Luke · chapter 22 · verse 40
Luke 22:40 in Kannada
ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
Aatanu aa sthaladalliddaaga avarige--neevu shodhanege ola gaagadante praarthisiri andanu.
Luke 22:40 in English
- King James Version (KJV)
- And when he was at the place, he said unto them, Pray that ye enter not into temptation.
- World English Bible (WEB)
- When he was at the place, he said to them, “Pray that you don’t enter into temptation.”
- American Standard Version (ASV)
- And when he was at the place, he said unto them, Pray that ye enter not into temptation.
- Bible in Basic English (BBE)
- And when he came to the place, he said to them, Make a prayer that you may not be put to the test.
- Darby Translation (DBY)
- And when he was at the place he said to them, Pray that ye enter not into temptation.
- Webster's Bible (WBS)
- And when he was at the place, he said to them, Pray, that ye enter not into temptation.
- Young's Literal Translation (YLT)
- and having come to the place, he said to them, 'Pray ye not to enter into temptation.'
Read in context
- 38ಆಗ ಅವರು--ಕರ್ತನೇ, ಇಗೋ, ಇಲ್ಲಿ ಎರಡು ಕತ್ತಿಗಳಿವೆ ಅಂದರು. ಅದಕ್ಕೆ ಆತನು ಅವ ರಿಗೆ--ಅದು ಸಾಕಾ ಅಂದನು.
- 39ತರುವಾಯ ಆತನು ಹೊರಗೆ ಬಂದು ತನ್ನ ವಾಡಿಕೆಯಂತೆ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಆತನ ಶಿಷ್ಯರೂ ಆತನನ್ನು ಹಿಂಬಾಲಿಸಿದರು.
- 40ಆತನು ಆ ಸ್ಥಳದಲ್ಲಿದ್ದಾಗ ಅವರಿಗೆ--ನೀವು ಶೋಧನೆಗೆ ಒಳ ಗಾಗದಂತೆ ಪ್ರಾರ್ಥಿಸಿರಿ ಅಂದನು.
- 41ಆತನು ಅವ ರಿಂದ ಒಂದು ಕಲ್ಲೆಸೆಯುವಷ್ಟು ದೂರಹೋಗಿ ಮೊಣ ಕಾಲೂರಿ--
- 42ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
Cross references
- Matthew 6:13 ಮತ್ತಾಯನು 6:13ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
- Luke 22:46 ಲೂಕನು 22:46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- Matthew 26:36–46 ಮತ್ತಾಯನು 26:36–46ತರುವಾಯ ಯೇಸು ಶಿಷ್ಯರ ಸಂಗಡ ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದು ಅವರಿಗೆ--ನಾನು ಆಚೇ ಕಡೆಗೆ ಹೋಗಿ ಪ್ರಾರ್ಥಿಸುವಾಗ ನೀವು ಇಲ್ಲೇ ಕೂತುಕೊಳ್ಳಿರಿ ಅಂದನು. ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು. ಆತನು ಅವರಿಗೆ--ನನ್ನ ಪ್ರಾಣವು ಮರಣಹೊಂದುವಷ್ಟು ಅತಿ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲೇ ಇದ್ದು ನನ್ನೊಡನೆ ಎಚ್ಚರವಾಗಿರ್ರಿ ಅಂದನು. ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು. ಆತನು ತನ್ನ ಶಿಷ್ಯರ ಬಳಿಗೆ ಬಂದಾಗ ಅವರು ನಿದ್ರೆ ಮಾಡುವದನ್ನು ಕಂಡು ಪೇತ್ರನಿಗೆ--ಏನು ನೀವು ಒಂದು ಗಳಿಗೆಯಾದರೂ ನನ್ನೊಡನೆ ಎಚ್ಚರವಾಗಿರಲಾರಿರಾ? ನೀವು ಶೋಧನೆಗೆ ಒಳಗಾ ಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ಸಿದ್ಧವಾಗಿದೆ ನಿಜವೇ; ಆದರೆ ಶರೀರವು ಬಲಹೀನ ವಾಗಿದೆ ಅಂದನು. ತಿರಿಗಿ ಆತನು ಎರಡನೆಯ ಸಾರಿ ಹೋಗಿ ಪ್ರಾರ್ಥಿಸುತ್ತಾ--ಓ ನನ್ನ ತಂದೆಯೇ, ನಾನು ಈ ಪಾತ್ರೆಯಲ್ಲಿ ಕುಡಿಯದ ಹೊರತು ಇದು ನನ್ನನ್ನು ಬಿಟ್ಟು ಹೋಗಕೂಡದಾಗಿದ್ದರೆ ನಿನ್ನ ಚಿತ್ತವೇ ಆಗಲಿ ಅಂದನು. ಆತನು ಬಂದು ಅವರು ತಿರಿಗಿ ನಿದ್ದೆ ಮಾಡುವದನ್ನು ಕಂಡನು; ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು. ಆತನು ಅವರನ್ನು ಬಿಟ್ಟು ತಿರಿಗಿ ಹೊರಟು ಹೋಗಿ ಮೂರನೆಯ ಸಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದನು ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ; ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು.
