Luke · chapter 20 · verse 7
Luke 20:7 in Kannada
ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
Avaru--adu ellim dalo naavu ariyevu endu uttarakottaru.
Luke 20:7 in English
- King James Version (KJV)
- And they answered, that they could not tell whence [it was].
- World English Bible (WEB)
- They answered that they didn’t know where it was from.
- American Standard Version (ASV)
- And they answered, that they knew not whence [it was].
- Bible in Basic English (BBE)
- And they made answer that they had no idea where it came from.
- Darby Translation (DBY)
- And they answered, they did not know whence.
- Webster's Bible (WBS)
- And they answered, that they could not tell whence [it was] .
- Young's Literal Translation (YLT)
- And they answered, that they knew not whence [it was],
Read in context
- 5ಆಗ ಅವರು ತಮ್ಮೊಳಗೆ--ಪರಲೋಕ ದಿಂದ ಎಂದು ನಾವು ಹೇಳಿದರೆ ಆತನು--ನೀವು ಯಾಕೆ ಅವನನ್ನು ನಂಬಲಿಲ್ಲ ಎಂದು ಹೇಳುವನು.
- 6ಆದರೆ--ಮನುಷ್ಯ ರಿಂದ ಎಂದು ನಾವು ಹೇಳಿದರೆ ಎಲ್ಲಾ ಜನರು ನಮಗೆ ಕಲ್ಲೆಸೆಯುವರು. ಯಾಕಂದರೆ ಯೋಹಾನನು ಪ್ರವಾದಿಯೆಂದು ಅವರು ಒಪ್ಪಿದ್ದಾರೆ ಎಂದು ಅಂದುಕೊಂಡು
- 7ಅವರು--ಅದು ಎಲ್ಲಿಂ ದಲೋ ನಾವು ಅರಿಯೆವು ಎಂದು ಉತ್ತರಕೊಟ್ಟರು.
- 8ಆಗ ಯೇಸು ಅವರಿಗೆ--ಇವುಗಳನ್ನು ನಾನು ಯಾವ ಅಧಿಕಾರದಿಂದ ಮಾಡುತ್ತೇನೆಂದು ನಾನೂ ನಿಮಗೆ ಹೇಳುವದಿಲ್ಲ ಅಂದನು.
- 9ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.
Cross references
- Isaiah 41:28 ಯೆಶಾಯ 41:28ನಾನು ನೋಡಿದಾಗ ಅಲ್ಲಿ ಯಾರೂ ಇಲ್ಲ; ನಾನು ಅವರನ್ನು ಕೇಳುವ ಪ್ರಶ್ನೆಗೆ ಅವರಲ್ಲಿ ಒಂದು ಮಾತನ್ನು ಉತ್ತರಿಸುವ ಸಲಹೆಗಾರನು ಇಲ್ಲವೇ ಇಲ್ಲ.ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
- Isaiah 42:19–20 ಯೆಶಾಯ 42:19–20ನನ್ನ ಸೇವಕನಲ್ಲದೆ ಕುರುಡನು ಯಾರು? ಇಲ್ಲವೆ ನಾನು ಕಳುಹಿಸಿದ ಸೇವಕನಲ್ಲದೇ ಕಿವುಡನು ಯಾರು? ಸಂಪೂರ್ಣನಂತೆ ಕುರುಡನು ಯಾರು? ಕರ್ತನ ಸೇವಕನಂತೆ ಕುರುಡನು ಯಾರು? ನೀನು ಅನೇಕ ಸಂಗತಿಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ; ಅವನ ಕಿವಿಗಳು ತೆರೆದಿದ್ದರೂ ಕೇಳನು.
