Luke · chapter 20 · verse 10
Luke 20:10 in Kannada
ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
Phala kaaladalli avanu tanage barabekaagidda draakshe totada phalavannu koduvante avanu tanna aalannu avara balige kaluhisikottanu. Aadare aa okkaligaru avanannu hodedu baridaagi kaluhisibittaru.
Luke 20:10 in English
- King James Version (KJV)
- And at the season he sent a servant to the husbandmen, that they should give him of the fruit of the vineyard: but the husbandmen beat him, and sent [him] away empty.
- World English Bible (WEB)
- At the proper season, he sent a servant to the farmers to collect his share of the fruit of the vineyard. But the farmers beat him and sent him away empty.
- American Standard Version (ASV)
- And at the season he sent unto the husbandmen a servant, that they should give him of the fruit of the vineyard: but the husbandmen beat him, and sent him away empty.
- Bible in Basic English (BBE)
- And at the right time he sent a servant to the workers to get part of the fruit from the vines; but the workmen gave him blows and sent him away with nothing.
- Darby Translation (DBY)
- And in the season he sent to the husbandmen a bondman, that they might give to him of the fruit of the vineyard; but the husbandmen, having beaten him, sent [him] away empty.
- Webster's Bible (WBS)
- And at the season he sent a servant to the husbandmen, that they should give him of the fruit of the vineyard: but the husbandmen beat him, and sent [him] away empty.
- Young's Literal Translation (YLT)
- and at the season he sent unto the husbandmen a servant, that from the fruit of the vineyard they may give to him, but the husbandmen having beat him, did send [him] away empty.
Read in context
- 8ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
- 9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
- 10ಫಲ ಕಾಲದಲ್ಲಿ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷೇ ತೊಟದ ಫಲವನ್ನು ಕೊಡುವಂತೆ ಅವನು ತನ್ನ ಆಳನ್ನು ಅವರ ಬಳಿಗೆ ಕಳುಹಿಸಿಕೊಟ್ಟನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿದಾಗಿ ಕಳುಹಿಸಿಬಿಟ್ಟರು.
- 11ಅವನು ಇನ್ನೊಬ್ಬ ಆಳನ್ನು ತಿರಿಗಿ ಕಳುಹಿಸಿದನು. ಅವರು ಅವನನ್ನು ಸಹ ಹೊಡೆದು ಅವಮಾನಪಡಿಸಿ ಬರಿದಾಗಿ ಕಳುಹಿಸಿಬಿಟ್ಟರು.
- 12ಅವನು ತಿರಿಗಿ ಮೂರನೆಯವನನ್ನು ಕಳುಹಿಸಿದನು; ಆಗ ಅವರು ಅವನನ್ನು ಸಹ ಗಾಯಪಡಿಸಿ ಹೊರಗೆ ಹಾಕಿದರು.
Cross references
- 2 Chronicles 36:15–16 2 ಪೂರ್ವಕಾಲವೃತ್ತಾಂತ 36:15–16ಅವರ ಪಿತೃಗಳ ಕರ್ತನಾದ ದೇವರು ತನ್ನ ಸೇವಕರನ್ನು ಅವನ ಬಳಿಗೆ ಕಳುಹಿಸಿದನು, ಹೊತ್ತಾರೆಯಿಂದ ಕಳುಹಿಸುತ್ತಾ ಬಂದನು, ಯಾಕಂದರೆ ಆತನು ತನ್ನ ಜನರ ಮೇಲೆಯೂ ತನ್ನ ನಿವಾಸಸ್ಥಾನದ ಮೇಲೆಯೂ ಕನಿಕರಪಟ್ಟನು. ಆದರೆ ಕರ್ತನ ಕೋಪವು ತನ್ನ ಜನರಿಗೆ ವಿರೋಧ ವಾಗಿ ಏಳುವ ವರೆಗೂ ಅಂದರೆ ಪರಿಹಾರವಾಗದಷ್ಟೂ ಅವರು ದೇವರ ಸೇವಕರನ್ನು ಅಪಹಾಸ್ಯಮಾಡಿ ಆತನ ವಾಕ್ಯಗಳನ್ನು ತಿರಸ್ಕರಿಸಿ ಆತನ ಪ್ರವಾದಿಗಳಿಗೆ ವಂಚನೆ ಮಾಡಿದರು.
- Nehemiah 9:26 ನೆಹೆಮೀಯ 9:26ಆದಾಗ್ಯೂ ಅವರು ನಿನಗೆ ಅವಿಧೇಯರಾಗಿ, ವಿರೋಧವಾಗಿ, ನಿಂತು ತಿರುಗಿಬಿದ್ದು, ನಿನ್ನ ನ್ಯಾಯ ಪ್ರಮಾಣವನ್ನು ತಮ್ಮ ಬೆನ್ನಿನ ಹಿಂದಕ್ಕೆ ಬಿಸಾಡಿ, ಅವರು ನಿನ್ನ ಕಡೆಗೆ ತಿರುಗಬೇಕೆಂದು ಸಾಕ್ಷಿ ಹೇಳಿದ ನಿನ್ನ ಪ್ರವಾದಿಗಳನ್ನು ಕೊಂದು ಬಹು ಕೋಪೋದ್ರೇಕ ಗೊಳಿಸಿದರು.
- Nehemiah 9:30 ನೆಹೆಮೀಯ 9:30ನೀನು ಅನೇಕ ವರುಷ ಅವರನ್ನು ತಾಳಿಕೊಂಡಿದ್ದು ನಿನ್ನ ಪ್ರವಾದಿಗಳ ಮುಖಾಂತರ ನಿನ್ನ ಆತ್ಮನಿಂದ ಅವರಿಗೆ ವಿರೋಧವಾಗಿ ಸಾಕ್ಷಿಹೇಳಿದಿ. ಆದರೆ ಅವರು ಕಿವಿಗೊಡದೆ ಇದ್ದದ್ದರಿಂದ ನೀನು ಅವರನ್ನು ದೇಶಗಳ ಜನರ ಕೈಯಲ್ಲಿ ಒಪ್ಪಿಸಿದಿ.
- Matthew 21:34–36 ಮತ್ತಾಯನು 21:34–36ಫಲದ ಕಾಲವು ಸಮಾಪಿಸಿದಾಗ ತನ್ನ ಫಲಗಳನ್ನು ಪಡಕೊಳ್ಳು ವದಕ್ಕೆ ತನ್ನ ಸೇವಕರನ್ನು ಒಕ್ಕಲಿಗರ ಬಳಿಗೆ ಕಳುಹಿಸಿಕೊಟ್ಟನು. ಆಗ ಒಕ್ಕಲಿಗರು ಅವನ ಸೇವಕರನ್ನು ಹಿಡಿದು ಒಬ್ಬನನ್ನು ಹೊಡೆದು ಇನ್ನೊಬ್ಬ ನನ್ನು ಕೊಂದು ಹಾಕಿದರು. ಮತ್ತೊಬ್ಬನ ಮೇಲೆ ಕಲ್ಲೆಸೆದರು. ಅವನು ತಿರಿಗಿ ಮೊದಲನೆಯವರಿಗಿಂತ ಹೆಚ್ಚು ಸೇವಕರನ್ನು ಕಳುಹಿಸಿಕೊಟ್ಟನು; ಅವರು ಅದೇ ರೀತಿಯಲ್ಲಿ ಅವರಿಗೂ ಮಾಡಿದರು.
- 2 Kings 17:13 2 ಅರಸುಗಳು 17:13ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ, ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ನ್ಯಾಯಪ್ರಮಾಣದ ಪ್ರಕಾರ ನನ್ನ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ಕೈಕೊಳ್ಳಿರೆಂದು ಕರ್ತನು ಎಲ್ಲಾ ಪ್ರವಾ ದಿಗಳ ಮುಖಾಂತರವಾಗಿಯೂ ಎಲ್ಲಾ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ ಯೆಹೂ ದಕ್ಕೂ ಸಾಕ್ಷಿ ಹೇಳಿದನು.
- John 15:16 ಯೋಹಾನನು 15:16ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
- Zechariah 7:9–13 ಜೆಕರ್ಯ 7:9–13ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ; ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು. ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು. ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು. ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- Luke 11:47–50 ಲೂಕನು 11:47–50ನಿಮಗೆ ಅಯ್ಯೋ! ಯಾಕಂದರೆ ನಿಮ್ಮ ತಂದೆಗಳು ಪ್ರವಾದಿಗಳನ್ನು ಕೊಂದರು. ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಇದರಿಂದ ನಿಜವಾ ಗಿಯೂ ನಿಮ್ಮ ತಂದೆಗಳ ಕೃತ್ಯಗಳನ್ನು ನೀವು ಒಪ್ಪಿ ಕೊಳ್ಳುವಂತೆ ಸಾಕ್ಷೀಕರಿಸುತ್ತೀರಿ; ಯಾಕಂದರೆ ಅವರು ನಿಜವಾಗಿಯೂ ಅವರನ್ನು ಕೊಂದರು; ನೀವು ಅವರ ಸಮಾಧಿಗಳನ್ನು ಕಟ್ಟುತ್ತೀರಿ. ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು.
