Luke · chapter 18 · verse 3
Luke 18:3 in Kannada
ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
Aa pattanadallidda obba vidhaveyu avana balige bandu--nanna prati vaadigoo nanagoo nyaayateerisu endu heli kolluttiddalu.
Luke 18:3 in English
- King James Version (KJV)
- And there was a widow in that city; and she came unto him, saying, Avenge me of mine adversary.
- World English Bible (WEB)
- A widow was in that city, and she often came to him, saying, ‘Defend me from my adversary!’
- American Standard Version (ASV)
- and there was a widow in that city; and she came oft unto him, saying, Avenge me of mine adversary.
- Bible in Basic English (BBE)
- And there was a widow in that town, and she kept on coming to him and saying, Give me my right against the man who has done me wrong.
- Darby Translation (DBY)
- and there was a widow in that city, and she came to him, saying, Avenge me of mine adverse party.
- Webster's Bible (WBS)
- And there was a widow in that city; and she came to him, saying, Avenge me of my adversary.
- Young's Literal Translation (YLT)
- and a widow was in that city, and she was coming unto him, saying, Do me justice on my opponent,
Read in context
- 1ಜನರು ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥಿಸತಕ್ಕದ್ದೆಂದು ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು--
- 2ಒಂದಾನೊಂದು ಪಟ್ಟಣದಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು. ಅವನು ದೇವರಿಗೆ ಭಯಪಡದವನೂ ಮನುಷ್ಯರನ್ನು ಲಕ್ಷ್ಯ ಮಾಡದವನೂ ಆಗಿದ್ದನು.
- 3ಆ ಪಟ್ಟಣದಲ್ಲಿದ್ದ ಒಬ್ಬ ವಿಧವೆಯು ಅವನ ಬಳಿಗೆ ಬಂದು--ನನ್ನ ಪ್ರತಿ ವಾದಿಗೂ ನನಗೂ ನ್ಯಾಯತೀರಿಸು ಎಂದು ಹೇಳಿ ಕೊಳ್ಳುತ್ತಿದ್ದಳು.
- 4ಅವನು ಸ್ವಲ್ಪಕಾಲದವರೆಗೆ ಮನಸ್ಸಿಲ್ಲ ದವನಾಗಿದ್ದನು; ತರುವಾಯ ಅವನು ತನ್ನೊಳಗೆ--ನಾನು ದೇವರಿಗೆ ಭಯಪಡುವದಿಲ್ಲ, ಮನುಷ್ಯರನ್ನು ಲಕ್ಷ್ಯಮಾಡುವದೂ ಇಲ್ಲ.
- 5ಅದಾಗ್ಯೂ ಈ ವಿಧವೆಯು ನನಗೆ ತೊಂದರೆ ಕೊಟ್ಟು ಪದೇ ಪದೇ ನನ್ನ ಬಳಿಗೆ ಬಂದು ನನ್ನನ್ನು ದಣಿಸದಂತೆ ನಾನು ಅವಳಿಗೆ ನ್ಯಾಯತೀರಿಸುವೆನು ಎಂದು ಅಂದುಕೊಂಡನು.
Cross references
- Isaiah 1:17 ಯೆಶಾಯ 1:17ಒಳ್ಳೆಯದನ್ನು ಮಾಡಲು ಕಲಿತುಕೊಳ್ಳಿರಿ; ನ್ಯಾಯ ವನ್ನು ಹುಡುಕಿರಿ, ಹಿಂಸೆಪಡುವವರನ್ನು ಉಪಚರಿಸಿರಿ, ಅನಾಥರಿಗೆ ನ್ಯಾಯತೀರಿಸಿರಿ, ವಿಧವೆಯರ ಪರವಾಗಿವಾದಿಸಿರಿ.
- Job 22:9 ಯೋಬನು 22:9ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Jeremiah 5:28 ಯೆರೆಮೀಯ 5:28ಕೊಬ್ಬಿದ್ದಾರೆ, ಪ್ರಕಾಶಿಸುತ್ತಾರೆ; ಹೌದು, ದುಷ್ಟರ ಕೃತ್ಯಗಳಿಗಿಂತ ವಿಾರಿ ಹೋಗಿದ್ದಾರೆ. ವ್ಯಾಜ್ಯ ವನ್ನು, ದಿಕ್ಕಿಲ್ಲದವನ ವ್ಯಾಜ್ಯವನ್ನು ವಿಚಾರಿಸುವದಿಲ್ಲ; ಆದಾಗ್ಯೂ ಅವರು ಸಫಲವಾಗುತ್ತಾರೆ; ಬಡವರ ನ್ಯಾಯವನ್ನು ತೀರಿಸರು.
