Luke · chapter 21 · verse 23
Luke 21:23 in Kannada
ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
Aadare aa divasagalalli garbhiniyarigoo mole kudisuva varigoo ayyo! Yaakandare deshadalli mahaa vipattoo ee janara mele kopavoo aaga iru vadu.
Luke 21:23 in English
- King James Version (KJV)
- But woe unto them that are with child, and to them that give suck, in those days! for there shall be great distress in the land, and wrath upon this people.
- World English Bible (WEB)
- Woe to those who are pregnant and to those who nurse infants in those days! For there will be great distress in the land and wrath to this people.
- American Standard Version (ASV)
- Woe unto them that are with child and to them that give suck in those days! for there shall be great distress upon the land, and wrath unto this people.
- Bible in Basic English (BBE)
- It will be hard for women who are with child, and for her with a baby at the breast, in those days. For great trouble will come on the land, and wrath on this people.
- Darby Translation (DBY)
- But woe to them that are with child and to them who give suck in those days, for there shall be great distress upon the land and wrath upon this people.
- Webster's Bible (WBS)
- But woe to them that are with child, and to them that nurse infants in those days! for there shall be great distress in the land, and wrath upon this people.
- Young's Literal Translation (YLT)
- 'And woe to those with child, and to those giving suck, in those days; for there shall be great distress on the land, and wrath on this people;
Read in context
- 21ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ.
- 22ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ.
- 23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- 24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- 25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
Cross references
- Lamentations 4:10 ಪ್ರಲಾಪಗಳು 4:10ಕನಿಕರ ತುಂಬಿದ ಹೆಂಗಸರ ಕೈಗಳು ಅವರ ಸ್ವಂತ ಮಕ್ಕಳನ್ನೇ ಬೇಯಿಸಿದವು; ಇವರು ನನ್ನ ಜನರ ಮಗಳ ನಾಶದಲ್ಲಿ ಅವರಿಗೆ ಆಹಾರ ವಾದರು.
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Luke 23:29 ಲೂಕನು 23:29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- Mark 13:17 ಮಾರ್ಕನು 13:17ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ!
- Hebrews 10:26–31 ಇಬ್ರಿಯರಿಗೆ 10:26–31ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ. ಆದರೆ ಭಯದಿಂದ ಖಂಡಿತವಾಗಿ ಎದುರು ನೋಡತಕ್ಕ ತೀರ್ಪು ವಿರೋಧಿ ಗಳನ್ನು ದಹಿಸುವ ಕೋಪಾಗ್ನಿಯೂ ಇರುವವು. ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ. ಮುಯ್ಯಿ ತೀರಿಸುವದು ನನಗೆ ಸಂಬಂಧಪಟ್ಟದ್ದು, ನಾನೇ ಪ್ರತಿಫಲವನ್ನು ಕೊಡುವೆ ನೆಂದು ಹೇಳಿದ ಕರ್ತನನ್ನು ನಾವು ಬಲ್ಲೆವು; ಇದ ಲ್ಲದೆ--ಕರ್ತನು ತನ್ನ ಜನರಿಗೆ ನ್ಯಾಯತೀರಿಸುವ ನೆಂತಲೂ ಹೇಳಿಯದೆ. ಜೀವವುಳ್ಳ ದೇವರ ಕೈಯಲ್ಲಿ ಸಿಕ್ಕಿ ಬೀಳುವದು ಭಯಂಕರವಾದದ್ದು.
- James 5:1 ಯಾಕೋಬನು 5:1ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ
- 1 Peter 4:17 1 ಪೇತ್ರನು 4:17ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು?
- 1 Thessalonians 2:16 1 ಥೆಸಲೊನೀಕದವರಿಗೆ 2:16ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Deuteronomy 28:56–57 ಧರ್ಮೋಪದೇಶಕಾಂಡ 28:56–57ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Hebrews 13:16 ಇಬ್ರಿಯರಿಗೆ 13:16ಇದಲ್ಲದೆ ಒಳ್ಳೆಯದನ್ನು ಮಾಡುವದನ್ನೂ ಉದಾರವಾಗಿ ಕೊಡುವದನ್ನೂ ಮರೆಯಬೇಡಿರಿ; ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
- Luke 19:27 ಲೂಕನು 19:27ಆದರೆ ತಮ್ಮ ಮೇಲೆ ನಾನು ಆಡಳಿತ ಮಾಡುವದಕ್ಕೆ ಮನಸ್ಸಿಲ್ಲದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ ಅಂದನು.
- Hebrews 9:12–17 ಇಬ್ರಿಯರಿಗೆ 9:12–17ಹೋತಗಳ ಮತ್ತು ಕರುಗಳ ರಕ್ತವನ್ನು ತೆಗೆದುಕೊಳ್ಳದೆ ತನ್ನ ಸ್ವಂತ ರಕ್ತವನ್ನೇ ತೆಗೆದುಕೊಂಡು ನಮಗೋಸ್ಕರ ನಿತ್ಯವಿಮೋಚನೆಯನ್ನು ಸಂಪಾದಿಸಿಕೊಂಡವನಾಗಿ ಒಂದೇ ಸಾರಿ ಪರಿಶುದ್ಧ ಸ್ಥಳದೊಳಗೆ ಪ್ರವೇಶಿಸಿದನು. ಹೋತ ಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚಿಮು ಕಿಸುವ ಕಡಸಿನ ಬೂದಿಯೂ ಶರೀರ ವನ್ನು ಶುಚಿಮಾಡಿ ಪವಿತ್ರ ಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿ ಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ಬಿಡಿಸಿ ಜೀವವುಳ್ಳ ದೇವರನ್ನು ಸೇವಿಸುವಂತೆ ನಿಮ್ಮ ಮನ ಸ್ಸಾಕ್ಷಿಯನ್ನು ಶುದ್ಧೀಕರಿಸು ವದಲ್ಲವೇ. ಈ ಕಾರಣದಿಂದ ಮೊದಲನೇ ಒಡಂಬಡಿಕೆಯ ಅಧೀನದಲ್ಲಿದ್ದ ಅಕ್ರಮಗಳ ವಿಮೋಚನೆಗಾಗಿ ಕರೆಯಲ್ಪ ಟ್ಟವರು ನಿತ್ಯಬಾಧ್ಯತೆಯ ವಾಗ್ದಾನವನ್ನು ಹೊಂದು ವದಕ್ಕೆ ಮರಣದ ಮೂಲಕ ಆತನು ಹೊಸ ಒಡಂಬಡಿ ಕೆಗೆ ಮಧ್ಯಸ್ಥನಾಗಿದ್ದಾನೆ. ಮರಣಶಾಸನವು ಇರುವಲ್ಲಿ ಅದನ್ನು ಬರೆಯಿಸಿದವನ ಮರಣವಾಗುವದು ಅವಶ್ಯ. ಜನರ ಮರಣದ ನಂತರ ಮರಣ ಶಾಸನವು ನಡೆ ಯುವದೇ ಹೊರತು ಬರೆಯಿಸಿದವನು ಜೀವದಿಂದಿರು ವಾಗ ಎಂದಿಗೂ ಪರಿಣಾಮಕರವಾಗಿರುವದೇ ಇಲ್ಲ.