Luke · chapter 21 · verse 25
Luke 21:25 in Kannada
ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
Soorya chandra mattu nakshatragalalli soochanegalu toruvavu; idallade bhoomiya meliruva janaangagalige kalavaladinda sankata untaaguvadu; samudrada mattu teregala ghoshaneya nimittavaagi kalavalavaaguvadu.
Luke 21:25 in English
- King James Version (KJV)
- And there shall be signs in the sun, and in the moon, and in the stars; and upon the earth distress of nations, with perplexity; the sea and the waves roaring;
- World English Bible (WEB)
- “There will be signs in the sun, moon, and stars; and on the earth anxiety of nations, in perplexity for the roaring of the sea and the waves;
- American Standard Version (ASV)
- And there shall be signs in sun and moon and stars; and upon the earth distress of nations, in perplexity for the roaring of the sea and the billows;
- Bible in Basic English (BBE)
- And there will be signs in the sun and moon and stars; and on the earth, fear among the nations and doubt because of the loud noise of the sea and the waves;
- Darby Translation (DBY)
- And there shall be signs in sun and moon and stars, and upon the earth distress of nations in perplexity [at] the roar of the sea and rolling waves,
- Webster's Bible (WBS)
- And there shall be signs in the sun, and in the moon, and in the stars; and upon the earth distress of nations, with perplexity; the sea and the waves roaring;
- Young's Literal Translation (YLT)
- 'And there shall be signs in sun, and moon, and stars, and on the land [is] distress of nations with perplexity, sea and billow roaring;
Read in context
- 23ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು.
- 24ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- 25ಸೂರ್ಯ ಚಂದ್ರ ಮತ್ತು ನಕ್ಷತ್ರಗಳಲ್ಲಿ ಸೂಚನೆಗಳು ತೋರುವವು; ಇದಲ್ಲದೆ ಭೂಮಿಯ ಮೇಲಿರುವ ಜನಾಂಗಗಳಿಗೆ ಕಳವಳದಿಂದ ಸಂಕಟ ಉಂಟಾಗುವದು; ಸಮುದ್ರದ ಮತ್ತು ತೆರೆಗಳ ಘೋಷಣೆಯ ನಿಮಿತ್ತವಾಗಿ ಕಳವಳವಾಗುವದು.
- 26ಆಕಾಶದ ಶಕ್ತಿಗಳು ಕದಲಿಸಲ್ಪಡುವದರಿಂದ ಮನುಷ್ಯರು ಭಯಹಿಡಿದವರಾಗಿ ಲೋಕಕ್ಕೆ ಏನು ಸಂಭವಿಸುವದೋ ಎಂದು ಎದುರುನೋಡುತ್ತಾ ಪ್ರಾಣಹೋದಂತಾಗುವರು.
- 27ಆಗ ಮನುಷ್ಯಕು ಮಾರನು ಬಲದಿಂದಲೂ ಮಹಾ ಮಹಿಮೆ ಯಿಂದಲೂ ಕೂಡಿದವನಾಗಿ ಮೇಘದಲ್ಲಿ ಬರುವದನ್ನು ಅವರು ಕಾಣುವರು;
Cross references
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Joel 2:30–31 ಯೋವೇಲ 2:30–31ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು. ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
- Revelation 6:12–14 ಪ್ರಕಟನೆ 6:12–14ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು.