- Deuteronomy 27:19 ಧರ್ಮೋಪದೇಶಕಾಂಡ 27:19ಪರವಾಸಿಗೂ ದಿಕ್ಕಿಲ್ಲದವನಿಗೂ ವಿಧವೆಗೂ ನ್ಯಾಯ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Romans 13:3–4 ರೋಮಾಪುರದವರಿಗೆ 13:3–4ಕೆಟ್ಟಕೆಲಸ ಮಾಡುವವನಿಗೆ ಅಧಿಕಾರಿಗಳ ಭಯವಿರುವದೇ ಹೊರತು ಒಳ್ಳೇಕೆಲಸ ಮಾಡುವವ ನಿಗೆ ಇರುವದಿಲ್ಲ; ನೀನು ಅಧಿಕಾರಿಗೆ ಭಯಪಡದೆ ಇರಬೇಕೆಂದು ಅಪೇಕ್ಷಿಸುತ್ತೀಯೋ? ಒಳ್ಳೆಯದನ್ನು ಮಾಡು; ಆಗ ಆ ಅಧಿಕಾರಿಯಿಂದಲೇ ನಿನಗೆ ಹೊಗ ಳಿಕೆಯುಂಟಾಗುವದು. ಅವನು ನಿನ್ನ ಹಿತಕ್ಕೋಸ್ಕರ ದೇವರ ಸೇವಕನಾಗಿದ್ದಾನಲ್ಲಾ; ಆದರೆ ನೀನು ಕೆಟ್ಟದ್ದನ್ನು ಮಾಡಿದರೆ ಭಯಪಡಬೇಕು; ಅವನು ಸುಮ್ಮನೆ ಕೈಯಲ್ಲಿ ಕತ್ತಿಯನ್ನು ಹಿಡಿದಿಲ್ಲ; ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ನಡಿಸುವವನಿಗೆ ದಂಡನೆಯನ್ನು ವಿಧಿಸುತ್ತಾನೆ.
- Job 29:13 ಯೋಬನು 29:13ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
- Luke 18:7–8 ಲೂಕನು 18:7–8ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಆತನು ಬೇಗನೆ ಅವರಿಗೆ ನ್ಯಾಯ ತೀರಿಸುವನೆಂದು ನಾನು ನಿಮಗೆ ಹೇಳುತ್ತೇನೆ. ಆದಾಗ್ಯೂ ಮನುಷ್ಯಕುಮಾರನು ಬಂದಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣುವನೋ ಅಂದನು.
- Isaiah 1:21–23 ಯೆಶಾಯ 1:21–23ನಂಬಿಗಸ್ತಿಕೆಯ ಪಟ್ಟಣವು ಸೂಳೆಯಂತಾದ ಳಲ್ಲಾ! ಅದು ನ್ಯಾಯದಿಂದ ತುಂಬಿ ನೀತಿಯಲ್ಲಿ ನೆಲೆ ಯಾಗಿತ್ತು; ಆದರೆ ಈಗ ಕೊಲೆಗಾರರಿಂದ ತುಂಬಿದೆ. ನಿನ್ನ ಬೆಳ್ಳಿಯು ಕಂದಾಯಿತು, ನಿನ್ನ ದ್ರಾಕ್ಷಾರಸವು ನೀರಿನೊಂದಿಗೆ ಬೆರಿಕೆಯಾಯಿತು. ನಿನ್ನ ಪ್ರಭುಗಳು ಎದುರು ಬೀಳುವವರೂ ಕಳ್ಳರ ಜೊತೆಗಾರರೂ ಆಗಿ ದ್ದಾರೆ; ಪ್ರತಿಯೊಬ್ಬನು ಲಂಚ ಪ್ರಿಯನೂ ಬಹು ಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ; ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವದಿಲ್ಲ.
