Luke · chapter 21 · verse 31
Luke 21:31 in Kannada
ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
Ade prakaara ivellavugalu sambhavisuvadannu neevu noduvaaga devara raajyavu hattiravaayitendu tilidukolliri.
Luke 21:31 in English
- King James Version (KJV)
- So likewise ye, when ye see these things come to pass, know ye that the kingdom of God is nigh at hand.
- World English Bible (WEB)
- Even so you also, when you see these things happening, know that God’s Kingdom is near.
- American Standard Version (ASV)
- Even so ye also, when ye see these things coming to pass, know ye that the kingdom of God is nigh.
- Bible in Basic English (BBE)
- In the same way, when you see these things taking place you may be certain that the kingdom of God is near.
- Darby Translation (DBY)
- So also ye, when ye see these things take place, know that the kingdom of God is near.
- Webster's Bible (WBS)
- So likewise ye, when ye see these things come to pass, know that the kingdom of God is nigh at hand.
- Young's Literal Translation (YLT)
- so also ye, when ye may see these things happening, ye know that near is the reign of God;
Read in context
- 29ಆತನು ಅವರಿಗೆ ಒಂದು ಸಾಮ್ಯಕೊಟ್ಟು ಹೇಳಿದ್ದೇ ನಂದರೆ--ಅಂಜೂರದ ಮರವನ್ನು ಮತ್ತು ಎಲ್ಲಾ ಮರಗಳನ್ನು ನೋಡಿರಿ;
- 30ಅವು ಚಿಗುರಿದಾಗ ನೀವು ನೋಡಿ ಬೇಸಿಗೆಯು ಹತ್ತಿರವಾಯಿತೆಂದು ನೀವೇ ನೀವಾಗಿ ತಿಳಿದುಕೊಳ್ಳುವಿರಿ.
- 31ಅದೇ ಪ್ರಕಾರ ಇವೆಲ್ಲವುಗಳು ಸಂಭವಿಸುವದನ್ನು ನೀವು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ತಿಳಿದುಕೊಳ್ಳಿರಿ.
- 32ಎಲ್ಲವುಗಳು ನೆರವೇರುವ ವರೆಗೆ ಈ ಸಂತತಿಯು ಅಳಿದು ಹೋಗುವದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
- 33ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.
Cross references
- James 5:9 ಯಾಕೋಬನು 5:9ಸಹೋದರರೇ, ನೀವು ಒಬ್ಬರನ್ನೊಬ್ಬರು ದ್ವೇಷಿಸಬೇಡಿರಿ; ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಲಿನ ಮುಂದೆಯೇ ನಿಂತಿದ್ದಾನೆ.
- Hebrews 10:37 ಇಬ್ರಿಯರಿಗೆ 10:37ನಿಶ್ಚಯವಾಗಿ ಬರುವಾತನು ಇನ್ನು ಸ್ವಲ್ಪ ಕಾಲ ದಲ್ಲಿ ಬರುವನು, ತಡಮಾಡುವದಿಲ್ಲ.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Matthew 3:2 ಮತ್ತಾಯನು 3:2ನೀವು ಮಾನಸಾಂತರ ಪಡಿರಿ; ಯಾಕಂದರೆ ಪರಲೋಕರಾಜ್ಯವು ಸಮಾಪ ವಾಗಿದೆ ಎಂದು ಹೇಳಿದನು.
