Luke · chapter 24 · verse 26
Luke 24:26 in Kannada
ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
Kristanu ivellaa shramegalannu anubhavisi tana mahimeyalli praveshisuvadu agatyavaagittallave endu heli
Luke 24:26 in English
- King James Version (KJV)
- Ought not Christ to have suffered these things, and to enter into his glory?
- World English Bible (WEB)
- Didn’t the Christ have to suffer these things and to enter into his glory?”
- American Standard Version (ASV)
- Behooved it not the Christ to suffer these things, and to enter into his glory?
- Bible in Basic English (BBE)
- Was it not necessary for the Christ to go through these things, and to come into his glory?
- Darby Translation (DBY)
- Ought not the Christ to have suffered these things and to enter into his glory?
- Webster's Bible (WBS)
- Ought not Christ to suffer these things, and to enter into his glory?
- Young's Literal Translation (YLT)
- Was it not behoving the Christ these things to suffer, and to enter into his glory?'
Read in context
- 24ಇದಲ್ಲದೆ ನಮ್ಮೊಂದಿಗಿದ್ದ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದಂತೆಯೇ ಕಂಡರು; ಆದರೆ ಅವರು ಆತನನ್ನು ನೋಡಲಿಲ್ಲ ಅಂದರು.
- 25ಆಗ ಆತನು ಅವರಿಗೆ--ಓ ಬುದ್ದಿಹೀನರೇ, ಪ್ರವಾದಿಗಳು ಹೇಳಿ ದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯದವರೇ,
- 26ಕ್ರಿಸ್ತನು ಇವೆಲ್ಲಾ ಶ್ರಮೆಗಳನ್ನು ಅನುಭವಿಸಿ ತನ ಮಹಿಮೆಯಲ್ಲಿ ಪ್ರವೇಶಿಸುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
- 27ಮೋಶೆಯ ಮತ್ತು ಎಲ್ಲಾ ಪ್ರವಾದಿ ಗಳಿಂದ ಆರಂಭಿಸಿ ಸಮಸ್ತ ಬರಹಗಳಲ್ಲಿ ತನ್ನ ವಿಷಯವಾದವುಗಳನ್ನು ಅವರಿಗೆ ವಿವರಿಸಿದನು.
- 28ಅವರು ಹೋಗಬೇಕಾಗಿದ್ದ ಹಳ್ಳಿಯನ್ನು ಸವಿಾಪಿಸು ತ್ತಿರುವಾಗ ಆತನು ಮುಂದೆ ಹೋಗುವವನಂತೆ ತೋರಿಸಿಕೊಂಡನು.
Cross references
- 1 Peter 1:11 1 ಪೇತ್ರನು 1:11ತಮ್ಮಲ್ಲಿದ್ದ ಕ್ರಿಸ್ತನ ಆತ್ಮನು ಕ್ರಿಸ್ತನಿಗೆ ಬರಬೇಕಾದ ಬಾಧೆಗಳನ್ನೂ ಅವುಗಳ ತರುವಾಯ ಉಂಟಾಗುವ ಪ್ರಭಾವವನ್ನೂ ಮುಂದಾಗಿ ಸಾಕ್ಷೀಕರಿಸಿದಾಗ ಆತನು ಯಾವ ಕಾಲವನ್ನು ಇಲ್ಲವೆ ಎಂಥ ಕಾಲವನ್ನು ಸೂಚಿಸುವ ನೆಂಬದನ್ನು ಅವರು ಪರಿಶೋಧನೆ ಮಾಡಿದರು.
