Luke · chapter 19 · verse 37
Luke 19:37 in Kannada
ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
Idallade aatanu ennemaragala guddadinda iliyuva sthalakke saviాpisidaaga shishya samoohavellaa taavu nodidda ellaa mahatkaaryagaligaagi santosha paduttaa mahaadhvaniyinda devarannu kondaada laarambhisi--
Luke 19:37 in English
- King James Version (KJV)
- And when he was come nigh, even now at the descent of the mount of Olives, the whole multitude of the disciples began to rejoice and praise God with a loud voice for all the mighty works that they had seen;
- World English Bible (WEB)
- As he was now getting near, at the descent of the Mount of Olives, the whole multitude of the disciples began to rejoice and praise God with a loud voice for all the mighty works which they had seen,
- American Standard Version (ASV)
- And as he was now drawing nigh, [even] at the descent of the mount of Olives, the whole multitude of the disciples began to rejoice and praise God with a loud voice for all the mighty works which they had seen;
- Bible in Basic English (BBE)
- And when he came near the foot of the Mountain of Olives, all the disciples with loud voices gave praise to God with joy, because of all the great works which they had seen;
- Darby Translation (DBY)
- And as he drew near, already at the descent of the mount of Olives, all the multitude of the disciples began, rejoicing, to praise God with a loud voice for all the works of power which they had seen,
- Webster's Bible (WBS)
- And when he had come nigh, even now at the descent of the mount of Olives, the whole multitude of the disciples began to rejoice and praise God with a loud voice, for all the mighty works that they had seen.
- Young's Literal Translation (YLT)
- and as he is coming nigh now, at the descent of the mount of the Olives, the whole multitude of the disciples began rejoicing to praise God with a great voice for all the mighty works they had seen,
Read in context
- 35ಅವರು ಅದನ್ನು ಯೇಸು ವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಕತ್ತೇಮರಿಯ ಮೇಲೆ ಹಾಕಿ ಅದರ ಮೇಲೆ ಯೇಸುವನ್ನು ಕೂಡ್ರಿಸಿ ದರು.
- 36ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
- 37ಇದಲ್ಲದೆ ಆತನು ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಸವಿಾಪಿಸಿದಾಗ ಶಿಷ್ಯ ಸಮೂಹವೆಲ್ಲಾ ತಾವು ನೋಡಿದ್ದ ಎಲ್ಲಾ ಮಹತ್ಕಾರ್ಯಗಳಿಗಾಗಿ ಸಂತೋಷ ಪಡುತ್ತಾ ಮಹಾಧ್ವನಿಯಿಂದ ದೇವರನ್ನು ಕೊಂಡಾಡ ಲಾರಂಭಿಸಿ--
- 38ಕರ್ತನ ಹೆಸರಿನಲ್ಲಿ ಬರುವ ಅರ ಸನು ಸ್ತುತಿಹೊಂದಲಿ; ಪರಲೋಕದಲ್ಲಿ ಸಮಾಧಾನ, ಮತ್ತು ಅತ್ಯುನ್ನತದಲ್ಲಿ ಮಹಿಮೆ ಎಂದು ಹೇಳಿದರು.
- 39ಜನಸಮೂಹದೊಳಗಿಂದ ಕೆಲವು ಫರಿಸಾಯರು ಆತನಿಗೆ--ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಅಂದರು.
Cross references
- Ezra 3:10–13 ಎಜ್ರನು 3:10–13ಕಟ್ಟುವವರು ಕರ್ತನ ಮಂದಿರಕ್ಕೆ ಅಸ್ತಿವಾರ ಹಾಕುವಾಗ ಇಸ್ರಾ ಯೇಲಿನ ಅರಸನಾದ ದಾವೀದನ ಕಟ್ಟಳೆಯ ಪ್ರಕಾರ ಕರ್ತನನ್ನು ಸ್ತುತಿಸುವದಕ್ಕೆ ವಸ್ತ್ರಗಳನ್ನು ಧರಿಸಿಕೊಂಡವ ರಾಗಿ ತುತೂರಿಗಳನ್ನೂದುವ ಯಾಜಕರನ್ನೂ ತಾಳಗ ಳನ್ನು ಬಡಿಯುವ ಆಸಾಫನ ಮಕ್ಕಳಾದ ಲೇವಿಯರನ್ನೂ ಇಟ್ಟರು. ಆಗ ಅವರು ಕರ್ತನನ್ನು ಕೊಂಡಾಡಿ ಹೊಗಳಿ ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇಸ್ರಾಯೇಲಿನ ಮೇಲೆ ಉಂಟೆಂದೂ ಪರಸ್ಪರವಾಗಿ ಹಾಡಿದರು. ಅವರು ಕರ್ತನನ್ನು ಹೊಗ ಳಿದಾಗ ಕರ್ತನ ಮಂದಿರದ ಅಸ್ತಿವಾರವನ್ನು ಹಾಕುವ ನಿಮಿತ್ತ ಜನರೆಲ್ಲರು ಮಹಾಧ್ವನಿಯಿಂದ ಆರ್ಭಟಿಸಿ ದರು. ಮೊದಲಿನ ಮಂದಿರವನ್ನು ನೋಡಿದ್ದ ವೃದ್ಧ ರಾದ ಯಾಜಕರಲ್ಲಿಯೂ ಲೇವಿಯರಲ್ಲಿಯೂ ತಂದೆ ಗಳ ಪ್ರಮುಖರಲ್ಲಿಯೂ ಅನೇಕರು ಈ ಮಂದಿರದ ಅಸ್ತಿವಾರವನ್ನು ತಮ್ಮ ದೃಷ್ಟಿಯ ಮುಂದೆ ಹಾಕುತ್ತಿರು ವಾಗ ದೊಡ್ಡ ಶಬ್ದದಿಂದ ಅತ್ತರು.ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು. ಆದರೆ ಅನೇ ಕರು ಸಂತೋಷದಿಂದ ಶಬ್ದವನ್ನೆತ್ತಿ ಆರ್ಭಟಿಸಿದರು. ಆದಕಾರಣ ಸಂತೋಷದಿಂದ ಆರ್ಭಟಿಸಿದ ಶಬ್ದ ಯಾವದೋ ಜನರ ಅಳುವಿಕೆಯ ಶಬ್ದ ಯಾವುದೋ ಎಂದು ಜನರು ತಿಳಿಯಲಾರದಾಗಿತ್ತು. ಜನರು ಮಹಾ ಧ್ವನಿಯಾಗಿ ಆರ್ಭಟಿಸಿದ್ದರಿಂದ ಅವರ ಶಬ್ದವು ದೂರದ ವರೆಗೆ ಕೇಳಲ್ಪಟ್ಟಿತ್ತು.
- John 12:12–13 ಯೋಹಾನನು 12:12–13ಮರುದಿನ ಹಬ್ಬಕ್ಕೆ ಬಂದ ಬಹಳ ಜನರು ಯೇಸು ಯೆರೂಸಲೇಮಿಗೆ ಬರುತ್ತಾನೆಂದು ಕೇಳಿದಾಗ ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.
- Matthew 21:1 ಮತ್ತಾಯನು 21:1ಅವರು ಯೆರೂಸಲೇಮಿಗೆ ಸಮಾಪಿಸಿ ಎಣ್ಣೇ ಮರಗಳ ಗುಡ್ಡದ ಬೇತ್ಫಗೆಗೆ ಬಂದಾಗ ಯೇಸು ಇಬ್ಬರು ಶಿಷ್ಯರನ್ನು ಕಳುಹಿಸಿ ಅವರಿಗೆ--
- Luke 18:43 ಲೂಕನು 18:43ಕೂಡಲೆ ಅವನು ತನ್ನ ದೃಷ್ಟಿಹೊಂದಿದನು. ಆಗ ಅವನು ದೇವರನ್ನು ಮಹಿಮೆಪಡಿಸುತ್ತಾ ಆತನನ್ನು ಹಿಂಬಾಲಿಸಿದನು; ಎಲ್ಲಾ ಜನರು ಅದನ್ನು ನೋಡಿ ದೇವರಿಗೆ ಕೊಂಡಾಟ ಸಲ್ಲಿಸಿದರು.
