Luke · chapter 22 · verse 47
Luke 22:47 in Kannada
ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
Aatanu innoo maatanaaduttiruvaaga igo, samoohavu mattu hanneradu mandiyalli yooda nendu kareyalpatta obbanu avara munde hoguttaa yesuvige muddiduvadakkaagi aatanannu saviాpisidanu.
Luke 22:47 in English
- King James Version (KJV)
- And while he yet spake, behold a multitude, and he that was called Judas, one of the twelve, went before them, and drew near unto Jesus to kiss him.
- World English Bible (WEB)
- While he was still speaking, a crowd appeared. He who was called Judas, one of the twelve, was leading them. He came near to Jesus to kiss him.
- American Standard Version (ASV)
- While he yet spake, behold, a multitude, and he that was called Judas, one of the twelve, went before them; and he drew near unto Jesus to kiss him.
- Bible in Basic English (BBE)
- And while he was saying these words, there came a band of people, and Judas, one of the twelve, was in front of them, and he came near to Jesus to give him a kiss.
- Darby Translation (DBY)
- As he was yet speaking, behold, a crowd, and he that was called Judas, one of the twelve, went on before them, and drew near to Jesus to kiss him.
- Webster's Bible (WBS)
- And while he was yet speaking, behold a multitude, and he that was called Judas, one of the twelve, went before them, and drew near to Jesus to kiss him.
- Young's Literal Translation (YLT)
- And while he is speaking, lo, a multitude, and he who is called Judas, one of the twelve, was coming before them, and he came nigh to Jesus to kiss him,
Read in context
- 45ಆತನು ಪ್ರಾರ್ಥನೆ ಮಾಡಿ ಎದ್ದಮೇಲೆ ತನ್ನ ಶಿಷ್ಯರ ಕಡೆಗೆ ಬಂದು ಅವರು ದುಃಖದ ನಿಮಿತ್ತವಾಗಿ ನಿದ್ರೆ ಮಾಡುತ್ತಿರುವದನ್ನು ಕಂಡು ಅವರಿಗೆ--
- 46ನೀವು ನಿದ್ರೆ ಮಾಡುವದು ಯಾಕೆ? ಶೋಧನೆಗೆ ಒಳಗಾಗ ದಂತೆ ಎದ್ದು ಪ್ರಾರ್ಥಿಸಿರಿ ಅಂದನು.
- 47ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಸಮೂಹವು ಮತ್ತು ಹನ್ನೆರಡು ಮಂದಿಯಲ್ಲಿ ಯೂದ ನೆಂದು ಕರೆಯಲ್ಪಟ್ಟ ಒಬ್ಬನು ಅವರ ಮುಂದೆ ಹೋಗುತ್ತಾ ಯೇಸುವಿಗೆ ಮುದ್ದಿಡುವದಕ್ಕಾಗಿ ಆತನನ್ನು ಸವಿಾಪಿಸಿದನು.
- 48ಆದರೆ ಯೇಸು ಅವನಿಗೆ-- ಯೂದನೇ, ಮುದ್ದಿನಿಂದ ಮನುಷ್ಯಕುಮಾರನನ್ನು ಹಿಡುಕೊಡುತ್ತೀಯೋ ಅಂದನು.
- 49ಆತನ ಸುತ್ತಲಿರು ವವರು ಮುಂದೆ ಸಂಭವಿಸುವದಕ್ಕಿರುವದನ್ನು ನೋಡಿ ಆತನಿಗೆ--ಕರ್ತನೇ, ನಾವು ಕತ್ತಿಯಿಂದ ಹೊಡೆಯೋ ಣವೋ? ಎಂದು ಕೇಳಿದರು.
