Luke · chapter 23 · verse 45
Luke 23:45 in Kannada
ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
Idallade sooryanu kattalaadanu; devaalayada tereyu madhyadalli hariyitu.
Luke 23:45 in English
- King James Version (KJV)
- And the sun was darkened, and the veil of the temple was rent in the midst.
- World English Bible (WEB)
- The sun was darkened, and the veil of the temple was torn in two.
- American Standard Version (ASV)
- the sun’s light failing: and the veil of the temple was rent in the midst.
- Bible in Basic English (BBE)
- The light of the sun went out, and the curtain in the Temple was parted in two.
- Darby Translation (DBY)
- And the sun was darkened, and the veil of the temple rent in the midst.
- Webster's Bible (WBS)
- And the sun was darkened, and the vail of the temple was rent in the midst.
- Young's Literal Translation (YLT)
- and the sun was darkened, and the vail of the sanctuary was rent in the midst,
Read in context
- 43ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
- 44ಆಗ ಸುಮಾರು ಆರನೇತಾಸಾಗಿತ್ತು; ಒಂಭತ್ತನೇ ತಾಸಿನವರೆಗೆ ಭೂಮಿಯ ಮೇಲೆಲ್ಲಾ ಕತ್ತಲೆ ಕವಿಯಿತು.
- 45ಇದಲ್ಲದೆ ಸೂರ್ಯನು ಕತ್ತಲಾದನು; ದೇವಾಲಯದ ತೆರೆಯು ಮಧ್ಯದಲ್ಲಿ ಹರಿಯಿತು.
- 46ಯೇಸು ಮಹಾಧ್ವನಿಯಿಂದ--ತಂದೆಯೇ, ನಾನು ನನ್ನ ಆತ್ಮವನ್ನು ನಿನ್ನ ಕೈಗಳಲ್ಲಿ ಒಪ್ಪಿಸುತ್ತೇನೆ ಎಂದು ಕೂಗಿ ಹೇಳಿದನು; ಹೀಗೆ ಹೇಳಿದ ಮೇಲೆ ಆತನು ಪ್ರಾಣಬಿಟ್ಟನು.
- 47ಆಗ ಶತಾಧಿ ಪತಿಯು ನಡೆದದ್ದನ್ನು ನೋಡಿ--ನಿಶ್ಚಯವಾಗಿ ಈತನು ನೀತಿವಂತನಾಗಿದ್ದನು ಎಂದು ಹೇಳಿ ದೇವರನ್ನು ಮಹಿಮೆಪಡಿಸಿದನು.
Cross references
- Hebrews 10:19–22 ಇಬ್ರಿಯರಿಗೆ 10:19–22ಹೀಗಿರುವಲ್ಲಿ ಸಹೋದರರೇ, ಯೇಸುವಿನ ರಕ್ತದ ಮೂಲಕ ಅತಿಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವದಕ್ಕೆ ನಮಗೆ ಧೈರ್ಯವುಂಟಾಯಿತು. ಹೇಗೆಂದರೆ, ಆತನು ನಮಗೋಸ್ಕರ ಪ್ರತಿಷ್ಠಿಸಿದ ಮತ್ತು ಹೊಸ ಜೀವವುಳ್ಳ ದಾರಿಯಲ್ಲಿ ಆತನ ಶರೀರವೆಂಬ ತೆರೆಯ ಮುಖಾಂತರವೇ ಇದಾಯಿತು. ದೇವರ ಮನೆಯ ಮೇಲೆ ಮಹಾಯಾಜಕನು ನಮಗಿರುವದರಿಂದ ನಾವು ಸತ್ಯವಾದ ಹೃದಯದಿಂದಲೂ ವಿಶ್ವಾಸದ ಪೂರ್ಣ ನಿಶ್ಚಯತ್ವದಿಂದಲೂ ಕೆಟ್ಟ ಮನಸ್ಸಾಕ್ಷಿಯ ಪರಿಹಾರಕ್ಕಾಗಿ ಚಿಮುಕಿಸಲ್ಪಟ್ಟ ಹೃದಯಗಳುಳ್ಳವ ರಾಗಿಯೂ ನಮ್ಮ ಶರೀರಗಳನ್ನು ನಿರ್ಮೂಲವಾದ ನೀರಿನಿಂದ ತೊಳೆದು ಕೊಂಡವರಾಗಿಯೂ ಆತನ ಸವಿಾಪಕ್ಕೆ ಬರೋಣ.
