Luke · chapter 20 · verse 38
Luke 20:38 in Kannada
ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
Yaakandare aatanu jeevisuvavarige devaraagiddaane, sattavari galla; yaakandare ellaroo aatanigaagi jeevisuttaare andanu.
Luke 20:38 in English
- King James Version (KJV)
- For he is not a God of the dead, but of the living: for all live unto him.
- World English Bible (WEB)
- Now he is not the God of the dead, but of the living, for all are alive to him.”
- American Standard Version (ASV)
- Now he is not the God of the dead, but of the living: for all live unto him.
- Bible in Basic English (BBE)
- Now he is not the God of the dead but of the living: for all men are living to him.
- Darby Translation (DBY)
- but he is not God of [the] dead but of [the] living; for all live for him.
- Webster's Bible (WBS)
- For he is not a God of the dead, but of the living: for all live to him.
- Young's Literal Translation (YLT)
- and He is not a God of dead men, but of living, for all live to Him.'
Read in context
- 36ಇದಲ್ಲದೆ ಅವರು ಇನ್ನೆಂದಿಗೂ ಸಾಯುವದಿಲ್ಲ; ಯಾಕಂದರೆ ಅವರು ದೂತರಿಗೆ ಸರಿಸಮಾನರೂ ಪುನರುತ್ಥಾನದ ಮಕ್ಕಳೂ ಆಗಿರುವದ ರಿಂದ ಅವರು ದೇವರ ಮಕ್ಕಳಾಗಿದ್ದಾರೆ.
- 37ಮೋಶೆಯು ಸಹ ಪೊದೆಯ ಹತ್ತಿರ ಕರ್ತನು ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಎಂದು ಕರೆದಾಗ ಸತ್ತವರು ಎಬ್ಬಿಸಲ್ಪಡು ತ್ತಾರೆಂಬದನ್ನು ವ್ಯಕ್ತಪಡಿಸಿದನು.
- 38ಯಾಕಂದರೆ ಆತನು ಜೀವಿಸುವವರಿಗೇ ದೇವರಾಗಿದ್ದಾನೆ, ಸತ್ತವರಿ ಗಲ್ಲ; ಯಾಕಂದರೆ ಎಲ್ಲರೂ ಆತನಿಗಾಗಿ ಜೀವಿಸುತ್ತಾರೆ ಅಂದನು.
- 39ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
- 40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
Cross references
- John 11:25–26 ಯೋಹಾನನು 11:25–26ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು; ಯಾವನಾದರೂ ಬದುಕುತ್ತಾ ನನ್ನಲ್ಲಿ ನಂಬಿಕೆಯಿಡುವದಾದರೆ ಅವನು ಎಂದಿಗೂ ಸಾಯುವ ದಿಲ್ಲ. ಇದನ್ನು ನೀನು ನಂಬುತ್ತೀಯೋ ಎಂದು ಕೇಳಿದ್ದಕ್ಕೆ
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- Romans 6:10–11 ರೋಮಾಪುರದವರಿಗೆ 6:10–11ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ. ಅದೇ ಪ್ರಕಾರ ನೀವು ಸಹ ಪಾಪದ ಪಾಲಿಗೆ ನಿಜವಾಗಿ ಸತ್ತವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರಿಗಾಗಿ ಜಿವಿಸುವವರೂ ಎಂದು ಎಣಿಸಿಕೊಳ್ಳಿರಿ.
- Romans 14:7–9 ರೋಮಾಪುರದವರಿಗೆ 14:7–9ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ. ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತ ನವರೇ. ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- 2 Corinthians 6:16 2 ಕೊರಿಂಥದವರಿಗೆ 6:16ವಿಗ್ರಹಗಳ ಕೂಡ ದೇವರ ಮಂದಿರಕ್ಕೆ ಒಪ್ಪಿಗೆ ಏನು? ಯಾಕಂದರೆ ನೀವು ಜೀವವುಳ್ಳ ದೇವರ ಮಂದಿರವಾಗಿದ್ದೀರಲ್ಲಾ, ಇದರ ಸಂಬಂಧವಾಗಿ ದೇವರು--ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.
- Psalm 145:1–2 ಕೀರ್ತನೆಗಳು 145:1–2ಓ ಅರಸನಾದ ನನ್ನ ದೇವರೇ, ನಿನ್ನನ್ನು ಘನಪಡಿಸುವೆನು; ನಿನ್ನ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು. ಪ್ರತಿದಿನ ನಿನ್ನನ್ನು ಸ್ತುತಿಸುವೆನು; ಎಂದೆಂದಿಗೂ ನಿನ್ನ ಹೆಸರನ್ನು ಸ್ತುತಿಸುವೆನು.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- Revelation 7:15–17 ಪ್ರಕಟನೆ 7:15–17ಈ ಕಾರಣದಿಂದ ಇವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆ ಮಾಡುವವರಾ ಗಿದ್ದಾರೆ; ಸಿಂಹಾಸನದ ಮೇಲೆ ಕೂತಿರುವಾತನು ಅವರ ಮಧ್ಯದಲ್ಲಿ ವಾಸಿಸುವನು. ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Romans 6:22–23 ರೋಮಾಪುರದವರಿಗೆ 6:22–23ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು. ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
- Revelation 22:1 ಪ್ರಕಟನೆ 22:1ಆಮೇಲೆ ಅವನು ಸ್ಫಟಿಕದಂತೆ ಸ್ವಚ್ಛವಾದ ಮತ್ತು ಶುದ್ಧವಾದ ಜೀವಜಲದ ನದಿ ಯನ್ನು ನನಗೆ ತೋರಿಸಿದನು; ಅದು ದೇವರ ಮತ್ತು ಕುರಿಮರಿಯಾದಾತನ ಸಿಂಹಾಸನದಿಂದ ಹೊರಡುವ ದಾಗಿತ್ತು.
- Psalm 16:5–11 ಕೀರ್ತನೆಗಳು 16:5–11ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ. ರಮ್ಯ ಸ್ಥಳಗಳಲ್ಲಿ ನನಗೆ ಪಾಲು ಸಿಕ್ಕಿತು, ಹೌದು, ರಮಣೀಯವಾದ ಬಾಧ್ಯತೆ ನನಗೆ ಅದೆ. ನನಗೆ ಆಲೋಚನೆ ಹೇಳಿದ ಕರ್ತನನ್ನು ನಾನು ಸ್ತುತಿಸುವೆನು, ರಾತ್ರಿಯಲ್ಲಿಯೂ ನನ್ನ ಅಂತರಿಂದ್ರಿ ಯಗಳು ನನಗೆ ಬೋಧಿಸುತ್ತವೆ. ನಾನು ಕರ್ತನನ್ನು ಯಾವಾಗಲೂ ನನ್ನ ಮುಂದೆ ಇಟ್ಟುಕೊಂಡಿದ್ದೇನೆ. ಆತನು ನನ್ನ ಬಲಗಡೆಯಲ್ಲಿ ಇರುವದರಿಂದ ನಾನು ಕದಲೆನು. ಆದದರಿಂದ ನನ್ನ ಹೃದಯವು ಸಂತೋಷಿಸಿ ನನ್ನ ಹೆಮ್ಮೆಯು ಉಲ್ಲಾಸಪಡುತ್ತದೆ; ನನ್ನ ಶರೀರವು ಸಹ ನಿರೀಕ್ಷೆಯಿಂದ ವಿಶ್ರಾಂತಿಸುವದು. ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ. ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.