Luke · chapter 20 · verse 41
Luke 20:41 in Kannada
ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
Aatanu ava rige--kristanu daaveedana maganendu avaru heluvadu hege?
Luke 20:41 in English
- King James Version (KJV)
- And he said unto them, How say they that Christ is David’s son?
- World English Bible (WEB)
- He said to them, “Why do they say that the Christ is David’s son?
- American Standard Version (ASV)
- And he said unto them, How say they that the Christ is David’s son?
- Bible in Basic English (BBE)
- And he said to them, Why do they say that the Christ is the son of David?
- Darby Translation (DBY)
- And he said to them, How do they say that the Christ is David's son,
- Webster's Bible (WBS)
- And he said to them, How say they that Christ is David's son?
- Young's Literal Translation (YLT)
- And he said unto them, 'How do they say the Christ to be son of David,
Read in context
- 39ಆಗ ಶಾಸ್ತ್ರಿಗಳಲ್ಲಿ ಕೆಲವರು ಪ್ರತ್ಯುತ್ತರ ವಾಗಿ--ಬೋಧಕನೇ, ನೀನು ಸರಿಯಾಗಿ ಹೇಳಿದ್ದೀ ಅಂದರು.
- 40ಅವರು ಆತನಿಗೆ ಯಾವ ಪ್ರಶ್ನೆಯನ್ನೂ ಕೇಳುವದಕ್ಕೆ ಧೈರ್ಯಗೊಳ್ಳಲಿಲ್ಲ.
- 41ಆತನು ಅವ ರಿಗೆ--ಕ್ರಿಸ್ತನು ದಾವೀದನ ಮಗನೆಂದು ಅವರು ಹೇಳುವದು ಹೇಗೆ?
- 42ದಾವೀದನು ತಾನೇ ಕೀರ್ತನೆ ಗಳ ಪುಸ್ತಕದಲ್ಲಿ--ಕರ್ತನು ನನ್ನ ಕರ್ತನಿಗೆ--
- 43ನಾನು ನಿನ್ನ ವೈರಿಗಳನ್ನು ನಿನ್ನ ಪಾದಗಳ ಪೀಠವಾಗಿ ಮಾಡುವ ವರೆಗೂ ನನ್ನ ಬಲಪಾರ್ಶ್ವದಲ್ಲಿ ನೀನು ಕೂತುಕೊಂಡಿರು ಎಂದು ಹೇಳಿದನು.
Cross references
- Mark 12:35–37 ಮಾರ್ಕನು 12:35–37ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ? ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ. ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
- Matthew 1:1 ಮತ್ತಾಯನು 1:1ಯೇಸು ಕ್ರಿಸ್ತನ ವಂಶಾವಳಿಯ ಪುಸ್ತಕವು; ಆತನು ದಾವೀದನ ಮಗನು, ಆತನು ಅಬ್ರ ಹಾಮನ ಮಗನು.
- Jeremiah 23:5–6 ಯೆರೆಮೀಯ 23:5–6ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು. ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.
- Isaiah 11:1–2 ಯೆಶಾಯ 11:1–2ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು. ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು;
- Matthew 22:41–45 ಮತ್ತಾಯನು 22:41–45ಫರಿಸಾಯರು ಕೂಡಿ ಬಂದಿರುವಾಗ ಯೇಸು ಅವರಿಗೆ-- ಕ್ರಿಸ್ತನ ವಿಷಯ ವಾಗಿ ನೀವು ಏನು ನೆನಸುತ್ತೀರಿ? ಆತನು ಯಾರ ಮಗನು ಎಂದು ಕೇಳಿದ್ದಕ್ಕೆ ಅವರು ಆತನಿಗೆ--ದಾವೀದನಕುಮಾರನು ಅಂದರು. ಆತನು ಅವ ರಿಗೆ--ಹಾಗಾದರೆ ದಾವೀದನು ಆತ್ಮದಲ್ಲಿ ಆತನಿಗೆ ಕರ್ತನೆಂದು ಕರೆದು--ಕರ್ತನು ನನ್ನ ಕರ್ತನಿಗೆ-- ನಾನು ನಿನ್ನ ವಿರೋಧಿಗಳನ್ನು ಪಾದಪೀಠವಾಗಿ ಮಾಡುವ ವರೆಗೆ ನನ್ನ ಬಲಗಡೆಯಲ್ಲಿ ಕೂತು ಕೊಂಡಿರು ಎಂದು ಹೇಳಿದನಲ್ಲಾ. ದಾವೀದನು ಆತನನ್ನು ಕರ್ತನೆಂದು ಕರೆಯುವದಾದರೆ ಆತನು ದಾವೀದನ ಮಗನಾಗುವದು ಹೇಗೆ ಎಂದು ಕೇಳಿದನು.ಅದಕ್ಕೆ ಯಾರೂ ಒಂದು ಮಾತನ್ನು ಸಹ ಆತನಿಗೆ ಉತ್ತರ ಕೊಡಲಾರದೆ ಹೋದರು. ಇದಲ್ಲದೆ ಆ ದಿನದಿಂದ ಯಾವ ಪ್ರಶ್ನೆಗಳನ್ನಾದರೂ ಆತನನ್ನು ಕೇಳುವದಕ್ಕೆ ಯಾರಿಗೂ ಧೈರ್ಯಬರಲಿಲ್ಲ.
