Luke · chapter 23 · verse 5
Luke 23:5 in Kannada
ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
Adakke avaru hechchu ugrateyinda--eetanu galilaaya modalugondu ee sthalada varegoo ellaa yoodaa yadalli bodhisuttaa janarannu regisuttaane endu helidaru.
Luke 23:5 in English
- King James Version (KJV)
- And they were the more fierce, saying, He stirreth up the people, teaching throughout all Jewry, beginning from Galilee to this place.
- World English Bible (WEB)
- But they insisted, saying, “He stirs up the people, teaching throughout all Judea, beginning from Galilee even to this place.”
- American Standard Version (ASV)
- But they were the more urgent, saying, He stirreth up the people, teaching throughout all Judæa, and beginning from Galilee even unto this place.
- Bible in Basic English (BBE)
- But they became more violent than before, saying, He has made trouble among the people, teaching through all Judaea from Galilee to this place.
- Darby Translation (DBY)
- But they insisted, saying, He stirs up the people, teaching throughout all Judaea, beginning from Galilee even on to here.
- Webster's Bible (WBS)
- And they were the more fierce, saying, He stirreth up the people, teaching throughout all Judea, beginning from Galilee to this place.
- Young's Literal Translation (YLT)
- and they were the more urgent, saying — 'He doth stir up the people, teaching throughout the whole of Judea — having begun from Galilee — unto this place.'
Read in context
- 3ಆಗ ಪಿಲಾತನು ಆತನಿಗೆ--ನೀನು ಯೆಹೂದ್ಯರ ಅರಸನೋ ಎಂದು ಕೇಳಿದನು. ಅದಕ್ಕೆ ಆತನು ಪ್ರತ್ಯುತ್ತರವಾಗಿ ಅವನಿಗೆ--ನೀನೇ ಹೇಳುತ್ತೀ ಅಂದನು.
- 4ತರುವಾಯ ಪಿಲಾತನು ಪ್ರಧಾ ನಯಾಜಕರಿಗೂ ಜನರಿಗೂ--ಈ ಮನುಷ್ಯನಲ್ಲಿ ನಾನು ಯಾವ ತಪ್ಪನ್ನೂ ಕಾಣಲಿಲ್ಲ ಅಂದನು.
- 5ಅದಕ್ಕೆ ಅವರು ಹೆಚ್ಚು ಉಗ್ರತೆಯಿಂದ--ಈತನು ಗಲಿಲಾಯ ಮೊದಲುಗೊಂಡು ಈ ಸ್ಥಳದ ವರೆಗೂ ಎಲ್ಲಾ ಯೂದಾ ಯದಲ್ಲಿ ಬೋಧಿಸುತ್ತಾ ಜನರನ್ನು ರೇಗಿಸುತ್ತಾನೆ ಎಂದು ಹೇಳಿದರು.
- 6ಪಿಲಾತನು ಗಲಿಲಾಯದ ವಿಷಯ ವಾಗಿ ಕೇಳಿ--ಆ ಮನುಷ್ಯನು ಗಲಿಲಾಯದವನೋ ಎಂದು ಅವನು ವಿಚಾರಿಸಿ
- 7ಆತನು ಹೆರೋದನ ಅಧಿಕಾರದ ವಿಭಾಗಕ್ಕೆ ಸಂಬಂಧಪಟ್ಟವನೆಂದು ತಿಳಿದ ಕೂಡಲೆ ಆ ಸಮಯದಲ್ಲಿ ಯೆರೂಸಲೇಮಿನಲ್ಲಿಯೇ ಇದ್ದ ಹೆರೋದನ ಬಳಿಗೆ ಆತನನ್ನು ಕಳುಹಿಸಿದನು.
