Luke · chapter 21 · verse 3
Luke 21:3 in Kannada
ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
Aatanu--naanu nimage nijavaagi heluttene, ee bada vidhaveyu avarellarigintaloo hechchu haakiddaale;
Luke 21:3 in English
- King James Version (KJV)
- And he said, Of a truth I say unto you, that this poor widow hath cast in more than they all:
- World English Bible (WEB)
- He said, “Truly I tell you, this poor widow put in more than all of them,
- American Standard Version (ASV)
- And he said, Of a truth I say unto you, This poor widow cast in more than they all:
- Bible in Basic English (BBE)
- And he said, Truly I say to you, This poor widow has given more than all of them:
- Darby Translation (DBY)
- And he said, Verily I say unto you, that this poor widow has cast in more than all;
- Webster's Bible (WBS)
- And he said, Of a truth I say to you, that this poor widow hath cast in more than they all.
- Young's Literal Translation (YLT)
- and he said, 'Truly I say to you, that this poor widow did cast in more than all;
Read in context
- 1ಇದಲ್ಲದೆ ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಆತನು ಕಣ್ಣೆತ್ತಿ ನೋಡಿದನು.
- 2ಒಬ್ಬ ಬಡ ವಿಧವೆಯು ಸಹ ಎರಡು ಕಾಸುಗಳನ್ನು ಅದರಲ್ಲಿ ಹಾಕುವದನ್ನು ಆತನು ನೋಡಿದನು.
- 3ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
- 4ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- 5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
Cross references
- 2 Corinthians 8:12 2 ಕೊರಿಂಥದವರಿಗೆ 8:12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
- 2 Corinthians 8:2–3 2 ಕೊರಿಂಥದವರಿಗೆ 8:2–3ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು. ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
- Acts 10:34 ಅಪೊಸ್ತಲರ ಕೃತ್ಯಗಳು 10:34ಆಗ ಪೇತ್ರನು ತನ್ನ ಬಾಯಿ ತೆರೆದು ಹೇಳಿದ್ದೇನಂದರೆ--ನಿಜವಾಗಿಯೂ ದೇವರು ಪಕ್ಷಪಾತಿ ಅಲ್ಲವೆಂದು ನಾನು ತಿಳಿದಿದ್ದೇನೆ.
- Mark 12:43–44 ಮಾರ್ಕನು 12:43–44ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು. ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
