Luke · chapter 22 · verse 1
Luke 22:1 in Kannada
ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
Aaga paskavemba huliyillada rottiya habbavu saviాpavaagittu.
Luke 22:1 in English
- King James Version (KJV)
- Now the feast of unleavened bread drew nigh, which is called the Passover.
- World English Bible (WEB)
- Now the feast of unleavened bread, which is called the Passover, was approaching.
- American Standard Version (ASV)
- Now the feast of unleavened bread drew nigh, which is called the Passover.
- Bible in Basic English (BBE)
- Now the feast of unleavened bread was near, which is called the Passover.
- Darby Translation (DBY)
- Now the feast of unleavened bread, which [is] called the passover, drew nigh,
- Webster's Bible (WBS)
- Now the feast of unleavened bread drew nigh, which is called the Passover.
- Young's Literal Translation (YLT)
- And the feast of the unleavened food was coming nigh, that is called Passover,
Read in context
- 1ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
- 2ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಆತನನ್ನು ಹೇಗೆ ಕೊಲ್ಲ ಬೇಕೆಂದು ಹುಡುಕುತ್ತಿದ್ದರು. ಆದರೆ ಅವರು ಜನರಿಗೆ ಭಯಪಟ್ಟರು.
- 3ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು.
Cross references
- Leviticus 23:5–6 ಯಾಜಕಕಾಂಡ 23:5–6ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವ ಸದ ಸಾಯಂಕಾಲದಲ್ಲಿ ಕರ್ತನ ಪಸ್ಕವು. ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಕರ್ತನಿಗೆ ಹುಳಿ ಯಿಲ್ಲದ ರೊಟ್ಟಿಯ ಹಬ್ಬವಿರುವದು; ಏಳು ದಿವಸಗಳ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನತಕ್ಕದ್ದು.
- Exodus 12:6–23 ವಿಮೋಚನಕಾಂಡ 12:6–23ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು. ರಕ್ತದಲ್ಲಿ ಸ್ವಲ್ಪ ತೆಗೆದು ಅವರು ಊಟ ಮಾಡುವ ಮನೆಗಳ ಎರಡು ನಿಲುವು ಗಂಬಗ ಳಿಗೂ ಬಾಗಿಲ ಮೇಲಿನ ಅಡ್ಡಗಂಬಕ್ಕೂ ಹಚ್ಚಬೇಕು. ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ತಿನ್ನಬೇಕು. ಬೆಂಕಿಯಲ್ಲಿ ಸುಟ್ಟು ಅದನ್ನೂ ಹುಳಿಯಿಲ್ಲದ ರೊಟ್ಟಿಗ ಳನ್ನೂ ಕಹಿಯಾದ ಪಲ್ಯಗಳ ಸಂಗಡ ತಿನ್ನಬೇಕು. ಅದರಲ್ಲಿ ಯಾವದನ್ನೂ ಹಸಿಯಾದದ್ದಾಗಲಿ ನೀರಿ ನಲ್ಲಿ ಬೇಯಿಸಿದ್ದಾಗಲಿ ತಿನ್ನದೆ ಅದರ ತಲೆ ತೊಡೆ ಒಳಗಿನವುಗಳ ಸಹಿತವಾಗಿ ಬೆಂಕಿಯಲ್ಲಿ ಸುಟ್ಟೇ ಅದನ್ನು ತಿನ್ನಬೇಕು. ಅದರಲ್ಲಿ ಬೆಳಗಿನ ವರೆಗೆ ಏನನ್ನೂ ಉಳಿಸಬಾರದು. ಬೆಳಗಿನ ವರೆಗೆ ಅದರಲ್ಲಿ ಉಳಿದದ್ದನ್ನು ಬೆಂಕಿಯಿಂದ ಸುಟ್ಟುಬಿಡಬೇಕು. ನೀವು ಅದನ್ನು ತಿನ್ನತಕ್ಕ ರೀತಿ ಇದೇ: ನೀವು ನಿಮ್ಮ ನಡುಕಟ್ಟಿಕೊಂಡು, ಕೆರ ಮೆಟ್ಟಿಕೊಂಡು, ಕೋಲನ್ನು ಹಿಡಿದುಕೊಂಡು, ತ್ವರೆಯಾಗಿ ಅದನ್ನು ತಿನ್ನಬೇಕು. ಅದು ಕರ್ತನ ಪಸ್ಕವಾಗಿದೆ. ನಾನು ಈ ರಾತ್ರಿ ಐಗುಪ್ತದೇಶದಲ್ಲಿ ಹಾದುಹೋಗುತ್ತೇನೆ. ಐಗುಪ್ತದೇಶದಲ್ಲಿರುವ ಎಲ್ಲಾ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಇರುವ ಚೊಚ್ಚ ಲಾದವುಗಳನ್ನು ಸಂಹರಿಸುವೆನು. ಐಗುಪ್ತದ ದೇವರುಗ ಳಿಗೆಲ್ಲಾ ನಾನು ನ್ಯಾಯತೀರಿಸುವೆನು; ನಾನೇ ಕರ್ತನು. ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವದು. ಆ ರಕ್ತವನ್ನು ನಾನು ನೋಡುವಾಗ ನಿಮ್ಮನ್ನು ದಾಟಿಹೋಗುವೆನು. ಐಗುಪ್ತದೇಶವನ್ನು ನಾನು ಹೊಡೆಯುವ ಸಮಯದಲ್ಲಿ ನಿಮ್ಮನ್ನು ನಾಶಮಾಡುವ ಯಾವ ಬಾಧೆಯೂ ನಿಮ್ಮ ಮೇಲೆ ಬರುವದಿಲ್ಲ. ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು. ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು. ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು. ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು. ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳು ದಿನಗಳ ವರೆಗೆ ಹುಳಿಹಿಟ್ಟು ನಿಮ್ಮ ಮನೆಗಳಲ್ಲಿ ಇರಬಾರದು; ಹುಳಿಕಲಸಿದ್ದನ್ನು ಯಾರು ತಿನ್ನುವರೋ ಆ ವ್ಯಕ್ತಿಯು ಪರದೇಶದವನಾಗಲಿ ಸ್ವದೇಶದವ ನಾಗಲಿ ಅವನನ್ನು ಇಸ್ರಾಯೇಲ್ ಸಭೆಯೊಳಗಿಂದ ತೆಗೆದು ಹಾಕಬೇಕು. ಹುಳಿಕಲಸಿದ್ದು ಯಾವದೇ ಆಗಿರಲಿ ನೀವು ತಿನ್ನಬಾರದು; ನಿಮ್ಮ ಎಲ್ಲಾ ನಿವಾಸ ಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು ಎಂದು ಹೇಳಿದನು. ಆಗ ಮೋಶೆಯು ಇಸ್ರಾಯೇಲಿನ ಎಲ್ಲಾ ಹಿರಿಯ ರನ್ನು ಕರೆದು ಅವರಿಗೆ--ನಿಮ್ಮ ಗೋತ್ರಗಳ ಪ್ರಕಾರ ಕುರಿಗಳನ್ನು ತೆಗೆದುಕೊಂಡು ಪಸ್ಕವನ್ನು (ಕುರಿಯನ್ನು) ಕೊಯ್ಯಿರಿ. ಹಿಸ್ಸೋಪಿನ ಕಟ್ಟನ್ನು ತೆಗೆದುಕೊಂಡು ಬೋಗುಣಿಯಲ್ಲಿರುವ ರಕ್ತದಲ್ಲಿ ಅದನ್ನು ಅದ್ದಿ ಬಾಗಿ ಲಿನ ಮೇಲಿನ ಅಡ್ಡಗಂಬಕ್ಕೂ ಪಕ್ಕದಲ್ಲಿರುವ ಎರಡು ನಿಲುವುಗಂಬಗಳಿಗೂ ಹಚ್ಚಿರಿ. ನಿಮ್ಮಲ್ಲಿ ಯಾರೂ ಬೆಳಗಾಗುವ ವರೆಗೆ ಮನೆಯ ಬಾಗಿಲನ್ನು ಬಿಟ್ಟು ಹೋಗಬಾರದು. ಕರ್ತನು ಐಗುಪ್ತ್ಯರನ್ನು ಸಂಹರಿ ಸುವದಕ್ಕಾಗಿ ಹಾದುಹೋಗುವನು; ಆತನು ಮೇಲಿನ ಅಡ್ಡಗಂಬದ ಮೇಲೂ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡ ದಂತೆ ನಿಮ್ಮ ಬಾಗಿಲುಗಳನ್ನು ದಾಟಿ ಹೋಗುವನು.