Cross references
- Mark 14:41–50 ಮಾರ್ಕನು 14:41–50ಆತನು ಮೂರನೆಯ ಸಾರಿ ಬಂದು ಅವರಿಗೆ-- ಈಗ ನಿದ್ರೆ ಮಾಡಿ ನಿಮ್ಮ ವಿಶ್ರಾಂತಿಯನ್ನು ತೆಗೆದುಕೊಳ್ಳಿರಿ; ಇನ್ನು ಸಾಕು; ಗಳಿಗೆ ಬಂದಿದೆ; ಇಗೋ, ಮನುಷ್ಯ ಕುಮಾರನು ಪಾಪಿಗಳ ಕೈಗಳಿಗೆ ಹಿಡುಕೊಡಲ್ಪಡುತ್ತಾನೆ; ಏಳಿರಿ, ನಾವು ಹೋಗೋಣ; ಇಗೋ ನನ್ನನ್ನು ಹಿಡುಕೊಡುವವನು ಸವಿಾಪದಲ್ಲಿದ್ದಾನೆ ಎಂದು ಹೇಳಿದನು. ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು. ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು. ಅವನು ಬಂದ ಕೂಡಲೆ ನೇರವಾಗಿ ಆತನ ಕಡೆಗೆ ಹೋಗಿ-- ಗುರುವೇ, ಗುರುವೇ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಆಗ ಅವರು ಆತನ ಮೇಲೆ ಕೈ ಹಾಕಿ ಆತನನ್ನು ಹಿಡಿದರು. ಆದರೆ ಹತ್ತಿರ ನಿಂತಿದ್ದ ವರಲ್ಲಿ ಒಬ್ಬನು ಕತ್ತಿಯನ್ನು ಹಿರಿದು ಪ್ರಧಾನ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿ ದನು. ಯೇಸು ಅವರಿಗೆ-- ಕತ್ತಿಗಳನ್ನು ಮತ್ತು ದೊಣ್ಣೆಗಳನ್ನು ತಕ್ಕೊಂಡು ಕಳ್ಳನಿಗೆ ವಿರೋಧವಾಗಿ ಬರುವಂತೆ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ಪ್ರತಿ ದಿನವೂ ದೇವಾಲಯದಲ್ಲಿ ಬೋಧಿ ಸುತ್ತಾ ನಿಮ್ಮ ಸಂಗಡ ಇದ್ದೆನು; ಆಗ ನೀವು ನನ್ನನು ಹಿಡಿಯಲಿಲ್ಲ; ಆದರೆ ಬರಹಗಳು ನೆರವೇರಲೇಬೇಕು ಅಂದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Luke 22:3–6 ಲೂಕನು 22:3–6ಹನ್ನೆರಡು ಮಂದಿಯಲ್ಲಿ ಎಣಿಕೆ ಯಾಗಿದ್ದ ಇಸ್ಕರಿಯೋತನೆಂಬ ಅಡ್ಡಹೆಸರಿನ ಯೂದ ನಲ್ಲಿ ಸೈತಾನನು ಪ್ರವೇಶಿಸಿದನು. ಅವನು ಪ್ರಧಾನ ಯಾಜಕರ ಬಳಿಗೂ ಸೈನ್ಯಾಧಿಪತಿಗಳ ಬಳಿಗೂ ಹೋಗಿ ತಾನು ಹೇಗೆ ಆತನನ್ನು ಅವರಿಗೆ ಹಿಡುಕೊಡುವ ದೆಂಬದನ್ನು ಅವರ ಕೂಡ ಮಾತನಾಡಿದನು. ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು. ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- John 18:2–11 ಯೋಹಾನನು 18:2–11ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಿತ್ತು; ಯಾಕಂದರೆ ಅನೇಕ ಸಾರಿ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಕೂಡಿಬರುತ್ತಿದ್ದನು. ಆಗ ಯೂದನು ಪ್ರಧಾನಯಾಜಕರಿಂದ ಮತ್ತು ಫರಿಸಾಯ ರಿಂದ ಜನರ ಗುಂಪನ್ನೂ ಅಧಿಕಾರಿಗಳನ್ನೂ ಪಡೆದು ಕೊಂಡು ದೀಪಗಳಿಂದಲೂ ಪಂಜುಗಳಿಂದಲೂ ಆಯುಧಗಳಿಂದಲೂ ಅಲ್ಲಿಗೆ ಬಂದನು. ಯೇಸು ತನ್ನ ಮೇಲೆ ಬರುವವುಗಳನ್ನೆಲ್ಲಾ ತಿಳಿದುಕೊಂಡು ಮುಂದಕ್ಕೆ ಹೋಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು. ಆತನು ಅವರಿಗೆ--ನಾನೇ ಆತನು ಎಂದು ಹೇಳಿದ ಕೂಡಲೇ ಅವರು ಹಿಂದಕ್ಕೆ ಸರಿದು ನೆಲಕ್ಕೆ ಬಿದ್ದರು. ಆಗ ಆತನು ತಿರಿಗಿ ಅವರಿಗೆ--ನೀವು ಯಾರನ್ನು ಹುಡುಕುತ್ತೀರಿ ಎಂದು ಕೇಳಲು ಅವರು--ನಜರೇತಿನ ಯೇಸುವನ್ನು ಅಂದರು. ಯೇಸು ಪ್ರತ್ಯುತ್ತರವಾಗಿ--ನಾನೇ ಆತನು ಎಂದು ನಿಮಗೆ ಹೇಳಿದೆನಲ್ಲಾ; ನೀವು ನನ್ನನ್ನೆ ಹುಡುಕು ವುದಾದರೆ ಇವರನ್ನು ಹೋಗಬಿಡಿರಿ ಅಂದನು. ಹೀಗೆ--ನೀನು ನನಗೆ ಕೊಟ್ಟವರಲ್ಲಿ ಒಬ್ಬನನ್ನಾದರೂ ನಾನು ಕಳಕೊಳ್ಳಲಿಲ್ಲವೆಂದು ಆತನು ಹೇಳಿದ ಮಾತು ನೆರವೇರುವಂತೆ ಇದಾಯಿತು. ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು; ಆ ಆಳಿನ ಹೆಸರು ಮಲ್ಕನು. ಆಗ ಯೇಸು ಪೇತ್ರನಿಗೆ--ನಿನ್ನ ಕತ್ತಿಯನ್ನು ಒರೆಗೆಹಾಕು. ನನ್ನ ತಂದೆಯೂ ನನಗೆ ಕೊಟ್ಟ ಪಾತ್ರೆಯನ್ನು ನಾನು ಕುಡಿಯಬಾರದೋ ಎಂದು ಹೇಳಿದನು.
- Matthew 26:45–56 ಮತ್ತಾಯನು 26:45–56ತರುವಾಯ ಆತನು ತನ್ನ ಶಿಷ್ಯರ ಬಳಿಗೆ ಬಂದು ಅವರಿಗೆ--ಈಗ ನಿದ್ದೆ ಮಾಡಿ ವಿಶ್ರಾಂತಿತಕ್ಕೊಳ್ಳಿರಿ; ಇಗೋ, ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹಿಡಿದು ಕೊಡಲ್ಪಡುವ ಸಮಯವು ಸವಿಾಪಿಸಿದೆ; ಏಳಿರಿ, ನಾವು ಹೋಗೋಣ; ಇಗೋ, ನನ್ನನ್ನು ಹಿಡುಕೊಡು ವವನು ಸವಿಾಪವಾಗಿದ್ದಾನೆ ಅಂದನು. ಆತನು ಇನ್ನೂ ಮಾತನಾಡುತ್ತಿರುವಾಗ ಇಗೋ, ಪ್ರಧಾನಯಾಜಕರ ಮತ್ತು ಜನರ ಹಿರಿಯರ ಕಡೆಯಿಂದ ಕತ್ತಿ ದೊಣ್ಣೆಗಳೊಡನೆ ಬಂದ ದೊಡ್ಡ ಜನ ಸಮೂಹದೊಂದಿಗೆ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದನೂ ಬಂದನು. ಆತನನ್ನು ಹಿಡು ಕೊಡುವದಕ್ಕಿದ್ದವನು ಅವರಿಗೆ--ನಾನು ಯಾವಾತನಿಗೆ ಮುದ್ದಿಡುತ್ತೇನೋ ಅವನೇ ಆತನು. ಆತನನ್ನು ಗಟ್ಟಿ ಯಾಗಿ ಹಿಡಿಯಿರಿ ಎಂದು ಗುರುತನ್ನು ಹೇಳಿದ್ದನು. ಕೂಡಲೆ ಅವನು ಯೇಸುವಿನ ಬಳಿಗೆ ಬಂದು ಬೋಧಕನೇ, ವಂದನೆ ಎಂದು ಹೇಳಿ ಆತನಿಗೆ ಮುದ್ದಿಟ್ಟನು. ಅದಕ್ಕೆ ಯೇಸು ಅವನಿಗೆ--ಸ್ನೇಹಿತನೇ, ನೀನು ಯಾಕೆ ಬಂದಿರುತ್ತೀ ಎಂದು ಕೇಳಿದನು; ಆಗ ಅವರು ಬಂದು ಯೇಸುವಿನ ಮೇಲೆ ಕೈಹಾಕಿ ಆತನನ್ನು ಹಿಡಿದರು. ಇಗೋ, ಯೇಸುವಿನ ಸಂಗಡ ಇದ್ದವರಲ್ಲಿ ಒಬ್ಬನು ಕೈಚಾಚಿ ತನ್ನ ಕತ್ತಿಯನ್ನು ಹಿರಿದು ಮಹಾ ಯಾಜಕನ ಆಳನ್ನು