Luke · chapter 23 · verse 31
Luke 23:31 in Kannada
ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
Avaru hasiraagiruva marakke ivugalannu maadidare onagida marakke enu maadiyaaru andanu.
Luke 23:31 in English
- King James Version (KJV)
- For if they do these things in a green tree, what shall be done in the dry?
- World English Bible (WEB)
- For if they do these things in the green tree, what will be done in the dry?”
- American Standard Version (ASV)
- For if they do these things in the green tree, what shall be done in the dry?
- Bible in Basic English (BBE)
- For if they do these things when the tree is green, what will they do when it is dry?
- Darby Translation (DBY)
- for if these things are done in the green tree, what shall take place in the dry?
- Webster's Bible (WBS)
- For if they do these things in a green tree, what will be done in the dry?
- Young's Literal Translation (YLT)
- for, if in the green tree they do these things — in the dry what may happen?'
Read in context
- 29ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ.
- 30ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- 31ಅವರು ಹಸಿರಾಗಿರುವ ಮರಕ್ಕೆ ಇವುಗಳನ್ನು ಮಾಡಿದರೆ ಒಣಗಿದ ಮರಕ್ಕೆ ಏನು ಮಾಡಿಯಾರು ಅಂದನು.
- 32ಇದಲ್ಲದೆ ದುಷ್ಕರ್ಮಿಗಳಾದ ಬೇರೆ ಇಬ್ಬರನ್ನು ಆತನೊಂದಿಗೆ ಕೊಲ್ಲುವದಕ್ಕಾಗಿ ತೆಗೆದುಕೊಂಡು ಹೋದರು.
- 33ಅವರು ಕಲ್ವಾರಿ ಎಂದು ಕರೆಯಲ್ಪಡುವ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನು ಮತ್ತು ಆ ದುಷ್ಕರ್ಮಿಗಳಲ್ಲಿ ಒಬ್ಬನನ್ನು ಬಲಗಡೆಯಲ್ಲಿ ಮತ್ತೊಬ್ಬನನ್ನು ಎಡಗಡೆ ಯಲ್ಲಿ ಶಿಲುಬೆಗೆ ಹಾಕಿದರು.
Cross references
- 1 Peter 4:17–18 1 ಪೇತ್ರನು 4:17–18ದೇವರ ಮನೆಯಲ್ಲಿ ಪ್ರಾರಂಭವಾಗತಕ್ಕ ನ್ಯಾಯ ತೀರ್ಪಿನ ಸಮಯವು ಬಂದದೆ; ಅದು ಮೊದಲು ನಮ್ಮಲ್ಲಿ ಪ್ರಾರಂಭವಾದರೆ ದೇವರ ಸುವಾರ್ತೆಗೆ ಅವಿಧೇಯರಾದವರ ಅಂತ್ಯವು ಏನಾಗಿರುವದು? ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಎಲ್ಲಿ?ಹೀಗಿರಲಾಗಿ ದೇವರ ಚಿತ್ತಾನುಸಾರ ಬಾಧೆಪಡು ವವರು ಒಳ್ಳೇದನ್ನು ಮಾಡುವವರಾಗಿದ್ದು ತಮ್ಮ ಆತ್ಮಗಳನ್ನು ನಂಬಿಗಸ್ತನಾದ ಸೃಷ್ಟಿಕರ್ತನಿಗೆ ಒಪ್ಪಿಸಲಿ.