- Jeremiah 25:3–7 ಯೆರೆಮೀಯ 25:3–7ಯೆಹೂದದ ಅರಸನಾದ ಅಮ್ಮೋನನ ಮಗನಾದ ಯೋಷೀಯನ ಹದಿಮೂರನೇ ವರುಷ ಮೊದಲ್ಗೊಂಡು ಇಂದಿನ ವರೆಗೂ ಈ ಇಪ್ಪತ್ತು ಮೂರು ವರುಷ ಕರ್ತನ ವಾಕ್ಯವು ನನಗೆ ಉಂಟಾಗಿ ನಾನು ಅದನ್ನು ನಿಮಗೆ ಹೇಳಿದ್ದೇನೆ, ಬೆಳಿಗ್ಗೆ ಎದ್ದು ಹೇಳಿದ್ದೇನೆ; ಆದರೆ ನೀವು ಕೇಳಲಿಲ್ಲ. ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ. ಅವರು ಹೇಳಿದ್ದೇ ನಂದರೆ--ನಿಮ್ಮ ನಿಮ್ಮ ಕೆಟ್ಟ ಮಾರ್ಗವನ್ನು ನಿಮ್ಮ ಕೆಟ್ಟ ದೃಶ್ಯಗಳ ಕೆಟ್ಟತನವನ್ನೂ ಬಿಟ್ಟು ಮತ್ತೆ ತಿರುಗಿಕೊಳ್ಳಿರಿ. ಆಗ ಕರ್ತನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಿರಿ. ಬೇರೆ ದೇವರುಗಳನ್ನು ಸೇವಿಸುವದಕ್ಕೂ ಆರಾಧಿಸುವದಕ್ಕೂ ಹಿಂಬಾಲಿಸಬೇಡಿರಿ; ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನು ಎಬ್ಬಿಸಬೇಡಿರಿ; ಆಗ ನಿಮಗೆ ಯಾವ ಕೇಡೂ ಮಾಡೆನು. ಆದಾಗ್ಯೂ ನೀವು ನನಗೆ ಕಿವಿಗೊಡದೆ ನಿಮಗೆ ಕೇಡು ಬರುವ ಹಾಗೆ ನಿಮ್ಮ ಕೈ ಕೆಲಸಗಳಿಂದ ನನಗೆ ಕೋಪವನ್ನೆಬ್ಬಿಸಿದ್ದೀರಿ ಎಂದು ಕರ್ತನು ಅನ್ನುತ್ತಾನೆ.
- 2 Chronicles 24:19–21 2 ಪೂರ್ವಕಾಲವೃತ್ತಾಂತ 24:19–21ಆದಾಗ್ಯೂ ಕರ್ತನು ತನ್ನ ಕಡೆಗೆ ಅವರನ್ನು ತಿರುಗಿಸುವದಕ್ಕೆ ಪ್ರವಾದಿಗಳನ್ನು ಅವರ ಬಳಿಗೆ ಕಳುಹಿಸಿದನು; ಇವರು ಅವರಿಗೆ ಸಾಕ್ಷಿಯಾಗಿ ಹೇಳಿದರು; ಆದರೆ ಅವರು ಕಿವಿಗೊಡದೆ ಹೋದರು. ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು. ಆದದರಿಂದ ಅವರು ಅವನಿಗೆ ವಿರೋಧವಾಗಿ ಒಳಸಂಚು ಮಾಡಿ ಕರ್ತನ ಆಲಯದ ಅಂಗಳದಲ್ಲಿ ಅರಸನ ಅಪ್ಪಣೆಯಂತೆ ಅವನನ್ನು ಕಲ್ಲೆಸೆದು ಕೊಂದರು.
- Psalm 1:3 ಕೀರ್ತನೆಗಳು 1:3ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
- Jeremiah 44:4–5 ಯೆರೆಮೀಯ 44:4–5ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು. ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.