Luke · chapter 21 · verse 12
Luke 21:12 in Kannada
ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
Aadare ivellavugaliginta modalu avaru nimmannu hididu hinsisi sabhaamandira galigoo seremanegaligoo oppisi nanna hesarina nimitta arasugala mattu adhikaarigala munde nimmannu taruvaru.
Luke 21:12 in English
- King James Version (KJV)
- But before all these, they shall lay their hands on you, and persecute [you], delivering [you] up to the synagogues, and into prisons, being brought before kings and rulers for my name’s sake.
- World English Bible (WEB)
- But before all these things, they will lay their hands on you and will persecute you, delivering you up to synagogues and prisons, bringing you before kings and governors for my name’s sake.
- American Standard Version (ASV)
- But before all these things, they shall lay their hands on you, and shall persecute you, delivering you up to the synagogues and prisons, bringing you before kings and governors for my name’s sake.
- Bible in Basic English (BBE)
- But before all this, they will take you and be very cruel to you, giving you up to the Synagogues and to prisons, taking you before kings and rulers, because of my name.
- Darby Translation (DBY)
- But before all these things they shall lay their hands upon you and persecute you, delivering [you] up to synagogues and prisons, bringing [you] before kings and governors on account of my name;
- Webster's Bible (WBS)
- But before all these they will lay their hands on you, and persecute [you] , delivering [you] up to the synagogues, and into prisons, being brought before kings and rulers for my name's sake.
- Young's Literal Translation (YLT)
- and before all these, they shall lay on you their hands, and persecute, delivering up to synagogues and prisons, being brought before kings and governors for my name's sake;
Read in context
- 10ಆತನು ಅವರಿಗೆ--ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳು ವವು.
- 11ಬೇರೆ ಬೇರೆ ಸ್ಥಳಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವವು; ಭಯಹುಟ್ಟಿ ಸುವ ದೃಶ್ಯಗಳೂ ಮಹಾಸೂಚನೆಗಳೂ ಆಕಾಶದಿಂದ ಆಗುವವು.
- 12ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು ಹಿಂಸಿಸಿ ಸಭಾಮಂದಿರ ಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.
- 13ಇದು ಸಾಕ್ಷಿಗೋಸ್ಕರ ನಿಮಗೆ ಪರಿಣಮಿ ಸುವದು.
- 14ಹೀಗಿರುವದರಿಂದ ನೀವು ಏನು ಉತ್ತರ ಕೊಡಬೇಕೆಂದು ಮುಂದಾಗಿ ಯೋಚಿಸಬಾರದೆಂದು ನಿಮ್ಮ ಹೃದಯಗಳಲ್ಲಿ ನಿಶ್ಚಯಮಾಡಿಕೊಳ್ಳಿರಿ.
Cross references
- 1 Peter 4:12–14 1 ಪೇತ್ರನು 4:12–14ಪ್ರಿಯರೇ, ನಿಮ್ಮನ್ನು ಶೋಧಿಸುವದಕ್ಕೆ ಅಗ್ನಿ ಯಂತಿರುವ ಪರಿಶೋಧನೆಗಾಗಿ ನೀವು ಆಶ್ಚರ್ಯಪಡ ಬೇಡಿರಿ; ಅಪೂರ್ವವಾದ ಸಂಗತಿ ನಿಮಗೆ ಸಂಭವಿಸಿ ತೆಂದು ಯೋಚಿಸಬೇಡಿರಿ. ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ. ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.
- Acts 5:40 ಅಪೊಸ್ತಲರ ಕೃತ್ಯಗಳು 5:40ಇದಕ್ಕೆ ಅವರು ಅವನೊಂದಿಗೆ ಒಪ್ಪಿಕೊಂಡು ಅಪೊಸ್ತಲರನ್ನು ಕರೆಯಿಸಿ ಅವರನ್ನು ಹೊಡೆದು ಯೇಸುವಿನ ಹೆಸರಿನಲ್ಲಿ ಮಾತನಾಡಬಾರದೆಂದು ಅಪ್ಪಣೆ ಕೊಟ್ಟು ಬಿಟ್ಟುಬಿಟ್ಟರು.
