Luke · chapter 19 · verse 15
Luke 19:15 in Kannada
ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
Idaada mele avanu raajyavannu padedu hindirugidaaga vyaapaa radinda pratiyobba manushyanu eshtu laabhavannu padedanendu tilukolluvante taanu hanakotta aa aalugalannu tanna balige kareyabekendu aajnyaapi sidanu.
Luke 19:15 in English
- King James Version (KJV)
- And it came to pass, that when he was returned, having received the kingdom, then he commanded these servants to be called unto him, to whom he had given the money, that he might know how much every man had gained by trading.
- World English Bible (WEB)
- “When he had come back again, having received the kingdom, he commanded these servants, to whom he had given the money, to be called to him, that he might know what they had gained by conducting business.
- American Standard Version (ASV)
- And it came to pass, when he was come back again, having received the kingdom, that he commanded these servants, unto whom he had given the money, to be called to him, that he might know what they had gained by trading.
- Bible in Basic English (BBE)
- And when he came back again, having got his kingdom, he gave orders for those servants to whom he had given the money to come to him, so that he might have an account of what business they had done.
- Darby Translation (DBY)
- And it came to pass on his arrival back again, having received the kingdom, that he desired these bondmen to whom he gave the money to be called to him, in order that he might know what every one had gained by trading.
- Webster's Bible (WBS)
- And it came to pass, that when he had returned, having received the kingdom, then he commanded these servants to be called to him, to whom he had given the money, that he might know how much every man had gained by trading.
- Young's Literal Translation (YLT)
- 'And it came to pass, on his coming back, having taken the kingdom, that he commanded these servants to be called to him, to whom he gave the money, that he might know what any one had done in business.
Read in context
- 13ಅವನು ತನ್ನ ಹತ್ತು ಆಳುಗಳನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಒಪ್ಪಿಸಿ--ನಾನು ಬರುವವರೆಗೆ ವ್ಯಾಪಾರ ಮಾಡಿಕೊಂಡಿರ್ರಿ ಎಂದು ಹೇಳಿದನು.
- 14ಆದರೆ ಅವರ ಪಟ್ಟಣದವರು ಅವನನ್ನು ದ್ವೇಷಿಸಿ--ಇವನು ನಮ್ಮ ಮೇಲೆ ಆಡಳಿತ ಮಾಡುವದು ನಮಗೆ ಮನಸ್ಸಿಲ್ಲ ಎಂದು ಹೇಳಿ ಅವನ ಹಿಂದೆ ಸಂದೇಶವನ್ನು ಕಳುಹಿಸಿದರು.
- 15ಇದಾದ ಮೇಲೆ ಅವನು ರಾಜ್ಯವನ್ನು ಪಡೆದು ಹಿಂದಿರುಗಿದಾಗ ವ್ಯಾಪಾ ರದಿಂದ ಪ್ರತಿಯೊಬ್ಬ ಮನುಷ್ಯನು ಎಷ್ಟು ಲಾಭವನ್ನು ಪಡೆದನೆಂದು ತಿಳುಕೊಳ್ಳುವಂತೆ ತಾನು ಹಣಕೊಟ್ಟ ಆ ಆಳುಗಳನ್ನು ತನ್ನ ಬಳಿಗೆ ಕರೆಯಬೇಕೆಂದು ಆಜ್ಞಾಪಿ ಸಿದನು.
- 16ಆಗ ಮೊದಲನೆಯವನು ಬಂದು--ಒಡೆಯನೇ, ನಿನ್ನ ಮೊಹರಿನಿಂದ ಹತ್ತು ಮೊಹರಿಗಳನ್ನು ಸಂಪಾದಿಸಿದ್ದೇನೆ ಅಂದನು.
- 17ಅದಕ್ಕೆ ಅವನು ಅವ ನಿಗೆ--ಒಳ್ಳೇದು. ನೀನು ಉತ್ತಮ ಆಳು; ಯಾಕಂದರೆ ನೀನು ಅತಿ ಸ್ವಲ್ಪದರಲ್ಲಿ ನಂಬಿಗಸ್ತನಾಗಿದ್ದೀ ಹತ್ತು ಪಟ್ಟಣಗಳ ಮೇಲೆ ನೀನು ಅಧಿಕಾರಿಯಾಗಿರು ಅಂದನು.
