Luke · chapter 22 · verse 67
Luke 22:67 in Kannada
ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
Neenu aa kristano? Namage helu andaru. Aatanu avarige--naanu nimage heli dare neevu nambuvadilla;
Luke 22:67 in English
- King James Version (KJV)
- Art thou the Christ? tell us. And he said unto them, If I tell you, ye will not believe:
- World English Bible (WEB)
- “If you are the Christ, tell us.” But he said to them, “If I tell you, you won’t believe,
- American Standard Version (ASV)
- If thou art the Christ, tell us. But he said unto them, If I tell you, ye will not believe:
- Bible in Basic English (BBE)
- If you are the Christ, say so. But he said, If I say so you will not have belief;
- Darby Translation (DBY)
- If thou art the Christ, tell us. And he said to them, If I tell you, ye will not at all believe;
- Webster's Bible (WBS)
- Saying, Art thou the Christ? tell us. And he said to them, If I tell you, ye will not believe.
- Young's Literal Translation (YLT)
- saying, 'If thou be the Christ, tell us.' And he said to them, 'If I may tell you, ye will not believe;
Read in context
- 65ಅವರು ಆತನಿಗೆ ವಿರೋಧವಾಗಿ ಅನೇಕ ದೂಷಣೆಯ ಮಾತುಗಳ ನ್ನಾಡಿದರು.
- 66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- 67ನೀನು ಆ ಕ್ರಿಸ್ತನೋ? ನಮಗೆ ಹೇಳು ಅಂದರು. ಆತನು ಅವರಿಗೆ--ನಾನು ನಿಮಗೆ ಹೇಳಿ ದರೆ ನೀವು ನಂಬುವದಿಲ್ಲ;
- 68ನಾನು ಸಹ ನಿಮ್ಮನ್ನು ಕೇಳುವದಾದರೆ ನೀವು ಉತ್ತರ ಕೊಡುವದಿಲ್ಲ; ಇಲ್ಲವೆ ನನ್ನನ್ನು ಹೋಗಗೊಡಿಸುವದಿಲ್ಲ.
- 69ಇಂದಿನಿಂದ ಮನುಷ್ಯಕುಮಾರನು ದೇವರ ಬಲಪಾರ್ಶ್ವದಲ್ಲಿ ಕೂತು ಕೊಂಡಿರುವನು ಅಂದನು.
Cross references
- John 10:24–26 ಯೋಹಾನನು 10:24–26ಆಗ ಯೆಹೂದ್ಯರು ಆತನ ಸುತ್ತಲು ಬಂದು ಆತನಿಗೆ--ಇನ್ನು ಎಷ್ಟರ ವರೆಗೆ ನಮ್ಮನ್ನು ಸಂದೇಹಪಡಿಸುತ್ತೀ? ನೀನು ಕ್ರಿಸ್ತ ನಾಗಿದ್ದರೆ ನಮಗೆ ಸ್ಪಷ್ಟವಾಗಿ ಹೇಳು ಅಂದರು. ಯೇಸು ಅವರಿಗೆ--ನಾನು ನಿಮಗೆ ಹೇಳಿದೆನು, ಆದರೆ ನೀವು ನಂಬಲಿಲ್ಲ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತವೆ. ಆದರೆ ನಾನು ನಿಮಗೆ ಹೇಳಿದಂತೆ ನೀವು ನನ್ನ ಕುರಿಗಳಲ್ಲವಾದದರಿಂದ ನಂಬದೆ ಇದ್ದೀರಿ.
