Luke · chapter 21 · verse 5
Luke 21:5 in Kannada
ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
Taruvaaya kelavaru devaalayada vishaya vaagi adu enthaa olle kallugalindaloo daanaga lindaloo alankrutavaagide endu maatanaadu ttiruvaaga aatanu--
Luke 21:5 in English
- King James Version (KJV)
- And as some spake of the temple, how it was adorned with goodly stones and gifts, he said,
- World English Bible (WEB)
- As some were talking about the temple and how it was decorated with beautiful stones and gifts, he said,
- American Standard Version (ASV)
- And as some spake of the temple, how it was adorned with goodly stones and offerings, he said,
- Bible in Basic English (BBE)
- And some were talking about the Temple, how it was made fair with beautiful stones and with offerings, but he said,
- Darby Translation (DBY)
- And as some spoke of the temple, that it was adorned with goodly stones and consecrated offerings, he said,
- Webster's Bible (WBS)
- And as some spoke of the temple, that it was adorned with goodly stones, and gifts, he said,
- Young's Literal Translation (YLT)
- And certain saying about the temple, that with goodly stones and devoted things it hath been adorned, he said,
Read in context
- 3ಆತನು--ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಈ ಬಡ ವಿಧವೆಯು ಅವರೆಲ್ಲರಿಗಿಂತಲೂ ಹೆಚ್ಚು ಹಾಕಿದ್ದಾಳೆ;
- 4ಯಾಕಂದರೆ ಇವರೆಲ್ಲರೂ ತಮಗಿರುವ ಸಮೃದ್ಧಿಯಲ್ಲಿ ದೇವರಿಗೆ ಕಾಣಿಕೆಗಳನ್ನು ಹಾಕಿದ್ದಾರೆ; ಆದರೆ ಈಕೆಯು ತನ್ನ ಬಡತನದಲ್ಲಿ ತನ್ನ ಜೀವನಕ್ಕೆ ಇದ್ದದ್ದನ್ನೆಲ್ಲಾ ಹಾಕಿದ್ದಾಳೆ ಅಂದನು.
- 5ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು--