- Ezekiel 32:7–8 ಯೆಹೆಜ್ಕೇಲನು 32:7–8ಇದಲ್ಲದೆ, ನಾನು ನಿನ್ನನ್ನು ನಂದಿಸುವಾಗ ಆಕಾಶಕ್ಕೆ ಮುಸುಕುಹಾಕಿ ಅಲ್ಲಿನ ನಕ್ಷತ್ರಗಳನ್ನು ಕತ್ತಲಾಗ ಮಾಡಿ, ಸೂರ್ಯನನ್ನು ಮೋಡದಿಂದ ಮುಚ್ಚಿಬಿಡುವೆನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದಲ್ಲಿ ಪ್ರಕಾಶಿ ಸುವ ಬೆಳಕುಗಳನ್ನು ನಿನ್ನ ನಿಮಿತ್ತವಾಗಿ ನಾನು ಕತ್ತಲು ಮಾಡುವೆನು; ಆ ಕತ್ತಲೆಯನ್ನು ನಿನ್ನ ದೇಶದ ಮೇಲೆ ಇಡುತ್ತೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Isaiah 24:23 ಯೆಶಾಯ 24:23ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
- Daniel 12:1 ದಾನಿಯೇಲನು 12:1ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
- 2 Peter 3:10–12 2 ಪೇತ್ರನು 3:10–12ಆದರೂ ಕರ್ತನ ದಿನವು ರಾತ್ರಿಯಲ್ಲಿ ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಗಳು ಮಹಾಘೋಷದಿಂದ ಇಲ್ಲದೆ ಹೋಗು ವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಲಯವಾಗಿ ಹೋಗುವವು; ಭೂಮಿಯೂ ಅದರಲ್ಲಿ ರುವ ಕೆಲಸಗಳೂ ಸುಟ್ಟುಹೋಗುವವು. ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?
- Revelation 20:11 ಪ್ರಕಟನೆ 20:11ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.
- Amos 8:9–10 ಆಮೋಸ 8:9–10ದೇವರಾದ ಕರ್ತನು ಹೇಳುತ್ತಾನೆ--ಆ ದಿನದಲ್ಲಿ ಆಗುವದೇನಂದರೆ, ನಾನು ಸೂರ್ಯನನ್ನು ಮಧ್ಯಾಹ್ನದಲ್ಲಿ ಮುಳುಗುವಂತೆ ಮಾಡುತ್ತೇನೆ. ಭೂಮಿಯನ್ನು ಹಗಲಲ್ಲೇ ಕತ್ತಲಾಗುವಂತೆ ಮಾಡು ತ್ತೇನೆ. ನಿಮ್ಮ ಹಬ್ಬಗಳನ್ನು ದುಃಖಕ್ಕೂ ನಿಮ್ಮ ಹಾಡುಗಳನ್ನೆಲ್ಲಾ ಗೋಳಾಟಕ್ಕೂ ಬದಲಾಯಿಸುವೆನು; ಎಲ್ಲರೂ ಸೊಂಟಗಳಿಗೆ ಗೋಣೀತಟ್ಟನ್ನು ಕಟ್ಟಿಕೊಂಡು ತಲೆಗಳನ್ನು ಬೋಳಿಸಿಕೊಳ್ಳುವಂತೆ ಮಾಡುವೆನು; ಅದನ್ನು ಒಬ್ಬನೇ ಮಗನಿಗಾಗಿ ದುಃಖಿಸುವಂತೆಯೂ ಅದರ ಅಂತ್ಯವು ಕಹಿಯಾದ ದಿನವಾಗುವಂತೆಯೂ ಮಾಡುವೆನು.
- Isaiah 13:13–14 ಯೆಶಾಯ 13:13–14ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು.
- Acts 2:19 ಅಪೊಸ್ತಲರ ಕೃತ್ಯಗಳು 2:19ಮೇಲೆ ಆಕಾಶದಲ್ಲಿ ಅದ್ಭುತಕಾರ್ಯಗಳನೂ ಕೆಳಗೆ ಭೂಮಿಯ ಮೇಲೆ ಸೂಚಕ ಕಾರ್ಯಗಳನ್ನೂ ನಾನು ತೋರಿಸುವೆನು. ಇದಲ್ಲದೆ ರಕ್ತ, ಬೆಂಕಿ ಮತ್ತು ಹೊಗೆಯ ಹಬೆಯು ಉಂಟಾಗುವವು.
- Isaiah 51:15 ಯೆಶಾಯ 51:15ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.