Luke · chapter 22 · verse 44
Luke 22:44 in Kannada
ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
Aatanu vedaneyalliddu bahala aasakti yinda praarthisidanu. Aatana bevaru nelakke beeluttiruva dodda raktada hanigalopaadiyallittu.
Luke 22:44 in English
- King James Version (KJV)
- And being in an agony he prayed more earnestly: and his sweat was as it were great drops of blood falling down to the ground.
- World English Bible (WEB)
- Being in agony, he prayed more earnestly. His sweat became like great drops of blood falling down on the ground.
- American Standard Version (ASV)
- And being in an agony he prayed more earnestly; and his sweat became as it were great drops of blood falling down upon the ground.
- Bible in Basic English (BBE)
- And being in great trouble of soul, the force of his prayer became stronger, and great drops, like blood, came from him, falling to the earth.
- Darby Translation (DBY)
- And being in conflict he prayed more intently. And his sweat became as great drops of blood, falling down upon the earth.
- Webster's Bible (WBS)
- And being in an agony, he prayed more earnestly: and his sweat was as it were great drops of blood falling to the ground.
- Young's Literal Translation (YLT)
- and having been in agony, he was more earnestly praying, and his sweat became, as it were, great drops of blood falling upon the ground.
Read in context
- 42ತಂದೆಯೇ, ನಿನ್ನ ಚಿತ್ತವಿದ್ದರೆ ಈ ಪಾತ್ರೆ ಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ಆದರೆ ನಿನ್ನ ಚಿತ್ತದಂತೆಯೇ ಆಗಲಿ ಎಂದು ಪ್ರಾರ್ಥಿಸಿ ದನು.
- 43ಆಗ ಪರಲೋಕದಿಂದ ಒಬ್ಬ ದೂತನು ಆತನಿಗೆ ಪ್ರತ್ಯಕ್ಷನಾಗಿ ಆತನನ್ನು ಬಲಪಡಿಸುತ್ತಾ ಇದ್ದನು.
- 44ಆತನು ವೇದನೆಯಲ್ಲಿದ್ದು ಬಹಳ ಆಸಕ್ತಿ ಯಿಂದ ಪ್ರಾರ್ಥಿಸಿದನು. ಆತನ ಬೆವರು ನೆಲಕ್ಕೆ ಬೀಳುತ್ತಿರುವ ದೊಡ್ಡ ರಕ್ತದ ಹನಿಗಳೋಪಾದಿಯಲ್ಲಿತ್ತು.
- 45ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
- 46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
Cross references
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- Hebrews 5:7 ಇಬ್ರಿಯರಿಗೆ 5:7ಆತನು ತನ್ನ ಶರೀರದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತನಾಗಿರುವಾತನಿಗೆ ಬಲ ವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ಭಯಪಟ್ಟದ್ದರಲ್ಲಿ ಕೇಳಲ್ಪ ಟ್ಟನು.
- Psalm 22:12–21 ಕೀರ್ತನೆಗಳು 22:12–21ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ. ನಾನು ನೀರಿನ ಹಾಗೆ ಹೊಯ್ಯಲ್ಪಟ್ಟಿದ್ದೇನೆ; ನನ್ನ ಎಲುಬುಗಳೆಲ್ಲಾ ಕೀಲು ತಪ್ಪಿವೆ; ನನ್ನ ಹೃದ ಯವು ಮೇಣದ ಹಾಗೆ ನನ್ನ ಕರುಳುಗಳ ಮಧ್ಯದಲ್ಲಿ ಕರಗಿಹೋಗಿದೆ. ನನ್ನ ಶಕ್ತಿ ಬೋಕಿಯ ಹಾಗೆ ಒಣಗಿ ಹೋಗಿದೆ; ನನ್ನ ನಾಲಿಗೆ ಅಂಗಳಕ್ಕೆ ಹತ್ತುತ್ತದೆ; ಮರಣದ ಧೂಳಿಗೆ ನನ್ನನ್ನು ಬರಮಾಡಿದಿ. ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ. ನನ್ನ ಎಲು ಬುಗಳನ್ನೆಲ್ಲಾ ಎಣಿಸುತ್ತೇನೆ; ಅವರು ನನ್ನನ್ನು ದೃಷ್ಟಿಸಿ ನೋಡುತ್ತಾರೆ. ನನ್ನ ವಸ್ತ್ರಗಳನ್ನು ತಮ್ಮಲ್ಲಿ ಪಾಲು ಮಾಡಿಕೊಳ್ಳುತ್ತಾರೆ. ನನ್ನ ಅಂಗಿಗೋಸ್ಕರ ಚೀಟು ಹಾಕುತ್ತಾರೆ. ಆದರೆ ಓ ಕರ್ತನೇ, ನೀನು ನನ್ನಿಂದ ದೂರವಾಗಿರಬೇಡ; ಓ ನನ್ನ ಬಲವೇ, ನನ್ನ ಸಹಾಯಕ್ಕೆ ತ್ವರೆಪಡು. ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು. ನನ್ನನ್ನು ಸಿಂಹದ ಬಾಯಿಂದ ರಕ್ಷಿಸು; ನನ್ನನ್ನು ಕಾಡುಕೋಣಗಳ ಕೊಂಬುಗಳಿಂದ ತಪ್ಪಿಸಿ ಉತ್ತರ ಕೊಟ್ಟೆಯಲ್ಲಾ.