- Jeremiah 8:7–9 ಯೆರೆಮೀಯ 8:7–9ಹೌದು, ಆಕಾಶ ದಲ್ಲಿ ಬಕಪಕ್ಷಿಯು ತನ್ನ ನಿಯಮಿತ ಕಾಲಗಳನ್ನು ತಿಳಿ ಯುತ್ತದೆ; ಪಾರಿವಾಳವೂ ಬಾನಕ್ಕಿಯೂ ಕೊಕ್ಕರೆಯೂ ತಾವು ಬರತಕ್ಕ ಸಮಯವನ್ನು ಗಮನಿಸುತ್ತವೆ. ಆದರೆ ನನ್ನ ಜನರು ಕರ್ತನ ನ್ಯಾಯ ತೀರ್ಪನ್ನು ಅರಿಯರು. ಹೀಗಿರಲು--ನಾವು ಜ್ಞಾನಿಗಳು, ಕರ್ತನ ನ್ಯಾಯ ಪ್ರಮಾಣವು ನಮ್ಮ ಸಂಗಡ ಇದೆ ಎಂದು ನೀವು ಹೇಳುವದು ಹೇಗೆ? ಇಗೋ, ನಿಶ್ಚಯವಾಗಿ ಆತನು ಅದನ್ನು ವ್ಯರ್ಥವಾಗಿ ಮಾಡಿದ್ದಾನೆ. ಶಾಸ್ತ್ರಿಗಳ ಲೇಖ ನಿಯು ವ್ಯರ್ಥವಾಗಿದೆ. ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- Isaiah 29:14 ಯೆಶಾಯ 29:14ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
- 2 Peter 3:3 2 ಪೇತ್ರನು 3:3ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
- Isaiah 6:9–10 ಯೆಶಾಯ 6:9–10ಅದಕ್ಕೆ ಆತನು -- ನೀನು ಈ ಜನರ ಬಳಿಗೆ ಹೋಗಿ -- ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದೆಂದೂ ಕಣ್ಣಾರೆ ಕಂಡರೂ ಅದನ್ನು ಗ್ರಹಿಸಬಾರದೆಂದೂ ತಿಳಿಸು. ತಮ್ಮ ಕಣ್ಣುಗಳಿಂದ ನೋಡದಂತೆಯೂ ತಮ್ಮ ಕಿವಿಗಳಿಂದ ಕೇಳದಂತೆಯೂ ತಮ್ಮ ಹೃದಯದಿಂದ ಗ್ರಹಿಸಿ ತಿರುಗಿಕೊಂಡು ಸ್ವಸ್ಥವಾಗ ದಂತೆಯೂ ಈ ಜನರ ಹೃದಯವನ್ನು ಕೊಬ್ಬಿಸಿ ಕಿವಿ ಯನ್ನು ಮಂದಗೊಳಿಸಿ ಅವರ ಕಣ್ಣುಗಳನ್ನು ಮುಚ್ಚು ಎಂದು ನನಗೆ ಹೇಳಿದನು.
- 2 Thessalonians 2:10–12 2 ಥೆಸಲೊನೀಕದವರಿಗೆ 2:10–12ದುರ್ನೀತಿಯ ಎಲ್ಲಾ ವಂಚನೆ ಯಿಂದಲೂ ಕೂಡಿ ನಾಶವಾಗುವವರಲ್ಲಿ ಸಂಭವಿಸು ವದು; ಅವರು ಪ್ರೀತಿಯ ಸತ್ಯವನ್ನು ಅಂಗೀಕರಿಸದ ಕಾರಣ ರಕ್ಷಣೆಯನ್ನು ಹೊಂದುವದಿಲ್ಲ. ಇದೇ ಕಾರಣದಿಂದ ದೇವರು ಬಲವಾದ ಭ್ರಮೆಯನ್ನು ಅವರಲ್ಲಿಗೆ ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುತ್ತಾನೆ. ಸತ್ಯವನ್ನು ನಂಬದೆ ಅನೀತಿಯಲ್ಲಿ ಆನಂದಪಡುವವರೆಲ್ಲರೂ ಈ ಪ್ರಕಾರ ತೀರ್ಪಿಗೆ ಒಳಗಾಗುವರು.
- Isaiah 44:18 ಯೆಶಾಯ 44:18ಅವರು ಏನೂ ತಿಳಿಯ ದವರು ಇಲ್ಲವೆ ಏನೂ ಗ್ರಹಿಸಲಾರದವರು; ಆತನು ಅವರ ಕಣ್ಣು ಕಾಣದಂತೆಯೂ ಹೃದಯಗಳು ಗ್ರಹಿಸ ದಂತೆಯೂ ಮುಚ್ಚಿ ಬಿಟ್ಟಿದ್ದಾನೆ.
- John 3:19–20 ಯೋಹಾನನು 3:19–20ಆ ತೀರ್ಪು ಏನಂದರೆ, ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕ್ರಿಯೆಗಳು ಕೆಟ್ಟವುಗಳಾ ಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿ ಮಾಡಿದರು. ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
- John 9:39 ಯೋಹಾನನು 9:39ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
- Zechariah 11:15 ಜೆಕರ್ಯ 11:15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
- Malachi 2:7–9 ಮಲಾಕಿಯ 2:7–9ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.