- 6ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- 7ಆಗ ಅವರು ಆತನಿಗೆ--ಬೋಧಕನೇ, ಇವುಗಳು ಯಾವಾಗ ಆಗುವವು? ಇವುಗಳು ಸಂಭವಿ ಸುವದಕ್ಕಿರುವಾಗ ಯಾವ ಸೂಚನೆ ಇರುವದು ಎಂದು ಕೇಳಿದರು.
Cross references
- Mark 13:1–37 ಮಾರ್ಕನು 13:1–37ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು. ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು. ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ-- ಇವೆಲ್ಲಾ ಯಾವಾಗ ಆಗುವವು? ಮತ್ತು ಇವೆಲ್ಲವುಗಳು ನೆರವೇರುವದಕ್ಕೆ ಯಾವ ಸೂಚನೆ ಇರುವದು? ನಮಗೆ ಹೇಳು ಎಂದು ಕೇಳಿ ದರು. ಯೇಸು ಪ್ರತ್ಯುತ್ತರವಾಗಿ ಅವರಿಗೆ ಹೇಳಲಾ ರಂಭಿಸಿ-- ಯಾವನಾದರೂ ನಿಮ್ಮನ್ನು ಮೋಸಗೊಳಿಸ ದಂತೆ ಎಚ್ಚರಿಕೆ ತೆಗೆದು ಕೊಳ್ಳಿರಿ; ಯಾಕಂದರೆ ಅನೇ ಕರು ನನ್ನ ಹೆಸರಿನಲ್ಲಿ ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ. ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ. ಸುವಾರ್ತೆಯು ಮೊದಲು ಎಲ್ಲಾ ಜನಾಂಗಗಳಲ್ಲಿ ಸಾರಲ್ಪಡುವದು ಅಗತ್ಯವಾಗಿದೆ. ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು ಆಗ ಸಹೋದರನು ಸಹೋದರನನ್ನೂ ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು; ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವ ರನ್ನು ಕೊಲ್ಲಿಸುವದಕ್ಕೆ ಕಾರಣರಾಗುವರು. ನನ್ನ ಹೆಸರಿನ ನಿಮಿತ್ತವಾಗಿ ಎಲ್ಲರೂ ನಿಮ್ಮನ್ನು ಹಗೆ ಮಾಡು ವರು. ಆದರೆ ಕಡೇವರೆಗೂ ತಾಳುವವನೇ ರಕ್ಷಣೆ ಹೊಂದುವನು. ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ. ಮನೇಮಾಳಿಗೆಯ ಮೇಲಿದ್ದವನು ಕೆಳಗೆ ಇಳಿದು ಮನೆಯೊಳಕ್ಕೆ ಹೋಗದೆ ಯೂ ಇಲ್ಲವೆ ತನ್ನ ಮನೆಯೊಳಗೆ ಪ್ರವೇಶಿಸಿ ಅದರೊ ಳಗಿಂದ ಏನನ್ನೂ ತಕ್ಕೊಳ್ಳದೆಯೂ ಇರಲಿ. ಹೊಲ ದಲ್ಲಿರುವವನು ಮತ್ತೆ ತನ್ನ ಉಡುಪನ್ನು ತಕ್ಕೊಳ್ಳುವದಕ್ಕೆ ಹಿಂದಿರುಗದಿರಲಿ. ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ! ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ. ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ. ಕರ್ತನು ಆ ದಿನಗಳನ್ನು ಕಡಿಮೆ ಮಾಡದಿದ್ದರೆ ಯಾವನೂ ರಕ್ಷಣೆ ಹೊಂದುವ ದಿಲ್ಲ. ಆದರೆ ಆಯಲ್ಪಟ್ಟವರಿಗಾಗಿ ಅಂದರೆ ತಾನು ಆರಿಸಿಕೊಂಡವರಿಗಾಗಿ ಆ ದಿನಗಳನ್ನು ಕಡಿಮೆ ಮಾಡಿ ದ್ದಾನೆ. ಆಗ ಯಾವನಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ; ಇಲ್ಲವೆ ಅಗೋ, ಆತನು ಅಲ್ಲಿ ದ್ದಾನೆ ಎಂದು ಹೇಳಿದರೆ ಅವನನ್ನು ನಂಬಬೇಡಿರಿ; ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು. ಆದರೆ ನೀವು ಎಚ್ಚರಿಕೆ ತೆಗೆದುಕೊಳ್ಳಿರಿ; ಇಗೋ, ನಾನು ನಿಮಗೆ ಎಲ್ಲವುಗಳನ್ನು ಮುಂದಾಗಿ ಹೇಳಿದ್ದೇನೆ. ಇದಲ್ಲದೆ ಆ ದಿವಸಗಳಲ್ಲಿ ಸಂಕಟವು ತೀರಿದ ನಂತರ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕನ್ನು ಕೊಡದೆ ಇರುವನು. ಆಕಾಶದ ನಕ್ಷತ್ರಗಳು ಬೀಳುವವು ಮತ್ತು ಆಕಾಶದಲ್ಲಿರುವ ಶಕ್ತಿಗಳು ಕದಲುವವು. ಆಗ ಮನುಷ್ಯಕುಮಾರನು ಬಹು ಬಲದಿಂದಲೂ ಮಹಿಮೆಯಿಂದಲೂ ಮೇಘ ಗಳಲ್ಲಿ ಬರುವದನ್ನು ಅವರು ನೋಡುವರು. ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯ ವರೆಗೆ ತಾನು ಆರಿಸಿಕೊಂಡ ವರನ್ನು ನಾಲ್ಕು ದಿಕ್ಕುಗಳಿಂದಲೂ ಒಟ್ಟುಗೂಡಿಸುವನು. ಇದಲ್ಲದೆ ಅಂಜೂರ ಮರದ ಸಾಮ್ಯವನ್ನು ಕಲಿ ತುಕೊಳ್ಳಿರಿ; ಅದರ ಕೊಂಬೆ ಇನ್ನೂ ಎಳೇದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳುಕೊಳ್ಳುತ್ತೀರಿ; ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ. ಇವೆಲ್ಲವುಗಳು ನೆರವೇರುವವರೆಗೆ ಈ ಸಂತತಿಯು ಅಳಿದು ಹೋಗುವದೇ ಇಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ. ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು. ನೀವು ಎಚ್ಚರವಾಗಿರ್ರಿ, ಜಾಗರೂಕರಾಗಿರ್ರಿ, ಪ್ರಾರ್ಥಿಸಿರಿ. ಯಾಕಂದರೆ ಸಮಯವು ಯಾವಾಗ ಎಂದು ನಿಮಗೆ ತಿಳಿಯದು. ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ. ಆದದರಿಂದ ಜಾಗರೂಕರಾಗಿರ್ರಿ. ಯಾಕಂದರೆ ಮನೇ ಯಜಮಾನನು ಸಂಜೆಯಲ್ಲಿಯೋ ಸರಿಹೊತ್ತಿನಲ್ಲಿಯೋ ಇಲ್ಲವೆ ಹುಂಜ ಕೂಗುವಾ ಗಲೋ ಇಲ್ಲವೆ ಮುಂಜಾನೆಯಲ್ಲಿಯೋ ಯಾವಾಗ ಬರುತ್ತಾನೋ ನಿಮಗೆ ಗೊತ್ತಿಲ್ಲ. ಆತನು ಫಕ್ಕನೆ ಬಂದು ನೀವು ನಿದ್ರೆ ಮಾಡುವದನ್ನು ಕಂಡಾನು.ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು. ನಿಮಗೆ ಹೇಳುವದನ್ನು ನಾನು ಎಲ್ಲರಿಗೂ ಹೇಳು ತ್ತೇನೆ--ಎಚ್ಚರವಾಗಿರ್ರಿ ಅಂದನು.
