Luke · chapter 18 · verse 32
Luke 18:32 in Kannada
ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
Aatanu anyajanagalige oppisalpa duvanu; avaru aatanannu haasyamaaduvavaraagi avamaana maaduttaa aatana mele uguluvaru.
Luke 18:32 in English
- King James Version (KJV)
- For he shall be delivered unto the Gentiles, and shall be mocked, and spitefully entreated, and spitted on:
- World English Bible (WEB)
- For he will be delivered up to the Gentiles, will be mocked, treated shamefully, and spit on.
- American Standard Version (ASV)
- For he shall be delivered up unto the Gentiles, and shall be mocked, and shamefully treated, and spit upon:
- Bible in Basic English (BBE)
- For he will be given up to the Gentiles, and will be made sport of and put to shame:
- Darby Translation (DBY)
- for he shall be delivered up to the nations, and shall be mocked, and insulted, and spit upon.
- Webster's Bible (WBS)
- For he will be delivered to the Gentiles, and will be mocked, and spitefully treated, and spitted on;
- Young's Literal Translation (YLT)
- for he shall be delivered up to the nations, and shall be mocked, and insulted, and spit upon,
Read in context
- 30ಈ ಕಾಲದಲ್ಲಿ ಅತ್ಯಧಿಕವಾದವುಗಳನ್ನೂ ಬರುವ ಲೋಕದಲ್ಲಿ ನಿತ್ಯಜೀವವನ್ನೂ ಹೊಂದಿಯೇ ಹೊಂದು ವನು ಎಂದು ನಾನು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ ಅಂದನು.
- 31ಇದಲ್ಲದೆ ಆತನು ಹನ್ನೆರಡು ಮಂದಿಯನ್ನು ಹತ್ತಿರಕ್ಕೆ ಕರೆದು ಅವರಿಗೆ--ಇಗೋ, ನಾವು ಯೆರೂಸ ಲೇಮಿಗೆ ಹೋಗುತ್ತೇವೆ; ಮನುಷ್ಯಕುಮಾರನ ವಿಷಯ ದಲ್ಲಿ ಪ್ರವಾದಿಗಳಿಂದ ಬರೆಯಲ್ಪಟ್ಟವುಗಳೆಲ್ಲವೂ ನೆರವೇರಬೇಕು.
- 32ಆತನು ಅನ್ಯಜನಗಳಿಗೆ ಒಪ್ಪಿಸಲ್ಪ ಡುವನು; ಅವರು ಆತನನ್ನು ಹಾಸ್ಯಮಾಡುವವರಾಗಿ ಅವಮಾನ ಮಾಡುತ್ತಾ ಆತನ ಮೇಲೆ ಉಗುಳುವರು.
- 33ಇದಲ್ಲದೆ ಅವರು ಆತನನ್ನು ಕೊರಡೆಗಳಿಂದ ಹೊಡೆದು ಕೊಲ್ಲುವರು. ಮೂರನೆಯ ದಿನದಲ್ಲಿ ಆತನು ತಿರಿಗಿ ಏಳುವನು ಅಂದನು.
- 34ಆದರೆ ಶಿಷ್ಯರು ಇವುಗಳಲ್ಲಿ ಒಂದನ್ನೂ ಗ್ರಹಿಸಲಿಲ್ಲ; ಈ ಮಾತು ಅವರಿಗೆ ಮರೆಯಾಗಿದ್ದದರಿಂದ ಆತನು ಹೇಳಿದವು ಗಳನ್ನು ಅವರು ತಿಳಿಯಲಿಲ್ಲ.
Cross references
- Luke 23:11 ಲೂಕನು 23:11ಹೆರೋದನು ತನ್ನ ಯುದ್ಧಭಟರೊಂದಿಗೆ ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಆತನ ಮೇಲೆ ಶೋಭಾಯಮಾನವಾದ ವಸ್ತ್ರವನ್ನು ಹೊದಿಸಿ ಆತನನ್ನು ತಿರಿಗಿ ಪಿಲಾತನ ಬಳಿಗೆ ಕಳುಹಿಸಿ ದನು.