- Isaiah 53:1–12 ಯೆಶಾಯ 53:1–12ನಮ್ಮ ಸುದ್ಧಿಯನ್ನು ಯಾರು ನಂಬಿದ್ದಾರೆ? ಕರ್ತನ ತೋಳು ಯಾರಿಗೆ ಪ್ರಕಟವಾ ಯಿತು? ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ. ಆತನು ಮನುಷ್ಯರಿಂದ ತಳ್ಳಲ್ಪಟ್ಟವನೂ ತಿರಸ್ಕರಿಸ ಲ್ಪಟ್ಟವನೂ ದುಃಖಿತ ಮನುಷ್ಯನೂ ಕಷ್ಟವನ್ನು ಅರಿತ ವನೂ; ನಾವು ನಮ್ಮ ಮುಖಗಳನ್ನು ಆತನಿಂದ ಮರೆ ಮಾಡಿಕೊಳ್ಳುವ ಹಾಗೆ ಧಿಕ್ಕರಿಸಲ್ಪಟ್ಟವನೂ ಆಗಿದ್ದನು. ನಾವು ಆತನನ್ನು ಲಕ್ಷಕ್ಕೆ ತರಲಿಲ್ಲ. ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು. ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು. ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು. ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ. ಆತನು ಸೆರೆಯಿಂದಲೂ ನ್ಯಾಯತೀರ್ಪಿ ನಿಂದಲೂ ತೆಗೆಯಲ್ಪಟ್ಟನು; ಆತನ ಸಂತತಿಯನ್ನು ತಿಳಿಯಪಡಿಸಿದವರು ಯಾರು? ಆತನು ಜೀವಿತರ ದೇಶದಿಂದ ಕಡಿಯಲ್ಪಟ್ಟವನು (ತೆಗೆಯಲ್ಪಟ್ಟನು); ತನ್ನ ಪ್ರಜೆಯ ದ್ರೋಹಕ್ಕಾಗಿ ಆತನು ಪೆಟ್ಟು ತಿಂದನು. ಆತನು ಮರಣವನ್ನು ಧನಿಕರೊಂದಿಗೂ ಆತನ ಸಮಾಧಿಯನ್ನು ದುಷ್ಟರೊಂದಿಗೂ ಮಾಡಿಕೊಂಡನು. ಆತನು ಯಾವ ಬಲಾತ್ಕಾರವನ್ನೂ ಮಾಡಲಿಲ್ಲ ಇಲ್ಲವೆ ಆತನ ಬಾಯಲ್ಲಿ ಯಾವ ವಂಚನೆಯೂ ಇರಲಿಲ್ಲ. ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Acts 17:3 ಅಪೊಸ್ತಲರ ಕೃತ್ಯಗಳು 17:3ಕ್ರಿಸ್ತನು ಬಾಧೆಯನ್ನನುಭವಿಸಿ ಸತ್ತವರೊಳಗಿಂದ ತಿರಿಗಿ ಎದ್ದು ಬರುವದು ಅಗತ್ಯವೆಂತಲೂ--ನಾನು ನಿಮಗೆ ಪ್ರಸಿದ್ಧಿ ಪಡಿಸುವ ಈ ಯೇಸುವೇ ಕ್ರಿಸ್ತನೆಂತಲೂ ದೃಢವಾಗಿ ಹೇಳಿ ಸ್ಥಾಪಿಸಿದನು.
