Luke · chapter 19 · verse 5
Luke 19:5 in Kannada
ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
Yesu aa sthalakke bandu melakke nodi avanannu kandu avanige--jakkaayane, tvareyaagi ilidu baa; yaakandare ee dina naanu ninna maneyalli iratakkaddaagide andanu.
Luke 19:5 in English
- King James Version (KJV)
- And when Jesus came to the place, he looked up, and saw him, and said unto him, Zacchæus, make haste, and come down; for to day I must abide at thy house.
- World English Bible (WEB)
- When Jesus came to the place, he looked up and saw him, and said to him, “Zacchaeus, hurry and come down, for today I must stay at your house.”
- American Standard Version (ASV)
- And when Jesus came to the place, he looked up, and said unto him, Zacchæus, make haste, and come down; for to-day I must abide at thy house.
- Bible in Basic English (BBE)
- And when Jesus came to the place, looking up, he said to him, Zacchaeus, be quick and come down, for I am coming to your house today.
- Darby Translation (DBY)
- And when he came up to the place, Jesus looked up and saw him, and said to him, Zacchaeus, make haste and come down, for to-day I must remain in thy house.
- Webster's Bible (WBS)
- And when Jesus came to the place, he looked up, and saw him, and said to him, Zaccheus, make haste, and come down: for to-day I must abide at thy house.
- Young's Literal Translation (YLT)
- And as Jesus came up to the place, having looked up, he saw him, and said unto him, 'Zaccheus, having hastened, come down, for to-day in thy house it behoveth me to remain;'
Read in context
- 3ಯೇಸು ಯಾರೆಂದು ಅವನು ನೋಡುವದಕ್ಕೆ ಅಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನದಟ್ಟನೆಯ ನಿಮಿತ್ತವಾಗಿ ಆತನನ್ನು ನೋಡಲಾರದೆ ಇದ್ದನು.
- 4ಆಗ ಆತನನ್ನು ನೋಡುವ ಹಾಗೆ ಅವನು ಮುಂದಾಗಿ ಓಡಿಹೋಗಿ ಒಂದು ಆಲದ ಮರವನ್ನು ಹತ್ತಿದನು; ಯಾಕಂದರೆ ಆತನು ಆ ಮಾರ್ಗವಾಗಿಯೇ ಹೋಗುವವನಾಗಿ ದ್ದನು.
- 5ಯೇಸು ಆ ಸ್ಥಳಕ್ಕೆ ಬಂದು ಮೇಲಕ್ಕೆ ನೋಡಿ ಅವನನ್ನು ಕಂಡು ಅವನಿಗೆ--ಜಕ್ಕಾಯನೇ, ತ್ವರೆಯಾಗಿ ಇಳಿದು ಬಾ; ಯಾಕಂದರೆ ಈ ದಿನ ನಾನು ನಿನ್ನ ಮನೆಯಲ್ಲಿ ಇರತಕ್ಕದ್ದಾಗಿದೆ ಅಂದನು.
- 6ಆಗ ಅವನು ತ್ವರೆಯಾಗಿ ಇಳಿದು ಬಂದು ಅತನನ್ನು ಸಂತೋಷದಿಂದ ಸೇರಿಸಿಕೊಂಡನು.
- 7ಇದನ್ನು ಅವರು ನೋಡಿ ದಾಗ--ಇವನು ಪಾಪಿಯಾದವನೊಂದಿಗೆ ಅತಿಥಿ ಯಾಗಿರಲು ಹೋಗಿದ್ದಾನೆ ಎಂದು ಹೇಳಿ ಅವರೆಲ್ಲರೂ ಗುಣುಗುಟ್ಟಿದರು.
Cross references
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- John 14:23 ಯೋಹಾನನು 14:23ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
- Ezekiel 16:6 ಯೆಹೆಜ್ಕೇಲನು 16:6ನಾನು ನಿನ್ನ ಬಳಿಯಲ್ಲಿ ಹಾದು ಹೋಗುವಾಗ ನೀನು ನಿನ್ನ ಸ್ವಂತ ರಕ್ತದಲ್ಲಿ ಬಿದ್ದು ಹೊರಳಾಡುತ್ತಿದ್ದ ನಿನ್ನನ್ನು ನಾನು ನಿನ್ನ ರಕ್ತದಲ್ಲಿ ನೋಡಿದಾಗ ಬದುಕು ಎಂದೆನು; ಹೌದು, ನೀನು ನಿನ್ನ ರಕ್ತದಲ್ಲಿ ಬಿದ್ದಿರುವಾಗ ನಾನು ಬದುಕು ಅಂದೆನು.
- Hebrews 13:2 ಇಬ್ರಿಯರಿಗೆ 13:2ಪರರಿಗೆ ಸತ್ಕಾರ ಮಾಡುವದನ್ನು ಮರೆಯಬೇಡಿರಿ; ಅದನ್ನು ಮಾಡುವಲ್ಲಿ ಕೆಲವರು ತಿಳಿಯದೆ ದೂತರನ್ನು ಸತ್ಕರಿಸಿದ್ದಾರೆ.
