Luke · chapter 20 · verse 4
Luke 20:4 in Kannada
ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
Yohaanana baaptismavu paraloka dindalo illave manushyarindalo endu kelidanu.
Luke 20:4 in English
- King James Version (KJV)
- The baptism of John, was it from heaven, or of men?
- World English Bible (WEB)
- the baptism of John, was it from heaven, or from men?”
- American Standard Version (ASV)
- The baptism of John, was it from heaven, or from men?
- Bible in Basic English (BBE)
- The baptism of John, was it from heaven or of men?
- Darby Translation (DBY)
- The baptism of John, was it of heaven or of men?
- Webster's Bible (WBS)
- The baptism of John, was it from heaven, or from men?
- Young's Literal Translation (YLT)
- the baptism of John, from heaven was it, or from men?'
Read in context
- 2ಆತನೊಂದಿಗೆ ಮಾತನಾ ಡುತ್ತಾ--ನೀನು ಇವುಗಳನ್ನು ಯಾವ ಅಧಿಕಾರದಿಂದ ಮಾಡುತ್ತೀ? ಇಲ್ಲವೆ ನಿನಗೆ ಈ ಅಧಿಕಾರವನ್ನು ಕೊಟ್ಟವನು ಯಾರು? ನಮಗೆ ಹೇಳು ಅಂದರು.
- 3ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವರಿಗೆ--ನಾನು ಸಹ ನಿಮ್ಮನ್ನು ಒಂದು ವಿಷಯ ಕೇಳುತ್ತೇನೆ, ನನಗೆ ಉತ್ತರಕೊಡಿರಿ
- 4ಯೋಹಾನನ ಬಾಪ್ತಿಸ್ಮವು ಪರಲೋಕ ದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದನು.
- 5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
- 6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
Cross references
- Luke 15:18 ಲೂಕನು 15:18ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ--ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪಮಾಡಿದ್ದೇನೆ;
