Luke · chapter 23 · verse 1
Luke 23:1 in Kannada
ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
Aaga janasamoohavellavoo eddu aatanannu pilaatana balige tegedu kondu hodaru.
Luke 23:1 in English
- King James Version (KJV)
- And the whole multitude of them arose, and led him unto Pilate.
- World English Bible (WEB)
- The whole company of them rose up and brought him before Pilate.
- American Standard Version (ASV)
- And the whole company of them rose up, and brought him before Pilate.
- Bible in Basic English (BBE)
- And they all went and took him before Pilate.
- Darby Translation (DBY)
- And the whole multitude of them, rising up, led him to Pilate.
- Webster's Bible (WBS)
- And the whole multitude of them arose, and led him to Pilate.
- Young's Literal Translation (YLT)
- And having risen, the whole multitude of them did lead him to Pilate,
Read in context
- 1ಆಗ ಜನಸಮೂಹವೆಲ್ಲವೂ ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದು ಕೊಂಡು ಹೋದರು.
- 2ಅವರು ಆತನ ಮೇಲೆ ದೂರು ಹೇಳಲಾರಂಭಿಸಿ--ಈ ಮನುಷ್ಯನು ಜನಾಂಗವನ್ನು ತಪ್ಪು ದಾರಿಗೆ ನಡಿಸುವನಾಗಿ ತಾನೇ ಕ್ರಿಸ್ತನೆಂಬ ಅರಸನಾಗಿದ್ದನೆಂದೂ ಹೇಳಿ ಕೈಸರನಿಗೆ ಕಂದಾಯ ಕೊಡದಂತೆ ಇವನು ಅಡ್ಡಿ ಮಾಡುತ್ತಿರುವದನ್ನು ನಾವು ನೋಡಿದ್ದೇವೆಅಂದರು.
- 3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
Cross references
- Matthew 27:1–2 ಮತ್ತಾಯನು 27:1–2ಬೆಳಗಾದಾಗ ಎಲ್ಲಾ ಪ್ರಧಾನ ಯಾಜಕರೂ ಜನರ ಹಿರಿಯರೂ ಯೇಸುವನ್ನು ಕೊಲ್ಲಿಸುವದಕ್ಕೆ ಆತನಿಗೆ ವಿರೋಧವಾಗಿ ಆಲೋಚನೆ ಮಾಡಿಕೊಂಡರು. ಮತ್ತು ಅವರು ಆತನನ್ನು ಕಟ್ಟಿ ತೆಗೆದುಕೊಂಡು ಹೋಗಿ ಅಧಿಪತಿಯಾದ ಪೊಂತ್ಯ ಪಿಲಾತನಿಗೆ ಒಪ್ಪಿಸಿದರು.
- Luke 22:66 ಲೂಕನು 22:66ಬೆಳಗಾದ ಕೂಡಲೆ ಜನರ ಹಿರಿಯರೂ ಪ್ರಧಾನ ಯಾಜಕರೂ ಶಾಸ್ತ್ರಿಗಳೂ ಒಟ್ಟಾಗಿ ಬಂದು ಆತನನ್ನು ತಮ್ಮ ಆಲೋಚನಾ ಸಭೆಗೆ ಸಾಗಿಸಿಕೊಂಡು ಹೋಗಿ--
- Matthew 27:11–14 ಮತ್ತಾಯನು 27:11–14ಯೇಸು ಅಧಿಪತಿಯ ಮುಂದೆ ನಿಂತಿದ್ದನು; ಆಗ ಆ ಅಧಿಪತಿಯು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ--ನೀನೇ ಹೇಳುತ್ತೀ ಅಂದನು. ಆಗ ಪ್ರಧಾನ ಯಾಜಕರೂ ಹಿರಿಯರೂ ಆತನ ಮೇಲೆ ದೂರು ಹೇಳುತ್ತಿರುವಾಗ ಆತನು ಏನು ಉತ್ತರ ಕೊಡಲಿಲ್ಲ. ಆಗ ಪಿಲಾತನು ಆತನಿಗೆ--ನಿನಗೆ ವಿರೋಧವಾಗಿ ಇವರು ಇಷ್ಟು ದೂರು ಹೇಳುವದನ್ನು ನೀನು ಕೇಳುವದಿಲ್ಲವೋ ಅಂದನು. ಆತನು ಒಂದು ಮಾತಿಗಾದರೂ ಅವನಿಗೆ ಉತ್ತರಕೊಡದೆ ಇದ್ದದರಿಂದ ಅಧಿಪತಿಯು ಅತ್ಯಾಶ್ಚರ್ಯಪಟ್ಟನು.