- John 2:20 ಯೋಹಾನನು 2:20ಅದಕ್ಕೆ ಯೆಹೂದ್ಯರು-- ಈ ದೇವಾಲಯವನ್ನು ಕಟ್ಟುವದಕ್ಕೆ ನಾಲ್ವತ್ತಾರು ವರುಷಗಳು ಹಿಡಿದವು; ನೀನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವಿಯೋ ಅಂದರು.
- Matthew 24:1–51 ಮತ್ತಾಯನು 24:1–51ತರುವಾಯ ಯೇಸು ದೇವಾಲಯದಿಂದ ಹೊರಟುಹೋದ ಮೇಲೆ ಆತನ ಶಿಷ್ಯರು ಆ ದೇವಾಲಯದ ಕಟ್ಟಡಗಳನ್ನು ತೋರಿಸುವದಕ್ಕಾಗಿ ಆತನ ಬಳಿಗೆ ಬಂದರು. ಆಗ ಯೇಸು ಅವರಿಗೆ--ಇವುಗಳನ್ನೆಲ್ಲಾ ನೀವು ನೋಡುತ್ತೀರಲ್ಲಾ. ಎಲ್ಲಾ ಕೆಡವ ಲ್ಪಡದು ಕಲ್ಲಿನ ಮೇಲೆ ಕಲ್ಲು ಒಂದು ಇಲ್ಲಿ ಬಿಡಲ್ಪ ಡುವದಿಲ್ಲ ಎಂದು ನಾನು ನಿಮಗೆ ನಿಜವಾಗಿ ಹೇಳು ತ್ತೇನೆ ಅಂದನು. ಆತನು ಎಣ್ಣೇಮರಗಳ ಗುಡ್ಡದ ಮೇಲೆ ಕೂತುಕೊಂಡಾಗ ಶಿಷ್ಯರು ಪ್ರತ್ಯೇಕವಾಗಿ ಆತನ ಬಳಿಗೆ ಬಂದು--ಇವು ಯಾವಾಗ ಆಗುವವು? ಮತ್ತು ನಿನ್ನ ಬರೋಣಕ್ಕೂ ಲೋಕವು ಅಂತ್ಯವಾಗುವದಕ್ಕೂ ಸೂಚನೆ ಏನು? ನಮಗೆ ಹೇಳು ಎಂದು ಕೇಳಿದರು. ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಯಾವನಾ ದರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆ ಯಿಂದಿರ್ರಿ. ಯಾಕಂದರೆ ನನ್ನ ಹೆಸರಿನಲ್ಲಿ ಅನೇಕರು ಬಂದು--ನಾನು ಕ್ರಿಸ್ತನು ಎಂದು ಹೇಳಿ ಅನೇಕರನ್ನು ಮೋಸಗೊಳಿಸುವರು. ಯುದ್ಧಗಳನ್ನೂ ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಿರಿ. ಕಳವಳಗೊಳ್ಳದಂತೆ ನೀವು ನೋಡಿಕೊಳ್ಳಿರಿ; ಯಾಕಂದರೆ ಇವೆಲ್ಲವುಗಳು ಸಂಭವಿಸುವದು ಅಗತ್ಯ; ಆದರೆ ಇದು ಇನ್ನೂ ಅಂತ್ಯವಲ್ಲ. ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಅಲ್ಲಲ್ಲಿ ಬರಗಳು, ಘೋರವ್ಯಾಧಿಗಳು ಮತ್ತು ಭೂಕಂಪಗಳು ಆಗುವವು. ಇವೆಲ್ಲವುಗಳು ಸಂಕಟಗಳ ಆರಂಭವು. ಆಗ ನಿಮ್ಮನ್ನು ಸಂಕಟಪಡಿ ಸುವದಕ್ಕಾಗಿ ಒಪ್ಪಿಸುವರು; ಮತ್ತು ನಿಮ್ಮನ್ನು ಕೊಲ್ಲು ವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗಗಳವರು ನಿಮ್ಮನ್ನು ಹಗೆ ಮಾಡುವರು. ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು. ಇದಲ್ಲದೆ ಬಹುಮಂದಿ ಸುಳ್ಳು ಪ್ರವಾದಿಗಳು ಎದ್ದು ಅನೇಕರನ್ನು ಮೋಸಗೊಳಿ ಸುವರು. ದುಷ್ಟತನ ಹೆಚ್ಚಾಗುವದರಿಂದ ಬಹಳ ಜನರ ಪ್ರೀತಿಯು ತಣ್ಣಗಾಗುವದು. ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು. ರಾಜ್ಯದ ಈ ಸುವಾರ್ತೆಯು ಲೋಕದಲ್ಲೆಲ್ಲಾ ಎಲ್ಲಾ ಜನಾಂಗಗಳಿಗೆ ಸಾಕ್ಷಿಗಾಗಿ ಸಾರಲ್ಪಡುವದು; ತರುವಾಯ ಅಂತ್ಯಬರುವದು. ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ; ಮಾಳಿಗೆಯ ಮೇಲಿರುವವನು ತನ್ನ ಮನೆಯೊಳಗಿಂದ ಏನಾದರೂ ತಕ್ಕೊಳ್ಳುವದಕ್ಕಾಗಿ ಕೆಳಗೆ ಇಳಿಯದಿರಲಿ; ಇಲ್ಲವೆ ಹೊಲದಲ್ಲಿರುವವನು ತನ್ನ ಬಟ್ಟೆಗಳನ್ನು ತಕ್ಕೊಳ್ಳುವ ದಕ್ಕಾಗಿ ಹಿಂತಿರುಗದೆ ಇರಲಿ. ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ! ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ. ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು. ಆಗ ಯಾರಾದರೂ ನಿಮಗೆ--ಇಗೋ, ಕ್ರಿಸ್ತನು ಇಲ್ಲಿದ್ದಾನೆ ಇಲ್ಲವೆ ಅಲ್ಲಿದ್ದಾನೆ ಎಂದು ಹೇಳಿದರೆ ಅದನ್ನು ನಂಬಬೇಡಿರಿ. ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು. ಇಗೋ, ಮುಂದಾಗಿ ನಾನು ನಿಮಗೆ ಹೇಳಿದ್ದೇನೆ. ಆದಕಾರಣ ಅವರು ನಿಮಗೆ--ಇಗೋ, ಆತನು ಅಡವಿಯಲ್ಲಿದ್ದಾನೆಂದು ಹೇಳಿದರೆ ಹೋಗಬೇಡಿರಿ; ಇಗೋ, ಆತನು ಗುಪ್ತವಾದ ಕೋಣೆಗಳಲ್ಲಿದ್ದಾನೆಂದು ಹೇಳಿದರೆ ಅದನ್ನು ನಂಬ ಬೇಡಿರಿ. ಯಾಕಂದರೆ ಮಿಂಚು ಪೂರ್ವದಿಂದ ಹೊರಟು ಬಂದು ಪಶ್ಚಿಮದವರೆಗೆ ಹೊಳೆಯು ವಂತೆಯೇ ಮನುಷ್ಯಕುಮಾರನ ಬರೋಣವೂ ಇರು ವದು. ಯಾಕಂದರೆ ಹೆಣ ಇದ್ದಲ್ಲಿ ಹದ್ದುಗಳು ಕೂಡಿಕೊಳ್ಳುವವು. ಆ ಸಂಕಟದ ದಿವಸಗಳು ಮುಗಿದ ತಕ್ಷಣವೇ ಸೂರ್ಯನು ಕತ್ತಲಾಗುವನು; ಚಂದ್ರನು ತನ್ನ ಬೆಳಕು ಕೊಡದೆ ಇರುವನು; ನಕ್ಷತ್ರಗಳು ಆಕಾಶದಿಂದ ಬೀಳುವವು ಆಕಾಶದ ಶಕ್ತಿಗಳು ಕದಲಿಸಲ್ಪಡುವವು. ಆಗ ಮನುಷ್ಯಕುಮಾರನ ಸೂಚನೆಯು ಆಕಾಶದಲ್ಲಿ ಕಾಣುವದು; ಭೂಮಿಯ ಎಲ್ಲಾ ಗೋತ್ರದವರು ಗೋಳಾಡುವರು. ಮತ್ತು ಮನುಷ್ಯಕುಮಾರನು ಆಕಾಶದ ಮೇಘಗಳಲ್ಲಿ ಶಕ್ತಿಯೊಡನೆಯೂ ಮಹಾ ಪ್ರಭಾವದೊಂದಿಗೂ ಬರುವದನ್ನು ಅವರು ನೋಡು ವರು. ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು. ಈಗ ಅಂಜೂರ ಮರದ ಸಾಮ್ಯದಿಂದ ಕಲಿ ಯಿರಿ; ಆದರ ಕೊಂಬೆಯು ಇನ್ನೂ ಎಳೆಯದಾಗಿದ್ದು ಎಲೆಗಳನ್ನು ಬಿಡುವಾಗ ಬೇಸಿಗೆಯು ಹತ್ತಿರವಾಯಿ ತೆಂದು ನೀವು ತಿಳಿದುಕೊಳ್ಳುವಿರಿ; ಅದರಂತೆಯೇ ನೀವು ಇವುಗಳನ್ನೆಲ್ಲಾ ನೋಡುವಾಗ ಅದು ಸವಿಾಪ ದಲ್ಲಿ ಬಾಗಲುಗಳಲ್ಲಿಯೇ ಇದೆಯೆಂದು ತಿಳು ಕೊಳ್ಳಿರಿ. ಇವೆಲ್ಲವುಗಳು ನೇರವೇರುವ ವರೆಗೆ ಈ ಸಂತತಿಯು ಅಳಿದುಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ. ಆದರೆ ಆ ದಿನವಾಗಲೀ ಗಳಿಗೆಯಾಗಲೀ ನನ್ನ ತಂದೆಗೆ ಮಾತ್ರವೇ ಹೊರತು ಮತ್ತಾರಿಗೂ ಪರಲೋಕದ ದೂತರಿಗೂ ತಿಳಿಯದು. ಆದರೆ ನೋಹನ ದಿವಸಗಳು ಇದ್ದಂತೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿವಸದ ವರೆಗೆ ಪ್ರಳಯವು ಬರುವದಕ್ಕಿಂತ ಮುಂಚಿನ ಆ ದಿವಸಗಳಲ್ಲಿ ಜನರು ತಿನ್ನುತ್ತಾ ಕುಡಿಯುತ್ತಾ ಮದುವೆ ಮಾಡಿಕೊಳ್ಳುತ್ತಾ ಮದುವೆ ಮಾಡಿಕೊಡುತ್ತಾ ಇದ್ದರು. ಪ್ರಳಯವು ಬಂದು ಅವರನ್ನು ಬಡುಕೊಂಡು ಹೊಗುವವರೆಗೂ ಅವರಿಗೆ ತಿಳಿದಿರಲಿಲ್ಲ; ಹಾಗೆಯೇ ಮನುಷ್ಯ ಕುಮಾರನ ಬರೋಣವೂ ಇರುವದು. ಆಗ ಇಬ್ಬರು ಹೊಲದಲ್ಲಿರುವರು; ಒಬ್ಬನು ತೆಗೆಯಲ್ಪಡು ವನು; ಮತ್ತೊಬ್ಬನು ಬಿಡಲ್ಪಡುವನು. ಇಬ್ಬರು ಸ್ತ್ರೀಯರು ಬೀಸುತ್ತಿರುವಾಗ ಒಬ್ಬಳು ತೆಗೆಯಲ್ಪಡು ವಳು, ಮತ್ತೊಬ್ಬಳು ಬಿಡಲ್ಪಡುವಳು. ನಿಮ್ಮ ಕರ್ತನು ಯಾವ ಗಳಿಗೆಯಲ್ಲಿ ಬರು ತ್ತಾನೋ ನಿಮಗೆ ಗೊತ್ತಿಲ್ಲವಾದದರಿಂದ ಎಚ್ಚರ ವಾಗಿರ್ರಿ. ಕಳ್ಳನು ಯಾವ ಗಳಿಗೆಯಲ್ಲಿ ಬರುತ್ತಾ ನೆಂದು ಮನೇ ಯಜಮಾನನು ತಿಳಿದಿದ್ದರೆ ಅವನು ತನ್ನ ಮನೆಯು ಕನ್ನಾಕೊರೆಯದಂತೆ ಕಾಯುತ್ತಿದ್ದ ನೆಂದು ನೀವು ತಿಳಿದುಕೊಳ್ಳಿರಿ. ಆದಕಾರಣ ನೀವು ಸಹ ಸಿದ್ಧವಾಗಿರ್ರಿ; ಯಾಕಂದರೆ ನೀವು ನೆನಸದ ಗಳಿಗೆಯಲ್ಲಿ ಮನುಷ್ಯಕುಮಾರನು ಬರುತ್ತಾನೆ. ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲ ದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ಅಧಿಕಾರಿಯೂ ನಂಬಿಗಸ್ತನೂ ಜ್ಞಾನಿಯೂ ಆದ ಸೇವಕನು ಯಾರು? ಯಜಮಾನನು ಬಂದು ಯಾವ ಸೇವಕನು ಹಾಗೆ ಮಾಡುವದನ್ನು ನೋಡುವನೋ ಆ ಸೇವಕನೇ ಧನ್ಯನು. ಅವನನ್ನು ಆತನು ತನ್ನ ಎಲ್ಲಾ ಆಸ್ತಿಯ ಮೇಲೆ ನೇಮಿಸುವನೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ. ಆದರೆ ಆ ಕೆಟ್ಟ ಸೇವಕನು ತನ್ನ ಹೃದಯದಲ್ಲಿ--ನನ್ನ ಯಜಮಾನನು ಬರುವದಕ್ಕೆ ತಡಮಾಡುತ್ತಾನೆ ಎಂದು ಅಂದುಕೊಂಡು ತನ್ನ ಜೊತೇ ಸೇವಕರನ್ನು ಹೊಡೆಯುತ್ತಾ ಕುಡುಕರ ಸಂಗಡ ತಿನ್ನುವದಕ್ಕೂ ಕುಡಿಯುವದಕ್ಕೂ ಪ್ರಾರಂಭಿಸು ವದಾದರೆ ಅವನು ನಿರೀಕ್ಷಿಸದೆ ಇರುವ ದಿನದಲ್ಲಿ ಇಲ್ಲವೆ ನೆನಸದ ಗಳಿಗೆಯಲ್ಲಿ ಆ ಸೇವಕನ ಯಜಮಾ ನನು ಬಂದುಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು. ಅವನನ್ನು ಛೇದಿಸಿ ಕಪಟಿಗಳೊಂದಿಗೆ ಅವನ ಪಾಲನ್ನು ನೇಮಿಸುವನು; ಅಲ್ಲಿ ಗೋಳಾಟವೂ ಹಲ್ಲು ಕಡಿಯೋಣವೂ ಇರುವವು.