- Matthew 11:7–19 ಮತ್ತಾಯನು 11:7–19ಅವರು ಹೊರಟುಹೋಗುತ್ತಿದ್ದಾಗ ಯೇಸು ಯೋಹಾನನ ಕುರಿತಾಗಿ ಜನಸಮೂಹಗಳೊಂ ದಿಗೆ -- ಏನು ನೋಡುವದಕ್ಕಾಗಿ ನೀವು ಅಡವಿಗೆ ಹೋದಿರಿ? ಗಾಳಿಯಿಂದ ಅಲ್ಲಾಡುವದಂಟನ್ನೋ? ಆದರೆ ನೀವು ಏನು ನೊಡುವದಕ್ಕಾಗಿ ಹೋದಿರಿ? ನಯವಾದ ವಸ್ತ್ರಗಳನ್ನು ಧರಿಸಿಕೊಂಡ ಮನುಷ್ಯ ನನ್ನೋ? ಇಗೋ, ನಯವಾದ ಬಟ್ಟೆಗಳನ್ನು ಧರಿಸಿಕೊ ಳ್ಳುವವರು ಅರಮನೆಗಳಲ್ಲಿ ಇರುತ್ತಾರೆ. ಆದರೆ ನೀವು ಏನು ನೋಡುವದಕ್ಕಾಗಿ ಹೋದಿರಿ? ಪ್ರವಾದಿ ಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನು ಎಂದು ನಾನು ನಿಮಗೆ ಹೇಳುತ್ತೇನೆ. ಯಾಕಂ ದರೆ--ಇಗೋ, ನಿನ್ನ ಮಾರ್ಗವನ್ನು ನಿನ್ನ ಮುಂದೆ ಸಿದ್ಧಪಡಿಸುವ ನನ್ನ ದೂತನನ್ನು ನಾನು ನಿನ್ನ ಮುಂದೆ ಕಳುಹಿಸುತ್ತೇನೆಂದು ಯಾವನ ವಿಷಯವಾಗಿ ಬರೆದಿ ದೆಯೋ ಅವನೇ ಇವನು. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಸ್ತ್ರೀಯರಲ್ಲಿ ಹುಟ್ಟಿದವರೊ ಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡವನು ಏಳಲಿಲ್ಲ; ಆದಾಗ್ಯೂ ಪರಲೋಕ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡ ವನಾಗಿದ್ದಾನೆ. ಇದಲ್ಲದೆ ಬಾಪ್ತಿಸ್ಮ ಮಾಡಿಸುವ ಯೋಹಾನನ ದಿನಗಳಿಂದ ಇದುವರೆಗೆ ಪರಲೋಕ ರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿದೆ; ಮತ್ತು ಬಲಾತ್ಕಾರಿಗಳು ಅದನ್ನು ಒತ್ತಾಯದಿಂದ ತೆಗೆದು ಕೊಳ್ಳುತ್ತಾರೆ. ಯಾಕಂದರೆ ಎಲ್ಲಾ ಪ್ರವಾದಿಗಳೂ ನ್ಯಾಯಪ್ರಮಾಣವೂ ಯೋಹಾನನ ವರೆಗೆ ಪ್ರವಾದಿ ಸಿದ್ದುಂಟು. ನೀವು ಇದನ್ನು ಅಂಗೀಕರಿಸುವದಕ್ಕೆ ಮನಸ್ಸಿದ್ದರೆ ಬರಬೇಕಾಗಿದ್ದ ಎಲೀಯನು ಇವನೇ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ. ಆದರೆ ಈ ಸಂತತಿಯನ್ನು ನಾನು ಯಾವದಕ್ಕೆ ಹೋಲಿಸಲಿ? ಮಕ್ಕಳು ಪೇಟೆಗಳಲ್ಲಿ ಕೂತುಕೊಂಡು ತಮ್ಮ ಸಂಗಡಿ ಗರನ್ನು ಕರೆಯುತ್ತಾ-- ನಾವು ನಿಮಗೋಸ್ಕರ ಕೊಳಲೂದಿದೆವು, ಆದರೆ ನೀವು ಕುಣಿಯಲಿಲ್ಲ; ನಾವು ನಿಮಗೋಸ್ಕರ ಶೋಕಿಸಿದೆವು, ಆದರೆ ನೀವು ಗೋಳಾಡಲಿಲ್ಲ ಎಂದು ಹೇಳುವವರಿಗೆ ಇದು ಹೋಲಿಕೆಯಾಗಿದೆ. ಯಾಕಂದರೆ ಯೋಹಾನನು ತಿನ್ನದೆಯೂ ಕುಡಿಯದೆಯೂ ಬಂದನು. ಅದಕ್ಕೆ ಅವರು--ಅವನಿಗೆ ದೆವ್ವ ಹಿಡಿದಿದೆ ಅನ್ನುತ್ತಾರೆ. ಮನುಷ್ಯಕುಮಾರನು ತಿನ್ನುವವನಾಗಿಯೂ ಕುಡಿಯುವವನಾಗಿಯೂ ಬಂದನು. ಅದಕ್ಕೆ ಅವರು--ಇಗೋ, ಈ ಮನುಷ್ಯನು ಹೊಟ್ಟೆ ಬಾಕನೂ ಮದ್ಯಪಾನ ಮಾಡುವವನೂ ಸುಂಕದವರ ಪಾಪಿಗಳ ಸ್ನೇಹಿತನೂ ಎಂದು ಅನ್ನುತ್ತಾರೆ. ಆದರೆ ಜ್ಞಾನವು ನೀತಿಯುಳ್ಳದ್ದೆಂದು ತನ್ನ ಮಕ್ಕಳಿಂದ ನಿರ್ಣಯಿ ಸಲ
- Daniel 4:25–26 ದಾನಿಯೇಲನು 4:25–26ಅವರು ನಿನ್ನನ್ನು ಮನುಷ್ಯರೊಳಗಿಂದ ತಳ್ಳಿ ಬಿಡುವರು; ನಿನ್ನ ನಿವಾಸವು ಕಾಡುಮೃಗಗಳ ಸಂಗಡ ಇರುವದು; ನಿನಗೆ ಎತ್ತುಗಳ ಸಂಗಡ ಹುಲ್ಲನ್ನು ಮೇಯಿಸುವರು. ಆಕಾಶದ ಮಂಜಿನಿಂದ ನಿನ್ನನ್ನು ತೇವ ಮಾಡುವರು. ಮಹೋನ್ನತನು ಮನುಷ್ಯರ ರಾಜ್ಯವನ್ನು ಆಳುವನೆಂದೂ ತನ್ನ ಮನಸ್ಸಿಗೆ ಸರಿಬಂದ ವರಿಗೆ ಅದನ್ನು ಕೊಡುತ್ತಾನೆಂದೂ ನೀನು ತಿಳಿಯುವ ವರೆಗೂ ಆ ಏಳು ಕಾಲಗಳು ಕಳೆದು ಹೋಗುವವು. ಆ ಮರದ ಬೇರಿನ ಮೋಟನ್ನು ಉಳಿಸಬೇಕೆಂದು ಅವರು ಆಜ್ಞೆ ಮಾಡಿದ್ದರಲ್ಲಿ ಅಂದರೆ ಪರಲೋಕವು ಆಳುತ್ತದೆಂದು ನೀನು ತಿಳಿದುಕೊಂಡ ಮೇಲೆ ನಿನ್ನ ರಾಜ್ಯವು ನಿನಗೆ ಸ್ಥಿರವಾಗುವದು.
- Matthew 21:25–32 ಮತ್ತಾಯನು 21:25–32ಪರ ಲೋಕದಿಂದಲೋ ಇಲ್ಲವೆ ಮನುಷ್ಯರಿಂದಲೋ ಎಂದು ಕೇಳಿದಾಗ ಅವರು ತಮ್ಮತಮ್ಮೊಳಗೆ ತರ್ಕಿ ಸುತ್ತಾ--ಪರಲೋಕದಿಂದ ಎಂದು ಹೇಳಿದರೆ ಆತನು ನಮಗೆ--ನೀವು ಅವನನ್ನು ಯಾಕೆ ನಂಬಲಿಲ್ಲ ಎಂದು ಹೇಳಾನು. ಮನುಷ್ಯರಿಂದ ಎಂದು ನಾವು ಹೇಳಿ ದರೆ ಜನರಿಗೆ ಭಯಪಡುತ್ತೇವೆ; ಯಾಕಂದರೆ ಯೋಹಾನನು ಪ್ರವಾದಿಯೆಂದು ಎಲ್ಲರೂ ಎಣಿಸು ತ್ತಾರೆ ಎಂದು ಅಂದುಕೊಂಡರು. ತರುವಾಯ ಅವರು ಪ್ರತ್ಯುತ್ತರವಾಗಿ ಯೇಸುವಿಗೆ--ನಾವು ಹೇಳ ಲಾರೆವು ಅಂದರು. ಅದಕ್ಕೆ ಆತನು ಅವರಿಗೆ-- ನಾನು ಸಹ ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುವದಿಲ್ಲ. ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು. ಅವನು ಪ್ರತ್ಯುತ್ತರವಾಗಿ--ನಾನು ಹೋಗುವದಿಲ್ಲ ಎಂದು ಹೇಳಿ ತರುವಾಯ ಪಶ್ಚಾ ತ್ತಾಪಪಟ್ಟು ಹೋದನು. ಆಮೇಲೆ ಅವನು ಎರಡ ನೆಯವನ ಬಳಿಗೆ ಬಂದು ಅದೇ ಪ್ರಕಾರ ಅವನಿಗೆ ಹೇಳಿದನು. ಅದಕ್ಕವನು ಪ್ರತ್ಯುತ್ತರವಾಗಿ--ಅಯ್ಯಾ, ನಾನು ಹೋಗುತ್ತೇನೆ ಎಂದು ಹೇಳಿ ಹೋಗಲಿಲ್ಲ. ಈ ಇಬ್ಬರಲ್ಲಿ ಯಾವನು ತನ್ನ ತಂದೆಯ ಇಷ್ಟದಂತೆ ಮಾಡಿದನು ಎಂದು ಕೇಳಲು ಅವರು ಆತನಿಗೆ--ಮೊದಲನೆಯವನು ಅಂದರು. ಆಗ ಯೇಸು ಅವರಿಗೆ --ಸುಂಕದವರೂ ಸೂಳೆಯರೂ ನಿಮಗಿಂತ ಮೊದಲು ದೇವರರಾಜ್ಯದೊಳಗೆ ಸೇರುವರೆಂದು ನಿಮಗೆ ನಿಜವಾಗಿ ಹೇಳುತ್ತೇನೆ. ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
- John 1:19–28 ಯೋಹಾನನು 1:19–28ನೀನು ಯಾರು ಎಂದು ಅವನನ್ನು ಕೇಳುವದ ಕ್ಕಾಗಿ ಯೆಹೂದ್ಯರು ಯಾಜಕರನ್ನೂ ಲೇವಿಯರನ್ನೂ ಯೆರೂಸಲೇಮಿನಿಂದ ಕಳುಹಿಸಿದಾಗ ಯೋಹಾನನು ಕೊಟ್ಟ ಸಾಕ್ಷಿ ಇದೇ. ಅವನು ಒಪ್ಪಿಕೊಂಡನು. ಅಲ್ಲಗಳೆಯಲಿಲ್ಲ; ಅವನು--ನಾನು ಕ್ರಿಸ್ತನಲ್ಲ ಎಂದು ಒಪ್ಪಿಕೊಂಡನು. ಅದಕ್ಕವರು--ಹಾಗಾದರೇನು? ನೀನು ಎಲೀಯನೋ ಎಂದು ಕೇಳಿದರು. ಅದಕ್ಕೆ ಅವನು--ನಾನಲ್ಲ ಅಂದನು. ಅವರು ನೀನು ಆ ಪ್ರವಾದಿಯೋ ಎಂದು ಕೇಳಿದ್ದಕ್ಕೆ ಅವನು--ಅಲ್ಲ ಎಂದು ಉತ್ತರಕೊಟ್ಟನು. ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು. ಅವನು--ಕರ್ತನ ದಾರಿಯನ್ನು ನೆಟ್ಟಗೆ ಮಾಡಿರಿ ಎಂದು ಅಡವಿ ಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂದು ಪ್ರವಾದಿ ಯಾದ ಯೆಶಾಯನು ಹೇಳಿದ ಶಬ್ದವೇ ನಾನು ಎಂದು ಉತ್ತರಕೊಟ್ಟನು. ಕಳುಹಿಸಲ್ಪಟ್ಟವರು ಫರಿಸಾಯರ ಕಡೆಯವರಾಗಿದ್ದರು. ಅವರು ಅವನಿಗೆ--ನೀನು ಆ ಕ್ರಿಸ್ತನೂ ಎಲೀಯನೂ ಇಲ್ಲವೆ ಆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು. ಯೋಹಾನನು ಅವರಿಗೆ ಪ್ರತ್ಯುತ್ತರ ವಾಗಿ--ನಾನು ನೀರಿನಿಂದ ಬಾಪ್ತಿಸ್ಮ ಮಾಡಿಸುತ್ತೇನೆ; ಆದರೆ ನೀವು ಅರಿಯದಿರುವಂಥ ಒಬ್ಬಾತನು ನಿಮ್ಮ ಮಧ್ಯದಲ್ಲಿ ನಿಂತಿದ್ದಾನೆ; ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು. ಇವುಗಳು ಯೊರ್ದನಿನ ಆಚೆ ಕಡೆಯ ಬೇಥಾಬರದಲ್ಲಿ ನಡೆದವು; ಅಲ್ಲಿ ಯೋಹಾನನು ಬಾಪ್ತಿಸ್ಮ ಮಾಡಿಸುತ್ತಿದ್ದನು.