- Mark 14:61–66 ಮಾರ್ಕನು 14:61–66ಆದರೆ ಆತನು ಏನೂ ಉತ್ತರ ಕೊಡದೆ ಮೌನವಾಗಿದ್ದನು; ತಿರಿಗಿ ಮಹಾಯಾಜಕನು--ನೀನು ಆ ಕ್ರಿಸ್ತನೋ? ಸ್ತುತಿಹೊಂದುವಾತನ ಕುಮಾರನೋ ಎಂದು ಆತನನ್ನು ಕೇಳಿದನು. ಅದಕ್ಕೆ ಯೇಸು--ನಾನೇ, ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಪಾರ್ಶ್ವದಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳಲ್ಲಿ ಬರುವದನ್ನೂ ನೀವು ನೋಡುವಿರಿ ಅಂದನು. ಅದಕ್ಕೆ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು--ನಮಗೆ ಇನ್ನು ಹೆಚ್ಚು ಸಾಕ್ಷಿಗಳ ಅವಶ್ಯಕತೆ ಏನಿದೆ? ನೀವು ಈ ದೇವದೂಷಣೆಯನ್ನು ಕೇಳಿದ್ದೀರಲ್ಲಾ; ನಿಮಗೆ ಹೇಗೆ ತೋರುತ್ತದೆ ಎಂದು ಕೇಳಲು ಅವರೆಲ್ಲರೂ ಅವನು ಮರಣದಂಡನೆ ಹೊಂದತಕ್ಕವನು ಎಂದು ತೀರ್ಪುಮಾಡಿದರು ತರು ವಾಯ ಕೆಲವರು ಆತನ ಮೇಲೆ ಉಗುಳಿ ಆತನ ಮುಖವನ್ನು ಮುಚ್ಚಿ ಆತನನ್ನು ಗುದ್ದುವದಕ್ಕೆ ಆರಂಭಿಸಿ ಆತನಿಗೆ--ಪ್ರವಾದನೆ ಹೇಳು ಅಂದರು. ಆಳು ಗಳು ಆತನನ್ನು ಹೊಡೆದರು. ಇದಲ್ಲದೆ ಪೇತ್ರನು ಭವನದ ಕೆಳಭಾಗದಲ್ಲಿದ್ದಾಗ ಮಹಾಯಾಜಕನ ದಾಸಿಯರಲ್ಲಿ ಒಬ್ಬಳು ಅಲ್ಲಿಗೆ ಬಂದಳು.
- John 9:27–28 ಯೋಹಾನನು 9:27–28ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು. ಆಗ ಅವರು ಅವನನ್ನು ದೂಷಿಸಿ--ನೀನು ಅವನ ಶಿಷ್ಯನು; ಆದರೆ ನಾವು ಮೋಶೆಯ ಶಿಷ್ಯರು.
- Luke 16:31 ಲೂಕನು 16:31ಆದರೆ ಅವನು--ಅವರು ಮೋಶೆಯು ಮತ್ತು ಪ್ರವಾದಿಗಳು ಹೇಳಿದ್ದನ್ನು ಕೇಳದೆ ಹೋದರೆ ಸತ್ತವರೊಳಗಿಂದ ಒಬ್ಬನು ಎದ್ದರೂ ಅವರು ಒಪ್ಪುವದಿಲ್ಲ ಎಂದು ಅವನಿಗೆ ಹೇಳಿದನು.
- John 5:39–47 ಯೋಹಾನನು 5:39–47ಬರಹಗಳನ್ನು ಪರಿಶೋಧಿಸಿರಿ; ಅವುಗಳಲ್ಲಿ ನಿಮಗೆ ನಿತ್ಯಜೀವ ಉಂಟೆಂದು ನೀವು ನೆನಸುತ್ತೀರಲ್ಲಾ; ಅವುಗಳೇ ನನ್ನ ವಿಷಯವಾಗಿ ಸಾಕ್ಷಿಕೊಡುವವುಗಳಾ ಗಿವೆ. ಆದರೆ ನೀವು ಜೀವವನ್ನು ಹೊಂದುವಂತೆ ನನ್ನ ಬಳಿಗೆ ಬರುವದಿಲ್ಲ. ನಾನು ಮನುಷ್ಯರಿಂದ ಮಾನವನ್ನು ಅಂಗೀಕರಿ ಸುವದಿಲ್ಲ. ಆದರೆ ನಾನು ನಿಮ್ಮನ್ನು ಬಲ್ಲೆನು, ನಿಮ್ಮಲ್ಲಿ ದೇವರ ಪ್ರೀತಿ ಇಲ್ಲ. ನಾನು ನನ್ನ ತಂದೆಯ ಹೆಸರಿನಲ್ಲಿ ಬಂದಿದ್ದೇನೆ, ನೀವು