Luke · chapter 22 · verse 7
Luke 22:7 in Kannada
ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
Aaga paskada kuriyu vadhisalpadabekaagidda huliyillada rottiya dinavu banditu.
Luke 22:7 in English
- King James Version (KJV)
- Then came the day of unleavened bread, when the passover must be killed.
- World English Bible (WEB)
- The day of unleavened bread came, on which the Passover must be sacrificed.
- American Standard Version (ASV)
- And the day of unleavened bread came, on which the passover must be sacrificed.
- Bible in Basic English (BBE)
- And the day of unleavened bread came, when the Passover lamb is put to death.
- Darby Translation (DBY)
- And the day of unleavened bread came, in which the passover was to be killed.
- Webster's Bible (WBS)
- Then came the day of unleavened bread, when the passover must be killed.
- Young's Literal Translation (YLT)
- And the day of the unleavened food came, in which it was behoving the passover to be sacrificed,
Read in context
- 5ಆಗ ಅವರು ಸಂತೋಷಪಟ್ಟು ಅವನಿಗೆ ಹಣ ಕೊಡುವದಕ್ಕೆ ಒಡಂಬಟ್ಟರು.
- 6ಅವನು ವಾಗ್ದಾನ ಮಾಡಿ ಜನ ಸಮೂಹವು ಇಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವಂತೆ ಸಂದರ್ಭವನ್ನು ಹುಡುಕುತ್ತಿದ್ದನು.
- 7ಆಗ ಪಸ್ಕದ ಕುರಿಯು ವಧಿಸಲ್ಪಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ದಿನವು ಬಂದಿತು.
- 8ಆತನು ಪೇತ್ರ ಯೋಹಾನರನ್ನು ಕಳುಹಿಸಿ--ನಾವು ಊಟ ಮಾಡುವಂತೆ ಹೋಗಿ ನಮಗೋಸ್ಕರ ಪಸ್ಕವನ್ನು ಸಿದ್ಧಮಾಡಿರಿ ಅಂದನು.
- 9ಅವರು ಆತನಿಗೆ--ನಾವು ಎಲ್ಲಿ ಸಿದ್ಧ ಮಾಡಬೇಕೆಂದು ನೀನು ಕೋರುತ್ತೀ ಅಂದರು.
Cross references
- Exodus 12:18 ವಿಮೋಚನಕಾಂಡ 12:18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.
- Mark 14:12–16 ಮಾರ್ಕನು 14:12–16ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು. ಆಗ ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕಳುಹಿಸಿ ಅವರಿಗೆ--ನೀವು ಪಟ್ಟಣದೊಳಕ್ಕೆ ಹೋಗಿರಿ; ಅಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು; ಅವನನ್ನು ಹಿಂಬಾಲಿಸಿರಿ. ಅವನು ಯಾವ ಮನೆ ಯೊಳಗೆ ಹೋಗುತ್ತಾನೋ ಆ ಮನೆಯ ಯಜಮಾನ ನಿಗೆ--ನಾನು ನನ್ನ ಶಿಷ್ಯರೊಂದಿಗೆ ಪಸ್ಕದ ಊಟ ಮಾಡಲು ಅತಿಥಿಯ ಕೊಠಡಿ ಎಲ್ಲಿದೆ ಎಂದು ಬೋಧ ಕನು ಕೇಳುತ್ತಾನೆ ಎಂದು ಹೇಳಿರಿ. ಅವನು ಸಜ್ಜು ಗೊಳಿಸಿ ಸಿದ್ಧಮಾಡಿದ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ನಮಗೆ ಸಿದ್ಧಮಾಡಿರಿ ಅಂದನು. ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
- Exodus 12:6 ವಿಮೋಚನಕಾಂಡ 12:6ಅದನ್ನು ಈ ತಿಂಗಳಿನ ಹದಿನಾಲ್ಕನೆಯ ದಿನದ ವರೆಗೆ ಇಟ್ಟುಕೊಳ್ಳಬೇಕು. ತರುವಾಯ ಸಾಯಂ ಕಾಲದಲ್ಲಿ ಇಸ್ರಾಯೇಲಿನ ಕೂಟದ ಇಡೀ ಸಭೆಯು ಅದನ್ನು ಕೊಲ್ಲಬೇಕು.
- 1 Corinthians 5:7 1 ಕೊರಿಂಥದವರಿಗೆ 5:7ಆದದರಿಂದ ನೀವು ಹುಳಿ ಇಲ್ಲದ ವರಾದ ಕಾರಣ ಹೊಸ ಕಣಿಕವಾಗಿರುವಂತೆ ಆ ಹಳೇ ಹುಳಿಯನ್ನು ತೆಗೆದುಹಾಕಿರಿ. ಯಾಕಂದರೆ ನಮ್ಮ ಪಸ್ಕವಾಗಿರುವ ಕ್ರಿಸ್ತನೇ ನಮಗೋಸ್ಕರ ಯಜ್ಞಾರ್ಪಿತ ನಾಗಿದ್ದಾನೆ.
- Luke 22:1 ಲೂಕನು 22:1ಆಗ ಪಸ್ಕವೆಂಬ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಸವಿಾಪವಾಗಿತ್ತು.
- Matthew 26:17–19 ಮತ್ತಾಯನು 26:17–19ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು--ಪಸ್ಕದ ಊಟಮಾಡುವದಕ್ಕೆ ನಾವು ನಿನಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ನೀನು ಕೋರುತ್ತೀ ಎಂದು ಆತನನ್ನು ಕೇಳಿದರು. ಅದಕ್ಕೆ ಆತನು--ನೀವು ಪಟ್ಟಣದೊಳಕ್ಕೆ ಇಂಥವನ ಬಳಿಗೆ ಹೋಗಿ-- ನನ್ನ ಸಮಯವು ಸವಿಾಪವಾಗಿದೆ; ನನ್ನ ಶಿಷ್ಯರ ಜೊತೆಗೆ ನಿನ್ನ ಮನೆಯಲ್ಲಿ ಪಸ್ಕವನ್ನು ಆಚರಿಸುತ್ತೇನೆಂದು ಬೋಧಕನು ಹೇಳುತ್ತಾನೆ ಎಂಬದಾಗಿ ಅವನಿಗೆ ಹೇಳಿರಿ ಅಂದನು. ಯೇಸು ಅವರಿಗೆ ಆಜ್ಞಾಪಿಸಿದಂತೆ ಶಿಷ್ಯರು ಪಸ್ಕವನ್ನು ಸಿದ್ಧಪಡಿಸಿದರು.