- Matthew 17:11–12 ಮತ್ತಾಯನು 17:11–12ಯೇಸು ಪ್ರತ್ಯುತ್ತರವಾಗಿ ಅವ ರಿಗೆ -- ಎಲೀಯನು ಮೊದಲು ಬಂದು ಎಲ್ಲವುಗಳನ್ನು ತಿರಿಗಿ ಯಥಾಸ್ಥಾನ ಪಡಿಸುವದು ನಿಜವೇ; ಆದರೆ ಎಲೀಯನು ಆಗಲೇ ಬಂದನು. ಮತ್ತು ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಕುಮಾರ ನು ಸಹ ಅವರಿಂದ ಶ್ರಮೆಯನ್ನು ಅನುಭವಿಸುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- John 1:6 ಯೋಹಾನನು 1:6ದೇವರಿಂದ ಕಳುಹಿ ಸಲ್ಪಟ್ಟ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಹಾನನು.
- Luke 7:28–35 ಲೂಕನು 7:28–35ಯಾಕಂದರೆ-- ಸ್ತ್ರೀಯರಲ್ಲಿ ಹುಟ್ಟಿದವರೊಳಗೆ ಬಾಪ್ತಿಸ್ಮ ಮಾಡಿಸುವ ಯೋಹಾನನಿಗಿಂತ ದೊಡ್ಡ ಪ್ರವಾದಿಯು ಯಾವನೂ ಇಲ್ಲ; ಆದರೆ ದೇವರ ರಾಜ್ಯದಲ್ಲಿ ಅತ್ಯಲ್ಪನಾದವನು ಅವನಿಗಿಂತಲೂ ದೊಡ್ಡವನಾಗಿದ್ದಾನೆ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಅವನಿಂದ ಉಪ ದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಯೋಹಾನನ ಬಾಪ್ತಿಸ್ಮ ಮಾಡಿಸಿಕೊಂಡವರಾಗಿ ದೇವರು ನೀತಿವಂತನೆಂದು ಒಪ್ಪಿಕೊಂಡರು. ಆದರೆ ಫರಿಸಾಯರೂ ನ್ಯಾಯಶಾಸ್ತ್ರಿಗಳೂ ಅವನಿಂದ ಬಾಪ್ತಿಸ್ಮಮಾಡಿಸಿಕೊಳ್ಳದೆ ಹೋದದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು. ಕರ್ತನು--ಈ ಸಂತತಿಯವರನ್ನು ನಾನು ಯಾವದಕ್ಕೆ ಹೋಲಿಸಲಿ? ಮತ್ತು ಅವರು ಯಾವದಕ್ಕೆ ಹೋಲಿಕೆಯಾಗಿದ್ದಾರೆ? ಅವರು ಸಂತೆ ಯಲ್ಲಿ ಕೂತುಕೊಂಡು ಒಬ್ಬರನ್ನೊಬ್ಬರು ಕರೆ ಯುತ್ತಾ--ನಾವು ನಿಮಗಾಗಿ ಕೊಳಲೂದಿದೆವು, ನೀವು ಕುಣಿಯಲಿಲ್ಲ; ನಾವು ನಿಮಗಾಗಿ ಶೋಕಿಸಿದೆವು, ನೀವು ಅಳಲಿಲ್ಲ ಎಂದು ಹೇಳುವ ಮಕ್ಕಳಿಗೆ ಹೋಲಿಕೆ ಯಾಗಿದ್ದಾರೆ. ಬಾಪ್ತಿಸ್ಮ ಮಾಡಿಸುವ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ಇಲ್ಲವೆ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು; ಅದಕ್ಕೆ ನೀವು--ಅವನಲ್ಲಿ ದೆವ್ವವಿದೆ ಅನ್ನುತ್ತೀರಿ. ಮನುಷ್ಯಕುಮಾರನು ತಿನ್ನು ವವನಾಗಿಯೂ ಕುಡಿಯುವವನಾಗಿಯೂ ಬಂದನು; ಆದರೆ ನೀವು--ಇಗೋ, ಹೊಟ್ಟೇಬಾಕನು, ಕುಡು ಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು ಅನ್ನುತ್ತೀರಿ. ಆದರೆ ಜ್ಞಾನವು ತನ್ನ ಎಲ್ಲಾ ಮಕ್ಕಳಿಂದ ನೀತಿ ನಿರ್ಣಯಪಡೆಯುವದು ಅಂದನು.