ನನ್ನನ್ನು ಅಂಗೀಕರಿ ಸುವದಿಲ್ಲ; ಮತ್ತೊಬ್ಬನು ತನ್ನ ಸ್ವಂತ ಹೆಸರಿನಲ್ಲಿ ಬಂದರೆ ನೀವು ಅವನನ್ನು ಅಂಗೀಕರಿಸುವಿರಿ. ದೇವರಿಂದ ಮಾತ್ರ ಬರುವ ಮಾನವನ್ನು ಹುಡುಕದೆ ಒಬ್ಬರಿಂದೊ ಬ್ಬರಿಗೆ ಬರುವ ಮಾನವನ್ನು ಹೊಂದುವ ನೀವು ಹೇಗೆ ನಂಬೀರಿ? ತಂದೆಯ ಮುಂದೆ ನಿಮ್ಮ ಮೇಲೆ ನಾನು ತಪ್ಪು ಹೊರಿಸುವೆನೆಂದು ನೀವು ನೆನಸಬೇಡಿರಿ; ಆದರೆ ನೀವು ನಂಬಿರುವ ಮೋಶೆಯೇ ನಿಮ್ಮ ಮೇಲೆ ತಪ್ಪು ಹೊರಿಸುತ್ತಾನೆ. ನೀವು ಮೋಶೆಯನ್ನು ನಂಬಿದ್ದರೆ ನನ್ನನ್ನೂ ನಂಬುತ್ತಿದ್ದಿರಿ; ಯಾಕಂದರೆ ಅವನು ನನ್ನ ವಿಷಯವಾಗಿ ಬರೆದನು.ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು. ಅವನು ಬರೆದದ್ದನ್ನು ನೀವು ನಂಬದಿದ್ದರೆ ನನ್ನ ಮಾತುಗಳನ್ನು ಹೇಗೆ ನಂಬಿರಿ ಅಂದನು.
- Matthew 26:63–68 ಮತ್ತಾಯನು 26:63–68ಆದರೆ ಯೇಸು ಸುಮ್ಮನಿದ್ದನು. ಆಗ ಮಹಾಯಾಜಕನು ಪ್ರತ್ಯುತ್ತರವಾಗಿ ಆತನಿಗೆ--ನೀನು ದೇವಕುಮಾರನಾದ ಕ್ರಿಸ್ತನಾದರೆ ಅದನ್ನು ನಮಗೆ ಹೇಳಬೇಕೆಂದು ಜೀವಸ್ವರೂಪನಾದ ದೇವರ ಆಣೆಯನ್ನು ನಿನಗೆ ಇಡುತ್ತೇನೆ ಅಂದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳಿದ್ದೀ; ಆದರೂ--ಇನ್ನು ಮೇಲೆ ಮನುಷ್ಯಕುಮಾರನು ಸರ್ವ ಶಕ್ತನ ಬಲಪಾರ್ಶ್ವದಲ್ಲಿ ಕೂತಿರುವದನ್ನೂ ಆಕಾಶದ ಮೇಘಗಳ ಮೇಲೆ ಬರುವದನ್ನೂ ನೀವು ನೋಡುವಿರಿ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು. ಆಗ ಮಹಾ ಯಾಜಕನು ತನ್ನ ಬಟ್ಟೆಗಳನ್ನು ಹರಕೊಂಡು--ಇವನು ದೇವದೂಷಣೆ ಮಾಡಿದ್ದಾನೆ; ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಯಾಕೆ ಬೇಕು? ಇಗೋ, ಈಗಲೇ ಇವನ ದೇವದೂಷಣೆಯನ್ನು ನೀವು ಕೇಳಿದ್ದೀರಲ್ಲಾ 66ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವ ನಿಮಗೆ ಹೇಗೆ ತೋರುತ್ತದೆ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ--ಇವನು ಮರಣಕ್ಕೆ ಪಾತ್ರನು ಅಂದರು. ಆಮೇಲೆ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಬೇರೆ ಕೆಲವರು ಆತನನ್ನು ಹೊಡೆದರು. ಕ್ರಿಸ್ತನೇ, ನಿನ್ನನ್ನು ಹೊಡೆದವರು ಯಾರು? ನಮಗೆ ಪ್ರವಾದನೆ ಹೇಳು ಅಂದರು.
