Luke · chapter 19 · verse 43
Luke 19:43 in Kannada
ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
Yaakandare ninna shatrugalu ninna suttaloo kandakavannu todi ellaa kadeyalliyoo ninnannu muttige haaki pratiyondu kadeyindaloo ninnannu olage irisuva dinagalu ninna mele baruvavu.
Luke 19:43 in English
- King James Version (KJV)
- For the days shall come upon thee, that thine enemies shall cast a trench about thee, and compass thee round, and keep thee in on every side,
- World English Bible (WEB)
- For the days will come on you when your enemies will throw up a barricade against you, surround you, hem you in on every side,
- American Standard Version (ASV)
- For the days shall come upon thee, when thine enemies shall cast up a bank about thee, and compass thee round, and keep thee in on every side,
- Bible in Basic English (BBE)
- For the time will come when your attackers will put a wall round you, and come all round you and keep you in on every side,
- Darby Translation (DBY)
- for days shall come upon thee, that thine enemies shall make a palisaded mound about thee, and shall close thee around, and keep thee in on every side,
- Webster's Bible (WBS)
- For the days shall come upon thee, that thy enemies shall cast a trench about thee, and encompass thee, and keep thee in on every side,
- Young's Literal Translation (YLT)
- 'Because days shall come upon thee, and thine enemies shall cast around thee a rampart, and compass thee round, and press thee on every side,
Read in context
- 41ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು--
- 42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- 44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- 45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
Cross references
- Luke 21:20–24 ಲೂಕನು 21:20–24ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Isaiah 29:1–4 ಯೆಶಾಯ 29:1–4ಅಯ್ಯೋ, ಅರೀಯೇಲೇ, ಅರೀಯೇಲೇ, (ಅಗ್ನಿವೇದಿ) ದಾವೀದನು ವಾಸಿಸಿದ ಪಟ್ಟ ಣವೇ ವರುಷಕ್ಕೆ ವರುಷವನ್ನು ಕೂಡಿಸಿರಿ, ಬಲಿಗಳನ್ನು ವಧಿಸಿ ಅರ್ಪಿಸಿರಿ. ಆದಾಗ್ಯೂ ನಾನು ಅರೀಯೇಲಿಗೆ ಇಕ್ಕಟ್ಟನ್ನು ಉಂಟುಮಾಡುವೆನು. ಅಲ್ಲಿ ಕಷ್ಟವೂ ದುಃಖವೂ ಇರುವದು. ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು. ಆಗ ನೀನು ತಗ್ಗಿಸಲ್ಪಟ್ಟು ಭೂಮಿಯೊಳಗಿಂದ ಮಾತಾಡುವಿ. ನಿನ್ನ ನುಡಿಯು ದೂಳಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವದು, ನಿನ್ನ ಸ್ವರವು ಭೂತದ ಹಾಗೆ ನೆಲದೊಳಗಿಂದ ಬರು ವದು; ನಿನ್ನ ನುಡಿಯು ದೂಳಿನೊಳಗಿಂದ ಪಿಸುಗುಟ್ಟು ವದು;
- Ezekiel 4:2 ಯೆಹೆಜ್ಕೇಲನು 4:2ಅದಕ್ಕೆ ಮುತ್ತಿಗೆ ಹಾಕಿ ಎದುರಾಗಿ ಒಂದು ಕೋಟೆಯನ್ನು ಕಟ್ಟು. ಇದಲ್ಲದೆ ಎದುರಾಗಿ ಒಂದು ದಿಬ್ಬವನ್ನು ಕಟ್ಟು; ಎದುರಾಗಿ ಒಂದು ದಂಡನ್ನು ಇರಿಸಿ ವಿರೋಧವಾಗಿ ಸುತ್ತಲೂ ಭಿತ್ತಿಭೇದಕ ಮಾಡು ವಂಥ ಆಯುಧಗಳನ್ನು ಇಡು.
- Ezekiel 26:8 ಯೆಹೆಜ್ಕೇಲನು 26:8ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು;
- Matthew 23:37–39 ಮತ್ತಾಯನು 23:37–39ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- Isaiah 37:33 ಯೆಶಾಯ 37:33ಆದದರಿಂದ ಕರ್ತನು ಅಶ್ಶೂರದ ಅರಸನ ವಿಷಯವಾಗಿ ಹೇಳುವ ದೇನಂದರೆ ಅವನು ಈ ಪಟ್ಟಣಕ್ಕೆ ಬರಲಾರನು ಬಾಣವನ್ನು ಎಸೆಯನು, ಇಲ್ಲವೇ ಅದರ ಮುಂದೆ ಗುರಾಣಿಯೊಂದಿಗೆ ಬರಲಾರನು ಇಲ್ಲವೆ ಅದಕ್ಕೆ ವಿರೋಧವಾಗಿ ಮಣ್ಣಿನ ದಿಬ್ಬವನ್ನು ಹಾಕುವದಿಲ್ಲ.
- Deuteronomy 28:49–58 ಧರ್ಮೋಪದೇಶಕಾಂಡ 28:49–58ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ ಮುದುಕರ ಮುಖದಾಕ್ಷಿಣ್ಯ ನೋಡದೆಯೂ ಚಿಕ್ಕವ ರಿಗೆ ದಯೆತೋರಿಸದೆ ಇರುವಂಥ ಕಠಿಣ ಮುಖವುಳ್ಳ ಜನಾಂಗವನ್ನೂ ನಿನ್ನ ಮೇಲೆ ಬರಮಾಡುವನು. ಅದು ನಿನ್ನ ಪಶುಗಳ ಫಲವನ್ನೂ ನಿನ್ನ ಭೂಮಿಯ ಫಲವನ್ನೂ ನೀನು ನಾಶವಾಗುವ ವರೆಗೆ ತಿಂದು ಬಿಡುವದು; ಅದು ನಿನ್ನನ್ನು ಕೆಡಿಸುವ ವರೆಗೆ ಧಾನ್ಯ ದ್ರಾಕ್ಷಾರಸ ಎಣ್ಣೆಗಳನ್ನೂ ಪಶುಗಳ ಅಭಿವೃದ್ಧಿಯನ್ನೂ ಕುರಿಗಳ ಮಂದೆಗಳನ್ನೂ ನಿನಗೆ ಉಳಿಸದು. ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು. ನಿನ್ನ ದೇವರಾದ ಕರ್ತನೆಂಬ ಈ ಘನವುಳ್ಳ ಭಯಂಕರವಾದ ಹೆಸರಿಗೆ ಭಯಪಡಬೇಕೆಂದು ಈ ಪುಸ್ತಕದಲ್ಲಿ ಬರೆದಿರುವ ಈ ನ್ಯಾಯಪ್ರಮಾಣದ ಮಾತುಗಳನ್ನು ಕಾಪಾಡದೆ, ಕೈಕೊಳ್ಳದೆ ಹೋದರೆ
- Jeremiah 6:3–6 ಯೆರೆಮೀಯ 6:3–6ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ; ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Daniel 9:26–27 ದಾನಿಯೇಲನು 9:26–27ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು. ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Matthew 22:7 ಮತ್ತಾಯನು 22:7ಆದರೆ ಅರಸನು ಅದನ್ನು ಕೇಳಿ ಕೋಪೋದ್ರೇಕವುಳ್ಳವನಾಗಿ ತನ್ನ ಸೈನ್ಯಗಳನ್ನು ಕಳುಹಿಸಿ ಆ ಕೊಲೆಗಾರರನ್ನು ಸಂಹ ರಿಸಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.
- Psalm 37:12–13 ಕೀರ್ತನೆಗಳು 37:12–13ದುಷ್ಟನು ನೀತಿವಂತನಿಗಾಗಿ ಹೊಂಚುಹಾಕು ವನು, ಅವನ ಮೇಲೆ ತನ್ನ ಹಲ್ಲುಗಳನ್ನು ಕಡಿಯುತ್ತಾನೆ. ಕರ್ತನು ಅವನ ದಿನ ಬರುತ್ತದೆಂದು ನೋಡಿ ನಗುತ್ತಾನೆ.