Luke · chapter 22 · verse 27
Luke 22:27 in Kannada
ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
Haagaadare yaaru doddavaru? Ootakke kootukondiruva vano illave seve maaduvavano? Ootakke kootukondavanallavo? Aadare naanu nimmolage seve maaduvavanantiddene.
Luke 22:27 in English
- King James Version (KJV)
- For whether [is] greater, he that sitteth at meat, or he that serveth? [is] not he that sitteth at meat? but I am among you as he that serveth.
- World English Bible (WEB)
- For who is greater, one who sits at the table, or one who serves? Isn’t it he who sits at the table? But I am among you as one who serves.
- American Standard Version (ASV)
- For which is greater, he that sitteth at meat, or he that serveth? is not he that sitteth at meat? but I am in the midst of you as he that serveth.
- Bible in Basic English (BBE)
- For which is greater, the guest who is seated at a meal or the servant who is waiting on him? is it not the guest? but I am among you as a servant.
- Darby Translation (DBY)
- For which [is] greater, he that is at table or he that serves? [Is] not he that is at table? But I am in the midst of you as the one that serves.
- Webster's Bible (WBS)
- For which [is] greater, he that sitteth at table, or he that serveth? [is] not he that sitteth at table? but I am among you as he that serveth.
- Young's Literal Translation (YLT)
- for who is greater? he who is reclining (at meat), or he who is ministering? is it not he who is reclining (at meat)? and I — I am in your midst as he who is ministering.
Read in context
- 25ಆಗ ಆತನು ಅವರಿಗೆ--ಅನ್ಯಜನಗಳ ಅರಸರು ಅವರ ಮೇಲೆ ದೊರೆತನ ಮಾಡುತ್ತಾರೆ; ಅವರ ಮೇಲೆ ಅಧಿಕಾರವನ್ನು ನಡಿಸುವವರು ಉಪ ಕಾರಿಗಳೆಂದು ಕರೆಯಲ್ಪಡುತ್ತಾರೆ.
- 26ಆದರೆ ನೀವು ಹಾಗಿರಬಾರದು. ನಿಮ್ಮೊಳಗೆ ಅತಿದೊಡ್ಡವನಾಗಿರು ವವನು ಚಿಕ್ಕವನಂತೆ ಇರಲಿ; ಮುಖ್ಯಸ್ಥನಾಗಿರುವವನು ಸೇವೆ ಮಾಡುವವನಂತೆ ಇರಲಿ.
- 27ಹಾಗಾದರೆ ಯಾರು ದೊಡ್ಡವರು? ಊಟಕ್ಕೆ ಕೂತುಕೊಂಡಿರುವ ವನೋ ಇಲ್ಲವೆ ಸೇವೆ ಮಾಡುವವನೋ? ಊಟಕ್ಕೆ ಕೂತುಕೊಂಡವನಲ್ಲವೋ? ಆದರೆ ನಾನು ನಿಮ್ಮೊಳಗೆ ಸೇವೆ ಮಾಡುವವನಂತಿದ್ದೇನೆ.
- 28ಇದಲ್ಲದೆ ನನ್ನ ಸಂಗಡ ನನ್ನ ಕಷ್ಟಗಳಲ್ಲಿ ಎಡೆಬಿಡದೆ ಇದ್ದವರು ನೀವೇ.
- 29ನನ್ನ ತಂದೆಯು ನನಗೆ ರಾಜ್ಯವನ್ನು ನೇಮಕ ಮಾಡಿದ ಹಾಗೆಯೇ ನಾನೂ ನಿಮಗೆ ರಾಜ್ಯ ವನ್ನು ನೇಮಕ ಮಾಡುತ್ತೇನೆ.
Cross references
- Matthew 20:28 ಮತ್ತಾಯನು 20:28ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.