- Romans 8:32 ರೋಮಾಪುರದವರಿಗೆ 8:32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- Psalm 130:1–2 ಕೀರ್ತನೆಗಳು 130:1–2ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ. ಕರ್ತನೇ, ನನ್ನ ಸ್ವರವನ್ನು ಕೇಳು; ನಿನ್ನ ಕಿವಿಗಳು ನನ್ನ ವಿಜ್ಞಾಪನೆಗಳ ಮೊರೆಯನ್ನು ಆಲೈಸುತ್ತಾ ಇರಲಿ.
- Isaiah 53:10 ಯೆಶಾಯ 53:10ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
- John 12:27 ಯೋಹಾನನು 12:27ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
- Genesis 32:24–28 ಆದಿಕಾಂಡ 32:24–28ಆಗ ಯಾಕೋಬನು ಒಬ್ಬನೇ ಉಳಿದಾಗ ಒಬ್ಬ ಮನುಷ್ಯನು ಉದಯ ವಾಗುವ ವರೆಗೆ ಅವನ ಸಂಗಡ ಹೋರಾಡಿದನು. ಆ ಮನುಷ್ಯನು ಅವನನ್ನು ಜಯಿಸದೆ ಇರುವದನ್ನು ನೋಡಿ ಅವನ ತೊಡೆಯ ಕೀಲನ್ನು ಮುಟ್ಟಿದನು. ಅವನು ಹಾಗೆಯೇ ಆತನ ಸಂಗಡ ಹೋರಾಡುವಲ್ಲಿ ಯಾಕೋಬನ ತೊಡೆಯ ಕೀಲು ತಪ್ಪಿತು. ಆತನು ಯಾಕೋಬನಿಗೆ--ಉದಯವಾಯಿತು, ನನ್ನನು ಬಿಡು ಅಂದಾಗ ಅವನು--ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡೆನು ಅಂದನು. ಆತನು ಅವನಿಗೆ--ನಿನ್ನ ಹೆಸರು ಏನು ಅಂದಾಗ ಅವನು--ಯಾಕೋಬ ಅಂದನು. ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Jonah 2:2–3 ಯೋನ 2:2–3ನಾನು ನನ್ನ ವ್ಯಥೆಯ ದೆಸೆಯಿಂದ ಕರ್ತನಿಗೆ ಮೊರೆಯಿಟ್ಟೆನು; ಆತನು ನನ್ನ ಕೂಗನ್ನು ಕೇಳಿದನು; ನರಕದ ಹೊಟ್ಟೆ ಯೊಳಗಿಂದ ನಾನು ಕೂಗಿದೆನು, ಆಗ ನನ್ನ ಶಬ್ದವನ್ನು ನೀನು ಕೇಳಿದಿ. ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
- Lamentations 3:53–56 ಪ್ರಲಾಪಗಳು 3:53–56ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ ನನ್ನ ಮೇಲೆ ಕಲ್ಲನ್ನು ಹಾಕಿದ್ದಾರೆ. ಪ್ರವಾಹವು ನನ ತಲೆಯ ಮೇಲೆ ಹರಿಯಿತು; ಆಗ--ನಾನು ಸತ್ತೆನು ಅಂದುಕೊಂಡೆನು. ಓ ಕರ್ತನೇ, ನಾನು ಆಳವಾದ ಕಾರಾಗೃಹದಿಂದ ನಿನ್ನ ಹೆಸರನ್ನು ಎತ್ತಿ ಬೇಡಿಕೊಂಡೆನು. ನೀನು ನನ್ನ ಸ್ವರವನ್ನು ಕೇಳಿದ್ದೀ; ನನ್ನ ಶ್ವಾಸಕ್ಕೂ ನನ್ನ ಕೂಗಿಗೂ ನಿನ್ನ ಕಿವಿಯನ್ನು ಮರೆಮಾಡಲಿಲ್ಲ.
- Psalm 143:6–7 ಕೀರ್ತನೆಗಳು 143:6–7ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ. ಓ ಕರ್ತನೇ, ನನಗೆ ಬೇಗನೆ ಉತ್ತರಕೊಡು; ನನ್ನ ಪ್ರಾಣವು ಕುಂದಿಹೋಗಿದೆ; ನಾನು ಕುಣಿಯಲ್ಲಿ ಇಳಿಯುವವರಿಗೆ ಸಮಾನವಾಗದ ಹಾಗೆ ನಿನ್ನ ಮುಖ ವನ್ನು ನನಗೆ ಮರೆಮಾಡಬೇಡ.