- 2 Samuel 14:5–24 2 ಸಮುವೇಲನು 14:5–24ಅರಸನು ಅವಳಿಗೆ ನಿನಗೆ ಏನಾಯಿತು ಅಂದನು. ಅದಕ್ಕವಳು--ನಾನು ನಿಶ್ಚಯವಾಗಿ ವಿಧವೆ ಯಾದ ಸ್ತ್ರೀಯು; ನನ್ನ ಗಂಡನು ಸತ್ತುಹೋಗಿದ್ದಾನೆ. ಆದರೆ ನಿನ್ನ ಸೇವಕಳಿಗೆ ಇಬ್ಬರು ಕುಮಾರರಿದ್ದರು; ಅವರಿಬ್ಬರೂ ಹೊಲದಲ್ಲಿ ಹೊಡೆದಾಡಿದರು; ಅವ ರನ್ನು ಬಿಡಿಸುವವರು ಯಾರೂ ಇಲ್ಲದ್ದರಿಂದ ಒಬ್ಬನು ಮತ್ತೊಬ್ಬನನ್ನು ಹೊಡೆದು ಕೊಂದುಹಾಕಿದನು. ಆದದರಿಂದ ಇಗೋ, ಕುಟುಂಬದವರೆಲ್ಲರು ನಿನ್ನ ಸೇವಕಳ ಮೇಲೆ ವಿರೋಧವಾಗಿ ಎದ್ದು--ತನ್ನ ಸಹೋ ದರನನ್ನು ಕೊಂದವನನ್ನು ಅವನ ಸಹೋದರನ ಪ್ರಾಣಕ್ಕೋಸ್ಕರ ನಾವು ಅವನನ್ನು ಕೊಲ್ಲುವ ಹಾಗೆಯೂ ಬಾಧ್ಯವನ್ನು ಸಹ ನಾಶಮಾಡಿಬಿಡುವ ಹಾಗೆಯೂ ಅವನನ್ನು ಒಪ್ಪಿಸಿಕೊಡು ಎಂದು ಹೇಳಿ ದರು. ಹೀಗೆಯೇ ಅವರು ನನಗೆ ಉಳಿದಿರುವ ನನ್ನ ಕೆಂಡವನ್ನು ಆರಿಸಿ ಭೂಮಿಯ ಮೇಲೆ ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಉಳಿಯ ಬಿಡುವದಿಲ್ಲ ಅಂದಳು. ಆಗ ಅರಸನು ಆ ಸ್ತ್ರೀಗೆ--ನೀನು ನಿನ್ನ ಮನೆಗೆ ಹೋಗು; ನಾನು ನಿನ್ನ ವಿಷಯವಾಗಿ ಆಜ್ಞಾಪಿಸುತ್ತೇನೆ ಅಂದನು. ಆದರೆ ತೆಕೋವಿನ ಸ್ತ್ರೀಯು ಅರಸನಿಗೆ--ಅರಸನಾದ ನನ್ನ ಒಡೆಯನೇ, ಆ ಅಕ್ರಮವು ನನ್ನ ಮೇಲೆಯೂ ನನ್ನ ತಂದೆಯ ಮನೆಯ ಮೇಲೆಯೂ ಇರಲಿ; ಅರಸನೂ ಅವನ ಸಿಂಹಾಸನವೂ ನಿರಾಪರಾಧವಾಗಿರಲಿ ಅಂದಳು. ಅದಕ್ಕೆ ಅರಸನು--ಯಾವನಾದರೂ ನಿನಗೆ ಏನಾದರೂ ಹೇಳಿದರೆ ಅವನನ್ನು ನನ್ನ ಬಳಿಗೆ ಕರ ಕೊಂಡು ಬಾ; ಅವನು ಇನ್ನು ನಿನ್ನನ್ನು ಎಂದಿಗೂ ಮುಟ್ಟದಂತೆ ಮಾಡುವೆನು ಅಂದನು. ಆಗ ಅವಳು--ರಕ್ತ ವಿಚಾರಕನು ಇನ್ನು ಸಂಹರಿಸದ ಹಾಗೆ ಅರಸನಾದ ನೀನು ನಿನ್ನ ದೇವರಾದ ಕರ್ತನನ್ನು ಜ್ಞಾಪಕಮಾಡು; ಅವರು ನನ್ನ ಮಗನನ್ನು ನಾಶಮಾಡ ಬಾರದು ಅಂದಳು. ಅದಕ್ಕವನು--ಕರ್ತನ ಜೀವ ದಾಣೆ, ನಿನ್ನ ಮಗನ ತಲೆಯ ಕೂದಲಲ್ಲಿ ಒಂದಾದರೂ ನೆಲದ ಮೇಲೆ ಬೀಳುವದಿಲ್ಲ ಅಂದನು. ಆಗ ಆ ಸ್ತ್ರೀಯು--ಅರಸನಾದ ನನ್ನ ಒಡೆಯನ ಸಂಗಡ ನಿನ್ನ ದಾಸಿಯು ಒಂದು ಮಾತನ್ನು ಹೇಳುವದಕ್ಕೆ ಅಪ್ಪಣೆ ಆಗಬೇಕು