- 2 Chronicles 29:28–30 2 ಪೂರ್ವಕಾಲವೃತ್ತಾಂತ 29:28–30ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ಪರ್ಯಂತರ ಹಾಡುಗಾರರು ಹಾಡಿದರು, ತುತೂರಿ ಊದುವವರು ಊದಿದರು. ಅವರು ಅರ್ಪಿಸುವದು ತೀರಿದಾಗ ಅರಸನೂ ಅವನ ಸಂಗಡ ಇದ್ದವರೆಲ್ಲರೂ ಬೊಗ್ಗಿ ಆರಾಧಿಸಿ ದರು. ಇದಲ್ಲದೆ ಅರಸನಾದ ಹಿಜ್ಕೀಯನೂ ಪ್ರಧಾ ನರೂ ದಾವೀದನ ಮತ್ತು ಪ್ರವಾದಿಯಾದ ಆಸಾಫನ ಮಾತುಗಳಿಂದ ಕರ್ತನನ್ನು ಸ್ತುತಿಸಬೇಕೆಂದು ಲೇವಿ ಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಬೊಗ್ಗಿಕೊಂಡು ಆರಾಧಿಸಿದರು.
- 1 Chronicles 15:28 1 ಪೂರ್ವಕಾಲವೃತ್ತಾಂತ 15:28ಸಮಸ್ತ ಇಸ್ರಾಯೇಲ್ಯರು ಆರ್ಭಟದಿಂದಲೂ ಕೊಂಬಿನ ಶಬ್ದದಿಂದಲೂ ತುತೂರಿಗಳಿಂದಲೂ ತಾಳ ಗಳಿಂದಲೂ ವೀಣೆಗಳನ್ನೂ ಕಿನ್ನರಿಗಳನ್ನೂ ಬಾರಿಸು ವದರಿಂದಲೂ ಕರ್ತನ ಒಡಂಬಡಿಕೆಯ ಮಂಜೂಷ ವನ್ನು ತಂದರು.ಕರ್ತನ ಒಡಂಬಡಿಕೆಯ ಮಂಜೂ ಷವು ದಾವೀದನ ಪಟ್ಟಣದಲ್ಲಿ ಸೇರಿದಾಗ ಏನಾಯಿ ತಂದರೆ, ಸೌಲನ ಮಗಳಾದ ವಿಾಕಳು ಕುಣಿಯುತ್ತಾ ಆಡುತ್ತಾ ಇರುವ ಅರಸನಾದ ದಾವೀದನನ್ನು ಕಿಟಿಕಿ ಯಿಂದ ನೋಡಿ ತನ್ನ ಹೃದಯದಲ್ಲಿ ಅವನನ್ನು ಹೀನೈಸಿದಳು.
- Judges 5:1–31 ನ್ಯಾಯಸ್ಥಾಪಕರು 5:1–31ಆ ದಿನದಲ್ಲಿ ದೆಬೋರಳೂ ಅಬೀನೋ ವಮನ ಮಗನಾದ ಬಾರಾಕನೂ ಹಾಡಿ ದ್ದೇನಂದರೆ-- ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ. ಓ ಅರಸರೇ, ಕೇಳಿರಿ; ಓ ಪ್ರಭುಗಳೇ, ಕಿವಿಗೊಡಿರಿ; ನಾನು, ನಾನೇ ಕರ್ತನಿಗೆ ಹಾಡುವೆನು; ಇಸ್ರಾಯೇಲಿನ ದೇವರಾದ ಕರ್ತನನ್ನು ಕೀರ್ತಿಸುವೆನು. ಕರ್ತನೇ, ನೀನು ಸೇಯಾರಿನಿಂದ ಹೊರಟು ಎದೋ ಮಿನ ಹೊಲದಿಂದ ಮುನ್ನಡೆಯುವಾಗ ಭೂಮಿ ನಡುಗಿತು, ಆಕಾಶವು ಸುರಿಯಿತು; ಮೇಘಗಳು