Luke · chapter 2 · verse 31
Luke 2:31 in Kannada
ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
Adannu (aa rakshaneyannu) neenu ellaa janara munde siddha padisiddee.
Luke 2:31 in English
- King James Version (KJV)
- Which thou hast prepared before the face of all people;
- World English Bible (WEB)
- which you have prepared before the face of all peoples;
- American Standard Version (ASV)
- Which thou hast prepared before the face of all peoples;
- Bible in Basic English (BBE)
- Which you have made ready before the face of all nations;
- Darby Translation (DBY)
- which thou hast prepared before the face of all peoples;
- Webster's Bible (WBS)
- Which thou hast prepared before the face of all people;
- Young's Literal Translation (YLT)
- which Thou didst prepare before the face of all the peoples,
Read in context
- 29ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
- 30ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು.
- 31ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ.
- 32ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.
- 33ಆಗ ಅವನು ಹೇಳಿದ ಮಾತುಗಳಿಗಾಗಿ ಯೋಸೇಫನೂ ಆತನ ತಾಯಿಯೂ ಆಶ್ಚರ್ಯಪಟ್ಟರು.
Cross references
- Isaiah 62:1–2 ಯೆಶಾಯ 62:1–2ಚೀಯೋನಿಗೋಸ್ಕರ ನಾನು ಮೌನವಾಗಿರುವದಿಲ್ಲ; ಯೆರೂಸಲೇಮಿಗೋಸ್ಕರ ಅದರ ನೀತಿ ಪ್ರಕಾಶದಂತೆಯೂ ಅದರ ರಕ್ಷಣೆಯು ಉರಿಯುವ ದೀವಿಗೆಯಂತೆಯೂ ಹೊರಡುವ ವರೆಗೆ ನಾನು ವಿಶ್ರಾಂತಿಯಿಂದ ಇರುವದಿಲ್ಲ. ಆಗ ಅನ್ಯ ಜನಾಂಗಗಳು ನಿನ್ನ ನೀತಿಯನ್ನು ಅರಸರೆಲ್ಲರು ನಿನ್ನ ಮಹಿಮೆಯನ್ನು ನೋಡುವರು; ಕರ್ತನ ಬಾಯಿ ಉಚ್ಚರಿಸುವ ಹೊಸ ಹೆಸರಿನಿಂದ ನೀನು ಕರೆಯ ಲ್ಪಡುವಿ.
- Isaiah 42:1–4 ಯೆಶಾಯ 42:1–4ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು. ಅವನು ಕೂಗು ವದಿಲ್ಲ, ಶಬ್ದವನ್ನು ಎತ್ತುವದಿಲ್ಲ ಇಲ್ಲವೆ ಬೀದಿಗಳಲ್ಲಿ ತನ್ನ ಸ್ವರವನ್ನು ಕೇಳಗೊಡಿಸುವದಿಲ್ಲ. ಜಜ್ಜಿದ ದಂಟನ್ನು ಮುರಿದುಹಾಕದೆ, ಕಳೆಗುಂದಿದ ದೀಪ ವನ್ನು ನಂದಿಸದೆ, ಸತ್ಯದಿಂದ ನ್ಯಾಯವನ್ನು ಹೊರ ತರುತ್ತಾನೆ. ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಅವನು ಸೋಲುವದಿಲ್ಲ ಇಲ್ಲವೇ ಮನ ಗುಂದುವದಿಲ್ಲ; ದ್ವೀಪಗಳು ಅವನ ನ್ಯಾಯಪ್ರಮಾ ಣಕ್ಕೆ ಕಾದಿರುವವು.
- Psalm 98:2–3 ಕೀರ್ತನೆಗಳು 98:2–3ರ್ತನು ತನ್ನ ರಕ್ಷಣೆಯನ್ನು ತಿಳಿಯ ಮಾಡಿದ್ದಾನೆ; ತನ್ನ ನೀತಿಯನ್ನು ಜನಾಂಗಗಳ ದೃಷ್ಟಿಗೆ ಬಹಿರಂಗವಾಗಿ ಪ್ರಕಟಮಾಡಿದ್ದಾನೆ. ತನ್ನ ಕರುಣೆ ಯನ್ನೂ ಸತ್ಯತೆಯನ್ನೂ ಇಸ್ರಾಯೇಲಿನ ಮನೆಗೋಸ್ಕರ ಜ್ಞಾಪಕ ಮಾಡಿಕೊಂಡಿದ್ದಾನೆ; ಭೂಮಿಯ ಕೊನೆಗಳೆಲ್ಲಾ ನಮ್ಮ ದೇವರ ರಕ್ಷಣೆಯನ್ನು ನೋಡಿವೆ.
