಲಾ ಅವರ ಮಾತೇ ನಡೆಯುವದು. ಆದದರಿಂದ ಅವನ ಜನರು ಇಲ್ಲಿಗೆ ತಿರುಗಿ ಕೊಳ್ಳುತ್ತಾರೆ; ಅವರಿಗೆ ಪಾನವು ಯಥೇಚ್ಚವಾಗಿ ದೊರೆಯುತ್ತದೆ. ಅವರು-- ದೇವರು ಹೇಗೆ ಬಲ್ಲನು? ಮಹೋನ್ನತನಲ್ಲಿ ತಿಳುವಳಿಕೆ ಉಂಟೋ ಎಂದು ಅಂದುಕೊಳ್ಳುತ್ತಾರೆ. ಇಗೋ, ಇಹಲೋಕದಲ್ಲಿ ವೃದ್ಧಿಯಾಗುವ ದುಷ್ಟರು ಇವರೇ, ಐಶ್ವರ್ಯದಲ್ಲಿ ಇವರು ಹೆಚ್ಚುತ್ತಾರೆ.
- Deuteronomy 6:10–12 ಧರ್ಮೋಪದೇಶಕಾಂಡ 6:10–12ಇದಲ್ಲದೆ ನಿನ್ನ ದೇವರಾದ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನನ್ನು ಸೇರಿಸಿ ನೀನು ಕಟ್ಟದ ದೊಡ್ಡದಾದ ಒಳ್ಳೇ ಪಟ್ಟಣಗಳನ್ನೂ ನೀನು ತುಂಬದಿದ್ದ ಎಲ್ಲಾ ಒಳ್ಳೆಯವುಗಳು ತುಂಬಿರುವ ಮನೆ ಗಳನ್ನೂ ಅಗೆಯದಿರುವ ಬಾವಿಗಳನ್ನೂ ನೆಡದ ದ್ರಾಕ್ಷೇ ತೋಟಗಳನ್ನೂ ಇಪ್ಪೇತೋಟಗಳನ್ನೂ ನಿನಗೆ ಕೊಡ ಲಾಗಿ ನೀನು ತಿಂದು ತೃಪ್ತಿಯಾದಾಗ ಐಗುಪ್ತದೇಶದ ದಾಸತ್ವದ ಮನೆಯೊಳಗಿಂದ ನಿನ್ನನ್ನು ಹೊರಗೆ ಬರ ಮಾಡಿದ ಕರ್ತನನ್ನು ಮರೆಯದ ಹಾಗೆ ನೋಡಿ ಕೋ.
- Jeremiah 2:31 ಯೆರೆಮೀಯ 2:31ಓ ಸಂತತಿಯೇ, ನೀವು ಕರ್ತನ ವಾಕ್ಯವನ್ನು ನೋಡಿರಿ; ನಾನು ಇಸ್ರಾಯೇಲಿನ ಅರಣ್ಯವಾ ದೆನೋ? ಕತ್ತಲೆಯ ದೇಶವಾದೆನೋ? ಯಾತಕ್ಕೆ ನನ್ನ ಜನರು--ನಾವು ಪ್ರಭುಗಳು, ಇನ್ನು ಮೇಲೆ ನಿನ್ನ ಬಳಿಗೆ ಎಂದೂ ಬರುವದಿಲ್ಲ ಎಂದು ಹೇಳುತ್ತಾರೆ.