- Isaiah 50:6 ಯೆಶಾಯ 50:6ನಾನು ಹೊಡೆಯುವವರಿಗೆ ಬೆನ್ನನ್ನು ಮತ್ತು ಕೂದಲು ಕೀಳುವವರಿಗೆ ನನ್ನ ಕೆನ್ನೆಯನ್ನು ಕೊಟ್ಟೆನು; ನನ್ನ ಮುಖವನ್ನು ನಿಂದೆಗೂ ಉಗುಳುವಿಕೆಗೂ ಮರೆ ಮಾಡಲಿಲ್ಲ.
- Isaiah 53:3 ಯೆಶಾಯ 53:3ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ.
- Mark 14:65 ಮಾರ್ಕನು 14:65ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು.
- Acts 3:13 ಅಪೊಸ್ತಲರ ಕೃತ್ಯಗಳು 3:13ಅಬ್ರಹಾಮ ಇಸಾಕ ಯಾಕೋಬರ ದೇವರು, ನಮ್ಮ ಪಿತೃಗಳ ದೇವರು, ತನ್ನ ಮಗನಾದ ಯೇಸುವನ್ನು ಮಹಿಮೆ ಪಡಿಸಿದ್ದಾನೆ; ನೀವಾದರೋ ಆತನನ್ನು ಒಪ್ಪಿಸಿಕೊಟ್ಟಿರಿ; ಪಿಲಾತನು ಆತನನ್ನು ಬಿಟ್ಟುಬಿಡಬೇಕೆಂದು ನಿರ್ಣಯಿಸಿ ದಾಗ ನೀವು ಆತನನ್ನು ಅವನ ಮುಂದೆ ಅಲ್ಲಗಳೆದಿರಿ.
- Micah 5:1 ಮೀಕ 5:1ಈಗ ಓ ಸೈನ್ಯಗಳ ಕುಮಾರ್ತೆಯೇ, ಗುಂಪುಗಳಾಗಿ ಕೂಡಿಕೊಳ್ಳಿರಿ; ಅವನು ನಮಗೆ ಮುತ್ತಿಗೆ ಹಾಕಿದ್ದಾನೆ. ಇಸ್ರಾಯೇಲಿನ ನ್ಯಾಯಾಧಿಪತಿಯನ್ನು ಕೋಲಿನಿಂದ ಕೆನ್ನೆಯ ಮೇಲೆ ಹೊಡೆಯುತ್ತಾರೆ.
- Isaiah 52:14 ಯೆಶಾಯ 52:14ಅವನ ಮುಖವು ಮನುಷ್ಯರಿಗಿಂತಲೂ ಅವನ ಆಕಾರವು ನರಪುತ್ರರಿ ಗಿಂತಲೂ ಕುರೂಪವಾಗಿರುವದನ್ನು ನೋಡಿ ಹೇಗೆ ಆಶ್ಚರ್ಯಪಟ್ಟರೋಹಾಗೆಯೇ ಅನೇಕ ಜನಾಂಗ ಗಳನ್ನು ಆತನು ಚಮಕಿತ ಮಾಡುವನು; ಅರಸರು ಆತನ ನಿಮಿತ್ತ ತಮ್ಮ ಬಾಯಿಗಳನ್ನು ಮುಚ್ಚಿಕೊಳ್ಳು ವರು; ಯಾಕಂದರೆ ಅವರಿಗೆ ತಿಳಿಸಲ್ಪಡದೇ ಇರುವ ದನ್ನು ಅವರು ನೋಡುವರು; ಕೇಳದೇ ಇರುವದನ್ನು ಗ್ರಹಿಸುವರು.
- Matthew 16:21 ಮತ್ತಾಯನು 16:21ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.
- Matthew 26:67 ಮತ್ತಾಯನು 26:67ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು.
- Luke 23:35 ಲೂಕನು 23:35ಜನರು ನೋಡುತ್ತಾ ನಿಂತುಕೊಂಡಿ ದ್ದರು. ಆಗ ಅವರೊಂದಿಗೆ ಅಧಿಕಾರಿಗಳು ಸಹ ಆತ ನಿಗೆ ಅಪಹಾಸ್ಯ ಮಾಡಿ--ಈತನು ಬೇರೆಯವರನ್ನು ರಕ್ಷಿಸಿದನು; ಇವನು ದೇವರು ಆರಿಸಿಕೊಂಡ ಕ್ರಿಸ್ತನಾಗಿ ದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
- Luke 23:1 ಲೂಕನು 23:1ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
- John 18:30 ಯೋಹಾನನು 18:30ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು.