Luke · chapter 23 · verse 50
Luke 23:50 in Kannada
ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
Aaga igo, alli yosephanemba hesarulla obba manushyaniddanu; avanu aalochanaa sabheyavanoo olleyavanoo neetivantanoo aagi ddanu.
Luke 23:50 in English
- King James Version (KJV)
- And, behold, [there was] a man named Joseph, a counsellor; [and he was] a good man, and a just:
- World English Bible (WEB)
- Behold, there was a man named Joseph, who was a member of the council, a good and righteous man
- American Standard Version (ASV)
- And behold, a man named Joseph, who was a councillor, a good and righteous man
- Bible in Basic English (BBE)
- Now there was a man named Joseph, a man of authority and a good and upright man
- Darby Translation (DBY)
- And behold, a man named Joseph, who was a councillor, a good man and a just
- Webster's Bible (WBS)
- And behold, [there was] a man named Joseph, a counselor: [and he was] a good man, and a just:
- Young's Literal Translation (YLT)
- And lo, a man, by name Joseph, being a counsellor, a man good and righteous,
Read in context
- 48ಆ ನೋಟಕ್ಕಾಗಿ ಬಂದಿದ್ದ ಎಲ್ಲಾ ಜನರು ನಡೆದ ಸಂಭವಗಳನ್ನು ನೋಡುತ್ತಾ ತಮ್ಮ ಎದೆಗಳನ್ನು ಬಡುಕೊಂಡು ಹಿಂದಿರುಗಿದರು.
- 49ಆತನಿಗೆ ಪರಿಚಯವಿದ್ದವರೆಲ್ಲರೂ ಗಲಿಲಾಯ ದಿಂದ ಆತನನ್ನು ಹಿಂಬಾಲಿಸಿದ ಸ್ತ್ರೀಯರೂ ದೂರದಲ್ಲಿ ನಿಂತು ಇವುಗಳನ್ನು ನೋಡುತ್ತಿದ್ದರು.
- 50ಆಗ ಇಗೋ, ಅಲ್ಲಿ ಯೋಸೇಫನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಆಲೋಚನಾ ಸಭೆಯವನೂ ಒಳ್ಳೆಯವನೂ ನೀತಿವಂತನೂ ಆಗಿ ದ್ದನು.
- 51ಇವನು ಯೆಹೂದ್ಯರ ಪಟ್ಟಣವಾದ ಅರಿಮ ಥಾಯದವನೂ ದೇವರ ರಾಜ್ಯಕ್ಕಾಗಿ ಎದುರು ನೋಡು ವವನೂ ಆಗಿದ್ದನು. (ಅವನು ಅವರ ಆಲೋಚನೆಗೂ ಕೃತ್ಯಕ್ಕೂ ಒಪ್ಪಿಕೊಂಡಿರಲಿಲ್ಲ.)
- 52ಇವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು.
Cross references
- John 19:38–42 ಯೋಹಾನನು 19:38–42ತರುವಾಯ ಯೆಹೂದ್ಯರ ಭಯದ ನಿಮಿತ್ತ ದಿಂದ ಗುಪ್ತವಾಗಿ ಯೇಸುವಿನ ಶಿಷ್ಯನಾಗಿದ್ದ ಅರಿಮಥಾ ಯದ ಯೋಸೇಫನು ಯೇಸುವಿನ ದೇಹವನ್ನು ತಾನು ತೆಗೆದುಕೊಂಡು ಹೋಗುವಂತೆ ಪಿಲಾತನನ್ನು ಬೇಡಿ ಕೊಂಡನು. ಆಗ ಪಿಲಾತನು ಅಪ್ಪಣೆಕೊಡಲು ಅವನು ಬಂದು ಆತನ ದೇಹವನ್ನು ತೆಗೆದುಕೊಂಡು ಇದಲ್ಲದೆ ಮೊದಲು ಒಂದು ರಾತ್ರಿ ಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ಬೆರಸಿದ ರಕ್ತಬೋಳ ಅಗರುಗಳನ್ನು ನೂರು ಸೇರು ತೂಕದಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಆಗ ಅವರು ಯೇಸುವಿನ ದೇಹವನ್ನು ತಕ್ಕೊಂಡು ಯೆಹೂದ್ಯರಲ್ಲಿ ಹೂಣಿಡುವ ಪದ್ಧತಿಯ ಪ್ರಕಾರ ಅದನ್ನು ಸುಗಂಧದ್ರವ್ಯಗಳೊಂದಿಗೆ ನಾರು ಬಟ್ಟೆಗಳಲ್ಲಿ ಸುತ್ತಿದರು. ಆತನು ಶಿಲುಬೆಗೆ ಹಾಕಲ್ಪಟ್ಟ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಸಮಾಧಿಯು ಇತ್ತು.ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು. ಆ ದಿನವು ಯೆಹೂದ್ಯರ ಸಿದ್ಧತೆಯ ದಿನವಾದದ್ದರಿಂದ ಅವರು ಯೇಸುವನ್ನು ಸಮಾಧಿಯಲ್ಲಿ ಇಟ್ಟರು. ಯಾಕಂದರೆ ಆ ಸಮಾಧಿಯು ಸವಿಾಪದಲ್ಲಿತ್ತು.
- Acts 10:22 ಅಪೊಸ್ತಲರ ಕೃತ್ಯಗಳು 10:22ಅವರು--ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡು ವವನೂ ಯೆಹೂದ್ಯ ಜನಾಂಗದವರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇ ಕಳುಹಿಸಿಕೊಂಡು ನಿನ್ನ ಮಾತುಗಳನ್ನು ಕೇಳಬೇಕೆಂದು ಅವನು ಪರಿಶುದ್ಧ ದೂತ
- Acts 11:24 ಅಪೊಸ್ತಲರ ಕೃತ್ಯಗಳು 11:24ಅವನು ಒಳ್ಳೆಯವನಾಗಿದ್ದು ಪವಿತ್ರಾತ್ಮನಿಂದಲೂ ನಂಬಿಕೆಯಿಂದಲೂ ತುಂಬಿದವನಾಗಿದ್ದನು; ಬಹು ಮಂದಿ ಕರ್ತನನ್ನು ಸೇರಿಕೊಂಡರು.
- Acts 10:2 ಅಪೊಸ್ತಲರ ಕೃತ್ಯಗಳು 10:2ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನವನ್ನು ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.
- Matthew 27:57–61 ಮತ್ತಾಯನು 27:57–61ಸಾಯಂಕಾಲವಾದಾಗ ಅರಿಮಥಾಯದ ವನಾದ ಯೋಸೇಫನೆಂಬ ಹೆಸರುಳ್ಳ ಐಶ್ವರ್ಯವಂತ ನಾದ ಒಬ್ಬ ಮನುಷ್ಯನು ಅಲ್ಲಿಗೆ ಬಂದನು. ಅವನು ಸಹ ಯೇಸುವಿನ ಶಿಷ್ಯನಾಗಿದ್ದನು. ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿಕೊಂಡನು. ಆಗ ಪಿಲಾತನು ಆ ದೇಹವನ್ನು (ಅವನಿಗೆ) ಒಪ್ಪಿಸುವದಕ್ಕೆ ಅಪ್ಪಣೆಕೊಟ್ಟನು. ಯೋಸೇಫನು ಆ ದೇಹವನ್ನು ತಕ್ಕೊಂಡ ಮೇಲೆ ಅದನ್ನು ಶುದ್ಧವಾದ ನಾರುಮಡಿ ಬಟ್ಟೆಯಲ್ಲಿ ಸುತಿ ಬಂಡೆಯಲ್ಲಿ ತಾನು ತೋಡಿದ್ದ ತನ್ನ ಹೊಸ ಸಮಾಧಿಯಲ್ಲಿ ಅದನ್ನು ಇಟ್ಟು ಆ ಸಮಾಧಿಯ ಬಾಗಲಿಗೆ ದೊಡ್ಡದೊಂದು ಕಲ್ಲನ್ನು ಉರುಳಿಸಿ ಹೊರಟುಹೋದನು. ಅಲ್ಲಿ ಮಗ್ದಲದ ಮರಿಯಳು ಮತ್ತು ಇನ್ನೊಬ್ಬ ಮರಿಯಳು ಆ ಸಮಾಧಿಗೆ ಎದುರಾಗಿ ಕೂತುಕೊಂಡಿದ್ದರು.
- Mark 15:42–47 ಮಾರ್ಕನು 15:42–47ಆಗ ಸಂಜೆಯಾಗಿತ್ತು; ಅದು ಸಬ್ಬತ್ತಿನ ಮುಂಚಿನ ಸಿದ್ಧತೆಯ ದಿವಸವಾಗಿತ್ತು. ಆ ಸಮಯದಲ್ಲಿ ಗೌರವವುಳ್ಳವನೂ ಆಲೋಚನಾ ಸಭೆಯವನೂ ದೇವರ ರಾಜ್ಯಕ್ಕಾಗಿ ಕಾಯುತ್ತಿದ್ದವನೂ ಆದ ಅರಿ ಮಥಾಯದ ಯೋಸೇಫನು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹಕ್ಕಾಗಿ ಬೇಡಿ ಕೊಂಡನು. ಆದರೆ ಆತನು ಆಗಲೇ ಸತ್ತನೋ ಎಂದು ಪಿಲಾತನು ಆಶ್ಚರ್ಯಪಟ್ಟು ಶತಾಧಿಪತಿಯನ್ನು ತನ್ನ ಬಳಿಗೆ ಕರೆದು--ಆತನು ಸತ್ತು ಎಷ್ಟು ಸಮಯ ವಾಯಿತು ಎಂದು ಅವನನ್ನು ಕೇಳಿದನು. ಅವನು ಶತಾಧಿಪತಿಯಿಂದ ಅದನ್ನು ತಿಳಿದುಕೊಂಡ ಮೇಲೆ ಆ ದೇಹವನ್ನು ಯೊಸೇಫನಿಗೆ ಕೊಟ್ಟನು. ಆಗ ಅವನು ಶುಭ್ರವಾದ ನಾರು ಮಡಿಯನ್ನು ಕೊಂಡು ಕೊಂಡು ಆತನನ್ನು (ಶಿಲುಬೆಯಿಂದ) ಇಳಿಸಿ ಆ ನಾರುಮಡಿಯಲ್ಲಿ ಆತನನ್ನು ಸುತ್ತಿ ಬಂಡೆಯಲ್ಲಿ ತೋಡಿಸಿದ್ದ ಸಮಾಧಿಯಲ್ಲಿಟ್ಟು ಸಮಾಧಿಯ ಬಾಗಲಿಗೆ ಒಂದು ಕಲ್ಲನ್ನು ಉರುಳಿಸಿದನು.ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು. ಮಗ್ದಲದ ಮರಿಯಳೂ ಯೋಸೆಯ ತಾಯಿಯಾದ ಮರಿಯಳೂ ಆತನನ್ನು ಇಟ್ಟಿದ್ದ ಸ್ಥಳವನ್ನು ನೋಡಿದರು.
- Luke 2:25 ಲೂಕನು 2:25ಇಗೋ, ಸಿಮೆಯೋನನೆಂಬ ಹೆಸರುಳ್ಳ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಇವನು ನೀತಿವಂತನೂ ಭಕ್ತನೂ ಆಗಿದ್ದು ಇಸ್ರಾ ಯೇಲ್ಯರ ಆದರಣೆಗಾಗಿ ಕಾಯುತ್ತಿದ್ದನು. ಇವನ ಮೇಲೆ ಪವಿತ್ರಾತ್ಮನು ಇದ್ದನು.