- Luke 12:51–57 ಲೂಕನು 12:51–57ನಾನು ಭೂಮಿಯ ಮೇಲೆ ಸಮಾಧಾನವನ್ನು ಕೊಡುವದಕ್ಕಾಗಿ ಬಂದಿದ್ದೇ ನೆಂದು ನೀವು ಭಾವಿಸುತ್ತೀರೋ? ಇಲ್ಲ, ಭೇದವನ್ನು ಉಂಟುಮಾಡುವದಕ್ಕೆ ಬಂದಿದ್ದೇನೆಂದು ನಾನು ನಿಮಗೆ ಹೇಳುತ್ತೇನೆ. ಇಂದಿನಿಂದ ಒಂದು ಮನೆಯಲ್ಲಿ ಐದುಮಂದಿ ಭೇದವಾಗಿ ಇಬ್ಬರಿಗೆ ವಿರೋಧವಾಗಿ ಮೂವರು ಮೂವರಿಗೆ ವಿರೋಧವಾಗಿ ಇಬ್ಬರು ಇರುವರು. ಮಗನಿಗೆ ವಿರೋಧವಾಗಿ ತಂದೆಯೂ ತಂದೆಗೆ ವಿರೋಧವಾಗಿ ಮಗನೂ ಮಗಳಿಗೆ ವಿರೋಧವಾಗಿ ತಾಯಿಯೂ ತಾಯಿಗೆ ವಿರೋಧವಾಗಿ ಮಗಳೂ ತನ್ನ ಸೊಸೆಗೆ ವಿರೋಧವಾಗಿ ಅತ್ತೆಯೂ ತನ್ನ ಅತ್ತೆಗೆ ವಿರೋಧವಾಗಿ ಸೊಸೆಯೂ ವಿಭಾಗಿಸ ಲ್ಪಡುವರು. ಆತನು ಇನ್ನು ಜನರಿಗೆ--ನೀವು ಪಶ್ಚಿಮದ ಕಡೆಯಿಂದ ಏಳುವ ಮೋಡವನ್ನು ನೋಡು ವಾಗ--ಮಳೆ ಬರುವದೆಂದು ತಕ್ಷಣವೇ ಅನ್ನುತ್ತೀರಿ; ಹಾಗೆಯೇ ಆಗುವದು. ದಕ್ಷಿಣಗಾಳಿ ಬೀಸುವದನ್ನು ನೀವು ನೋಡುವಾಗ--ಸೆಕೆಯಾಗುವದು ಎಂದು ನೀವು ಅನ್ನುತ್ತೀರಿ, ಅದು ಹಾಗೆಯೇ ಆಗುತ್ತದೆ. ಕಪಟಿಗಳೇ, ಭೂಮ್ಯಾಕಾಶಗಳ ಭಾವವನ್ನು ಅರಿತು ಕೊಳ್ಳುತ್ತೀರಿ; ಆದರೆ ಈ ಕಾಲವನ್ನು ನೀವು ಅರಿತು ಕೊಳ್ಳದಿರುವದು ಹೇಗೆ? ಹೌದು, ನಿಮ್ಮಷ್ಟಕ್ಕೆ ನೀವು ಸರಿಯಾದದ್ದನ್ನು ಯಾಕೆ ನಿರ್ಣಯಿಸಿಕೊಳ್ಳುವದಿಲ್ಲ?
- Matthew 16:1–4 ಮತ್ತಾಯನು 16:1–4ಸದ್ದುಕಾಯರೊಂದಿಗೆ ಫರಿಸಾಯರು ಸಹ ಬಂದು ಆತನನ್ನು ಶೋಧಿಸುವದಕ್ಕಾಗಿ ಆಕಾಶದಲ್ಲಿ ತಮಗೆ ಒಂದು ಸೂಚಕಕಾರ್ಯವನ್ನು ತೋರಿಸಬೇಕೆಂದು ಅಪೇಕ್ಷಿಸಿದರು. ಆತನು ಪ್ರತ್ಯು ತ್ತರವಾಗಿ ಅವರಿಗೆ--ಸಾಯಂಕಾಲವಾದಾಗ ಆಕಾಶವು ಕೆಂಪಾಗಿದ್ದರೆ ಒಳ್ಳೆಯ ಹವಾಮಾನ ಇರುವದೆಂದೂ ಬೆಳಿಗ್ಗೆ ಆಕಾಶವು ಮೋಡಕವಿದು ಕೆಂಪಾಗಿದ್ದರೆ--ಈ ಹೊತ್ತು ಕೆಟ್ಟ ಹವಾಮಾನ ಇದೆಯೆಂದೂ ನೀವು ಅನ್ನುತ್ತೀರಿ. ಓ ಕಪಟಿಗಳೇ, ಆಕಾಶದಲ್ಲಾಗುವ ಸೂಚನೆ ಗಳನ್ನು ನೀವು ಗ್ರಹಿಸಬಲ್ಲಿರಿ; ಆದರೆ ಸಮಯಗಳ ಸೂಚನೆಗಳನ್ನು ನೀವು ಗ್ರಹಿಸಲಾರಿರಾ? ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.