- Matthew 27:51 ಮತ್ತಾಯನು 27:51ಆಗ ಇಗೋ, ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೆ ಹರಿದು ಎರಡು ಭಾಗವಾಯಿತು; ಭೂಮಿಯು ಕಂಪಿಸಿತು; ಮತ್ತು ಬಂಡೆ ಗಳು ಸೀಳಿದವು;
- Hebrews 9:3–8 ಇಬ್ರಿಯರಿಗೆ 9:3–8ಎರಡನೆಯ ತೆರೆಯ ಆಚೆಯಲ್ಲಿ ಅತಿಪವಿತ್ರ ಸ್ಥಳವೆನಿಸಿಕೊಳ್ಳುವ ಇನ್ನೊಂದು ಗುಡಾರವಿತ್ತು; ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು; ಅದರ ಮೇಲೆ ಪ್ರಭಾವದ ಕೆರೂಬಿ ಯರು ಕೃಪಾಸನವನ್ನು ಮುಚ್ಚಿಕೊಂಡಿದ್ದರು. ಸದ್ಯಕ್ಕೆ ಈ ವಿಷಯಗಳನ್ನು ಪ್ರತ್ಯೇಕವಾಗಿ ನಾವು ವಿವರಿಸು ವದಕ್ಕೆ ಆಗುವದಿಲ್ಲ. ಇವುಗಳು ಹೀಗೆ ನೇಮಕ ಮಾಡಲ್ಪಟ್ಟಾಗ ಯಾಜಕರು ಯಾವಾಗಲೂ ದೇವರ ಸೇವೆಯನ್ನು ಪೂರೈಸುವವರಾಗಿ ಗುಡಾರದ ಮೊದಲನೆಯ ಭಾಗದೊಳಗೆ ಪ್ರವೇಶಿಸುವರು. ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರುಷಕ್ಕೆ ಒಂದೇ ಸಾರಿ ಹೋಗುತ್ತಾನೆ. ಅವನು ರಕ್ತವನ್ನು ತಕ್ಕೊಳ್ಳದೆ ಹೋಗುವದಿಲ್ಲ; ಆ ರಕ್ತವನ್ನು ತನ ಗೋಸ್ಕರವೂ ಜನರ ತಪ್ಪುಗಳಿಗೋಸ್ಕರವೂ ಸಮರ್ಪಿಸುತ್ತಾನೆ. ಮೊದಲನೆಯ ಗುಡಾರವು ಇನ್ನೂ ಇರುವ ತನಕ ಅತಿ ಪರಿಶುದ್ಧ ಸ್ಥಳಕ್ಕೆ ಹೋಗುವ ಮಾರ್ಗವು ಇದುವರೆಗೂ ಪ್ರಕಟವಾಗಿಲ್ಲಿವೆಂಬದನ್ನು ಪವಿತ್ರಾತ್ಮನು ವ್ಯಕ್ತಪಡಿಸುತ್ತಾನೆ.
- Mark 15:38 ಮಾರ್ಕನು 15:38ಆಗ ದೇವಾಲಯದ ತೆರೆಯು ಮೇಲಿನಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು.
- Ephesians 2:14–18 ಎಫೆಸದವರಿಗೆ 2:14–18ನಿಮ್ಮನ್ನೂ ನಮ್ಮನ್ನೂ ಒಂದು ಮಾಡಿದ ಆತನೇ ನಮ್ಮ ಸಮಾಧಾನವಾಗಿ ನಮ್ಮಿಬ್ಬರನ್ನು ಅಗಲಿ ಸಿದ ಅಡ್ಡಗೋಡೆಯನ್ನು ಆತನು ಕೆಡವಿಹಾಕಿದನು. ಆತನು ಇದ್ದ ದ್ವೇಷವನ್ನು ಅಂದರೆ ಶಾಸನಗಳ ಆಜ್ಞೆಗಳುಳ್ಳ ನ್ಯಾಯಪ್ರಮಾಣವನ್ನು ತನ್ನ ಶರೀರದ ಮೂಲಕ ರದ್ದುಗೊಳಿಸಿ ಸಮಾಧಾನ ಮಾಡುವವನಾಗಿ ಉಭಯರನ್ನು ತನ್ನಲ್ಲಿ ಒಬ್ಬ ನೂತನ ಪುರಷನನ್ನಾಗಿ ಮಾಡಿದನು. ಇದ್ದ ದ್ವೇಷವನ್ನು ತನ್ನ ಶಿಲುಬೆಯ ಮೇಲೆ ಕೊಂದು ಅದರಿಂದ ಉಭಯರನ್ನು ಒಂದೇ ದೇಹದಂತಾಗ ಮಾಡಿ ದೇವರೊಂದಿಗೆ ಸಮಾಧಾನ ಪಡಿಸಿದ್ದಾನೆ. ಇದಲ್ಲದೆ ಆತನು ಬಂದು ದೂರ ವಾಗಿದ್ದ ನಿಮಗೂ ಸವಿಾಪವಾಗಿದ್ದ ಅವರಿಗೂ ಸಮಾಧಾನವನ್ನು ಸಾರಿದನು. ಆತನ ಮೂಲಕ ನಾವೂ ನೀವೂ ಒಬ್ಬ ಆತ್ಮನನ್ನೇ ಹೊಂದಿದವರಾಗಿ ತಂದೆಯ ಬಳಿಗೆ ಪ್ರವೇಶಿಸುವದಕ್ಕೆ ಮಾರ್ಗವಾಯಿತು.