- Exodus 35:21–29 ವಿಮೋಚನಕಾಂಡ 35:21–29ಅವರಲ್ಲಿ ಪ್ರತಿಯೊಬ್ಬನು ಹೃದಯ ಪ್ರೇರಣೆಯಿಂದ ಮತ್ತು ಪ್ರತಿಯೊಬ್ಬನು ತನ್ನ ಮನಸ್ಸು ಇಷ್ಟಪಡುವಂತೆ ಸಭೆಯ ಗುಡಾರದ ಕೆಲಸಕ್ಕಾಗಿಯೂ ಅದರ ಎಲ್ಲಾ ಸೇವೆಗಾಗಿಯೂ ಪರಿಶುದ್ಧ ವಸ್ತ್ರಗಳಿಗಾಗಿಯೂ ಕರ್ತನಿಗೆ ಕಾಣಿಕೆಗಳನ್ನು ತೆಗೆದುಕೊಂಡು ಬಂದರು. ಸ್ತ್ರೀಪುರುಷರೆಲ್ಲರೂ ಮನಃಪೂರ್ವಕವಾಗಿ ಬಂದು ಬಳೆಗಳನ್ನೂ ಮುರುವುಗಳನ್ನೂ ಉಂಗುರಗಳನ್ನೂ ಮುದ್ರೆಗಳನ್ನೂ ಚಿನ್ನದ ಎಲ್ಲಾ ಒಡವೆಗಳನ್ನೂ ತಂದರು. ಪ್ರತಿಯೊಬ್ಬನೂ ಚಿನ್ನದ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಿದನು. ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ, ಮೇಕೆಯ ಕೂದಲು; ಟಗರುಗಳ ಕೆಂಪು ಬಣ್ಣದ ಚರ್ಮಗಳು, ಕಡಲು ಹಂದಿಯ ಚರ್ಮಗಳು, ಯಾರ ಬಳಿಯಲ್ಲಿದ್ದವೋ ಅವರೆಲ್ಲರು ತಂದರು. ಬೆಳ್ಳಿ ಹಿತ್ತಾಳೆಗಳ ಕಾಣಿಕೆ ಗಳನ್ನು ಅರ್ಪಿಸುವದಕ್ಕೆ ಮನಸ್ಸಿದ್ದವರೆಲ್ಲರೂ ಕರ್ತನಿಗೆ ಕಾಣಿಕೆಗಳನ್ನು ತಂದರು. ಸೇವೆಯ ಎಲ್ಲಾ ಕೆಲಸ ಕ್ಕೋಸ್ಕರ ಜಾಲೀ ಮರವಿದ್ದವರು ಅದನ್ನು ತಂದರು. ಜ್ಞಾನ ಹೃದಯವುಳ್ಳ ಸ್ತ್ರೀಯರೆಲ್ಲರೂ ತಮ್ಮ ಕೈಗಳಿಂದ ನೇಯ್ದ ನೀಲಿ, ಧೂಮ್ರ, ರಕ್ತವರ್ಣ ಮತ್ತು ನಯವಾದ ನಾರುಮಡಿ ಇವುಗಳನ್ನು ತಂದರು. ಜ್ಞಾನದಲ್ಲಿ ಹೃದಯ ಪ್ರೇರಣೆ ಹೊಂದಿದ ಸ್ತ್ರೀಯರೆಲ್ಲರೂ ಮೇಕೆ ಕೂದಲುಗಳನ್ನೂ ನೇಯ್ದರು. ಅಧಿಪತಿಗಳು ಎಫೋ ದಿನಲ್ಲಿಯೂ ಎದೆಪದಕದಲ್ಲಿಯೂ ಕೂಡ್ರಿಸುವದಕ್ಕೆ ಗೋಮೇಧಿಕಗಳನ್ನೂ ರತ್ನಗಳನ್ನೂ ಸುಗಂಧದ್ರವ್ಯ ಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲ ಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆ ಯನ್ನೂ ತಂದರು. ಹೀಗೆ ಮಾಡಬೇಕೆಂದು ಕರ್ತನು ಮೋಶೆಯ ಮುಖಾಂತರವಾಗಿ ಆಜ್ಞಾಪಿಸಿದ ಎಲ್ಲಾ ಕೆಲಸಕ್ಕೋಸ್ಕರ ತರುವದಕ್ಕೆ ಹೃದಯ ಪ್ರೇರಿತರಾದ ಇಸ್ರಾಯೇಲಿನ ಎಲ್ಲಾ ಪುರುಷರೂ ಸ್ತ್ರೀಯರೂ ಕರ್ತ ನಿಗೆ ಮನಃಪೂರ್ವಕವಾದ ಕಾಣಿಕೆಯನ್ನು ತಂದರು.
- 2 Corinthians 9:6–7 2 ಕೊರಿಂಥದವರಿಗೆ 9:6–7ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ. ಪ್ರತಿಯೊಬ್ಬನು ತನ್ನ ಹೃದಯದಲ್ಲಿ ನಿರ್ಣಯಿಸಿ ಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲಾತ್ಕಾರದಿಂದಾಗಲಿ ಯಾರೂ ಕೊಡಬಾರದು; ಯಾಕಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿ ಮಾಡುತ್ತಾನೆ.
- Mark 14:8–9 ಮಾರ್ಕನು 14:8–9ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ; ನನ್ನ ಶರೀರವನ್ನು ಹೂಣಿಡುವದಕ್ಕೆ ಅದನ್ನು ಅಭಿಷೇಕಿಸುವದಕ್ಕಾಗಿ ಈಕೆಯು ಮುಂದಾಗಿ ಮಾಡಿದ್ದಾಳೆ. ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ಈ ಸುವಾರ್ತೆಯು ಸರ್ವ ಲೋಕದಲ್ಲಿ ಎಲ್ಲೆಲ್ಲಿ ಸಾರಲ್ಪಡುವದೋ ಅಲ್ಲೆಲ್ಲಾ ಈಕೆಯು ಮಾಡಿದ್ದು ಸಹ ಈಕೆಯ ಜ್ಞಾಪಕಾರ್ಥವಾಗಿ ಹೇಳುವರು ಅಂದನು.
- Luke 4:25 ಲೂಕನು 4:25ಆದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಎಲೀಯನ ದಿವಸಗಳಲ್ಲಿ ಮೂರು ವರುಷ ಆರು ತಿಂಗಳು ಆಕಾಶವು ಮುಚ್ಚಲ್ಪಟ್ಟು ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲಿನಲ್ಲಿ ಅನೇಕ ವಿಧವೆಯರು ಇದ್ದರೂ
- Luke 9:27 ಲೂಕನು 9:27ಆದರೆ ನಾನು ನಿಮಗೆ ಸತ್ಯವಾಗಿ ಹೇಳು ತ್ತೇನೆ, ಇಲ್ಲಿ ನಿಂತುಕೊಂಡಿರುವ ಕೆಲವರು ದೇವರ ರಾಜ್ಯವನ್ನು ನೋಡುವ ತನಕ ಮರಣವನ್ನು ರುಚಿಸುವದೇ ಇಲ್ಲ ಅಂದನು.
- Luke 12:44 ಲೂಕನು 12:44ಅವನು ತನಗಿರುವ ಎಲ್ಲಾದರ ಮೇಲೆ ಅವನನ್ನು ಅಧಿಕಾರಿಯನ್ನಾಗಿ ನೇಮಿಸುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
- Acts 4:27 ಅಪೊಸ್ತಲರ ಕೃತ್ಯಗಳು 4:27ನಿಜವಾಗಿಯೂ ನೀನು ಅಭಿಷೇಕಿಸಿದ ನಿನ್ನ ಪವಿತ್ರ ಸೇವಕನಾದ ಯೇಸುವಿಗೆ ವಿರೋಧವಾಗಿ ಹೆರೋದನೂ ಪೊಂತ್ಯ ಪಿಲಾತನೂ ಅನ್ಯಜನರ ಮತ್ತು ಇಸ್ರಾಯೇಲ್ ಜನರ ಸಹಿತ ಒಂದಾಗಿ ಕೂಡಿಕೊಂಡು