- John 15:20 ಯೋಹಾನನು 15:20ತನ್ನ ದಣಿಗಿಂತ ಆಳು ದೊಡ್ಡವನಲ್ಲ ಎಂದು ನಾನು ನಿಮಗೆ ಹೇಳಿದ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ; ಅವರು ನನ್ನನ್ನು ಹಿಂಸಿಸಿದರೆ ನಿಮ್ಮನ್ನು ಸಹ ಹಿಂಸಿಸುವರು. ಅವರು ನನ್ನ ಮಾತನ್ನು ಕೈ ಕೊಂಡಿದ್ದರೆ ನಿಮ್ಮ ಮಾತನ್ನು ಸಹ ಕೈಕೊಳ್ಳುವರು.
- Acts 16:22–26 ಅಪೊಸ್ತಲರ ಕೃತ್ಯಗಳು 16:22–26ಸಮೂಹವು ಒಟ್ಟಾಗಿ ಕೂಡಿ ಅವರಿಗೆ ವಿರೋಧವಾಗಿ ಎದ್ದಾಗ ನ್ಯಾಯಾಧಿಪತಿಗಳು ಅವರ ವಸ್ತ್ರಗಳನ್ನು ಹರಿದು ಅವರನ್ನು ಹೊಡೆಯುವಂತೆ ಅಪ್ಪಣೆಕೊಟ್ಟರು. ಅವರನ್ನು ಬಹಳವಾಗಿ ಹೊಡೆಸಿದ ಮೇಲೆ ಅವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಮನೆಯ ಅಧಿಕಾರಿಗೆ ಖಂಡಿತವಾಗಿ ಆಜ್ಞಾಪಿಸಿ ಸೆರೆಮನೆಯೊಳಗೆ ಹಾಕಿದರು. ಅವನು ಅಂಥಾ ಒಂದು ಜವಾಬ್ದಾರಿಕೆಯನ್ನು ಹೊಂದಿ ಅವರನ್ನು ಸೆರೆಯ ಒಳಭಾಗಕ್ಕೆ ದೂಡಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು. ಮಧ್ಯರಾತ್ರಿಯಲ್ಲಿ ಪೌಲನೂ ಸೀಲನೂ ಪ್ರಾರ್ಥನೆ ಮಾಡಿದವರಾಗಿ ದೇವರಿಗೆ ಸ್ತುತಿಪದಗಳನ್ನು ಹಾಡುತ್ತಿದ್ದರು. ಸೆರೆಯಲ್ಲಿದ್ದವರು ಅವುಗಳನ್ನು ಕೇಳುತ್ತಿದ್ದರು. ಆಗ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿ ವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
- Luke 11:49–51 ಲೂಕನು 11:49–51ಆದದರಿಂದ ದೇವರ ಜ್ಞಾನವು ಸಹ ಹೇಳಿದ್ದೇನಂದರೆ -- ನಾನು ಅವರ ಬಳಿಗೆ ಪ್ರವಾದಿಗಳನ್ನೂ ಅಪೊಸ್ತಲರನ್ನೂ ಕಳುಹಿಸು ವೆನು; ಅವರಲ್ಲಿ ಕೆಲವರನ್ನು ಅವರು ಕೊಲ್ಲುವರು ಮತ್ತು ಹಿಂಸಿಸುವರು. ಹೀಗೆ ಜಗತ್ತಿನ ಅಸ್ತಿವಾರ ಮೊದಲುಗೊಂಡು ಸುರಿಸಲ್ಪಟ್ಟ ಎಲ್ಲಾ ಪ್ರವಾದಿಗಳ ರಕ್ತಕ್ಕೆ ಈ ಸಂತತಿಯು ಉತ್ತರ ಕೊಡಬೇಕಾಗಿರುವದು. ಹೇಬೆಲನ ರಕ್ತ ಮೊದಲುಗೊಂಡು ಯಜ್ಞವೇದಿಗೂ ದೇವಾಲಯಕ್ಕೂ ಮಧ್ಯದಲ್ಲಿ ಹತವಾದ ಜಕರೀಯನ ರಕ್ತದವರೆಗೂ ಈ ಸಂತತಿಯು ಉತ್ತರಕೊಡಬೇಕು; ಹೌದು, ಈ ಸಂತತಿಯವರೇ ಉತ್ತರಕೊಡಬೇಕೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- Matthew 23:34–36 ಮತ್ತಾಯನು 23:34–36ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು.