- Zechariah 13:7 ಜೆಕರ್ಯ 13:7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- Hebrews 2:8–10 ಇಬ್ರಿಯರಿಗೆ 2:8–10ಎಲ್ಲವನ್ನೂ ಅವನ ಪಾದಗಳ ಕೆಳಗೆ ಹಾಕಿ ಅವನಿಗೆ ಅಧೀನಮಾಡಿದ್ದೀಯಲ್ಲವೇ ಎಂದು ಸಾಕ್ಷಿ ಹೇಳಿದನು; ಆತನು ಎಲ್ಲವನ್ನೂ ಮನುಷ್ಯನಿಗೆ ಅಧೀನಮಾಡಿದ ನೆಂಬದರಲ್ಲಿ ಅವನಿಗೆ ಒಂದನ್ನಾದರೂ ಅಧೀನಮಾಡದೆ ಬಿಡಲಿಲ್ಲ; ಆದರೆ ಎಲ್ಲವೂ ಅವನಿಗೆ ಅಧೀನವಾಗಿರು ವದನ್ನು ನಾವು ಇನ್ನೂ ಕಾಣುವದಿಲ್ಲ. ಆದರೂ ದೂತರಿಗಿಂತ ಸ್ವಲ್ಪ ಕಡಿಮೆಯಾಗಿ ಮಾಡಲ್ಪಟ್ಟ ಒಬ್ಬಾತನು ಅಂದರೆ ಯೇಸುವು, ಪ್ರಭಾವವನ್ನೂ ಮಾನವನ್ನೂ ಕಿರೀಟವಾಗಿ ಹೊಂದಿರುವದನ್ನು ನಾವು ನೋಡುತ್ತೇವೆ; ಆತನು ಮೃತಪಟ್ಟದ್ದರಿಂದಲೇ ಮಾನ ಪ್ರಭಾವಗಳನ್ನು ಹೊಂದಿದನು; ಆತನು ದೇವರ ಕೃಪೆ ಯಿಂದ ಎಲ್ಲರಿಗೋಸ್ಕರ ಮರ ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.
- Luke 24:46 ಲೂಕನು 24:46ಅವರಿಗೆ--ಕ್ರಿಸ್ತನು ಹೀಗೆ ಶ್ರಮೆಪಟ್ಟು ಸತ್ತವರೊಳಗಿಂದ ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವಾಗಿತ್ತೆಂತಲೂ
- Hebrews 9:22–23 ಇಬ್ರಿಯರಿಗೆ 9:22–23ನ್ಯಾಯಪ್ರಮಾಣದಿಂದ ಹೆಚ್ಚು ಕಡಿಮೆ ಎಲ್ಲಾ ವಸ್ತುಗಳು ರಕ್ತದಿಂದಲೇ ಶುದ್ಧೀಕರಿಸಲ್ಪಡುವವು; ರಕ್ತ ಧಾರೆಯಿಲ್ಲದೆ ಪಾಪ ಪರಿಹಾರವಿಲ್ಲ. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
- 1 Corinthians 15:3–4 1 ಕೊರಿಂಥದವರಿಗೆ 15:3–4ನಾನು ಸಹ ಎಲ್ಲಾದಕ್ಕಿಂತಲೂ ಮೊದಲು ಹೊಂದಿದ್ದನ್ನು ನಿಮಗೆ ತಿಳಿಸಿದ್ದೇನೆ. ಅದೇನಂದರೆ, ಬರಹದ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳಿಗಾಗಿ ಸತ್ತನು. ಹೂಣಲ್ಪಟ್ಟನು; ಬರಹದ ಪ್ರಕಾರವೇ ಆತನು ಮೂರನೆಯ ದಿನದಲ್ಲಿ ತಿರಿಗಿ ಎದ್ದುಬಂದನು.
- Luke 24:44 ಲೂಕನು 24:44ಆಗ ಆತನು ಅವರಿಗೆ--ಮೋಶೆಯ ನ್ಯಾಯ ಪ್ರಮಾಣದಲ್ಲಿಯೂ ಪ್ರವಾದನೆಗಳಲ್ಲಿಯೂ ಕೀರ್ತನೆ ಗಳಲ್ಲಿಯೂ ನನ್ನನ್ನು ಕುರಿತಾಗಿ ಬರೆಯಲ್ಪಟ್ಟವು ಗಳೆಲ್ಲವು ನೆರವೇರುವದು ಅಗತ್ಯವಾಗಿದೆ ಎಂಬ ಈ ಮಾತುಗಳನ್ನು ನಾನು ನಿಮ್ಮೊಂದಿಗೆ ಇದ್ದಾಗಲೇ ಹೇಳಿದ್ದೆನು ಅಂದನು.
- Luke 24:7 ಲೂಕನು 24:7ಮನುಷ್ಯಕುಮಾರನು ಪಾಪಿಷ್ಠರ ಕೈಗಳಿಗೆ ಹೇಗೆ ಒಪ್ಪಿಸಲ್ಪಟ್ಟವನಾಗಿ ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಏಳುವನು ಎಂದು ನಿಮಗೆ ಹೇಳಿದ್ದನ್ನು ನೀವು ನೆನಪು ಮಾಡಿಕೊಳ್ಳಿರಿ ಅಂದರು.
- Psalm 69:1–36 ಕೀರ್ತನೆಗಳು 69:1–36ಓ ದೇವರೇ ನನ್ನನ್ನು ರಕ್ಷಿಸು; ನೀರು ನನ್ನ ಪ್ರಾಣದ ವರೆಗೂ ಬಂದಿದೆ. ನೆಲೆ ಸಿಕ್ಕದ ಆಳವಾದ ಕೆಸರಿನಲ್ಲಿ ನಾನು ಮುಳುಗುತ್ತೇನೆ; ನನ್ನ ಮೇಲೆ ಹಾದುಹೋಗುವ ನೀರಿನ ಪ್ರವಾಹಗಳ ಅಗಾಧದಲ್ಲಿ ನಾನು ಸಿಕ್ಕಿಕೊಂಡಿದ್ದೇನೆ. ನಾನು ಕೂಗಿ ದಣಿದಿದ್ದೇನೆ; ನನ್ನ ಗಂಟಲು ಒಣಗಿದೆ; ನಾನು ದೇವ ರನ್ನು ಎದುರು ನೋಡುವದರಿಂದ ನನ್ನ ಕಣ್ಣುಗಳು ಕ್ಷೀಣಿಸುತ್ತವೆ. ಕಾರಣವಿಲ್ಲದೆ ನನ್ನನ್ನು ಹಗೆ ಮಾಡು ವವರು ನನ್ನ ತಲೆಯ ಕೂದಲುಗಳಿಗಿಂತ ಹೆಚ್ಚಾಗಿ ದ್ದಾರೆ; ನನ್ನನ್ನು ಅನ್ಯಾಯವಾಗಿ ಸಂಹರಿಸುವ ನನ್ನ ಶತ್ರುಗಳೂ ಪ್ರಬಲವಾಗಿದ್ದಾರೆ; ನಾನು ತೆಗೆದು ಕೊಳ್ಳದ್ದನ್ನು ನನ್ನಿಂದ ದೋಚಿಕೊಂಡರು. ಓ ದೇವರೇ, ನೀನು ನನ್ನ ಮೂಢತನವನ್ನು ತಿಳಿದಿದ್ದೀ; ನನ್ನ ಪಾಪಗಳು ನಿನಗೆ ಮರೆಯಾಗಿಲ್ಲ. ಸೈನ್ಯಗಳ ಕರ್ತನಾದ ದೇವರೇ, ನಿನ್ನನ್ನು ನಿರೀಕ್ಷಿಸು ವವರು ನನ್ನ ದೆಸೆಯಿಂದ ನಾಚಿಕೆಪಡದಿರಲಿ; ಓ ಇಸ್ರಾಯೇಲಿನ ದೇವರೇ, ನಿನ್ನನ್ನು ಹುಡುಕುವವರು ನನ್ನಿಂದ ಅವಮಾನಪಡದಿರಲಿ. ನಿನ್ನ ನಿಮಿತ್ತ ನಿಂದೆ ಯನ್ನು ತಾಳಿದ್ದೇನೆ; ಅವಮಾನವು ನನ್ನ ಮುಖವನ್ನು ಮುಚ್ಚಿಯದೆ. ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ; ನನ್ನ ಒಡಹುಟ್ಟಿದವರಿಗೆ ಪರಕೀಯನಾಗಿದ್ದೇನೆ. ನಿನ್ನ ಆಲಯದ ಆಸಕ್ತಿಯು ನನ್ನನ್ನು ತಿಂದುಬಿಟ್ಟಿದೆ; ನಿನ್ನನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಿದ್ದಿವೆ. ನನ್ನ ಪ್ರಾಣವು ಉಪವಾಸದಲ್ಲಿ ಶಿಕ್ಷಿಸಲ್ಪಟ್ಟು ಅತ್ತಾಗ ಅದು ನನಗೆ ನಿಂದೆ ಆಯಿತು. ಗೋಣಿತಟ್ಟನ್ನು ಸಹ ನನ್ನ ಉಡುಪಾಗಿ ಮಾಡಿಕೊಂಡಿದ್ದೇನೆ; ಹೀಗೆ ನಾನು ಅವರಿಗೆ ಗಾದೆ ಆದೆನು. ಬಾಗಲಲ್ಲಿ ಕೂತು ಕೊಳ್ಳುವವರು ನನಗೆ ವಿರೋಧವಾಗಿ ಮಾತನಾಡು ತ್ತಾರೆ; ನಾನು ಮದ್ಯಪಾನಿಗಳಿಗೆ ಸಂಗೀತವಾದೆನು. ಓ ಕರ್ತನೇ, ನಾನಾದರೋ ಅಂಗೀಕಾರದ ಸಮ ಯದಲ್ಲಿ ನಿನಗೆ ನನ್ನ ಪ್ರಾರ್ಥನೆಯನ್ನು ಮಾಡುವೆನು. ಓ ದೇವರೇ, ನಿನ್ನ ಅತಿಶಯವಾದ ಕರುಣೆಯಿಂದಲೂ ನಿನ್ನ ರಕ್ಷಣೆಯ ಸತ್ಯದಲ್ಲಿಯೂ ನನಗೆ ಉತ್ತರಕೊಡು. ನಾನು ಮುಳುಗದಂತೆ ನನ್ನನ್ನು ಕೆಸರಿನೊಳಗಿಂದ ಬಿಡಿಸು; ಹಗೆಮಾಡುವವರಿಂದ ನನ್ನನ್ನು ತಪ್ಪಿಸು, ನೀರಿನ ಅಗಾಧಗಳೊಳಗಿಂದಲೂ ನನಗೆ ಬಿಡುಗಡೆ ಯಾಗಲಿ ನೀರಿನ ಪ್ರವಾಹವು ನನ್ನ ಮೇಲೆ ಹಾದು ಹೋಗದೇ ಇರಲಿ; ಅಗಾಧವು ನನ್ನನ್ನು ನುಂಗದೆ ಇರಲಿ; ಕುಣಿಯು ನನಗಾಗಿ ತನ್ನ ಬಾಯನ್ನು ಮುಟ್ಟ ದಿರಲಿ. ಓ ಕರ್ತನೇ, ನನಗೆ ಉತ್ತರಕೊಡು;ನಿನ್ನ ಪ್ರೀತಿ ಕರುಣೆಯು ಒಳ್ಳೇದಾಗಿದೆ; ನಿನ್ನ ಅತಿ ಶಯವಾದ ಅಂತಃಕರುಣೆಗಳ ಪ್ರಕಾರ ನನ್ನ ಕಡೆಗೆ ತಿರುಗು. ನಿನ್ನ ಮುಖವನ್ನು ನಿನ್ನ ಸೇವಕನಿಗೆ ಮರೆಮಾಡಬೇಡ; ನಾನು ಇಕ್ಕಟ್ಟಿನಲ್ಲಿದ್ದೇನೆ; ಬೇಗ ನನಗೆ ಉತ್ತರಕೊಡು. ಸವಿಾಪವಾಗಿದ್ದು ನನ್ನ ಪ್ರಾಣವನ್ನು ರಕ್ಷಿಸು ನನ್ನನ್ನು ನನ್ನ ಶತ್ರುಗಳ ನಿಮಿತ್ತ ವಾಗಿ ವಿಮೋಚಿಸು. ನೀನು ನನ್ನ ನಿಂದೆಯನ್ನೂ ನಾಚಿಕೆಯನ್ನೂ ಅವಮಾನವನ್ನೂ ತಿಳಿದಿದ್ದೀ; ನನ್ನ ವೈರಿಗಳೆಲ್ಲರು ನಿನ್ನ ಮುಂದೆ ಇದ್ದಾರೆ. ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ. ನನ್ನ ಆಹಾರಕ್ಕಾಗಿ ಕಹಿಯಾದದನ್ನು ಕೊಟ್ಟರು; ನನಗೆ ದಾಹವಾದಾಗ ಹುಳಿರಸವನ್ನು ಕುಡಿಯ ಕೊಟ್ಟರು. ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ. ಅವರ ಕಣ್ಣಗಳು ಕಾಣದ ಹಾಗೆ ಕತ್ತಲಾಗಲಿ; ಅವರ ಸೊಂಟಗಳನ್ನು ಯಾವಾಗಲೂ ಕದಲಿಸು. ಅವರ ಮೇಲೆ ನಿನ್ನ ರೋಷವನ್ನು ಹೊಯ್ಯಿ; ನಿನ್ನ ಕೋಪದ ಉರಿಯು ಅವರನ್ನು ಹಿಡಿಯಲಿ. ಅವರ ವಾಸಸ್ಥಳವು ನಾಶವಾಗಲಿ; ಅವರ ಗುಡಾರಗಳಲ್ಲಿ ನಿವಾಸಿಯು ಇಲ್ಲದೆ ಹೋಗಲಿ. ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ. ಅವರ ಅಕ್ರಮಕ್ಕೆ ಅಕ್ರಮವನ್ನು ಸೇರಿಸು; ಅವರು ನಿನ್ನ ನೀತಿಯಲ್ಲಿ ಸೇರದೆ ಇರಲಿ. ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ. ಆದರೆ ನಾನು ದೀನನಾಗಿಯೂ ವ್ಯಸನವುಳ್ಳವನಾಗಿಯೂ ಇದ್ದೇನೆ; ಓ ದೇವರೇ, ನಿನ್ನ ರಕ್ಷಣೆಯು ನನ್ನನ್ನು ಉನ್ನತದಲ್ಲಿರಿಸಲಿ. ದೇವರ ಹೆಸರನ್ನು ಹಾಡುತ್ತಾ ಸ್ತುತಿಸುವೆನು; ಸ್ತೋತ್ರದಿಂದ ಆತನನ್ನು ಘನಪಡಿ ಸುವೆನು. ಅದು ಕರ್ತನಿಗೆ ಕೊಂಬುಗಳೂ ಗೊರಸೆ ಗಳೂ ಉಳ್ಳ ಎಳೇ ಹೋರಿಗಳಿಗಿಂತ ಮೆಚ್ಚಿಕೆಯಾಗಿರು ವದು. ಇದನ್ನು ದೀನರು ನೋಡಿ, ಸಂತೋಷಿಸು ವರು. ದೇವರನ್ನು ಹುಡುಕುವ ನಿಮ್ಮ ಹೃದಯವು ಜೀವಿಸುವದು. ಕರ್ತನು ಬಡವರನ್ನು ಲಾಲಿಸಿ ತನ್ನ ಸೆರೆಯವರನ್ನು ತಿರಸ್ಕರಿಸುವದಿಲ್ಲ. ಆಕಾಶವೂ ಭೂಮಿಯೂ ಸಮುದ್ರಗಳೂ ಅವುಗಳಲ್ಲಿ ಸಂಚರಿಸುವುದೆಲ್ಲವೂ ಆತನನ್ನು ಸ್ತುತಿಸಲಿ. ದೇವರು ಚೀಯೋನನ್ನು ರಕ್ಷಿಸಿ ಯೆಹೂದದ ಪಟ್ಟ ಣಗಳನ್ನು ಕಟ್ಟುವನು; ಹೀಗೆ ಅವರು ಅಲ್ಲಿ ವಾಸ ಮಾಡಿ ಅದನ್ನು ಸ್ವಾಧೀನಪಡಿಸಿಕೊಳ್ಳುವರು.ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು. ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.