- Psalm 88:1–18 ಕೀರ್ತನೆಗಳು 88:1–18ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ. ನನ್ನ ಪ್ರಾರ್ಥನೆಯು ನಿನ್ನ ಮುಂದೆ ಬರಲಿ; ನನ್ನ ಮೊರೆಗೆ ನೀನು ಕಿವಿಗೊಡು. ನನ್ನ ಜೀವವು ಕಷ್ಟ ಗಳಿಂದ ತುಂಬಿಯದೆ, ನನ್ನ ಪ್ರಾಣವು ಸಮಾಧಿಗೆ ಸವಿಾಪವಾಗಿದೆ. ಕುಣಿಗೆ ಇಳಿಯುವವರ ಸಂಗಡ ಎಣಿಸಲ್ಪಟ್ಟಿದ್ದೇನೆ; ಬಲವಿಲ್ಲದ ಮನುಷ್ಯನ ಹಾಗಿದ್ದೇನೆ. ಕೊಲ್ಲಲ್ಪಟ್ಟು ಸಮಾಧಿಯಲ್ಲಿ ಮಲಗಿರುವವರನ್ನು ನೀನು ಇನ್ನು ಜ್ಞಾಪಕಮಾಡಿಕೊಳ್ಳದ ಹಾಗೆ ಸತ್ತವ ರಲ್ಲಿ ಬಿಡಲ್ಪಟ್ಟಿದ್ದೇನೆ; ಅವರು ನಿನ್ನ ಕೈಯಿಂದ ಕಡಿ ಯಲ್ಪಟ್ಟಿದ್ದಾರೆ. ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ. ನಿನ್ನ ಕೋಪವು ನನ್ನ ಮೇಲೆ ನೆಲೆಯಾಗಿದೆ; ನಿನ್ನ ಅಲೆಗಳಿಂದೆಲ್ಲಾ ನನ್ನನ್ನು ಕುಂದಿ ಸಿದ್ದೀ ಸೆಲಾ. ನನ್ನ ಪರಿಚಿತರನ್ನು ನನಗೆ ದೂರಮಾಡಿದ್ದೀ; ನನ್ನನ್ನು ಅವ ರಿಗೆ ಅಸಹ್ಯ ಮಾಡಿದ್ದೀ; ಮುಚ್ಚಲ್ಪಟ್ಟಿದ್ದೇನೆ, ಹೊರಗೆ ಬರಲಾರೆನು. ಬಾಧೆಯ ದೆಸೆಯಿಂದ ನನ್ನ ಕಣ್ಣು ದುಃಖಿಸುತ್ತದೆ. ಕರ್ತನೇ, ದಿನವೆಲ್ಲಾ ನಿನ್ನನ್ನು ಕರೆಯು ತ್ತೇನೆ; ನಾನು ನಿನ್ನ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ. ಸತ್ತವರಿಗೆ ಅದ್ಭುತಗಳನ್ನು ತೋರಿಸುವಿಯೋ? ಸತ್ತವರು ಎದ್ದು ನಿನ್ನನ್ನು ಕೊಂಡಾಡುವರೋ? ಸೆಲಾ. ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ? ಆದರೆ ನಾನು ಓ ಕರ್ತನೇ, ನಿನ್ನ ಕಡೆಗೆ ಮೊರೆಯಿಡುತ್ತೇನೆ. ಹೊತ್ತಾರೆ ನನ್ನ ಪ್ರಾರ್ಥ ನೆಯು ನಿನ್ನನ್ನು ಎದುರುಗೊಳ್ಳುವದು. ಕರ್ತನೇ,ಯಾಕೆ ನನ್ನ ಪ್ರಾಣವನ್ನು ತೊರೆದು ಬಿಡುತ್ತೀ?ಯಾಕೆ ನಿನ್ನ ಮುಖವನ್ನು ನನಗೆ ಮರೆಮಾಡುತ್ತೀ? ನಾನು ಕುಂದಿದವನೂ ಯೌವನದಾರಭ್ಯ ಸಾಯು ವದಕ್ಕೆ ಸಿದ್ಧನೂ ಆಗಿದ್ದೇನೆ. ನಿನ್ನ ಬೆದರಿಕೆಗಳನ್ನು ನಾನು ತಾಳುತ್ತಾ ಭ್ರಮೆಗೊಳ್ಳುತ್ತೇನೆ. ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ. ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು. ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
Original words (Greek)
- And · G2532καί kaí
- being · G1096γίνομαι gínomai
- in · G1722ἐν en
- agony · G74ἀγωνία agōnía
- prayed · G4336προσεύχομαι proseúchomai
- earnestly · G1617ἐκτενέστερον ektenésteron
- and · G1161δέ dé
- his · G846αὐτός autós
- sweat · G2402ἱδρώς hidrṓs
- was · G1096γίνομαι gínomai
- were · G5616ὡσεί hōseí
- drops · G2361θρόμβος thrómbos
- blood · G129αἷμα haîma
- down · G2597καταβαίνω katabaínō
- to · G1909ἐπί epí
- ground · G1093γῆ gē