- 2 Corinthians 12:7–10 2 ಕೊರಿಂಥದವರಿಗೆ 12:7–10ಇದಲ್ಲದೆ ಹೇರಳವಾದ ಪ್ರಕಟಣೆಗಳ ಮೂಲಕ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಬಾರದೆಂದು ನನ್ನನ್ನು ಗುದ್ದುವದಕ್ಕಾಗಿ ಸೈತಾನನ ದೂತನಂತೆ ನನ್ನ ಶರೀರದಲ್ಲಿ ಒಂದು ಮುಳ್ಳು ನನಗೆ ಕೊಡಲ್ಪಟ್ಟಿದೆ; ಹೀಗೆ ನಾನು ಮಿತಿವಿಾರಿ ಹೆಚ್ಚಿಸಿ ಕೊಳ್ಳಲಾರದಂತೆ ಇದಾಯಿತು. ಈ ವಿಷಯದಲ್ಲಿ ಅದು ನನ್ನನ್ನು ಬಿಟ್ಟುಹೋಗಬೇಕೆಂದು ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.
- 1 Peter 5:8–9 1 ಪೇತ್ರನು 5:8–9ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. ನೀವು ನಂಬಿಕೆಯಲ್ಲಿ ದೃಢವಾಗಿದ್ದು ಅವನನ್ನು ಎದುರಿಸಿರಿ; ಲೋಕದಲ್ಲಿರುವ ನಿಮ್ಮ ಸಹೋದರರಿಗೂ ಅಂಥ ಬಾಧೆಗಳೇ ಸಂಭವಿಸುತ್ತವೆಯೆಂದು ನಿಮಗೆ ತಿಳಿದದೆಯಲ್ಲಾ.
- Mark 14:32–42 ಮಾರ್ಕನು 14:32–42ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು. ಆತನು ಪೇತ್ರ ಯಾಕೋಬ ಯೋಹಾನರನ್ನು ತನ್ನೊಂದಿಗೆ ಕರಕೊಂಡು ಹೋಗಿ ಅತಿವಿಸ್ಮಯಗೊಂಡು ಬಹಳ ಮನಗುಂದಿದವನಾಗಿ-- ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು. ಆತನು ಸ್ವಲ್ಪ ಮುಂದೆ ಹೋಗಿ ನೆಲದ ಮೇಲೆ ಬಿದ್ದು ಸಾಧ್ಯವಾದರೆ ಆ ಗಳಿಗೆಯು ತನ್ನಿಂದ ದಾಟಿ ಹೋಗುವಂತೆ ಪ್ರಾರ್ಥಿಸಿದನು. ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು. ತರುವಾಯ ಆತನು ಬಂದು ಅವರು ನಿದ್ರೆಮಾಡುವದನ್ನು ಕಂಡು ಪೇತ್ರನಿಗೆ--ಸೀಮೋನನೇ, ನೀನು ನಿದ್ರೆಮಾಡು ತ್ತೀಯಾ? ಒಂದು ಗಳಿಗೆಯಾದರೂ ಎಚ್ಚರವಾಗಿ ರಲಾರೆಯಾ? ನೀವು ಶೋಧನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥಿಸಿರಿ; ಆತ್ಮವು ನಿಜವಾಗಿಯೂ ಸಿದ್ಧವಾಗಿದೆ; ಆದರೆ ಶರೀರವು ಬಲಹೀನವಾಗಿದೆ ಎಂದು ಹೇಳಿದನು. ಆತನು ತಿರಿಗಿ ಹೊರಟು ಹೋಗಿ ಅದೇ ಮಾತುಗಳನ್ನು ಹೇಳುತ್ತಾ ಪ್ರಾರ್ಥಿಸಿ ದನು. ಆತನು ಹಿಂತಿರುಗಿದಾಗ ಅವರು ತಿರಿಗಿ ನಿದ್ರೆ ಮಾಡುವದನ್ನು ಕಂಡನು; (ಯಾಕಂದರೆ ಅವರ ಕಣ್ಣುಗಳು ಭಾರವಾಗಿದ್ದವು;) ಆತನಿಗೆ ಅವರು ಏನು ಉತ್ತರ ಕೊಡಬೇಕೋ ತಿಳಿಯಲಿಲ್ಲ. ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ; ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು.