ಸಹ ನೀರು ಸುರಿದವು. ಕರ್ತನ ಮುಂದೆ ಬೆಟ್ಟಗಳು ಕರಗಿದವು; ಇಸ್ರಾಯೇಲಿನ ದೇವರಾದ ಕರ್ತನ ಮುಂದೆ ಸೀನಾಯಿ ಪರ್ವತವು ಸಹ ಕರಗಿತು. ಅನಾತನ ಮಗನಾದ ಶಮ್ಗರನ ದಿವಸಗಳಲ್ಲಿಯೂ ಯಾಯೇಲಳ ದಿವಸಗಳಲ್ಲಿಯೂ ದಾರಿಗಳು ನಿಂತು ಹೋದವು; ಮಾರ್ಗಸ್ಥರು ಡೊಂಕು ದಾರಿಗಳಲ್ಲಿ ನಡೆಯುತ್ತಿದ್ದರು. ದೆಬೋರಳಾದ ನಾನು ಏಳುವ ಮಟ್ಟಿಗೂ ಇಸ್ರಾಯೇಲಿನಲ್ಲಿ ತಾಯಾಗಿ ನಾನು ಏಳುವ ಮಟ್ಟಿಗೂ ಹಳ್ಳಿಗಳ ನಿವಾಸಿಗಳು ನಿಂತುಹೋದರು; ಇಸ್ರಾಯೇಲಿನಲ್ಲಿ ನಿಂತುಹೋದರು. ಅವರು ಹೊಸ ದೇವರುಗಳನ್ನು ಆದುಕೊಂಡರು; ಆಗ ಯುದ್ಧವು ಬಾಗಲುಗಳಲ್ಲಿ ಆಯಿತು. ಇಸ್ರಾಯೇಲಿನಲ್ಲಿ ನಾಲ್ವತ್ತು ಸಾವಿರ ಜನರೊಳಗೆ ಗುರಾಣಿಯೂ ಕಠಾರಿಯೂ ಕಾಣಲ್ಪಟ್ಟವೋ? ಜನರಲ್ಲಿ ಉಚಿತವಾಗಿ ಬಂದ ನ್ಯಾಯಾಧಿಪತಿಗಳ ಮೇಲೆ ನನ್ನ ಹೃದಯ ಅದೆ. ಕರ್ತನನ್ನು ಸ್ತುತಿಸಿರಿ. ಬಿಳೀ ಕತ್ತೆಗಳ ಮೇಲೆ ಸವಾರಿ ಮಾಡುವವರೇ, ನ್ಯಾಯದ ನ್ಯಾಯಾಸನದಲ್ಲಿ ಕುಳಿತಿರು ವವರೇ, ಮಾರ್ಗದಲ್ಲಿ ನಡೆಯುವವರೇ, ಮಾತ ನಾಡಿರಿ. ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು. ಎಚ್ಚರವಾಗು, ಎಚ್ಚರ ವಾಗು, ದೆಬೋರಳೇ, ಎಚ್ಚರವಾಗು, ಎಚ್ಚರವಾಗು, ಹಾಡನ್ನು ಹಾಡು; ಬಾರಾಕನೇ; ಏಳು; ಅಬೀನೋವ ಮನ ಮಗನೇ, ನಿನ್ನನ್ನು ಸೆರೆಹಿಡಿದವರನ್ನು ಸೆರೆಯಾಗಿ ನಡಿಸು. ಆಗ ಉಳಿದವನನ್ನು ಆತನು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದನು; ಕರ್ತನು ನನ್ನನ್ನು ಪರಾಕ್ರಮಶಾಲಿಗಳ ಮೇಲೆ ಆಳು ವಂತೆ ಮಾಡಿದನು. ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯಾಮಿನಿಂದ ಉಂಟಾ ಯಿತು. ನಿನ್ನ ಹಿಂದೆ ನಿನ್ನ ಜನರಲ್ಲಿ ಬೆನ್ಯಾವಿಾನನೂ; ಮಾಕೀರನಲ್ಲಿಂದ ಅಧಿಪತಿಗಳೂ ಜೆಬುಲೂನನಲ್ಲಿಂದ ಬರಹಗಾರನ ಲೇಖನಿಯನ್ನು ಉಪಯೋಗಿಸುವ ವರೂ ಬಂದರು. ಇಸ್ಸಾಕಾರನ ಪ್ರಧಾನರು ದೆಬೋ ರಳ ಸಂಗಡ ಇದ್ದರು; ಇಸ್ಸಾಕಾರನು, ಬಾರಾಕನು ಹಾಗೆಯೇ; ಕಾಲು ನಡೆಯಾಗಿ ತಗ್ಗಿನಲ್ಲಿ ಕಳುಹಿಸ ಲ್ಪಟ್ಟನು. ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಆಲೋಚನೆಗಳು ಇದ್ದವು. ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು. ಗಿಲ್ಯಾದನು ಯೊರ್ದನಿಗೆ ಆಚೆ ವಾಸಿಸಿದನು. ದಾನನು ಹಡಗುಗಳಲ್ಲಿ ನಿಂತದ್ದೇನು? ಆಶೇರನು ಸಮುದ್ರದ ದಡದಲ್ಲಿದ್ದು ತನ್ನ ರೇವುಗಳ ಬಳಿಯಲ್ಲಿ ವಾಸಿಸಿದನು. ಜೆಬುಲೂನನೂ ನಫ್ತಾ ಲಿಯೂ ಹೊಲದ ಎತ್ತರವಾದ ಸ್ಥಳಗಳಲ್ಲಿ ಮರಣಕ್ಕೂ ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಇಟ್ಟ ಜನರಾ ಗಿದ್ದರು. ಅರಸರು ಬಂದು ಯುದ್ಧಮಾಡಿದರು; ಆಗ ಕಾನಾನ್ಯರ ಅರಸರು ಮೆಗಿದ್ದೋನಿನ ಜಲ ಸವಿಾಪ ವಾದ ತಾನಾಕದಲ್ಲಿ ಯುದ್ಧಮಾಡಿದರು; ಅವರು ಹಣದ ಲಾಭ ತಕ್ಕೂಳ್ಳಲಿಲ್ಲ. ಆಕಾಶದಲ್ಲಿ ಇರುವ ವುಗಳು ಯುದ್ಧಮಾಡಿದವು; ನಕ್ಷತ್ರಗಳು ತಮ್ಮ ಓಟಗ ಳಲ್ಲಿ ಸೀಸೆರನಿಗೆ ವಿರೋಧವಾಗಿ ಯುದ್ಧಮಾಡಿದವು. ಕೀಷೋನ್ ನದಿಯು, ಆ ಹಳೇದಾದ ಕೀಷೋನ್ ನದಿಯು ಅವರನ್ನು ಬಡಕೊಂಡು ಹೋಯಿತು. ಓ ನನ್ನ ಪ್ರಾಣವೇ, ನೀನು ಬಲವನ್ನು ತುಳಿದು ಹಾಕಿದಿ. ಆಗ ನೆಲವನ್ನು ಘಟ್ಟಿಸಿ ಓಡುವ ಅವರ ಬಲವಾದ ಕುದುರೆಗಳು ತಮ್ಮ ಘಟನೆಯಿಂದ ಗೊರಿಶೇಗಳನ್ನು ಒಡೆದುಬಿಟ್ಟವು. ನೀವು ಮೇರೋಜನ್ನು ಶಪಿಸಿರಿ; ಅದರ ನಿವಾಸಿಗಳನ್ನು ಕಠಿಣವಾಗಿ ಶಪಿಸಿರಿ ಎಂದು ಕರ್ತನ ದೂತನು ಹೇಳುತ್ತಾನೆ; ಯಾಕಂದರೆ ಅವರು ಕರ್ತನ ಸಹಾಯಕ್ಕೂ ಪರಾಕ್ರಮಶಾಲಿಗಳಿಗೆ ವಿರೋ ಧವಾಗಿ ಕರ್ತನ ಸಹಾಯಕ್ಕೂ ಬಾರದೆ ಹೋದರು. ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇ ಲಳು ಸ್ತ್ರೀಯರಲ್ಲಿ ಅಧಿಕವಾಗಿ ಆಶೀರ್ವದಿಸಲ್ಪಡು ವಳು; ಸ್ತ್ರೀಯರೊಳಗೆ ಅಧಿಕವಾಗಿ ಗುಡಾರದಲ್ಲಿ ಆಶೀರ್ವದಿಸಲ್ಪಡುವಳು. ಅವನು ನೀರನ್ನು ಕೇಳಿ ದನು; ಅವಳು ಹಾಲು ಕೊಟ್ಟಳು; ಅಮೂಲ್ಯವಾದ ಬಟ್ಟಲಿನಲ್ಲಿ ಬೆಣ್ಣೆಯನ್ನು ತಂದಿಟ್ಟಳು. ತನ್ನ ಕೈಯಲ್ಲಿ ಮೊಳೆಯನ್ನು ತನ್ನ ಬಲಗೈಯಲ್ಲಿ ಕೆಲಸಗಾರನ ಸುತ್ತಿಗೆ ಯನ್ನು ತೆಗೆದುಕೊಂಡಳು; ಅವಳು ಸೀಸೆರನನ್ನು ಸುತ್ತಿಗೆ ಯಿಂದ ಹೊಡೆದಳು; ಅವಳು ಅವನ ಕಣತಲೆಯನ್ನು ತಿವಿದು ಹೊಡೆದಳು. ಅವನ ತಲೆಯನ್ನು ಹೊಡೆದು ಬಿಟ್ಟಳು. ಅವಳ ಕಾಲುಗಳ ಹತ್ತಿರ ಅವನು ಬೊಗ್ಗಿ ಬಿದ್ದು ಮಲಗಿದನು; ಅವಳ ಕಾಲುಗಳ ಹತ್ತಿರ ಬಾಗಿ ಬಿದ್ದನು; ಎಲ್ಲಿ ಬಾಗಿಬಿದ್ದನೋ ಅಲ್ಲಿಯೇ ಬಿದ್ದು ಸತ್ತನು. ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು? ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಪ್ರತ್ಯುತ್ತರಕೊಟ್ಟರು. ಹೌದು, ಅವಳೇ ತನಗೆ ಬದಲು ಮಾತು ಕೇಳಿ ಕೊಂಡಳು. ಅವರು ಓಡಲಿಲ್ಲವೋ? ಕೊಳ್ಳೆಹಂಚಿ ಕೊಳ್ಳಲಿಲ್ಲವೋ? ಒಬ್ಬೊಬ್ಬ ಮನುಷ್ಯನಿಗೆ ಒಂದೆರಡು ಹೆಣ್ಣು, ಸೀಸೆರನಿಗೆ ನಾನಾ ವರ್ಣವುಳ್ಳ ಕೊಳ್ಳೆ, ನಾನಾ ವರ್ಣವುಳ್ಳಂಥ ವಿಚಿತ್ರವಾಗಿ, ಹೊಲಿದಂಥ, ಎರಡು ಪಕ್ಕೆಗಳಲ್ಲಿ ವಿಚಿತ್ರವಾಗಿ ಹೊಲಿದಂಥ, ಕೊಳ್ಳೆ ಹಿಡಿ ಯುವರ ಕಂಠಗಳಿಗೆ ತಕ್ಕಂಥ ನಾನಾ ವರ್ಣವುಳ್ಳ ಕೊಳ್ಳೆ, ಸಿಕ್ಕಲಿಲ್ಲವೋ?ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು. ಓ ಕರ್ತನೇ, ಹೀಗೆಯೇ ನಿನ್ನ ಶತ್ರುಗಳೆಲ್ಲರು ನಾಶವಾಗಲಿ, ಆದರೆ ಆತನನ್ನು ಪ್ರೀತಿಮಾಡುವವರು ತನ್ನ ಪರಾಕ್ರಮದಿಂದ ಹೊರ ಡುವ ಸೂರ್ಯನ ಹಾಗೆಯೇ ಇರಲಿ. ದೇಶವು ನಾಲ್ವತ್ತು ವರುಷ ವಿಶ್ರಾಂತಿಯಲ್ಲಿತ್ತು.