Cross references
- Romans 14:10–12 ರೋಮಾಪುರದವರಿಗೆ 14:10–12ಆದರೆ ನೀನು ನಿನ್ನ ಸಹೋದರನಿಗೆ ತೀರ್ಪುಮಾಡುವದು ಯಾಕೆ? ಇಲ್ಲವೆ ನಿನ್ನ ಸಹೋದರನನ್ನು ಹೀನೈಸುವದು ಯಾಕೆ? ನಾವೆಲ್ಲರೂ ಕ್ರಿಸ್ತನ ನ್ಯಾಯಾಸನದ ಮುಂದೆ ನಿಂತುಕೊಳ್ಳಬೇಕಲ್ಲಾ. ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ. ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರಿಗೆ ಲೆಕ್ಕ ಒಪ್ಪಿಸಬೇಕು.
- 1 Corinthians 4:1–5 1 ಕೊರಿಂಥದವರಿಗೆ 4:1–5ಒಬ್ಬನು ನಮ್ಮನ್ನು ಕ್ರಿಸ್ತನ ಸೇವಕರೆಂತಲೂ ದೇವರ ಮರ್ಮಗಳ ವಿಷಯದಲ್ಲಿ ಮನೆವಾರ್ತೆಯವರೆಂತಲೂ ಎಣಿಸಲಿ. ಹೀಗಿರಲು ಮನೆವಾರ್ತೆಯವನು ನಂಬಿಗಸ್ತನಾಗಿ ಕಂಡುಬರುವದು ಅವಶ್ಯವಾಗಿದೆ. ನನಗಾದರೋ ನಿಮ್ಮಿಂದಾಗಲಿ ಮನುಷ್ಯರ ನ್ಯಾಯವಿಚಾರಣೆಯಿಂದಾಗಲಿ ನನಗೆ ನ್ಯಾಯವಿಚಾರಣೆಯಾಗುವದು ಅತ್ಯಲ್ಪವಾಗಿದೆ. ಹೌದು, ನಾನೂ ನನ್ನನ್ನು ವಿಚಾರಿಸಿಕೊಳ್ಳುವದಿಲ್ಲ. ನಾನೇ ನಾನಾಗಿ ಏನೂ ತಿಳಿಯದವನಾಗಿದ್ದೇನೆ; ಆದಾಗ್ಯೂ ಅದರಿಂದ ನಾನು ನೀತಿವಂತನಾಗಲಿಲ್ಲ; ನನ್ನನ್ನು ವಿಚಾರಿಸುವಾತನು ಕರ್ತನೇ. ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
- Matthew 18:23–35 ಮತ್ತಾಯನು 18:23–35ಆದದರಿಂದ ಪರಲೋಕ ರಾಜ್ಯವು ತನ್ನ ಸೇವಕರಿಂದ ಲೆಕ್ಕವನ್ನು ತಕ್ಕೊಳ್ಳಬೇಕೆಂದಿದ್ದ ಒಬ್ಬ ಅರಸನಿಗೆ ಹೋಲಿಕೆಯಾಗಿದೆ. ಅವನು ಲೆಕ್ಕವನ್ನು ತಕ್ಕೊಳ್ಳಲು ಪ್ರಾರಂಭಿಸಿದಾಗ ಹತ್ತು ಸಾವಿರ ತಲಾಂತುಗಳನ್ನು ಸಾಲ ಕೊಡಬೇಕಾದವನನ್ನು ಅವನ ಬಳಿಗೆ ತಂದರು. ಆದರೆ ಕೊಡುವದಕ್ಕೆ ಅವನಿಗೆ ಏನೂ ಇಲ್ಲದ್ದರಿಂದ ಅವನನ್ನೂ ಅವನ ಹೆಂಡತಿಯನ್ನೂ ಮಕ್ಕಳನ್ನೂ ಅವನಿಗಿದ್ದದ್ದೆಲ್ಲವನ್ನೂ ಮಾರಿ ಸಾಲ ತೀರಿಸಬೇಕೆಂದು ಅವನ ಯಜಮಾನನು ಅಪ್ಪಣೆ ಕೊಟ್ಟನು. ಆಗ ಆ ಸೇವಕನು ನೆಲಕ್ಕೆ ಬಿದ್ದು ಅವನನ್ನು ವಂದಿಸಿ--ಧಣಿಯೇ, ನನ್ನನ್ನು ತಾಳಿಕೋ; ನಾನು ಎಲ್ಲವನ್ನು ನಿನಗೆ ಸಲ್ಲಿಸುವೆನು ಎಂದು ಹೇಳಿದನು. ಆ ಸೇವಕನ ಧಣಿಯು ಅವನ ಮೇಲೆ ಕನಿಕರಪಟ್ಟು ಅವನನ್ನು ಬಿಡಿಸಿ ಅವನ ಸಾಲವನ್ನೆಲ್ಲಾ ಬಿಟ್ಟು ಬಿಟ್ಟನು. ಆದರೆ ಅದೇ ಸೇವಕನು ಹೊರಗೆ ಹೋಗಿ ತನಗೆ ನೂರು ದೇನಾರುಗಳನ್ನು ಸಾಲ ಕೊಡಬೇಕಾಗಿದ್ದ ತನ್ನ ಜೊತೆ ಸೇವಕರಲ್ಲಿ ಒಬ್ಬನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ--ನನ್ನ ಸಾಲವನ್ನು ತೀರಿಸು ಅಂದನು. ಆಗ ಅವನ ಜೊತೇ ಸೇವಕನು ಅವನ ಪಾದಕ್ಕೆ ಬಿದ್ದು ಅವನಿಗೆ--ನನ್ನನ್ನು ತಾಳಿಕೋ; ನಾನು ನಿನ್ನದನ್ನೆಲ್ಲಾ ತೀರಿಸುತ್ತೇನೆ ಎಂದು ಅವನನ್ನು ಬೇಡಿಕೊಂಡನು. ಅವನು ಅದಕ್ಕೆ ಒಪ್ಪದೆ ಹೊರಟುಹೋಗಿ ತನ್ನ ಸಾಲವನ್ನು ತೀರಿಸುವ ವರೆಗೆ ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಹೀಗೆ ಅವನ ಜೊತೆ ಸೇವಕರು ನಡೆದದ್ದನ್ನು ನೋಡಿ ಬಹಳ ವ್ಯಥೆಪಟ್ಟು ಹೋಗಿ ತಮ್ಮ ಧಣಿಗೆ ನಡೆದದ್ದೆಲ್ಲವನ್ನು ತಿಳಿಯಪಡಿಸಿದರು. ಆಗ ಅವನ ಧಣಿಯು ಅವನನ್ನು ತನ್ನ ಬಳಿಗೆ ಕರೆದು ಅವನಿಗೆ--ಓ ದುಷ್ಟ ಸೇವಕನೇ, ನೀನು ನನ್ನನ್ನು ಬೇಡಿಕೊಂಡದ್ದರಿಂದ ನಾನು ನಿನ್ನ ಸಾಲವನ್ನೆಲಾ ಮನ್ನಿಸಿದೆನು. ನಾನು ನಿನ್ನ ಮೇಲೆ ಕರುಣೆ ತೋರಿಸಿದಂತೆಯೇ ನೀನು ಸಹ ನಿನ್ನ ಜೊತೇ ಸೇವಕನ ಮೇಲೆ ಕರುಣೆಯನ್ನು ತೋರಿಸಬೇಕಾಗಿ ತ್ತಲ್ಲವೇ ಎಂದು ಹೇಳಿದನು. ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು. ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
- Luke 12:48 ಲೂಕನು 12:48ಆದರೆ ಪೆಟ್ಟುಗಳಿಗೆ ಯೋಗ್ಯವಾದವುಗಳನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳನ್ನು ತಿನ್ನುವನು. ಯಾಕಂದರೆ ಯಾವನಿಗೆ ಹೆಚ್ಚುಕೊಡಲ್ಪಟ್ಟಿದೆಯೋ ಅವನಿಂದ ಹೆಚ್ಚು ಕೇಳಲ್ಪಡು ವದು; ಯಾವನಿಗೆ ಮನುಷ್ಯರು ಹೆಚ್ಚಾಗಿ ಒಪ್ಪಿಸಿರುವರೋ ಅವನಿಂದ ಅವರು ಹೆಚ್ಚಾಗಿ ಕೇಳುವ
- Matthew 25:19 ಮತ್ತಾಯನು 25:19ಬಹುಕಾಲವಾದ ಮೇಲೆ ಆ ಸೇವಕರ ಯಜ ಮಾನನು ಬಂದು ಅವರಿಂದ ಲೆಕ್ಕಾ ತೆಗೆದುಕೊಂಡನು.