- Mark 14:1–2 ಮಾರ್ಕನು 14:1–2ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು. ಆದರೆ ಅವರು--ಜನರು ದಂಗೆ ಏಳದಂತೆ ಹಬ್ಬದಲ್ಲಿ ಬೇಡ ಎಂದು ಅಂದುಕೊಂಡರು.
- John 11:55–57 ಯೋಹಾನನು 11:55–57ಆಗ ಯೆಹೂದ್ಯರ ಪಸ್ಕವು ಹತ್ತಿರವಾಗಿತ್ತು; ಅನೇಕರು ತಮ್ಮನ್ನು ಶುದ್ಧಿ ಮಾಡಿಕೊಳ್ಳುವದಕ್ಕೋಸ್ಕರ ಪಸ್ಕಕ್ಕೆ ಮುಂಚೆ ಹಳ್ಳಿಗಳಿಂದ ಯೆರೂಸಲೇಮಿಗೆ ಹೋದರು. ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು. ಆಗ ಪ್ರಧಾನಯಾಜಕರೂ ಫರಿಸಾಯ ರೂ ಆತನನ್ನು ಹಿಡಿಯುವಂತೆ ಆತನಿರುವ ಸ್ಥಳವು ಯಾರಿಗಾದರೂ ತಿಳಿದರೆ ಅವರು ತಮಗೆ ತೋರಿಸ ಬೇಕೆಂದು ಅಪ್ಪಣೆ ಕೊಟ್ಟಿದ್ದರು.
- Matthew 26:2–5 ಮತ್ತಾಯನು 26:2–5ಎರಡು ದಿವಸಗಳಾದ ಮೇಲೆ ಪಸ್ಕ ಹಬ್ಬ ಇರುವ ದೆಂದು ನೀವು ಬಲ್ಲಿರಿ. ಆಗ ಮನುಷ್ಯಕುಮಾರನು ಶಿಲುಬೆಗೆ ಹಾಕಲ್ಪಡುವದಕ್ಕಾಗಿ ಹಿಡಿದುಕೊಡಲ್ಪಡು ವನು ಅಂದನು. ಆಗ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಜನರ ಹಿರಿಯರೂ ಒಟ್ಟಾಗಿ ಸೇರಿ ಕಾಯಫನೆಂಬ ಮಹಾಯಾಜಕನ ಭವನಕ್ಕೆ ಬಂದು ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು. ಆದರೆ ಅವರು ಜನರಲ್ಲಿ ಗದ್ದಲವಾದೀತು ಹಬ್ಬದಲ್ಲಿ ಬೇಡ ಅಂದರು.
- Mark 14:12 ಮಾರ್ಕನು 14:12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
- 1 Corinthians 5:7–8 1 ಕೊರಿಂಥದವರಿಗೆ 5:7–8ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ. ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯಿಂದ ಹಬ್ಬವನ್ನು ಆಚರಿಸೋಣ.