ಹೊಡೆದು ಅವನ ಕಿವಿಯನ್ನು ಕಡಿದುಹಾಕಿದನು. ಆಗ ಯೇಸು ಅವನಿಗೆ--ನಿನ್ನ ಕತ್ತಿಯನ್ನು ತಿರಿಗಿ ಅದರ ಒರೆಯಲ್ಲಿ ಸೇರಿಸು; ಯಾಕಂದರೆ ಕತ್ತಿಯನ್ನು ಹಿಡಿದವರೆಲ್ಲರು ಕತ್ತಿಯಿಂದ ನಾಶವಾಗುವರು. ನಾನು ಈಗ ನನ್ನ ತಂದೆಗೆ ಪ್ರಾರ್ಥಿಸಲಾರನೆಂದೂ ಆತನು ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚಾದ ದೂತರನ್ನು ನನಗೆ ಕೊಡ ಲಾರನೆಂದೂ ನೀನು ನೆನಸುತ್ತಿಯೋ? ಹಾಗಾದರೆ ಇವುಗಳು ಹೀಗೆ ಆಗಬೇಕೆಂಬ ಬರಹಗಳು ನೆರವೇರು ವದು ಹೇಗೆ ಅಂದನು. ಅದೇ ಗಳಿಗೆಯಲ್ಲಿ ಯೇಸು ಜನಸಮೂಹಗಳಿಗೆ--ಒಬ್ಬ ಕಳ್ಳನಿಗೆ ವಿರೋಧವಾಗಿ ಬರುವಂತೆ ಕತ್ತಿಗಳೊಂದಿಗೂ ದೊಣ್ಣೆಗಳೊಂದಿಗೂ ನನ್ನನ್ನು ಹಿಡಿಯುವದಕ್ಕಾಗಿ ಬಂದಿರಾ? ನಾನು ದಿನಾ ಲು ನಿಮ್ಮ ಸಂಗಡ ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ; ಆದರೆ ಪ್ರವಾದಿಗಳ ಬರಹಗಳು ನೆರವೇರುವಂತೆ ಇದೆಲ್ಲಾ ಆಯಿತು ಎಂದು ಹೇಳಿದನು. ಆಗ ಶಿಷ್ಯರೆಲ್ಲರೂ ಆತನನ್ನು ಬಿಟ್ಟು ಓಡಿಹೋದರು.
- Mark 14:10 ಮಾರ್ಕನು 14:10ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
- Matthew 26:14–16 ಮತ್ತಾಯನು 26:14–16ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತ್ ಎಂಬವನು ಪ್ರಧಾನ ಯಾಜಕರ ಬಳಿಗೆ ಹೋಗಿ-- ನಾನು ಆತನನ್ನು ನಿಮಗೆ ಒಪ್ಪಿಸಿಕೊಟ್ಟರೆ ನೀವು ನನಗೆ ಏನು ಕೊಡುತ್ತೀರಿ ಅಂದನು. ಆಗ ಅವರು ಅವನೊಂದಿಗೆ ಮೂವತ್ತು ಬೆಳ್ಳಿಯ ನಾಣ್ಯಗಳಿಗೆ ಒಪ್ಪಂದ ಮಾಡಿಕೊಂಡರು. ಅಂದಿನಿಂದ ಅವನು ಆತನನ್ನು ಹಿಡಿದುಕೊಡು ವದಕ್ಕೆ ಸಂದರ್ಭವನ್ನು ಹುಡುಕುತ್ತಿದ್ದನು.
Original words (Greek)
- And · G1161δέ dé
- he · G846αὐτός autós
- yet · G2089ἔτι éti
- spake · G2980λαλέω laléō
- behold · G2400ἰδού idoú
- multitude · G3793ὄχλος óchlos
- and · G2532καί kaí
- that · G3588ὁ ho
- called · G3004λέγω légō
- Judas · G2455Ἰούδας Ioúdas
- one · G1520εἷς heîs
- twelve · G1427δώδεκα dṓdeka
- before · G4281προέρχομαι proérchomai
- them · G846αὐτός autós
- and · G2532καί kaí
- near · G1448ἐγγίζω engízō
- Jesus · G2424Ἰησοῦς Iēsoûs
- kiss · G5368φιλέω philéō
- him · G846αὐτός autós