- 1 Chronicles 16:4–7 1 ಪೂರ್ವಕಾಲವೃತ್ತಾಂತ 16:4–7ಇದಲ್ಲದೆ ಕರ್ತನ ಮಂಜೂಷದ ಮುಂದೆ ಸೇವೆ ಮಾಡಲೂ ಇಸ್ರಾಯೇಲಿನ ದೇವರಾದ ಕರ್ತನನ್ನು ಸ್ಮರಿಸುವದಕ್ಕೂ ಕೊಂಡಾಡುವದಕ್ಕೂ ಹೊಗಳುವ ದಕ್ಕೂ ಲೇವಿಯರಲ್ಲಿ ಕೆಲವರನ್ನು ನೇಮಿಸಿದನು. ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು. ಇದಲ್ಲದೆ ಯಾಜಕರಾದ ಬೆನಾಯನೂ ಯೆಹಜೀಯೇಲನೂ ದೇವರ ಒಡಂಬ ಡಿಕೆಯ ಮಂಜೂಷದ ಮುಂದೆ ಯಾವಾಗಲೂ ತುತೂರಿಗಳನ್ನು ಊದುವವರಾಗಿದ್ದರು. ಆಗ ಅದೇ ದಿವಸದಲ್ಲಿ ಕರ್ತನನ್ನು ಕೊಂಡಾಡುವದಕ್ಕೆ ದಾವೀದನು ಮೊದಲು ಆಸಾಫನಿಗೂ ಅವನ ಸಹೋದರರಿಗೂ ಈ ಸಂಗೀತವನ್ನು ಕೊಟ್ಟನು;--
- 2 Samuel 6:2–6 2 ಸಮುವೇಲನು 6:2–6ಕೆರೂಬಿಗಳ ಮಧ್ಯದಲ್ಲಿ ವಾಸವಾಗಿ ರುವ ಸೈನ್ಯಗಳ ಕರ್ತನೆಂಬ ಹೆಸರುಳ್ಳ ದೇವರ ಮಂಜೂ ಷವನ್ನು ಯೆಹೂದದ ಬಾಳಾದಿಂದ ತರುವದಕ್ಕೆ ಹೊರಟನು. ಆಗ ಅವರು ಗಿಬ್ಯದಲ್ಲಿರುವ ಅಬೀನಾ ದಾಬನ ಮನೆಯೊಳಗಿಂದ ದೇವರ ಮಂಜೂಷವನ್ನು ತೆಗೆದುಕೊಂಡು ಹೊಸ ಬಂಡಿಯ ಮೇಲೆ ಏರಿಸಿದರು. ಅಬೀನಾದಾಬನ ಮಕ್ಕಳಾದ ಉಜ್ಜನೂ ಅಹಿಯೋವನೂ ಆ ಹೊಸ ಬಂಡಿಯನ್ನು ನಡಿಸಿದರು. ಗಿಬ್ಯ ದಲ್ಲಿದ್ದ ಅಬೀನಾದಾಬನ ಮನೆಯೊಳಗಿಂದ ಅದನ್ನು ಹೊರಗೆ ತಂದು ಅವರು ಅದರ ಸಂಗಡ ಹೋಗು ತ್ತಿರುವಾಗ ಅಹಿಯೋವನು ಮಂಜೂಷದ ಮುಂದೆ ನಡೆದನು. ದಾವೀದನೂ ಇಸ್ರಾಯೇಲ್ ಮನೆ ಯವರೆಲ್ಲರೂ ತುರಾಯಿ ಮರದಿಂದ ಮಾಡಲ್ಪಟ್ಟ ಸಕಲ ವಾದ್ಯಗಳಾದ ಕಿನ್ನರಿಗಳನ್ನೂ ವೀಣೆಗಳನ್ನೂ ದಮ್ಮಡಿಗಳನ್ನೂ ಸ್ವರಮಂಡಲಗಳನ್ನೂ ತಾಳಗಳನ್ನೂ ಕರ್ತನ ಮುಂದೆ ಬಾರಿಸಿಕೊಂಡು ಹೋದರು. ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು.
- 2 Chronicles 29:36 2 ಪೂರ್ವಕಾಲವೃತ್ತಾಂತ 29:36ಆಗ ದೇವರು ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ ಜನರೆಲ್ಲರೂ ಸಂತೋಷಪಟ್ಟರು; ಯಾಕಂದರೆ ಈ ಕಾರ್ಯವು ಅಕಸ್ಮಾತ್ತಾಗಿ ಆಯಿತು.
- Mark 14:26 ಮಾರ್ಕನು 14:26ಬಳಿಕ ಅವರು ಒಂದು ಸಂಗೀತ ಹಾಡಿ ಎಣ್ಣೇ ಮರಗಳ ಗುಡ್ಡಕ್ಕೆ ಹೊರಟುಹೋದರು.