- Acts 9:4 ಅಪೊಸ್ತಲರ ಕೃತ್ಯಗಳು 9:4ಆಗ ಅವನು ನೆಲಕ್ಕೆ ಬಿದ್ದು--ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸೆಪಡಿಸುತ್ತೀ ಎಂದು ಹೇಳುವ ಧ್ವನಿಯನ್ನು ಕೇಳಿದನು.
- Acts 26:2–11 ಅಪೊಸ್ತಲರ ಕೃತ್ಯಗಳು 26:2–11ಅರಸನಾದ ಅಗ್ರಿಪ್ಪನೇ, ಯೆಹೂದ್ಯರು ನನ್ನ ಮೇಲೆ ಹೊರಿಸಿದ ಎಲ್ಲಾ ಅಪರಾಧಗಳ ವಿಷಯವಾಗಿ ಈ ದಿವಸ ನಿನ್ನ ಮುಂದೆ ನನ್ನ ಪಕ್ಷದಲ್ಲಿ ಪ್ರತಿವಾದ ಮಾಡುವದಕ್ಕಿರುವದರಿಂದ ನನ್ನನ್ನು ಧನ್ಯನೆಂದು ಎಣಿಸಿಕೊಳ್ಳುತ್ತೇನೆ. ಪ್ರಾಮುಖ್ಯ ವಾಗಿ ಯೆಹೂದ್ಯರ ಮಧ್ಯದಲ್ಲಿರುವ ಎಲ್ಲಾ ಆಚಾರ ಗಳನ್ನೂ ವಿವಾದಗಳನ್ನೂ ನೀನು ಚೆನ್ನಾಗಿ ಬಲ್ಲವನಾಗಿರು ವದರಿಂದ ಸಹನೆಯಿಂದ ನನ್ನ ಮಾತುಗಳನ್ನು ಕೇಳ ಬೇಕೆಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ. ನಾನು ಮೊದಲಿನಿಂದಲೂ ಯೆರೂಸಲೇಮಿನಲ್ಲಿರುವ ನನ್ನ ಸ್ವಂತ ಜನಾಂಗದವರ ಮಧ್ಯದಲ್ಲಿ ಬಾಲ್ಯದಿಂದ ನಾನು ಬದುಕಿದ ವಿಧಾನವು ಎಲ್ಲಾ ಯೆಹೂದ್ಯರಿಗೆ ತಿಳಿದದೆ. ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ. ಈಗಲೂ ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ನಿರೀಕ್ಷೆಯ ವಿಷಯದಲ್ಲಿ ನಾನು ವಿಚಾರಿಸಲ್ಪಡು ವವನಾಗಿ ನಿಂತುಕೊಂಡಿದ್ದೇನೆ. ನಮ್ಮ ಹನ್ನೆರಡು ಗೋತ್ರದವರು ಆಸಕ್ತಿಯಿಂದ ಹಗಲಿರುಳು ದೇವರನ್ನು ಸೇವಿಸುತ್ತಾ ಈ ವಾಗ್ದಾನದ ನೆರವೇರಿಕೆಗಾಗಿ ನಿರೀಕ್ಷಿಸುತ್ತಿದ್ದಾರೆ; ಅಗ್ರಿಪ್ಪ ರಾಜನೇ, ಈ ನಿರೀಕ್ಷೆಯ ವಿಷಯಕ್ಕಾಗಿಯೇ ಯೆಹೂದ್ಯರು ನನ್ನ ಮೇಲೆ ತಪ್ಪುಹೊರಿಸುತ್ತಾರೆ. ಸತ್ತವರನ್ನು ದೇವರು ಎಬ್ಬಿಸುವನೆಂಬದು ನಂಬಲಾಗದ ಒಂದು ವಿಷಯವೆಂದು ನೀವು ಯಾಕೆ ಯೋಚಿಸುತ್ತೀರಿ? ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು. ಯೆರೂಸಲೇಮಿ ನಲ್ಲಿ ನಾನು ಹಾಗೆಯೇ ಮಾಡಿದ್ದಲ್ಲದೆ ಪ್ರಧಾನ ಯಾಜಕರಿಂದ ಅಧಿಕಾರವನ್ನು ಪಡೆದು ಪರಿಶುದ್ಧರಲ್ಲಿ ಅನೇಕರನ್ನು ನಾನು ಸೆರೆಯಲ್ಲಿ ಹಾಕಿಸಿದೆನು. ಮಾತ್ರ ವಲ್ಲದೆ ಅವರು ಕೊಲ್ಲಲ್ಪಟ್ಟಾಗ ಅದಕ್ಕೆ ನಾನು ಸಮ್ಮತಿಪಟ್ಟೆನು. ಇದಲ್ಲದೆ ಪ್ರತಿಯೊಂದು ಸಭಾ ಮಂದಿರದಲ್ಲಿ ನಾನು ಅನೇಕ ಸಾರಿ ಅವರನ್ನು ಶಿಕ್ಷಿಸಿ ಅವರು ದೇವದೂಷಣೆ ಮಾಡುವಂತೆ ಒತ್ತಾಯ ಮಾಡಿದೆನು ಮತ್ತು ಅವರ ಮೇಲೆ ಮಹಾಕೋಪೋ ದ್ರೇಕದಿಂದ ಬೇರೆ ಪಟ್ಟಣಗಳ ತನಕ ಅವರನ್ನು ಹಿಂಸಿಸಿದೆನು.