- Luke 12:37 ಲೂಕನು 12:37ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
- John 13:5–16 ಯೋಹಾನನು 13:5–16ತರುವಾಯ ಆತನು ಬೋಗುಣಿ ಯಲ್ಲಿ ನೀರು ಹಾಕಿಕೊಂಡು ಶಿಷ್ಯರ ಕಾಲುಗಳನ್ನು ತೊಳೆಯುವದಕ್ಕೂ ತಾನು ನಡುವಿಗೆ ಕಟ್ಟಿಕೊಂಡ ಕೈ ಪಾವಡದಿಂದ ಅವುಗಳನ್ನು ಒರಸುವದಕ್ಕೂ ಪ್ರಾರಂಭಿಸಿದನು. ಆತನು ಸೀಮೋನ ಪೇತ್ರನ ಬಳಿಗೆ ಬಂದಾಗ ಅವನು ಆತನಿಗೆ--ಕರ್ತನೇ, ನೀನು ನನ್ನ ಕಾಲುಗಳನ್ನು ತೊಳೆಯುತ್ತೀಯೋ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಮಾಡುವದು ಏನೆಂದು ಈಗ ನಿನಗೆ ತಿಳಿಯುವದಿಲ್ಲ; ಆದರೆ ಇನ್ನು ಮೇಲೆ ನಿನಗೆ ತಿಳಿಯುವದು ಅಂದನು. ಪೇತ್ರನು ಆತನಿಗೆ--ನೀನು ನನ್ನ ಕಾಲುಗಳನ್ನು ಎಂದಿಗೂ ತೊಳೆಯಬಾರದು ಅಂದನು; ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ನಿನ್ನನ್ನು ತೊಳೆಯ ದಿದ್ದರೆ ನನ್ನೊಂದಿಗೆ ನಿನಗೆ ಪಾಲಿಲ್ಲ ಎಂದು ಹೇಳಿದನು. ಅದಕ್ಕೆ ಸೀಮೋನ ಪೇತ್ರನು ಆತ ನಿಗೆ--ಕರ್ತನೇ, ನನ್ನ ಪಾದಗಳನ್ನು ಮಾತ್ರವಲ್ಲದೆ ನನ್ನ ಕೈಗಳನ್ನು ಮತ್ತು ತಲೆಯನ್ನು ಸಹ ತೊಳೆ ಅಂದನು. ಯೇಸು ಅವನಿಗೆ--ಸ್ನಾನಮಾಡಿಕೊಂಡವನು ತನ ಪಾದಗಳನ್ನು ಹೊರತು ಮತ್ತೇನೂ ತೊಳೆಯುವದು ಅವಶ್ಯವಿಲ್ಲ; ಯಾಕಂದರೆ ಅವನು ಸಂಪೂರ್ಣವಾಗಿ ಶುದ್ಧನಾಗಿದ್ದಾನೆ. ನೀವು ಶುದ್ಧರಾಗಿದ್ದೀರಿ, ಆದರೆ ಎಲ್ಲರೂ ಅಲ್ಲ ಅಂದನು. ತನ್ನನ್ನು ಹಿಡಿದುಕೊಡುವ ವನು ಯಾರೆಂದು ಆತನು ತಿಳಿದಿದ್ದರಿಂದ--ನಿಮ್ಮಲ್ಲಿ ಎಲ್ಲರೂ ಶುದ್ಧರಲ್ಲ ಎಂದು ಹೇಳಿದನು. ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಉಡುಪುಗಳನ್ನು ಹಾಕಿಕೊಂಡು ತಿರಿಗಿ ಕೂತು ಕೊಂಡ ಮೇಲೆ ಅವರಿಗೆ--ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ? ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು. ಹಾಗಾದರೆ ನಿಮ್ಮ ಕರ್ತನೂ ಬೋಧಕನೂ ಆಗಿರುವ ನಾನು ನಿಮ್ಮ ಕಾಲುಗಳನ್ನು ತೊಳೆದರೆ ನೀವು ಸಹ ಒಬ್ಬರ ಕಾಲುಗಳನ್ನೊಬ್ಬರು ತೊಳೆಯತಕ್ಕದ್ದು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ. ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ತನ್ನ ಒಡೆಯನಿಗಿಂತ ಸೇವಕನು ದೊಡ್ಡವನಲ್ಲ; ಇಲ್ಲವೆ ಕಳುಹಿಸಲ್ಪಟ್ಟವನು ಅವನನ್ನು ಕಳುಹಿಸಿದವನಿಗಿಂತ ದೊಡ್ಡವನಲ್ಲ.
- 2 Corinthians 8:9 2 ಕೊರಿಂಥದವರಿಗೆ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯನ್ನು ನೀವು ಅರಿತವರಾಗಿದ್ದೀರಿ; ಹೇಗಂದರೆ ಆತನು ಐಶ್ವರ್ಯವಂತನಾಗಿದ್ದರೂ ಆತನ ಬಡತನದ ಮೂಲಕ ನೀವು ಐಶ್ವರ್ಯವಂತ ರಾಗುವಂತೆ ಆತನು ನಿಮಗೋಸ್ಕರ ಬಡವನಾದನು.
- Philippians 2:7–8 ಫಿಲಿಪ್ಪಿಯವರಿಗೆ 2:7–8ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡಾಗ ಮನುಷ್ಯರ ಹೋಲಿಕೆ ಯಲ್ಲಿ ಮಾಡಲ್ಪಟ್ಟನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.
- Luke 17:7–9 ಲೂಕನು 17:7–9ಆದರೆ ನಿಮ್ಮಲ್ಲಿ ಒಬ್ಬನಿಗೆ ಉಳುವ ಇಲ್ಲವೆ ದನಕರು ಕಾಯುವ ಆಳಿರಲಾಗಿ ಅವನು ಹೊಲದಿಂದ ಬಂದಾ ಗಲೇ ಅವನಿಗೆ--ಹೋಗಿ ಊಟಕ್ಕೆ ಕೂತುಕೋ ಎಂದು ಹೇಳುವದುಂಟೇ? ಹಾಗೆ ಹೇಳದೆ--ನಾನು ಊಟ ಮಾಡುವಂತೆ ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನಾನು ತಿಂದು ಕುಡಿಯುವ ತನಕ ನನ್ನ ಸೇವೆ ಮಾಡು; ತರುವಾಯ ನೀನು ತಿಂದು ಕುಡಿ ಎಂದು ಅವನಿಗೆ ಹೇಳುವದಿಲ್ಲವೇ? ತನಗೆ ಅಪ್ಪಣೆ ಕೊಟ್ಟವುಗಳನ್ನು ಆ ಆಳು ಮಾಡಿದರೆ (ಯಜಮಾ ನನು) ಅವನಿಗೆ ಕೃತಜ್ಞತೆಯುಳ್ಳವನಾಗಿರುವನೋ? ನಾನು ನೆನಸುವದಿಲ್ಲ.