- Exodus 15:1–18 ವಿಮೋಚನಕಾಂಡ 15:1–18ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು. ನಿನ್ನ ಮಹತ್ತಾದ ಘನತೆಯಲ್ಲಿ ನಿನಗೆ ವಿರೋಧವಾಗಿ ಎದ್ದವರನ್ನು ಕೆಡವಿ ಬಿಟ್ಟಿರುವಿ. ನಿನ್ನ ರೌದ್ರವು ಹೊರಟು ಅವರನ್ನು ಹುಲ್ಲಿನಂತೆ ದಹಿಸಿಬಿಟ್ಟಿತು. ನಿನ್ನ ಮೂಗಿನ ಬಿರುಸಾದ ಗಾಳಿ ಯಿಂದ ನೀರುಗಳು ಒಟ್ಟುಗೂಡಿದವು. ಪ್ರವಾಹಗಳು ರಾಶಿಯಂತೆ ನಿಂತವು; ಸಮುದ್ರದ ಅಗಾಧಗಳ ನೀರು ಗಟ್ಟಿಯಾದವು. ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು. ದೇವರುಗಳಲ್ಲಿ ಓ ಕರ್ತನೇ, ನಿನ್ನ ಹಾಗೆ ಯಾರಿದ್ದಾರೆ? ಪರಿಶುದ್ಧತ್ವದಲ್ಲಿ ಮಹಿಮೆ ಹೊಂದಿದವನೂ ಸ್ತೋತ್ರಗಳಲ್ಲಿ ಭಯಂಕರನೂ ಅದ್ಭುತಗಳನ್ನು ಮಾಡುವಾತನೂ ಆದ ನಿನ್ನ ಹಾಗೆ ಯಾರಿದ್ದಾರೆ? ನೀನು ನಿನ್ನ ಬಲಗೈಯನ್ನು ಚಾಚಲು ಭೂಮಿಯು ಅವರನ್ನು ನುಂಗಿತು. ನೀನು ವಿಮೋಚಿ ಸಿದ ಜನರನ್ನು ಕರುಣೆಯಿಂದ ನಡಿಸಿದಿ; ನೀನು ಅವ ರನ್ನು ನಿನ್ನ ಬಲದಿಂದ ನಿನ್ನ ಪರಿಶುದ್ಧ ನಿವಾಸಕ್ಕೆ ನಡಿಸಿದಿ. ಜನರು ಇದನ್ನು ಕೇಳಿ ಭಯಪಡುವರು; ದುಃಖವು ಫಿಲಿಷ್ಟಿಯದಲ್ಲಿ ವಾಸಿಸುವವರನ್ನು ಹಿಡಿಯುವದು. ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು. ಭಯವೂ ಹೆದರಿಕೆಯೂ ಅವರ ಮೇಲೆ ಬೀಳು ವದು; ನಿನ್ನ ಜನರು ದಾಟಿ ಹೋಗುವ ವರೆಗೆ ಓ ಕರ್ತನೇ, ನೀನು ಕೊಂಡುಕೊಂಡ ಜನರು ದಾಟಿ ಹೋಗುವ ವರೆಗೆ ನಿನ್ನ ಬಾಹುವಿನ ದೊಡ್ಡಸ್ತಿಕೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗುವರು. ನೀನು ಅವರನ್ನು ಒಳಗೆ ಬರಮಾಡಿ ಓ ಕರ್ತನೇ, ನಿನ್ನ ಕೈಗಳು ಸ್ಥಾಪಿಸಿದ ಪರಿಶುದ್ಧ ನಿವಾಸದಲ್ಲಿಯೂ (ಓ ಕರ್ತನೇ,) ನೀನು ವಾಸಿಸುವದಕ್ಕೆ ಮಾಡಿಕೊಂಡಿರುವ ನಿನ್ನ ಸ್ವಾಸ್ಥ್ಯದ ಪರ್ವತದಲ್ಲಿಯೂ ಅವರನ್ನು ಸ್ಥಾಪಿಸುವಿ. ಕರ್ತನು ಯುಗಯುಗಾಂತರಗಳ ವರೆಗೆ ಆಳುವನು.
Original words (Greek)
- And · G1161δέ dé
- he · G846αὐτός autós
- nigh · G1448ἐγγίζω engízō
- now · G2235ἤδη ḗdē
- at · G4314πρός prós
- descent · G2600κατάβασις katábasis
- mount · G3735ὄρος óros
- Olives · G1636ἐλαία elaía
- whole · G537ἅπας hápas
- multitude · G4128πλῆθος plēthos
- disciples · G3101μαθητής mathētḗs
- began · G756ἄρχομαι árchomai
- rejoice · G5463χαίρω chaírō
- praise · G134αἰνέω ainéō
- God · G2316θεός theós
- loud · G3173μέγας mégas
- voice · G5456φωνή phōnḗ
- for · G4012περί perí
- all · G3956πᾶς pâs
- works · G1411δύναμις dýnamis
- that · G3739ὅς hós
- seen · G1492εἴδω eídō