- Revelation 3:10 ಪ್ರಕಟನೆ 3:10ನೀನು ನನ್ನ ಸಹನ ವಾಕ್ಯವನ್ನು ಕಾಪಾಡಿದ್ದರಿಂದ ಭೂಮಿಯ ಮೇಲೆ ವಾಸ ಮಾಡುವವ ರನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರು ವದಕ್ಕಿರುವ ಶೋಧನೆಯ ಸಮಯದಿಂದ ನಾನು ಸಹ ನಿನ್ನನ್ನು ಕಾಪಾಡುವೆನು.
- 1 Peter 4:7 1 ಪೇತ್ರನು 4:7ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಸ್ವಸ್ಥಚಿತ್ತರಾಗಿಯೂ ಪ್ರಾರ್ಥನೆಗೆ ಎಚ್ಚರ ವಾಗಿಯೂ ಇರ್ರಿ.
- Ephesians 6:18–19 ಎಫೆಸದವರಿಗೆ 6:18–19ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
- Psalm 17:5 ಕೀರ್ತನೆಗಳು 17:5ನನ್ನ ಹೆಜ್ಜೆಗಳು ಜಾರದ ಹಾಗೆ ನನ್ನ ನಡೆಗಳನ್ನು ನಿನ್ನ ದಾರಿಯಲ್ಲಿ ಸ್ಥಿರಪಡಿಸು.
- Psalm 119:116–117 ಕೀರ್ತನೆಗಳು 119:116–117ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ. ನನ್ನನ್ನು ನೀನು ಹಿಡಿ; ಆಗ ನಾನು ಸುರಕ್ಷಿತನಾಗಿದ್ದು ನಿನ್ನ ನಿಯಮಗಳನ್ನು ಯಾವಾ ಗಲೂ ಗೌರವಿಸುವೆನು.
- 1 Chronicles 4:10 1 ಪೂರ್ವಕಾಲವೃತ್ತಾಂತ 4:10ಆದರೆ ಯಾಬೇಚನು ಇಸ್ರಾಯೇಲಿನ ದೇವರನ್ನು ಕೂಗಿ ಹೇಳಿದ್ದು--ನೀನು ನನ್ನನು ನಿಜವಾಗಿ ಆಶೀರ್ವ ದಿಸಬೇಕು; ನನ್ನ ಮೇರೆಯನ್ನು ವಿಸ್ತರಿಸಬೇಕು; ನಿನ್ನ ಕೈ ನನ್ನ ಸಂಗಡ ಇರಲಿ; ಅದು ನನ್ನನ್ನು ವ್ಯಥೆಪಡಿಸದ ಹಾಗೆ ನನ್ನನು ಕೇಡಿನಿಂದ ತಪ್ಪಿಸು. ಮತ್ತು ಅವನು ಬೇಡಿಕೊಂಡದ್ದನ್ನು ದೇವರು ದೊರಕಿಸಿದನು.