Luke · chapter 20 · verse 22
Luke 20:22 in Kannada
ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
Aadare kaisaranige kappavannu sallisuvadu nyaayavo athavaa allavo endu kelidaru.
Luke 20:22 in English
- King James Version (KJV)
- Is it lawful for us to give tribute unto Cæsar, or no?
- World English Bible (WEB)
- Is it lawful for us to pay taxes to Caesar, or not?”
- American Standard Version (ASV)
- Is it lawful for us to give tribute unto Cæsar, or not?
- Bible in Basic English (BBE)
- Is it right for us to make payment of taxes to Caesar or not?
- Darby Translation (DBY)
- Is it lawful for us to give tribute to Caesar, or not?
- Webster's Bible (WBS)
- Is it lawful for us to give tribute to Cesar, or not?
- Young's Literal Translation (YLT)
- Is it lawful to us to give tribute to Caesar or not?'
Read in context
- 20ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.
- 21ಆಗ ಅವರು ಆತನಿಗೆ--ಗುರುವೇ, ನೀನು ಮುಖದಾಕ್ಷಿಣ್ಯವಿಲ್ಲದೆ ಸರಿಯಾಗಿ ಮಾತನಾಡಿ ಬೋಧಿ ಸುತ್ತೀ; ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸು ವವನಾಗಿದ್ದೀಯೆಂದು ನಾವು ಬಲ್ಲೆವು.
- 22ಆದರೆ ಕೈಸರನಿಗೆ ಕಪ್ಪವನ್ನು ಸಲ್ಲಿಸುವದು ನ್ಯಾಯವೋ ಅಥವಾ ಅಲ್ಲವೋ ಎಂದು ಕೇಳಿದರು.
- 23ಆದರೆ ಆತನು ಅವರ ಕುಯುಕ್ತಿಯನ್ನು ತಿಳಿದು ಅವರಿಗೆ--ನನ್ನನ್ನು ಯಾಕೆ ಶೋಧಿಸುತ್ತೀರಿ?
- 24ನನಗೆ ಒಂದು ನಾಣ್ಯವನ್ನು ತೋರಿಸಿರಿ. ಇದಕ್ಕೆ ಯಾವನ ರೂಪವೂ ಮೇಲ್ಬರಹವೂ ಇದೆ ಎಂದು ಅವರನ್ನು ಕೇಳಲು ಅವರು ಪ್ರತ್ಯುತ್ತರವಾಗಿ--ಕೈಸರನದು ಅಂದರು.
Cross references
- Deuteronomy 17:15 ಧರ್ಮೋಪದೇಶಕಾಂಡ 17:15ಹೇಗಾ ದರೂ ನಿನ್ನ ದೇವರಾದ ಕರ್ತನು ಆದುಕೊಳ್ಳು ವವನನ್ನು ನಿನಗೆ ಅರಸನನ್ನಾಗಿ ಇಟ್ಟು ಕೊಳ್ಳಬೇಕು; ನಿನ್ನ ಸಹೋದರರಲ್ಲಿಂದ ಒಬ್ಬನನ್ನು ನಿನಗೆ ಅರಸನ ನ್ನಾಗಿ ಇಟ್ಟುಕೊಳ್ಳಬೇಕು; ನಿನ್ನ ಸಹೋದರನಲ್ಲದ ಅನ್ಯನಾದ ಮನುಷ್ಯನನ್ನು ನಿನ್ನ ಮೇಲೆ ಇಟ್ಟು ಕೊಳ್ಳಬಾರದು.
- Nehemiah 9:37 ನೆಹೆಮೀಯ 9:37ನಮ್ಮ, ಪಾಪಗಳಿಗೋಸ್ಕರ ನೀನು ನಮ್ಮ ಮೇಲೆ ಇಟ್ಟ ಅರಸುಗಳಿಗೆ ಅದರ ಹುಟ್ಟುವಳಿ ಬಹಳ ಹೋಗುತ್ತದೆ. ಇದಲ್ಲದೆ ಅವರು ತಮ್ಮ ಇಚ್ಛೆಯ ಪ್ರಕಾರ ನಮ್ಮ ಶರೀರಗಳ ಮೇಲೆಯೂ ನಮ್ಮ ಪಶುಗಳ ಮೇಲೆಯೂ ಆಳುತ್ತಾರೆ; ನಾವು ಬಹು ಇಕ್ಕಟ್ಟಿನಲ್ಲಿದ್ದೇವೆ.ಇದೆಲ್ಲಾದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ; ನಮ್ಮ ಪ್ರಧಾನರೂ ಲೇವಿಯರೂ ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ ಅಂದನು.