- Mark 15:1–5 ಮಾರ್ಕನು 15:1–5ಬೆಳಗಾದ ಕೂಡಲೆ ಪ್ರಧಾನ ಯಾಜಕರು ಹಿರಿಯರ ಶಾಸ್ತ್ರಿಗಳ ಮತ್ತು ಸಭೆಯವ ರೆಲ್ಲರೊಂದಿಗೆ ಆಲೋಚನೆ ಮಾಡಿಕೊಂಡು ಯೇಸು ವನ್ನು ಕಟ್ಟಿತೆಗೆದುಕೊಂಡು ಹೋಗಿ ಪಿಲಾತನಿಗೆ ಒಪ್ಪಿಸಿ ದರು. ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಲು ಆತನು ಪ್ರತ್ಯುತ್ತರ ವಾಗಿ--ನೀನೇ ಅದನ್ನು ಹೇಳಿದ್ದೀ ಅಂದನು. ಇದ ಲ್ಲದೆ ಪ್ರಧಾನಯಾಜಕರು ಆತನ ಮೇಲೆ ಅನೇಕ ದೂರುಗಳನ್ನು ಹೇಳಿದರು; ಆದರೆ ಆತನು ಏನೂ ಉತ್ತರ ಕೊಡಲಿಲ್ಲ. ಆಗ ಪಿಲಾತನು ತಿರಿಗಿ ಆತ ನಿಗೆ--ನೀನು ಏನೂ ಉತ್ತರಕೊಡುವದಿಲ್ಲವೋ? ಇವರು ನಿನಗೆ ವಿರೋಧವಾಗಿ ಎಷ್ಟು ದೂರುಗಳನ್ನು ಹೇಳುತ್ತಾರೆ ನೋಡು ಎಂದು ಕೇಳಿದನು. ಆದರೂ ಯೇಸು ಉತ್ತರಕೊಡದೆ ಇರಲಾಗಿ ಪಿಲಾತನು ಆಶ್ಚರ್ಯಪಟ್ಟನು.
- John 18:28–38 ಯೋಹಾನನು 18:28–38ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ. ಆಗ ಪಿಲಾತನು ಹೊರಗೆ ಅವರ ಬಳಿಗೆ ಹೋಗಿ ನೀವು ಈ ಮನುಷ್ಯನ ಮೇಲೆ ಏನು ದೂರು ತರುತ್ತೀರಿ ಎಂದು ಕೇಳಿದ್ದಕ್ಕೆ ಅವರು ಪ್ರತ್ಯುತ್ತರವಾಗಿ ಅವನಿಗೆ--ಇವನು ದುಷ್ಕರ್ಮಿಯಲ್ಲ ದಿದ್ದರೆ ನಾವು ಇವನನ್ನು ನಿನಗೆ ಒಪ್ಪಿಸಿಕೊಡುತ್ತಿರಲಿಲ ಎಂದು ಹೇಳಿದರು. ಆಗ ಪಿಲಾತನು ಅವರಿಗೆ--ನೀವೇ ಆತನನ್ನು ತಕ್ಕೊಂಡು ನಿಮ್ಮ ನ್ಯಾಯಪ್ರಮಾಣದ ಪ್ರಕಾರ ಆತನಿಗೆ ನ್ಯಾಯತೀರಿಸಿರಿ ಅಂದನು. ಅದಕ್ಕೆ ಯೆಹೂದ್ಯರು ಅವನಿಗೆ--ನಾವು ಯಾವ ಮನುಷ್ಯ ನನ್ನೂ ಕೊಲ್ಲಿಸುವದಕ್ಕೆ ನಮಗೆ ನ್ಯಾಯವಲ್ಲ ಎಂದು ಹೇಳಿದರು. ಹೀಗೆ ಯೇಸು ತಾನು ಎಂಥಾ ಸಾವು ಸಾಯುವನೆಂದು ಸೂಚಿಸಿ ಹೇಳಿದ ಮಾತು ಈಡೇರಿತು. ತರುವಾಯ ಪಿಲಾತನು ತಿರಿಗಿ ನ್ಯಾಯಾಲಯ ದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಆತ ನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೆ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿ ದ್ದಾರೋ? ಅಂದನು. ಪಿಲಾತನು ಪ್ರತ್ಯುತ್ತರ ವಾಗಿ--ನಾನೇನು ಯೆಹೂದ್ಯನೋ? ನಿನ್ನ ಸ್ವಂತ ಜನಾಂಗವೂ ಪ್ರಧಾನಯಾಜಕರೂ ನಿನ್ನನ್ನು ನನಗೆ ಒಪ್ಪಿಸಿದ್ದಾರೆ; ನೀನು ಏನು ಮಾಡಿದ್ದೀ ಎಂದು ಕೇಳಿ ದನು. ಯೇಸು ಪ್ರತ್ಯುತ್ತರವಾಗಿ--ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರಿಗೆ ಒಪ್ಪಿಸಲ್ಪಡದ ಹಾಗೆ ನನ್ನ ಸೇವಕರು ಕಾದಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ ಅಂದನು. ಆದದರಿಂದ ಪಿಲಾತನು ಆತನಿಗೆ--ಹಾಗಾದರೆ ನೀನು ಅರಸನೋ ಅನ್ನಲು ಯೇಸು ಪ್ರತ್ಯುತ್ತರವಾಗಿ--ನಾನು ಅರಸ ನಾಗಿದ್ದೇನೆಂದು ನೀನೇ ಹೇಳುತ್ತೀ. ನಾನು ಸತ್ಯಕ್ಕೆ ಸಾಕ್ಷಿಕೊಡುವದಕ್ಕೋಸ್ಕರ ಹುಟ್ಟಿ ಅದಕ್ಕೋಸ್ಕರವೇ ಲೋಕಕ್ಕೆ ಬಂದೆನು; ಸತ್ಯಕ್ಕೆ ಸಂಬಂಧಿಸಿದ ಪ್ರತಿಯೊ ಬ್ಬನು ನನ್ನ ಸ್ವರವನು ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.