- Proverbs 11:31 ಜ್ಞಾನೋಕ್ತಿಗಳು 11:31ಇಗೋ, ಭೂಮಿಯ ಮೇಲೆ ನೀತಿವಂತರು ಪ್ರತಿಫಲವನ್ನು ಹೊಂದುವರು; ದುಷ್ಟನೂ ಪಾಪಿಯೂ ಎಷ್ಟೋ ಹೆಚ್ಚಾಗಿ ಪ್ರತಿಫಲ ವನ್ನು ಹೊಂದುತ್ತಾರೆ.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Ezekiel 15:2–7 ಯೆಹೆಜ್ಕೇಲನು 15:2–7ಮನುಷ್ಯಪುತ್ರನೇ, ದ್ರಾಕ್ಷೇಗಿಡವು ಬೇರೆ ಗಿಡಗಳಿಗಿಂತಲೂ ಇಲ್ಲವೆ ಅಡವಿ ಯಲ್ಲಿರುವ ಮರಗಳ ಕೊಂಬೆಗಳಿಗಿಂತಲೂ ಹೆಚ್ಚೇನು? ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ? ಅಥವಾ ಅದರ ಮೇಲೆ ಯಾವ ಸಾಮಗ್ರಿಯನನ್ನಾದರೂ ನೇತುಹಾಕು ವದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ? ಇಗೋ, ಅದು ಸೌದೆಗಾಗಿ ಬೆಂಕಿಗೆ ಹಾಕಲ್ಪಡುತ್ತದೆ; ಬೆಂಕಿಯು ಅದರ ಎರಡು ಕೊನೆಗಳನ್ನು ತಿಂದುಬಿಡು ತ್ತದೆ; ಅದರ ಮಧ್ಯಭಾಗವು ಸುಟ್ಟುಹೋಗುತ್ತದೆ. ಇದೇನಾದರೂ ಕೆಲಸಕ್ಕೆ ಬರುವದೋ? ಇಗೋ, ಇದು ಸಂಪೂರ್ಣವಾಗಿದ್ದಾಗಲೇ ಕೆಲಸಕ್ಕೆ ಬರಲಿಲ್ಲ ಎಂದ ಮೇಲೆ ಬೆಂಕಿಯು ಅದನ್ನು ತಿಂದು ಸುಟ್ಟು ಬಿಟ್ಟಮೇಲೆ ಯಾವ ಕೆಲಸಕ್ಕೆ ಬಂದೀತು? ಆದದ ರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ವನವೃಕ್ಷಗಳಲ್ಲಿ ದ್ರಾಕ್ಷೇಗಿಡಗಳನ್ನು ನಾನು ಹೇಗೆ ಬೆಂಕಿಗೆ ಸೌದೆಗಾಗಿ ಮಾಡಿರುವೆನೋ? ಹಾಗೆಯೇ ನಾನು ಯೆರೂಸಲೇಮಿನ ನಿವಾಸಿಗಳನ್ನೂ ಕೊಟ್ಟಿದ್ದೇನೆ. ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಹೊರಗೆ ಬಂದು ಬೆಂಕಿಯೊಳಗಿಂದ ತಪ್ಪಿಸಿ ಕೊಂಡರೂ ಮತ್ತೊಂದು ಬೆಂಕಿಯು ಅವರನ್ನು ನುಂಗಿ ಬಿಡುವದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ ನಾನೇ ಕರ್ತನೆಂದು ತಿಳಿದುಕೊಳ್ಳುವಿರಿ.ಅವರು ಅತಿಕ್ರಮಿಸಿದ್ದರಿಂದ ನಾನು ಆ ದೇಶವನ್ನು ಹಾಳು ಮಾಡುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
- Matthew 3:12 ಮತ್ತಾಯನು 3:12ಒನೆಯುವ ಮೊರವನ್ನು ಆತನು ತನ್ನ ಕೈಯಲ್ಲಿ ಹಿಡಿದಿದ್ದಾನೆ; ಆತನು ತನ್ನ ಕಣವನ್ನು ಸಂಪೂರ್ಣವಾಗಿ ಹಸನುಮಾಡಿ ತನ್ನ ಗೋಧಿಯನ್ನು ಕಣಜದಲ್ಲಿ ಕೂಡಿಸುವನು; ಆದರೆ ಹೊಟ್ಟನ್ನು ಆರದ ಬೆಂಕಿಯಿಂದ ಸುಟ್ಟುಬಿಡುವನು ಎಂದು ಹೇಳಿದನು.
- Ezekiel 21:3–4 ಯೆಹೆಜ್ಕೇಲನು 21:3–4ಇಸ್ರಾ ಯೇಲ್ ದೇಶಕ್ಕೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗೆ ಹೇಳುತ್ತಾನೆ; ಇಗೋ, ನಾನು ನಿಮಗೆ ವಿರೋಧವಾಗಿದ್ದೇನೆ ಮತ್ತು ನನ್ನ ಕತ್ತಿಯನ್ನು ಅದರ ಒರೆಯಿಂದ ಹೊರಗೆ ತೆಗೆದು ನಿನ್ನೊಳಗಿರುವ ನೀತಿ ವಂತನನ್ನೂ ದುಷ್ಟನನ್ನೂ ಕಡಿದುಬಿಡುವೆನು. ನಾನು ನೀತಿವಂತನನ್ನೂ ದುಷ್ಟನನ್ನೂ ಕಡಿದು ಬಿಡುವದರಿಂದ ನನ್ನ ಕತ್ತಿಯು ದಕ್ಷಿಣದಿಂದ ಮೊದಲುಗೊಂಡು ಉತ್ತ ರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆ ಯನ್ನು ಬಿಟ್ಟು ಹೋಗುವದು.
- Jeremiah 25:29 ಯೆರೆಮೀಯ 25:29ಇಗೋ, ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಪಟ್ಟಣದ ಮೇಲೆ ನಾನು ಕೇಡನ್ನು ತರಿಸುವದಕ್ಕೆ ಆರಂಭಮಾಡುತ್ತೇನೆ; ಹಾಗಾದರೆ ನೀವು ಸಂಪೂರ್ಣ ದಂಡನೆಗೆ ತಪ್ಪಿಸಿಕೊಂಡೀರೋ? ತಪ್ಪಿಸಿ ಕೊಳ್ಳುವದಿಲ್ಲ: ನಾನು ಭೂನಿವಾಸಿಗಳೆಲ್ಲರ ಮೇಲೆ ಕತ್ತಿಯನ್ನು ಕರೆಯುತ್ತೇನೆಂದು ಸೈನ್ಯಗಳ ಕರ್ತನು ಅನ್ನು ತ್ತಾನೆ.