- Acts 5:37 ಅಪೊಸ್ತಲರ ಕೃತ್ಯಗಳು 5:37ಈ ಮನುಷ್ಯನ ತರುವಾಯ ಖಾನೇಷುಮಾರಿಯ ದಿನ ಗಳಲ್ಲಿ ಗಲಿಲಾಯದ ಯೂದನು ಎದ್ದು ತನ್ನನ್ನು ಹಿಂಬಾಲಿಸುವಂತೆ ಅನೇಕ ಜನರನ್ನು ಸೆಳೆದನು. ಆದರೆ ಅವನು ಸಹ ನಾಶವಾದನು. ಅವನಿಗೆ ವಿಧೇಯರಾದ ವರೆಲ್ಲರೂ ಚದರಿಹೋದರು ಎಂದು ಹೇಳಿದನು.
- Ezra 4:19–22 ಎಜ್ರನು 4:19–22ಆಗ ನಾನು ಆಜ್ಞಾಪಿಸಿದ್ದರಿಂದ ಶೋಧಿಸಿ ನೋಡು ವಾಗ ಆ ಪಟ್ಟಣವು ಪೂರ್ವ ಕಾಲದಿಂದ ಅರಸುಗಳಿಗೆ ವಿರೋಧವಾಗಿ ತಿರುಗಿ ಬಿದ್ದಿತ್ತು; ಅದರಲ್ಲಿ ಕಲಹವೂ ದುರಾಲೋಚನೆಯೂ ಮಾಡಲ್ಪಟ್ಟಿತು; ನದಿಯ ಆಚೆಯಲ್ಲಿರುವ ಎಲ್ಲಾ ಸ್ಥಳಗಳ ಮೇಲೆ ಆಳುತ್ತಾ ಇದ್ದ ಯೆರೂಸಲೇಮಿನ ಪರಾಕ್ರಮಶಾಲಿಗಳಾದ ಅರಸು ಗಳು ಇದ್ದರು; ಸುಂಕವೂ ಕಪ್ಪವೂ ತೆರಿಗೆಯೂ ಅವ ರಿಗೆ ಕೊಡಲ್ಪಟ್ಟವು ಎಂದು ಕಾಣಿಸಿತು. ಆದಕಾರಣ ಮತ್ತೊಂದು ಆಜ್ಞೆಯು ನನ್ನಿಂದ ಕೊಡಲ್ಪಡುವ ಮಟ್ಟಿಗೂ ಆ ಪಟ್ಟಣವನ್ನು ಕಟ್ಟದ ಹಾಗೆ ಆ ಮನುಷ್ಯ ರನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿರಿ. ನೀವು ಇದ ರಲ್ಲಿ ತಪ್ಪು ಮಾಡದ ಹಾಗೆ ಜಾಗ್ರತೆಯಾಗಿರ್ರಿ; ಅರಸು ಗಳಿಗೆ ಕೇಡೂ ನಷ್ಟವೂ ಸಂಭವಿಸುವದು ಯಾಕೆ ಎಂದು ಬರೆದನು.
- Matthew 22:17–21 ಮತ್ತಾಯನು 22:17–21ಆದದರಿಂದ-- ಕೈಸರನಿಗೆ ಕಪ್ಪವನ್ನು ಕೊಡುವದು ನ್ಯಾಯವೋ ನ್ಯಾಯವಲ್ಲವೋ? ನಿನಗೆ ಹೇಗೆ ತೋರುತ್ತದೆ? ನಮಗೆ ಹೇಳು ಅಂದರು. ಯೇಸು ಅವರ ಕೆಟ್ಟತನವನ್ನು ತಿಳಿದು ಕೊಂಡವನಾಗಿ--ಕಪಟಿಗಳೇ, ನೀವು ನನ್ನನ್ನು ಯಾಕೆ ಶೋಧಿಸುತ್ತೀರಿ? ತೆರಿಗೆಯ ನಾಣ್ಯವನ್ನು ನನಗೆ ತೋರಿಸಿರಿ ಅಂದನು. ಆಗ ಅವರು ಒಂದು ಪಾವಲಿ ಯನ್ನು ತಂದುಕೊಟ್ಟರು. ಆತನು ಅವರಿಗೆ--ಈ ರೂಪವೂ ಮೇಲ್ಬರಹವೂ ಯಾರದು ಎಂದು ಕೇಳಿ ದನು. ಅದಕ್ಕೆ ಅವರು ಆತನಿಗೆ--ಕೈಸರನದು ಅಂದರು. ಆಗ ಆತನು ಅವರಿಗೆ-ಕೈಸರನದವುಗಳನ್ನು ಕೈಸರನಿಗೆ ಕೊಡಿರಿ; ದೇವರವುಗಳನ್ನು ದೇವರಿಗೆ ಕೊಡಿರಿ ಅಂದನು.