- Luke 16:2–13 ಲೂಕನು 16:2–13ಆಗ ಅವನು ಆ ಮನೆವಾರ್ತೆ ಯವನನ್ನು ಕರೆದು ಅವನಿಗೆ--ಇದೇನು ನಾನು ನಿನ್ನ ವಿಷಯದಲ್ಲಿ ಕೇಳುವದು? ಮನೆವಾರ್ತೆಯ ನಿನ್ನ ಲೆಕ್ಕವನ್ನು ಒಪ್ಪಿಸು; ಯಾಕಂದರೆ ನೀನು ಇನ್ನು ಮೇಲೆ ಮನೆವಾರ್ತೆಯವನಾಗಿರುವದಕ್ಕಾಗುವದಿಲ್ಲ ಅಂದನು. ಆಗ ಆ ಮನೆವಾರ್ತೆಯವನು ತನ್ನೊಳಗೆ--ನಾನೇನು ಮಾಡಲಿ? ಯಾಕಂದರೆ ನನ್ನ ಯಜಮಾನನು ನನ್ನನ್ನು ಮನೆವಾರ್ತೆಯ ಕೆಲಸದಿಂದ ತೆಗೆದುಬಿಡು ತ್ತಾನೆ; ನಾನು ಅಗೆಯಲಾರೆನು, ಭಿಕ್ಷೆ ಬೇಡುವದಕ್ಕೆ ನಾನು ನಾಚಿಕೊಳ್ಳುತ್ತೇನೆ. ಮನೆವಾರ್ತೆಯ ಕೆಲಸ ದಿಂದ ನನ್ನನ್ನು ತೆಗೆದ ಮೇಲೆ ಅವರು ನನ್ನನ್ನು ತಮ್ಮ ಮನೆಗಳಲ್ಲಿ ಸೇರಿಸಿಕೊಳ್ಳುವಂತೆ ನಾನು ಮಾಡಬೇಕಾ ದದ್ದನ್ನು ನಿರ್ಧರಿಸಿದ್ದೇನೆ ಎಂದು ಅಂದುಕೊಂಡನು. ಹೀಗೆ ಅವನು ತನ್ನ ಯಜಮಾನನ ಸಾಲಗಾರರಲ್ಲಿ ಪ್ರತಿಯೊಬ್ಬನನ್ನು ಕರೆದು ಮೊದಲನೆಯವನಿಗೆ--ನೀನು ನನ್ನ ಯಜಮಾನನಿಗೆ ಸಲ್ಲಿಸಬೇಕಾದದ್ದು ಎಷ್ಟು ಎಂದು ಕೇಳಲು ಅವನು--ಒಂದು ನೂರು ಅಳತೆ ಎಣ್ಣೆ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿಯನ್ನು ತೆಗೆದುಕೋ, ಮತ್ತು ಬೇಗ ಕೂತುಕೊಂಡು ಐವತ್ತು ಎಂದು ಬರೆ ಎಂದು ಅವನಿಗೆ ಹೇಳಿದನು. ಇದಲ್ಲದೆ ಅವನು ಮತ್ತೊಬ್ಬನಿಗೆ--ನೀನು ಸಲ್ಲಿಸಬೇಕಾದದ್ದು ಎಷ್ಟು? ಅನ್ನಲು ಅವನು--ಒಂದು ನೂರು ಅಳತೆ ಗೋಧಿ ಅಂದನು. ಆಗ ಅವನು--ನಿನ್ನ ಬೆಲೆ ಪಟ್ಟಿ ಯನ್ನು ತೆಗೆದುಕೊಂಡು ಎಂಭತ್ತು ಎಂದು ಬರೆ ಅಂದನು. ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ. ನಾನು ನಿಮಗೆ ಹೇಳುವದೇ ನಂದರೆ--ಅನ್ಯಾಯದ ಧನದಿಂದ ನಿಮಗೆ ಸ್ನೇಹಿತರನ್ನು ಮಾಡಿಕೊಳ್ಳಿರಿ; ಅದು ನಿಮ್ಮನ್ನು ಬಿಟ್ಟು ಹೋದಾಗ ಅವರು ನಿಮ್ಮನ್ನು ನಿತ್ಯವಾದ ನಿವಾಸಗಳಲ್ಲಿ ಸೇರಿಸಿ ಕೊಳ್ಳುವರು. ಯಾವನು ಸ್ವಲ್ಪವಾದದ್ದರಲ್ಲಿ ನಂಬಿಗಸ್ತ ನಾಗಿರುವನೋ ಅವನು ಬಹಳವಾದದ್ದರಲ್ಲಿಯೂ ನಂಬಿಗಸ್ತನಾಗಿದ್ದಾನೆ; ಯಾವನು ಸ್ವಲ್ಪವಾದದ್ದರಲ್ಲಿ ಅನ್ಯಾಯಗಾರನಾಗಿರುವನೋ ಅವನು ಬಹಳವಾದದ್ದ ರಲ್ಲಿಯೂ ಅನ್ಯಾಯಗಾರನಾಗಿದ್ದಾನೆ. ಆದದರಿಂದ ಅನ್ಯಾಯವಾದ ಧನದಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಒಪ್ಪಿಸುವರು? ಇದಲ್ಲದೆ ಮತ್ತೊಬ್ಬನದರಲ್ಲಿ ನೀವು ನಂಬಿಗಸ್ತರಾಗಿರದಿದ್ದರೆ ನಿಮ್ಮ ಸ್ವಂತದ್ದನ್ನು ನಿಮಗೆ ಯಾರು ಕೊಡುವರು? ಯಾವ ಸೇವಕನೂ ಇಬ್ಬರು ಯಜಮಾನರನ್ನು ಸೇವಿಸಲಾರನು; ಯಾಕಂದರೆ ಅವನು ಒಬ್ಬನನ್ನು ಹಗೆಮಾಡಿ ಮತ್ತೊಬ್ಬನನ್ನು ಪ್ರೀತಿ ಸುವನು; ಇಲ್ಲವೆ ಒಬ್ಬನನ್ನು ಹೊಂದಿಕೊಂಡು ಮತ್ತೊಬ್ಬನನ್ನು ತಿರಸ್ಕರಿಸುವನು; ನೀವು ದೇವರನ್ನೂ ಧನವನ್ನೂ ಸೇವಿಸಲಾರಿರಿ ಅಂದನು.
- Psalm 2:4–6 ಕೀರ್ತನೆಗಳು 2:4–6ಪರಲೋಕದಲ್ಲಿ ಕೂತಿರುವಾತನು ಅದಕ್ಕೆ ನಗು ವನು! ಕರ್ತನು ಅವರನ್ನು ಪರಿಹಾಸ್ಯ ಮಾಡುವನು. ಆಗ ಆತನು ತನ್ನ ಕೋಪದಿಂದ ಅವರ ಸಂಗಡ ಮಾತನಾಡುವನು; ತನ್ನ ಕೋಪಾವೇಶದಿಂದ ಅವ ರನ್ನು ಕಳವಳಪಡಿಸುವನು. ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.