- Acts 5:17–19 ಅಪೊಸ್ತಲರ ಕೃತ್ಯಗಳು 5:17–19ಆಗ ಮಹಾಯಾಜಕನೂ ಅವನೊಂದಿಗೆ ಇದ್ದ ವರೂ (ಇವರು ಸದ್ದುಕಾಯರ ಪಂಗಡಕ್ಕೆ ಸೇರಿದವರು) ಕೋಪದಿಂದ ತುಂಬಿದವರಾಗಿ ಎದ್ದು ಅಪೊಸ್ತಲ ರನ್ನು ಹಿಡಿದು ಅವರನ್ನು ಸಾಮಾನ್ಯ ಸೆರೆಯಲ್ಲಿಟ್ಟರು. ಆದರೆ ರಾತ್ರಿಯಲ್ಲಿ ಕರ್ತನ ದೂತನು ಸೆರೆ ಮನೆಯ ಬಾಗಿಲುಗಳನ್ನು ತೆರೆದು ಅವರನ್ನು ಹೊರಕ್ಕೆ ತಂದು--
- Acts 12:1–4 ಅಪೊಸ್ತಲರ ಕೃತ್ಯಗಳು 12:1–4ಆ ಕಾಲದಲ್ಲಿ ಅರಸನಾದ ಹೆರೋದನು ಸಭೆಯಲ್ಲಿ ಕೆಲವರನ್ನು ಬಾಧಿಸುವದಕ್ಕಾಗಿ ತನ್ನ ಕೈ ಎತ್ತಿ ಯೋಹಾನನ ಸಹೋದರನಾದ ಯಾಕೋಬನನ್ನು ಕತ್ತಿಯಿಂದ ಕೊಲ್ಲಿಸಿದನು. ಇದು ಯೆಹೂದ್ಯರಿಗೆ ಮೆಚ್ಚಿಗೆಯಾಗಿರುವದನ್ನು ಅವನು ನೋಡಿದ್ದರಿಂದ ಪೇತ್ರನನ್ನು ಹಿಡಿಯುವದಕ್ಕಾಗಿ ಮುಂಗೊಂಡನು. (ಆಗ ಅವು ಹುಳಿಯಿಲ್ಲದ ರೊಟ್ಟಿಯ ದಿವಸಗಳಾಗಿದ್ದವು). ಹೀಗೆ ಪಸ್ಕದ ತರುವಾಯ ಜನರ ಮುಂದೆ ತರಬೇಕೆಂಬ ಉದ್ದೇಶ ದಿಂದ ಅವನನ್ನು ಬಂಧಿಸಿ ಸೆರೆಯಲ್ಲಿ ಹಾಕಿಸಿದನು.ಅವನನ್ನು ಕಾಯುವದಕ್ಕಾಗಿ ನಾಲ್ಕು ಚತುಷ್ಟದ ಸೈನಿಕರಿಗೆ ಒಪ್ಪಿಸಿದನು.