- Mark 12:14–17 ಮಾರ್ಕನು 12:14–17ಅವರು ಬಂದು ಆತನಿಗೆ--ಬೋಧಕನೇ, ನೀನು ಸತ್ಯವಂತನೂ ಯಾವ ಮನುಷ್ಯನನ್ನು ಲಕ್ಷಿಸದವನೂ ಎಂದು ನಮಗೆ ತಿಳಿದದೆ; ಯಾಕಂದರೆ ನೀನು ಮನುಷ್ಯರ ಮುಖದಾಕ್ಷಿಣ್ಯ ಮಾಡದೆ ದೇವರ ಮಾರ್ಗವನ್ನು ಸತ್ಯದಲ್ಲಿ ಬೋಧಿಸುತ್ತೀ; ಕೈಸರನಿಗೆ ಕಪ್ಪಕೊಡುವದು ನ್ಯಾಯವೋ, ನ್ಯಾಯವಲ್ಲವೋ? ನಾವು ಕೊಡಬೇಕೋ ಇಲ್ಲವೆ ಕೊಡಬಾರದೋ ಎಂದು ಕೇಳಿದರು. ಆದರೆ ಆತನು ಅವರ ಕಪಟವನ್ನು ತಿಳಿದು ಅವರಿಗೆ--ನೀವು ನನ್ನನ್ನು ಯಾಕೆ ಶೋಧಿ ಸುತ್ತೀರಿ? ಒಂದು ನಾಣ್ಯವನ್ನು ತಂದು ನನಗೆ ತೋರಿಸಿರಿ ಎಂದು ಹೇಳಿದನು. ಅವರು ಅದನ್ನು ತಂದಾಗ ಆತನು ಅವರಿಗೆ--ಇದರ ರೂಪವು ಮತ್ತು ಮೇಲ್ಬರಹವು ಯಾರದು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ಕೈಸರನದು ಎಂದು ಉತ್ತರ ಕೊಟ್ಟರು. ಆಗ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಕೈಸರನಿಗೆ ಸಂಬಂಧಪಟ್ಟವುಗಳನ್ನು ಕೈಸರನಿಗೂ ದೇವರಿಗೆ ಸಂಬಂಧಪಟ್ಟವುಗಳನ್ನು ದೇವರಿಗೂ ಸಲ್ಲಿಸಿರಿ ಎಂದು ಹೇಳಿದನು. ಇದಕ್ಕೆ ಅವರು ಆತನ ವಿಷಯದಲ್ಲಿ ಆಶ್ಚರ್ಯಪಟ್ಟರು.
- Ezra 4:13 ಎಜ್ರನು 4:13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.
- Ezra 9:7 ಎಜ್ರನು 9:7ನಮ್ಮ ತಂದೆಗಳ ದಿವಸಗಳು ಮೊದಲುಗೊ ಂಡು ಈ ದಿವಸದ ವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಈ ದೇಶಗಳ ಅರಸುಗಳ ಕೈಗೆ ಒಪ್ಪಿಸಲ್ಪಟ್ಟು ನಮ್ಮ ಅಕ್ರಮಗಳಿಗೋಸ್ಕರ ನಾವೂ ನಮ್ಮ ಅರಸುಗಳೂ ನಮ್ಮ ಯಾಜಕರೂ ಕತ್ತಿಗೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ
- Nehemiah 5:4 ನೆಹೆಮೀಯ 5:4ಇನ್ನು ಕೆಲವರು--ಅರಸನಿಗೆ ಕಪ್ಪವನ್ನು ಕೊಡಲು ನಾವು ನಮ್ಮ ಹೊಲಗಳ ಮೇಲೆಯೂ ನಮ್ಮ ದ್ರಾಕ್ಷೇ ತೋಟಗಳ ಮೇಲೆಯೂ ಸಾಲವನ್ನು ತೆಗೆದು ಕೊಂಡಿದ್ದೇವೆ.
- Matthew 17:25 ಮತ್ತಾಯನು 17:25ಅವನು ಮನೆ ಯೊಳಕ್ಕೆ ಬಂದಾಗ ಯೇಸು ಮುಂದಾಗಿ ಅವನಿಗೆ--ಸೀಮೋನನೇ, ನಿನಗೆ ಹೇಗೆ ತೋರುತ್ತದೆ? ಭೂಲೋ ಕದ ರಾಜರು ಯಾರಿಂದ ಕಪ್ಪವನ್ನು ಇಲ್ಲವೆ ತೆರಿಗೆ ಯನ್ನು ತಕ್ಕೊಳ್ಳುತ್ತಾರೆ? ತಮ್ಮ ಮಕ್ಕಳಿಂದಲೋ ಇಲ್ಲವೆ ಅನ್ಯರಿಂದಲೋ ಎಂದು ಕೇಳಿದನು.