- Leviticus 16:12–16 ಯಾಜಕಕಾಂಡ 16:12–16ಅವನು ಕರ್ತನ ಸನ್ನಿಧಿಯಲ್ಲಿರುವ ಯಜ್ಞವೇದಿಯಿಂದ ಧೂಪ ಸುಡುವ ಪಾತ್ರೆಯ ತುಂಬ ಬೆಂಕಿಯಿಂದ ಉರಿಯುವ ಕೆಂಡ ಗಳನ್ನು ಮತ್ತು ತನ್ನ ಕೈಗಳ ತುಂಬ ಸಣ್ಣದಾಗುವಂತೆ ಕಟ್ಟಿದ ಧೂಪವನ್ನು ತೆಗೆದುಕೊಂಡು ಅದನ್ನು ತೆರೆಯ ಒಳಗಡೆ ತರಬೇಕು. ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕೃಪಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಕರ್ತನ ಎದುರಿನಲ್ಲಿ ಉರಿಯುವ ಕೆಂಡಗಳ ಮೇಲೆ ಹಾಕಬೇಕು. ಆ ಹೋರಿಯ ರಕ್ತದಿಂದ ತೆಗೆದು ಕೊಂಡು ಕೃಪಾಸನದ ಮೇಲೆ ಪೂರ್ವಕ್ಕೆ ತನ್ನ ಬೆರಳಿನಿಂದ ಚಿಮುಕಿಸಬೇಕು; ಕೃಪಾಸನದ ಮುಂದೆ ಆ ರಕ್ತವನ್ನು ತನ್ನ ಬೆರಳಿನಿಂದ ಏಳು ಸಾರಿ ಚಿಮುಕಿಸಬೆಕು. ತರುವಾಯ ಅವನು ಜನರಿಗೋಸ್ಕರ ಪಾಪಬಲಿ ಯಾಗಿರುವ ಆಡನ್ನು ವಧಿಸಿ ಅದರ ರಕ್ತವನ್ನು ತೆರೆಯ ಒಳಗಡೆ ತಂದು ಹೋರಿಯ ರಕ್ತದಿಂದ ಮಾಡಿ ದಂತೆಯೇ ಕೃಪಾಸನದ ಮೇಲೆಯೂ ಮುಂದೆಯೂ ಚಿಮುಕಿಸಬೇಕು. ಇಸ್ರಾಯೇಲಿನ ಮಕ್ಕಳ ಅಶುದ್ಧ ತ್ವದ ನಿಮಿತ್ತವಾಗಿಯೂ ಅವರ ಪಾಪಗಳಲ್ಲಿರುವ ಎಲ್ಲಾ ಅಪರಾಧಗಳಿಗಾಗಿಯೂ ಅವನು ಪರಿಶುದ್ಧ ಸ್ಥಳಕ್ಕಾಗಿ ಪ್ರಾಯಶ್ಚಿತ್ತಮಾಡಬೇಕು. ಅವರ ಅಶುದ್ಧ ತ್ವದ ಮಧ್ಯದಲ್ಲಿ ಉಳಿದವರಿಗೋಸ್ಕರ ಸಭೆಯಗುಡಾರಕ್ಕೂ ಅದರಂತೆಯೇ ಮಾಡಬೇಕು.
- Hebrews 6:19 ಇಬ್ರಿಯರಿಗೆ 6:19ಆ ನಿರೀಕ್ಷೆಯು ನಮ್ಮ ಪ್ರಾಣಕ್ಕೆ ಲಂಗರದ ಹಾಗಿದ್ದು ಖಂಡಿತವಾದದ್ದೂ ಸ್ಥಿರವಾದದ್ದೂ ಆಗಿದೆ. ಅದು ತೆರೆಯೊಳಗಿರುವಲ್ಲಿಗೆ ಪ್ರವೇಶಿಸುವಂಥದು.ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿ ಮಾಡಲ್ಪಟ್ಟು ನಮಗೋಸ್ಕರ ಮುಂದಾಗಿ ಅದರೊಳಗೆ ಪ್ರವೇಶಿಸಿದ್ದಾನೆ.
- 2 Chronicles 3:14 2 ಪೂರ್ವಕಾಲವೃತ್ತಾಂತ 3:14ತೆರೆಯನ್ನು ನೀಲ ಧೂಮ್ರ ರಕ್ತವರ್ಣಗಳಿಂದಲೂ ನಯವಾದ ನಾರಿನ ವಸ್ತ್ರದಿಂದಲೂ ಮಾಡಿಸಿ ಅದರಲ್ಲಿ ಕೆರೂಬಿಗಳನ್ನು ಮಾಡಿಸಿದನು.