- Ephesians 3:17 ಎಫೆಸದವರಿಗೆ 3:17ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
- Psalm 139:1–3 ಕೀರ್ತನೆಗಳು 139:1–3ಕರ್ತನೇ, ನನ್ನನ್ನು ಪರಿಶೋಧಿಸಿ ತಿಳುಕೊಂಡಿದ್ದೀ; ನಾನು ಕೂತು ಕೊಳ್ಳುವದನ್ನೂ ಏಳುವದನ್ನೂ ನೀನು ತಿಳುಕೊಂಡಿದ್ದೀ; ನನ್ನ ಆಲೋಚನೆಯನ್ನು ದೂರದಿಂದ ಗ್ರಹಿಸಿ ಕೊಂಡ್ಡಿದ್ದೀ; ನಾನು ನಡೆಯುವದನ್ನೂ ಮಲಗುವದನ್ನೂ ನೀನು ಶೋಧಿಸಿದ್ದೀ; ನನ್ನ ಮಾರ್ಗಗಳೆಲ್ಲಾ ನಿನಗೆ ಗೊತ್ತಾಗಿವೆ.
- Luke 19:10 ಲೂಕನು 19:10ಯಾಕಂದರೆ ಮನುಷ್ಯಕುಮಾರನು ತಪ್ಪಿ ಹೋದದ್ದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
- Genesis 18:3–5 ಆದಿಕಾಂಡ 18:3–5ನನ್ನ ಕರ್ತನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರೆತಿದ್ದರೆ ನಿನ್ನ ದಾಸನ ಬಳಿಯಿಂದ ಹೊರಟುಹೋಗಬೇಡ. ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ. ನಾನು ಒಂದಿಷ್ಟು ರೊಟ್ಟಿಯನ್ನು ತರುವೆನು; ನೀವು ನಿಮ್ಮ ಹೃದಯಗಳನ್ನು ಆದರಿಸಿಕೊಳ್ಳಿರಿ; ತರುವಾಯ ನೀವು ಮುಂದೆ ಹೊರಟು ಹೋಗಬಹುದು. ಅದಕ್ಕೋಸ್ಕರವೇ ನೀವು ನಿಮ್ಮ ದಾಸನ ಬಳಿಗೆ ಬಂದಿದ್ದೀರಿ ಎಂದು ಬೇಡಿಕೊಂಡನು. ಅದಕ್ಕೆ ಅವರು--ನೀನು ಹೇಳಿದಂತೆಯೇ ಮಾಡು ಅಂದರು.
- John 4:7–10 ಯೋಹಾನನು 4:7–10ಆಗ ಸಮಾರ್ಯದ ಒಬ್ಬ ಸ್ತ್ರೀಯು ನೀರು ಸೇದುವದಕ್ಕಾಗಿ ಬಂದಳು; ಯೇಸು ಆಕೆಗೆ--ನನಗೆ ಕುಡಿಯುವದಕ್ಕೆ ಕೊಡು ಅಂದನು. (ಯಾಕಂದರೆ ಆತನ ಶಿಷ್ಯರು ಆಹಾರವನ್ನು ಕೊಂಡುಕೊಳ್ಳುವದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು). ಅದಕ್ಕೆ ಆ ಸಮಾ ರ್ಯದ ಸ್ತ್ರೀಯು ಆತನಿಗೆ--ನೀನು ಯೆಹೂದ್ಯನಾಗಿದ್ದು ಕುಡಿಯುವದಕ್ಕೆ ಕೊಡು ಎಂದು ಸಮಾರ್ಯದ ಸ್ತ್ರೀಯಾದ ನನ್ನಿಂದ ಕೇಳುವದು ಹೇಗೆ? ಯಾಕಂದರೆ ಯೆಹೂದ್ಯರು ಸಮಾರ್ಯದವರೊಂದಿಗೆ ಹೊಕ್ಕು ಬಳಿಕೆ ಮಾಡುವದಿಲ್ಲವಲ್ಲಾ ಅಂದಳು. ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು.
- John 1:48 ಯೋಹಾನನು 1:48ನತಾನಯೇಲನು ಆತನಿಗೆ--ನೀನು ನನ್ನನ್ನು ಹೇಗೆ ಬಲ್ಲೆ? ಅಂದನು; ಯೇಸು ಪ್ರತ್ಯುತ್ತರ ವಾಗಿ ಅವನಿಗೆ--ಫಿಲಿಪ್ಪನು ನಿನ್ನನ್ನು ಕರೆಯುವದಕ್ಕಿಂತ ಮುಂಚೆ ನೀನು ಆ ಅಂಜೂರ ಮರದ ಕೆಳಗೆ ಇದ್ದಾಗ ನಾನು ನಿನ್ನನ್ನು ನೋಡಿದೆನು ಅಂದನು.
- Psalm 101:2–3 ಕೀರ್ತನೆಗಳು 101:2–3ಸಂಪೂರ್ಣವಾದ ಮಾರ್ಗದಲ್ಲಿ ಬುದ್ಧಿ ಯಿಂದ ನಡೆದು ಕೊಳ್ಳುವೆನು; ಯಾವಾಗ ನನ್ನ ಬಳಿಗೆ ಬರುವಿ? ನನ್ನ ಹೃದಯದ ಸಂಪೂರ್ಣತೆಯಿಂದ ನನ್ನ ಮನೆಯೊಳಗೆ ನಡೆದುಕೊಳ್ಳುವೆನು. ಕೆಟ್ಟ ಕಾರ್ಯ ವನ್ನು ನನ್ನ ಕಣ್ಣುಗಳ ಮುಂದೆ ನಾನು ಇಡುವದಿಲ್ಲ; ಅಕ್ರಮಗಾರರ ಕೆಲಸವನ್ನು ಹಗೆ ಮಾಡುತ್ತೇನೆ; ಅದು ನನಗೆ ಅಂಟಿಕೊಳ್ಳದು.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.