Cross references
- John 2:11 ಯೋಹಾನನು 2:11ಯೇಸು ಈ ಮೊದಲನೆಯ ಅದ್ಭುತ ಕಾರ್ಯವನ್ನು ಗಲಿಲಾಯದ ಕಾನಾದಲ್ಲಿ ಮಾಡಿ ತನ್ನ ಮಹಿಮೆಯನ್ನು ತೋರ್ಪಡಿಸಿದನು; ಮತ್ತು ಆತನ ಶಿಷ್ಯರು ಆತನ ಮೇಲೆ ನಂಬಿಕೆ ಇಟ್ಟರು.
- John 1:43 ಯೋಹಾನನು 1:43ಮರುದಿನ ಯೇಸು ಗಲಿಲಾಯಕ್ಕೆ ಹೊರಟು ಹೋಗಬೇಕೆಂದಿದ್ದಾಗ ಫಿಲಿಪ್ಪನನ್ನು ಕಂಡು ಅವ ನಿಗೆ--ನನ್ನನ್ನು ಹಿಂಬಾಲಿಸು ಅಂದನು.
- Mark 1:14 ಮಾರ್ಕನು 1:14ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟ ತರು ವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ--
- Matthew 4:23 ಮತ್ತಾಯನು 4:23ಬಳಿಕ ಯೇಸು ಗಲಿಲಾಯವನ್ನೆಲ್ಲಾ ಸಂಚರಿಸಿ ಅವರ ಸಭಾಮಂದಿರಗಳಲ್ಲಿ ಬೋಧಿಸುವಾತನಾಗಿ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಜನರಲ್ಲಿದ್ದ ಎಲ್ಲಾ ತರದ ರೋಗಗಳನ್ನು ಸಕಲ ವಿಧವಾದ ಜಾಡ್ಯಗಳನ್ನೂ ಗುಣಮಾಡುತ್ತಾ ಇದ್ದನು.
- Acts 10:37 ಅಪೊಸ್ತಲರ ಕೃತ್ಯಗಳು 10:37ಯೋಹಾನನು ಸಾರಿದ ಬಾಪ್ತಿಸ್ಮದ ತರುವಾಯ ಆ ವಾಕ್ಯವು ಗಲಿಲಾಯದಿಂದ ಪ್ರಾರಂಭವಾಗಿ ಯೂದಾಯದಲ್ಲೆಲ್ಲಾ ಪ್ರಬಲವಾಯಿ ತೆಂಬದನ್ನೂ
- Luke 23:23 ಲೂಕನು 23:23ಆದರೆ ಆತನು ಶಿಲುಬೆಗೆ ಹಾಕಲ್ಪಡಬೇಕೆಂದು ಅವರು ಮಹಾಧ್ವನಿಯಿಂದ ಒತ್ತಾಯ ಮಾಡಿದರು. ಹೀಗೆ ಅವರ ಕೂಗಾಟವೂ ಪ್ರಧಾನಯಾಜಕರ ಕೂಗಾಟವೂ ಗೆದ್ದಿತು.
- Acts 7:54 ಅಪೊಸ್ತಲರ ಕೃತ್ಯಗಳು 7:54ಈ ಮಾತುಗಳನ್ನು ಕೇಳಿ ಅವರು ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಅವನ ಮೇಲೆ ಹಲ್ಲುಕಡಿದರು.
- Psalm 22:12–13 ಕೀರ್ತನೆಗಳು 22:12–13ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿ ಕೊಂಡಿವೆ. ಹರಿದು ಬಿಡುವಂಥ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿ ತೆರೆದಿ ದ್ದಾರೆ.
- John 7:52 ಯೋಹಾನನು 7:52ಅವರು ಪ್ರತ್ಯುತ್ತರವಾಗಿ ಅವನಿಗೆ--ನೀನು ಸಹ ಗಲಿಲಾಯದವನೋ? ಗಲಿ ಲಾಯದಲ್ಲಿ ಪ್ರವಾದಿಯು ಏಳುವದೇ ಇಲ್ಲ, ಪರಿ ಶೋಧಿಸಿ ನೋಡು ಅಂದರು.ಪ್ರತಿಯೊಬ್ಬನು ತನ್ನ ಸ್ವಂತ ಮನೆಗೆ ಹೋದನು.
- Acts 23:10 ಅಪೊಸ್ತಲರ ಕೃತ್ಯಗಳು 23:10ಅಲ್ಲಿ ದೊಡ್ಡ ಭೇದ ಉಂಟಾದಾಗ ಅವರು ಪೌಲನನ್ನು ಎಳೆದಾಡಿ ತುಂಡುತುಂಡಾಗಿ ಮಾಡಿ ಯಾರು ಎಂದು ಮುಖ್ಯ ನಾಯಕನು ಭಯಪಟ್ಟು ಅವನನ್ನು ಅವರೊಳಗಿಂದ ಬಲವಂತವಾಗಿ ಕೋಟೆಯೊಳಗೆ ತರಬೇಕೆಂದು ಸೈನಿಕರಿಗೆ ಆಜ್ಞಾಪಿಸಿದನು.
- Psalm 22:16 ಕೀರ್ತನೆಗಳು 22:16ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
- Matthew 4:12–16 ಮತ್ತಾಯನು 4:12–16ಯೋಹಾನನು ಸೆರೆಯಲ್ಲಿ ಹಾಕಲ್ಪಟ್ಟಿದ್ದಾನೆಂದು ಯೇಸು ಕೇಳಿ ಗಲಿಲಾಯಕ್ಕೆ ಹೊರಟುಹೋದನು. ಮತ್ತು ಆತನು ನಜರೇತನ್ನು ಬಿಟ್ಟು ಜೆಬುಲೋನ್, ನೆಫ್ತಲೀಮ್ ಮೇರೆಗಳ ಸಮುದ್ರತೀರದಲ್ಲಿರುವ ಕಪೆರ್ನೌಮಿಗೆ ಬಂದು ಅಲ್ಲಿ ವಾಸಿಸಿದನು. ಹೀಗೆ ಪ್ರವಾದಿಯಾದ ಯೆಶಾಯನಿಂದ ಹೇಳಲ್ಪಟ್ಟದ್ದು ನೆರವೇರುವಂತೆ ಇದಾಯಿತು; ಅದೇನಂದರೆ-- ಯೊರ್ದನಿನ ಆಚೆ ಸಮುದ್ರದ ಮಾರ್ಗದಲ್ಲಿರುವ ಜೆಬುಲೋನ್ ಪ್ರಾಂತ್ಯದಲ್ಲಿಯೂ ನೆಫ್ತಲೀಮ್ ಪ್ರಾಂತ್ಯ ಮತ್ತು ಅನ್ಯಜನರ ಗಲಿಲಾಯದಲ್ಲಿಯೂ ಕತ್ತಲೆಯಲ್ಲಿ ಕೂತಿದ್ದ ಜನರು ದೊಡ್ಡ ಬೆಳಕನ್ನು ಕಂಡರು; ಮತ್ತು ಮರಣದ ನೆರಳಿನಲ್ಲಿ ಕೂತಿದ್ದ ಆ ಪ್ರಾಂತ್ಯದವರಿಗೆ ಬೆಳಕು ಉದಯವಾಯಿತು ಎಂಬದೇ.
Original words (Greek)
- And · G1161δέ dé
- fierce · G2001ἐπισχύω epischýō
- saying · G3004λέγω légō
- up · G383ἀνασείω anaseíō
- people · G2992λαός laós
- teaching · G1321διδάσκω didáskō
- throughout · G2596κατά katá
- all · G3650ὅλος hólos
- Jewry · G2449Ἰουδαία Ioudaía
- beginning · G756ἄρχομαι árchomai
- from · G575ἀπό apó
- Galilee · G1056Γαλιλαία Galilaía
- to · G2193ἕως héōs
- place · G5602ὧδε hōde