- Romans 1:3–4 ರೋಮಾಪುರದವರಿಗೆ 1:3–4ಅದು ಯಾವದೆಂದರೆ, ಆತನು ಶಾರೀರಕವಾಗಿ ದಾವೀದನ ಸಂತಾನದಲ್ಲಿ ಹುಟ್ಟಿದಾತನೂ ನಮ್ಮ ಕರ್ತನೂ ಆಗಿರುವ ದೇವರಕುಮಾರನಾದ ಯೇಸು ಕ್ರಿಸ್ತನ ವಿಷಯವಾ ದದ್ದೇ; ಪರಿಶುದ್ಧ ಆತ್ಮಕ್ಕನು ಸಾರವಾಗಿ ಸತ್ತವರೊಳ ಗಿಂದ ಪುನರುತ್ಥಾನ ಹೊಂದುವದರ ಮೂಲಕ ಆತನು ದೇವಕುಮಾರನೆಂದು ಬಲದೊಂದಿಗೆ ಪ್ರಕಟಿಸಲ್ಪ ಟ್ಟನು;
- Isaiah 9:6–7 ಯೆಶಾಯ 9:6–7ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು. ಅದನ್ನು ನೇಮಿಸುವದಕ್ಕೂ ಇಂದಿನಿಂದ ಎಂದೆಂದಿಗೂ ನೀತಿ ನ್ಯಾಯಗಳೊಂದಿಗೆ ಅದನ್ನು ಸ್ಥಾಪಿಸುವದಕ್ಕೂ ದಾವೀದನ ಸಿಂಹಾಸನ ಕ್ಕಾಗಲಿ ಅವನ ರಾಜ್ಯಕ್ಕಾಗಲಿ ಅವನ ಪರಿಪಾಲ ನೆಯ ಮತ್ತು ಶಾಂತಿಯ ಅಭಿವೃದ್ಧಿಗಾಗಲಿ ಅಂತ್ಯವೇ ಇಲ್ಲ; ಸೈನ್ಯಗಳ ಕರ್ತನ ಆಸಕ್ತಿಯು ಇದನ್ನು ನೆರವೇರಿ ಸುವದು.
- John 7:42 ಯೋಹಾನನು 7:42ಆದರೆ ಕ್ರಿಸ್ತನು ದಾವೀದನ ಸಂತಾನದಿಂದಲೂ ದಾವೀದನಿದ್ದ ಬೇತೆಹೇಮೆಂಬ ಊರಿನಿಂದಲೂ ಬರುವನೆಂದು ಬರಹವು ಹೇಳುತ್ತದಲ್ಲವೇ? ಅಂದರು.
- Jeremiah 33:15–16 ಯೆರೆಮೀಯ 33:15–16ಆ ದಿನಗಳಲ್ಲಿಯೂ ಆ ಕಾಲದಲ್ಲಿಯೂ ನಾನು ದಾವೀದನಿಗೆ ನೀತಿಯುಳ್ಳ ಕೊಂಬೆಯನ್ನು ಚಿಗುರ ಮಾಡುವೆನು; ಆತನು ದೇಶದಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸುವನು. ಆ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡುವದು; ಯೆರೂಸಲೇಮು ಭದ್ರವಾಗಿ ವಾಸಿಸುವದು; ಆಕೆಯು (ಯೆರೂಸ ಲೇಮು) ಕರೆಯಲ್ಪಡುವ ಹೆಸರು ಇದೇ--ನಮ್ಮ ನೀತಿ ಯಾಗಿರುವ ಕರ್ತನು.
- Luke 18:38–39 ಲೂಕನು 18:38–39ಆಗ ಅವನು--ಯೇಸುವೇ, ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಕೂಗಿಕೊಂಡನು. ಮುಂದೆ ಹೋಗುತ್ತಿದ್ದವರು ಅವನು ಸುಮ್ಮನಿರು ವಂತೆ ಅವನನ್ನು ಗದರಿಸಿದರು. ಆದರೂ ಅವನು--ದಾವೀದನಕುಮಾರನೇ, ನನ್ನ ಮೇಲೆ ಕರುಣೆಯಿಡು ಎಂದು ಮತ್ತಷ್ಟು ಹೆಚ್ಚಾಗಿ ಕೂಗಿಕೊಂಡನು.
- Acts 2:30 ಅಪೊಸ್ತಲರ ಕೃತ್ಯಗಳು 2:30ದಾವೀದನು ಪ್ರವಾದಿಯಾಗಿದ್ದದರಿಂದ ಶರೀರದ ಪ್ರಕಾರ ತನ್ನ ಸಂತಾನದವರಲ್ಲಿ ದೇವರು ಕ್ರಿಸ್ತನನ್ನು ಎಬ್ಬಿಸಿ ತನ್ನ ಸಿಂಹಾಸನದ ಮೇಲೆ ಕೂತುಕೊಳ್ಳುವಂತೆ ಮಾಡುವನೆಂದು ಆಣೆಯಿಟ್ಟು ಪ್ರಮಾಣ ಪೂರ್ವಕ ವಾಗಿ ತನಗೆ ಹೇಳಿದ್ದನ್ನು ಅವನು ಬಲ್ಲವನಾಗಿದ್ದನು.
- Jeremiah 33:21 ಯೆರೆಮೀಯ 33:21ಆಗ ನಾನು ನನ್ನ ಸೇವಕನಾದ ದಾವೀದನ ಸಂಗಡ ಮಾಡಿದ ಒಡಂಬಡಿಕೆಯನ್ನೂ ಅವನ ಸಿಂಹಾಸನದಲ್ಲಿ ಆಳುವ ಮಗನು ಅವನಿಗಿಲ್ಲದ ಹಾಗೆ ಮತ್ತು ನನ್ನ ಸೇವಕರಾಗಿರುವ ಯಾಜಕರಾದ ಲೇವಿಯರ ಸಂಗಡ ಮಾಡಿದ ಒಡಂಬಡಿಕೆಯನ್ನೂ ವಿಾರುವದಕ್ಕೆ ಆದೀತು.