- Isaiah 45:21–25 ಯೆಶಾಯ 45:21–25ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ. ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ. ನನ್ನಷ್ಟಕ್ಕೆ ನಾನೇ ಆಣೆಯನ್ನು ಇಟ್ಟಿದ್ದೇನೆ, ನೀತಿಯುಳ್ಳ ವಾಕ್ಯವು ನನ್ನ ಬಾಯಿಂದ ಹೊರಟಿದೆ, ಅದು ಹಿಂದಿರುಗದು: ಎಲ್ಲರೂ ನನಗೆ ಅಡ್ಡಬೀಳುವರು, ಪ್ರತಿ ನಾಲಿಗೆಯು ಪ್ರತಿಜ್ಞೆ ಮಾಡು ವದು. ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು. ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
- Isaiah 42:10–12 ಯೆಶಾಯ 42:10–12ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ. ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ, ಅವರು ಕರ್ತನಿಗೆ ಮಹಿಮೆಯನ್ನು ಕೊಡಲಿ ಆತನ ಸ್ತೋತ್ರವನ್ನು ದ್ವೀಪಗಳಲ್ಲಿ ಪ್ರಕಟಿಸಲಿ.
- Psalm 97:6–8 ಕೀರ್ತನೆಗಳು 97:6–8ಆಕಾಶಗಳು ಆತನ ನೀತಿಯನ್ನು ತಿಳಿಸುತ್ತವೆ; ಎಲ್ಲಾ ಜನಗಳು ಆತನ ಘನವನ್ನು ನೋಡುತ್ತಾರೆ. ಕೆತ್ತಿದ ವಿಗ್ರಹಗಳನ್ನು ಸೇವಿಸಿ, ವಿಗ್ರಹಗಳಲ್ಲಿ ಹೆಮ್ಮೆಪಡುವ ವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಆತನನ್ನು ಆರಾಧಿಸಿರಿ. ಚೀಯೋನ್ ಇದನ್ನು ಕೇಳಿ ಸಂತೋಷಿಸಿತು. ಓ ಕರ್ತನೇ, ನಿನ್ನ ನ್ಯಾಯಗಳ ನಿಮಿತ್ತ ಯೆಹೂದದ ಕುಮಾರ್ತೆಗಳು ಉಲ್ಲಾಸಿಸುತ್ತಾರೆ.
- Psalm 96:10–13 ಕೀರ್ತನೆಗಳು 96:10–13ಕರ್ತನು ಆಳುತ್ತಾನೆ; ಲೋಕವು ಸ್ಥಿರವಾಗಿದೆ, ಕದಲುವದಿಲ್ಲ. ಆತನು ಜನಗಳಿಗೆ ನೀತಿಯಲ್ಲಿ ನ್ಯಾಯತೀರಿಸುವನೆಂದು ಅನ್ಯಜನಾಂಗಗಳಲ್ಲಿ ಹೇಳಿರಿ. ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ. ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು. ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
- Psalm 96:1–3 ಕೀರ್ತನೆಗಳು 96:1–3ಕರ್ತನಿಗೆ ಹೊಸ ಹಾಡನ್ನು ಹಾಡಿರಿ; ಸಮಸ್ತ ಭೂಮಿಯೇ, ಕರ್ತನಿಗೆ ಹಾಡಿರಿ. ಕರ್ತನಿಗೆ ಹಾಡಿರಿ, ಆತನ ಹೆಸರನ್ನು ಸ್ತುತಿಸಿರಿ; ಆತನ ರಕ್ಷಣೆಯನ್ನು ದಿನ ದಿನಕ್ಕೆ ಸಾರಿ ಹೇಳಿರಿ. ಅನ್ಯಜನಾಂಗದಲ್ಲಿ ಆತನ ಘನವನ್ನೂ ಎಲ್ಲಾ ಜನಾಂಗಗಳಲ್ಲಿ ಆತನ ಅದ್ಭುತಗಳನ್ನೂ ವಿವ ರಿಸಿರಿ.