Luke · chapter 22 · verse 38
Luke 22:38 in Kannada
ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
Aaga avaru--kartane, igo, illi eradu kattigalive andaru. Adakke aatanu ava rige--adu saakaa andanu.
Luke 22:38 in English
- King James Version (KJV)
- And they said, Lord, behold, here [are] two swords. And he said unto them, It is enough.
- World English Bible (WEB)
- They said, “Lord, behold, here are two swords.” He said to them, “That is enough.”
- American Standard Version (ASV)
- And they said, Lord, behold, here are two swords. And he said unto them, It is enough.
- Bible in Basic English (BBE)
- And they said, Lord, here are two swords. And he said, It is enough.
- Darby Translation (DBY)
- And they said, Lord, behold here are two swords. And he said to them, It is enough.
- Webster's Bible (WBS)
- And they said, Lord, behold, here [are] two swords. And he said to them, It is enough.
- Young's Literal Translation (YLT)
- And they said, 'Sir, lo, here [are] two swords;' and he said to them, 'It is sufficient.'
Read in context
- 36ಆಗ ಆತನು ಅವರಿಗೆ--ಆದರೆ ಈಗ ಹವ್ಮೆಾಣಿ ಇದ್ದವನು ಅದನ್ನು ತಕ್ಕೊಳ್ಳಲಿ. ಅದರಂತೆಯೇ ಚೀಲ ಇದ್ದವನು ಅದನ್ನು ತಕ್ಕೊಳ್ಳಲಿ; ಕತ್ತಿ ಇಲ್ಲದವನು ತನ್ನ ಬಟ್ಟೆಯನ್ನು ಮಾರಿ ಒಂದು ಕೊಂಡುಕೊಳ್ಳಲಿ.
- 37ಯಾಕಂದರೆ--ಆತನು ಅಕ್ರಮಗಾರರಲ್ಲಿ ಎಣಿಸಲ್ಪಟ್ಟವನು ಎಂಬದಾಗಿ ಬರೆ ಯಲ್ಪಟ್ಟದ್ದು ಇನ್ನೂ ನೆರವೇರತಕ್ಕದ್ದಾಗಿದೆ; ನನ್ನ ವಿಷಯ ವಾದವುಗಳು ಕೊನೆಗಾಣಬೇಕು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
- 38ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
- 39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- 40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
Cross references
- 2 Corinthians 10:3–4 2 ಕೊರಿಂಥದವರಿಗೆ 10:3–4ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ. (ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ).
- Matthew 26:52–54 ಮತ್ತಾಯನು 26:52–54ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು.
- Ephesians 6:10–18 ಎಫೆಸದವರಿಗೆ 6:10–18ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ. ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ. ನಾವು ಹೋರಾಡುವದು ಮನುಷ್ಯಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ದುಷ್ಟತನದ ಮೇಲೆಯೂ ಹೋರಾಡುವವರಾಗಿದ್ದೇವೆ. ಆದದ ರಿಂದ ಕೆಟ್ಟ ದಿನದಲ್ಲಿ ನೀವು ಅವುಗಳನ್ನು ಎದುರಿಸಿ ಮಾಡಬೇಕಾದದ್ದೆಲ್ಲವನ್ನು ಮಾಡಿ ನಿಲ್ಲಲು ಶಕ್ತರಾಗು ವಂತೆ ದೇವರ ಸರ್ವಾಯುಧವನ್ನು ನಿಮಗಾಗಿ ತೆಗೆದು ಕೊಳ್ಳಿರಿ. ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ. ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ. ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.
- Luke 22:49 ಲೂಕನು 22:49ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
- John 18:36 ಯೋಹಾನನು 18:36ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು.
- 1 Thessalonians 5:8 1 ಥೆಸಲೊನೀಕದವರಿಗೆ 5:8ನಾವಾದರೋ ಹಗಲಿನವರಾಗಿರಲಾಗಿ ವಿಶ್ವಾಸ ಪ್ರೀತಿಗಳೆಂಬ ಎದೆಕವಚವನ್ನೂ ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥ ಚಿತ್ತರಾಗಿರೋಣ.
- 1 Peter 5:9 1 ಪೇತ್ರನು 5:9ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.