ಅಂದಳು. ಆಗ ಅವನು--ಹೇಳು ಅಂದನು. ಆಗ ಆ ಸ್ತ್ರೀಯು--ದೇವರ ಜನರಿಗೆ ವಿರೋಧವಾಗಿ ಅಂಥಾ ಕಾರ್ಯವನ್ನು ನೀನು ನೆನೆಸು ವದೇನು? ಅರಸನು ತಾನು ಹೊರಡಿಸಿದವನನ್ನು ತಿರಿಗಿ ಸೇರಿಸಿಕೊಳ್ಳದೆ ಹೋದದರಿಂದ ಇದನ್ನು ಅಪರಾಧಸ್ಥನ ಹಾಗೆಯೇ ಮಾತಾಡುತ್ತಿದ್ದಾನೆ. ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ. ಆದದರಿಂದ ಈಗ ಜನರು ನನ್ನನ್ನು ಭಯಪಡಿಸಿ ದ್ದರಿಂದ ಈ ಕಾರ್ಯವನ್ನು ಕುರಿತು ನನ್ನ ಒಡೆಯನಾದ ಅರಸನ ಸಂಗಡ ನಿನ್ನ ದಾಸಿಯಾದ ನಾನು ಮಾತನಾ ಡುವದಕ್ಕೆ ಬಂದೆನು. ನಿನ್ನ ದಾಸಿಯಾದ ನಾನು ಅರಸನ ಬಳಿಗೆ ಹೋಗುತ್ತೇನೆ; ಒಂದು ವೇಳೆ ಅರಸನು ತನ್ನ ದಾಸಿಯ ಕಾರ್ಯವನ್ನು ನೆರವೇರಿಸಿಯಾನು. ಅರಸನು ಕೇಳಿ ನನ್ನನ್ನು ನನ್ನ ಮಗನನ್ನೂ ದೇವರ ಬಾಧ್ಯತೆಯಲ್ಲಿಂದ ನಾಶಮಾಡಬೇಕಾದ ಮನುಷ್ಯರ ಕೈಯಿಂದ ದಾಸಿಯನ್ನು ತಪ್ಪಿಸುವನು ಎಂದು ಅಂದುಕೊಂಡೆನು. ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು. ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು. ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು. ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು. ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು. ಆಗ ಯೋವಾಬನು ನೆಲಕ್ಕೆ ಬಿದ್ದು ಬೊಗ್ಗಿಕೊಂಡು ಅರಸ ನಿಗೆ ವಂದಿಸಿದನು. ಯೋವಾಬನು--ಅರಸನು ತನ್ನ ಸೇವಕನ ಮಾತಿನ ಪ್ರಕಾರ ಮಾಡಿದ್ದರಿಂದ ನನ್ನ ಒಡೆಯನಾದ ಅರಸನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿತೆಂಬದು ಈ ಹೊತ್ತು ನಿನ್ನ ಸೇವಕನಿಗೆ ತಿಳಿಯಿತು ಅಂದನು. ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರಕೊಂಡು ಬಂದನು. ಆದರೆ ಅರಸನು--ಅವನು ತನ್ನ ಮನೆಗೆ ತಿರುಗಿ ಹೋಗಲಿ; ಅವನು ನನ್ನ ಮುಖವನ್ನು ನೋಡಬಾರದು ಅಂದನು. ಆದದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿ ಹೋದನು.