Luke · chapter 19 · verse 44
Luke 19:44 in Kannada
ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
Idallade avaru ninnannoo ninnola giruva ninna makkalannoo nelasama maaduvaru; mattu ninnalli ondu kallina mele mattondu kallu iradante maaduvaru; yaakandare ninnannu sandhisida samayavannu neenu tilukollalilla andanu.
Luke 19:44 in English
- King James Version (KJV)
- And shall lay thee even with the ground, and thy children within thee; and they shall not leave in thee one stone upon another; because thou knewest not the time of thy visitation.
- World English Bible (WEB)
- and will dash you and your children within you to the ground. They will not leave in you one stone on another, because you didn’t know the time of your visitation.”
- American Standard Version (ASV)
- and shall dash thee to the ground, and thy children within thee; and they shall not leave in thee one stone upon another; because thou knewest not the time of thy visitation.
- Bible in Basic English (BBE)
- And will make you level with the earth, and your children with you; and there will not be one stone resting on another in you, because you did not see that it was your day of mercy.
- Darby Translation (DBY)
- and shall lay thee even with the ground, and thy children in thee; and shall not leave in thee a stone upon a stone: because thou knewest not the season of thy visitation.
- Webster's Bible (WBS)
- And shall lay thee even with the ground, and thy children within thee: and they shall not leave in thee one stone upon another: because thou knewest not the time of thy visitation.
- Young's Literal Translation (YLT)
- and lay thee low, and thy children within thee, and they shall not leave in thee a stone upon a stone, because thou didst not know the time of thy inspection.'
Read in context
- 42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- 44ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- 45ಆತನು ದೇವಾಲಯದೊಳಕ್ಕೆ ಹೋಗಿ ಅದರಲ್ಲಿ ಮಾರುವವರನ್ನೂ ಕೊಂಡುಕೊಳ್ಳುವವರನ್ನೂ ಹೊರಗೆ ಹಾಕುವದಕ್ಕೆ ಪ್ರಾರಂಭಿಸಿ
- 46ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಬರೆಯಲ್ಪಟ್ಟಿದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಅಂದನು.
Cross references
- Luke 13:34–35 ಲೂಕನು 13:34–35ಓ ಯೆರೂಸಲೇಮೇ,ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸಲ್ಪಟ್ಟವರಿಗೆ ಕಲ್ಲೆಸೆಯುವವಳೇ, ಕೋಳಿಯು ತನ್ನ ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಾನು ನಿನ್ನ ಮಕ್ಕಳನ್ನು ಎಷ್ಟೋ ಸಾರಿ ಕೂಡಿಸಬೇಕೆಂದಿದ್ದೆನು; ಆದರೆ ನಿನಗೆ ಅದು ಮನಸ್ಸಿಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು. ಇಗೋ, ನಿಮ್ಮ ಮನೆಯು ಹಾಳಾಗಿ ನಿಮಗೆ ಬಿಡಲ್ಪಟ್ಟಿದೆ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ಸಮಯವು ಬರುವ ತನಕ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Luke 21:6 ಲೂಕನು 21:6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- Luke 19:42 ಲೂಕನು 19:42ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Lamentations 1:8 ಪ್ರಲಾಪಗಳು 1:8ಯೆರೂಸ ಲೇಮು ಘೋರವಾಗಿ ಪಾಪಮಾಡಿದೆ; ಆದದರಿಂದ ಅವಳು ತೆಗೆದುಹಾಕಲ್ಪಟ್ಟಿದ್ದಾಳೆ; ಅವಳನ್ನು ಸನ್ಮಾನಿಸಿ ದವರೆಲ್ಲರೂ ಅವಳನ್ನು ಹೀನೈಸುತ್ತಾರೆ; ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ; ಹೌದು, ಅವಳು ನಿಟ್ಟುಸಿರಿಟ್ಟು ಹಿಂದಕ್ಕೆ ತಿರುಗುತ್ತಾಳೆ.
- Matthew 23:37–38 ಮತ್ತಾಯನು 23:37–38ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 3:18–21 ಯೋಹಾನನು 3:18–21ಆತನ ಮೇಲೆ ನಂಬಿಕೆ ಇಡುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬಿಕೆಯಿಡದವನಿಗೆ ಆಗಲೇ ತೀರ್ಪಾಯಿತು; ಯಾಕಂದರೆ ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ. ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ. ಆದರೆ ಸತ್ಯವನ್ನು ಅನುಸರಿಸುವವನು ತನ್ನ ಕೃತ್ಯಗಳು ದೇವರಿಂದ ಮಾಡಲ್ಪಟ್ಟವುಗಳೆಂದು ಪ್ರಕಟವಾಗು ವಂತೆ ಬೆಳಕಿಗೆ ಬರುತ್ತಾನೆ ಎಂದು ಹೇಳಿದನು.
- Luke 1:68 ಲೂಕನು 1:68ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿ ಹೊಂದಲಿ, ಯಾಕಂದರೆ ಆತನು ತನ್ನ ಜನರನ್ನು ಸಂಧಿಸಿ ಅವರನ್ನು ವಿಮೋಚಿ ಸಿದ್ದಾನೆ.
- Daniel 9:24 ದಾನಿಯೇಲನು 9:24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
- Psalm 137:9 ಕೀರ್ತನೆಗಳು 137:9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Mark 13:2 ಮಾರ್ಕನು 13:2ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
- Matthew 24:2 ಮತ್ತಾಯನು 24:2ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು.