Luke · chapter 23 · verse 29
Luke 23:29 in Kannada
ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
Yaakandare--igo, banjeyaroo endigoo garbhiniyaagadavaroo endigoo mole kudisadavaroo dhanyaru endu heluva divasagalu baruttave.
Luke 23:29 in English
- King James Version (KJV)
- For, behold, the days are coming, in the which they shall say, Blessed [are] the barren, and the wombs that never bare, and the paps which never gave suck.
- World English Bible (WEB)
- For behold, the days are coming in which they will say, ‘Blessed are the barren, the wombs that never bore, and the breasts that never nursed.’
- American Standard Version (ASV)
- For behold, the days are coming, in which they shall say, Blessed are the barren, and the wombs that never bare, and the breasts that never gave suck.
- Bible in Basic English (BBE)
- For the days are coming in which they will say, Happy are those who have had no children, whose bodies have never given birth, whose breasts have never given milk.
- Darby Translation (DBY)
- for behold, days are coming in which they will say, Blessed [are] the barren, and wombs that have not borne, and breasts that have not given suck.
- Webster's Bible (WBS)
- For behold, the days are coming, in which they shall say, Blessed [are] the barren, and the wombs that never bore, and the breasts which never nourished infants.
- Young's Literal Translation (YLT)
- for, lo, days do come, in which they shall say, Happy the barren, and wombs that did not bare, and paps that did not give suck;
Read in context
- 27ಆಗ ಜನರ ದೊಡ್ಡ ಗುಂಪೂ ಸ್ತ್ರೀಯರೂ ಆತನಿ ಗಾಗಿ ಶೋಕಿಸುತ್ತಾ ಗೋಳಾಡುತ್ತಾ ಆತನನ್ನು ಹಿಂಬಾ ಲಿಸಿದರು.
- 28ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ.
- 29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- 30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- 31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
Cross references
- Matthew 24:19 ಮತ್ತಾಯನು 24:19ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ!
- Luke 21:23–24 ಲೂಕನು 21:23–24ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Mark 13:17–19 ಮಾರ್ಕನು 13:17–19ಆದರೆ ಆ ದಿವಸಗಳಲ್ಲಿ ಗರ್ಭಿಣಿ ಯರಿಗೂ ಮೊಲೆಕುಡಿಸುವವರಿಗೂ ಅಯ್ಯೋ! ನಿಮ್ಮ ಪಲಾಯನವು ಚಳಿಗಾಲದಲ್ಲಿ ಆಗದಂತೆ ನೀವು ಪ್ರಾರ್ಥಿಸಿರಿ. ಯಾಕಂದರೆ ಆ ದಿವಸಗಳಲ್ಲಿ ಸಂಕಟವಿರುವದು; ಅಂಥದ್ದು ದೇವರು ಸೃಷ್ಟಿಸಿದ ಸೃಷ್ಟಿ ಮೊದಲುಗೊಂಡು ಈ ಸಮಯದವರೆಗೂ ಆಗಲಿಲ್ಲ ಇಲ್ಲವೆ ಆಗುವದೂ ಇಲ್ಲ.
- Hosea 9:12–16 ಹೋಶೇಯ 9:12–16ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ! ನಾನು ತೂರನ್ನು ನೊಡಿದಂತೆ ಎಫ್ರಾಯಾಮು ರಮ್ಯ ಸ್ಥಳದಲ್ಲಿ ನೆಡಲ್ಪಟ್ಟಿದೆ; ಆದರೆ ಎಫ್ರಾಯಾಮು ಕೊಲ್ಲುವವನಿಗೆ ತನ್ನ ಮಕ್ಕಳನ್ನು ಹೊರಗೆ ತರುವದು. ಓ ಕರ್ತನೇ, ಅವರಿಗೆ ಕೊಡು; ಅವರಿಗೆ ನೀನು ಏನು ಕೊಡುತ್ತೀ? ಗರ್ಭಸ್ರಾವವನ್ನು ಮಾಡು ಮತ್ತು ಬತ್ತಿದ ಸ್ತನಗಳನ್ನು ಅವರಿಗೆ ಕೊಡು. ಅವರ ಕೆಟ್ಟತನ ವೆಲ್ಲಾ ಗಿಲ್ಗಾಲಿನಲ್ಲಿದೆ. ಅಲ್ಲಿ ನಾನು ಅವರನ್ನು ಹಗೆ ಮಾಡಿದ್ದೇನೆ. ಅವರ ಕೃತ್ಯಗಳ ಕೆಟ್ಟತನದ ನಿಮಿತ್ತ ಅವರನ್ನು ನನ್ನ ಆಲಯದೊಳಗಿಂದ ಹೊರಡಿಸಿ ಅವ ರನ್ನು ಇನ್ನು ಪ್ರೀತಿಮಾಡುವದೇ ಇಲ್ಲ; ಅವರ ಪ್ರಭು ಗಳೆಲ್ಲಾ ತಿರುಗಿ ಬೀಳುವವರೇ. ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Hosea 13:16 ಹೋಶೇಯ 13:16ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Deuteronomy 28:53–57 ಧರ್ಮೋಪದೇಶಕಾಂಡ 28:53–57ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.