- Matthew 11:3–5 ಮತ್ತಾಯನು 11:3–5ಬರಬೇಕಾದಾತನು ನೀನೋ ಇಲ್ಲವೆ ನಾವು ಬೇರೊಬ್ಬನಿಗಾಗಿ ನೋಡಬೇಕೋ ಅಂದನು. ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನೀವು ಹೋಗಿ ಕೇಳುವವುಗಳನ್ನೂ ನೋಡುವವು ಗಳನ್ನೂ ಯೋಹಾನನಿಗೆ ತಿಳಿಸಿರಿ; ಕುರುಡರು ದೃಷ್ಟಿ ಹೊಂದುತ್ತಾರೆ, ಕುಂಟರು ನಡೆಯುತ್ತಾರೆ,ಕುಷ್ಟರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲ್ಪಡುತ್ತದೆ.
- John 8:43–45 ಯೋಹಾನನು 8:43–45ನೀವು ನನ್ನ ಮಾತನ್ನು ಯಾಕೆ ಗ್ರಹಿ ಸದೆ ಇದ್ದೀರಿ? ನೀವು ನನ್ನ ವಾಕ್ಯವನ್ನು ಕೇಳದೆ ಇರುವದರಿಂದಲೇ. ನೀವು ನಿಮ್ಮ ತಂದೆಯಾದ ಸೈತಾನನಿಗೆ ಸಂಬಂಧಪಟ್ಟವರಾಗಿದ್ದೀರಿ. ನಿಮ್ಮ ತಂದೆಯ ದುರಾಶೆಗಳನ್ನೇ ನೀವು ಮಾಡುವದಕ್ಕೆ ಇಚ್ಛೈಸುತ್ತೀರಿ; ಅವನು ಆದಿಯಿಂದಲೂ ಕೊಲೆಗಾರನಾಗಿದ್ದು ಸತ್ಯ ದಲ್ಲಿ ನಿಲ್ಲಲಿಲ್ಲ. ಯಾಕಂದರೆ ಅವನಲ್ಲಿ ಸತ್ಯವೇ ಇಲ್ಲ; ಅವನು ಸುಳ್ಳಾಡುವಾಗ ತನ್ನ ಸ್ವಂತವಾದವುಗಳಿಂದ ಮಾ ನಾನು ನಿಮಗೆ ಸತ್ಯವನ್ನು ಹೇಳುವವನಾದದರಿಂದ ನೀವು ನನ್ನನ್ನು ನಂಬುವದಿಲ್ಲ.
- John 12:37–43 ಯೋಹಾನನು 12:37–43ಆದರೆ ಆತನು ಅನೇಕ ಅದ್ಭುತಕಾರ್ಯಗಳನ್ನು ಅವರ ಮುಂದೆ ಮಾಡಿದಾಗ್ಯೂ ಅವರು ಆತನನ್ನು ನಂಬಲಿಲ್ಲ. ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು. ಅವರು ನಂಬಲಾರದೆ ಇದ್ದದರಿಂದ ಯೆಶಾಯನು ತಿರಿಗಿ ಹೇಳಿದ್ದೇನಂದರೆ-- ಅವರು ಕಣ್ಣಿನಿಂದ ಕಾಣದೆ ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದೆ ಇರುವಂತೆ ಆತನು ಅವರ ಕಣ್ಣುಗಳನ್ನು ಕುರುಡು ಮಾಡಿ ಅವರ ಹೃದಯವನ್ನು ಕಠಿಣ ಮಾಡಿದನು ಎಂಬದು. ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಇವುಗಳನ್ನು ಹೇಳಿದನು. ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ. ಯಾಕಂದರೆ ಅವರು ದೇವರ ಹೊಗಳಿ ಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.