- Acts 22:30 ಅಪೊಸ್ತಲರ ಕೃತ್ಯಗಳು 22:30ಅವನ ಮೇಲೆ ಯೆಹೂದ್ಯರು ತಪ್ಪು ಹೊರಿಸಿದ ನಿಜವಾದ ವಿಷಯವನ್ನು ತಿಳಿಯಬೇಕೆಂದು ಅಪೇಕ್ಷಿಸಿ ಮುಖ್ಯ ನಾಯಕನು ಮರುದಿನ ಅವನ ಬೇಡಿಗಳನ್ನು ಬಿಚ್ಚಿ ಪ್ರಧಾನಯಾಜಕರೂ ಆಲೋಚನಾ ಸಭೆಯವ ರೆಲ್ಲರೂ ಸೇರಿಬರಬೇಕೆಂದು ಅಪ್ಪಣೆ ಕೊಟ್ಟ ಪೌಲನನ್ನು ಕರೆದುಕೊಂಡು ಹೋಗಿ ಅವರ ಮುಂದೆ ನಿಲ್ಲಿಸಿದ
- Matthew 10:16–25 ಮತ್ತಾಯನು 10:16–25ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ. ಆದರೆ ಜನರ ವಿಷಯದಲ್ಲಿ ಎಚ್ಚ ರಿಕೆಯಾಗಿರ್ರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯ ವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ತಮ್ಮ ಸಭಾ ಮಂದಿರಗಳಲ್ಲಿ ನಿಮ್ಮನ್ನು ಕೊರಡೆಗಳಿಂದ ಹೊಡೆಯು ವರು. ಇದಲ್ಲದೆ ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿ ಕಾರಿಗಳ ಮತ್ತು ಅರಸುಗಳ ಮುಂದಕ್ಕೆ ತೆಗೆದುಕೊಂಡು ಹೋಗುವರು. ಹೀಗೆ ಅವರಿಗೂ ಅನ್ಯಜನಗಳಿಗೂ ಸಾಕ್ಷಿಯಾಗುವದು. ಆದರೆ ಅವರು ನಿಮ್ಮನ್ನು ಒಪ್ಪಿಸಿ ಕೊಟ್ಟಾಗ ನೀವು ಹೇಗೆ ಇಲ್ಲವೆ ಏನು ಮಾತನಾಡ ಬೇಕೆಂಬದಾಗಿ ಯೋಚಿಸಬೇಡಿರಿ; ಯಾಕಂದರೆ ನೀವು ಏನು ಮಾತನಾಡಬೇಕೆಂಬದು ಆ ಗಳಿಗೆಯಲ್ಲಿಯೇ ನಿಮಗೆ ತಿಳಿಸಲ್ಪಡುವದು. ಯಾಕಂದರೆ ಮಾತನಾಡು ವವರು ನೀವಲ್ಲ, ಆದರೆ ನಿಮ್ಮ ತಂದೆಯ ಆತ್ಮನು ನಿಮ್ಮೊಳಗೆ ಮಾತನಾಡುತ್ತಾನೆ. ಸಹೋದರನು ತನ್ನ ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮತ್ತು ಮಕ್ಕಳು ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡುವರು; ಆದರೆ ಕಡೆಯ ವರೆಗೆ ತಾಳುವವನು ರಕ್ಷಣೆ ಹೊಂದುವನು. ಇದಲ್ಲದೆ ಈ ಪಟ್ಟಣದಲ್ಲಿ ಅವರು ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಪಟ್ಟಣಕ್ಕೆ ಓಡಿಹೋಗಿರಿ; ಯಾಕಂದರೆ-- ಮನುಷ್ಯ ಕುಮಾರನು ಬರುವದರೊಳಗಾಗಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವದಕ್ಕಾಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಗುರುವಿಗಿಂತ ಶಿಷ್ಯನು ಹೆಚ್ಚಿನವನಲ್ಲ; ಇಲ್ಲವೆ ಸೇವಕನು ತನ್ನ ಯಜಮಾನನಿಗಿಂತ ಹೆಚ್ಚಿನವನಲ್ಲ. ಶಿಷ್ಯನು ತನ್ನ ಗುರುವಿನಂತೆಯೂ ಸೇವಕನು ತನ್ನ ಯಜಮಾನನಂತೆಯೂ ಇರುವದು ಸಾಕು; ಮನೆಯ ಯಜಮಾನನನ್ನೇ ಅವರು ಬೆಲ್ಜೆಬೂಲನೆಂದು ಕರೆದರೆ ಅವನ ಮನೆಯವರನ್ನು ಇನ್ನೂ ಎಷ್ಟೋ ಹೆಚ್ಚಾಗಿ ಕರೆಯುವರಲ್ಲವೇ?